India vs Australia: ಭಾರತ-ಆಸ್ಟ್ರೇಲಿಯಾ ಪಂದ್ಯಗಳು ಯಾವಾಗ ಆರಂಭ?, ಎಷ್ಟು ಗಂಟೆಗೆ?, ಯಾವುದರಲ್ಲಿ ನೇರಪ್ರಸಾರ?: ಇಲ್ಲಿದೆ ಎಲ್ಲ ಮಾಹಿತಿ
Border-Gavaskar series: ಭಾರತ ಹಾಗೂ ಆಸ್ಟ್ರೇಲಿಯಾ (India vs Australia) ನಡುವಣ ಪ್ರತಿಷ್ಠಿತ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಗೆ ದಿನಗಣನೆ ಶುರುವಾಗಿದೆ. ಈಗಾಗಲೇ ಉಭಯ ತಂಡಗಳು ಅಭ್ಯಾಸ ಶುರು ಮಾಡಿವೆ.
ಇತ್ತೀಚೆಗಷ್ಟೆ ನ್ಯೂಜಿಲೆಂಡ್ ವಿರುದ್ಧದ ಏಕದಿನ ಮತ್ತು ಟಿ20 ಸರಣಿ ವಶಪಡಿಸಿಕೊಂಡ ಭಾರತ (India vs New Zealand) ಇದೀಗ ತವರಿನಲ್ಲಿ ಮತ್ತೊಂದು ಮಹತ್ವದ ಸರಣಿಗೆ ಸಜ್ಜಾಗುತ್ತಿದೆ. ಭಾರತ ಹಾಗೂ ಆಸ್ಟ್ರೇಲಿಯಾ (India vs Australia) ನಡುವಣ ಪ್ರತಿಷ್ಠಿತ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಗೆ ದಿನಗಣನೆ ಶುರುವಾಗಿದೆ. ಈಗಾಗಲೇ ಉಭಯ ತಂಡಗಳು ಅಭ್ಯಾಸ ಶುರು ಮಾಡಿವೆ. ಭಾರತಕ್ಕೆ ಬಂದಿಳಿದಿರುವ ಕಾಂಗರೂ ಪಡೆ ಬೆಂಗಳೂರಿನ ಆಲೂರಿನಲ್ಲಿರುವ ಕೆಎಸ್‌ಸಿಎ ಕ್ರೀಡಾಂಗಣದಲ್ಲಿರುವ ಸ್ಪಿನ್ ಪಿಚ್‌ಗಳಲ್ಲಿ ಕಸರತ್ತು ನಡೆಸುತ್ತಿದೆ. ಈ ಸರಣಿಯ ಟೆಸ್ಟ್ ಪಂದ್ಯಗಳು ಟೀಮ್ ಇಂಡಿಯಾ (Team India) ಪಾಲಿಗೆ ತುಂಬಾ ಮಹತ್ವದ್ದಾಗಿದ್ದು, ಇದರಲ್ಲಿ ಸರಣಿ ಜಯಿಸುವ ಮೂಲಕ ಭಾರತ ತಂಡವು ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ಗೇರಬಹುದು. ಹಾಗಾದರೆ ಇಂಡೋ-ಆಸೀಸ್ ಟೆಸ್ಟ್ ಸರಣಿ ಯಾವಾಗ ಆರಂಭ?, ಯಾವುದರಲ್ಲಿ ನೇರಪ್ರಸಾರ?, ಇಲ್ಲಿದೆ ಎಲ್ಲ ಮಾಹಿತಿ.
ಭಾರತ vs ಆಸ್ಟ್ರೇಲಿಯಾ ಬಾರ್ಡರ್-ಗವಾಸ್ಕರ್ ಟ್ರೋಫಿ ಟೆಸ್ಟ್ ಸರಣಿ ಯಾವಾಗ ಪ್ರಾರಂಭ?
ಭಾರತ ಮತ್ತು ಆಸ್ಟ್ರೇಲಿಯಾ ಬಾರ್ಡರ್-ಗವಾಸ್ಕರ್ ಟ್ರೋಫಿ ಟೆಸ್ಟ್ ಸರಣಿ ಫೆಬ್ರವರಿ 9 ರಿಂದ ಪ್ರಾರಂಭವಾಗಲಿದೆ.
ಭಾರತ vs ಆಸ್ಟ್ರೇಲಿಯಾ ಬಾರ್ಡರ್-ಗವಾಸ್ಕರ್ ಟ್ರೋಫಿ ಟೆಸ್ಟ್ ಸರಣಿಯಲ್ಲಿ ಎಷ್ಟು ಪಂದ್ಯಗಳಿವೆ?
ಭಾರತ ವಿರುದ್ಧ ಆಸ್ಟ್ರೇಲಿಯಾ ಬಾರ್ಡರ್-ಗವಾಸ್ಕರ್ ಟ್ರೋಫಿ ಟೆಸ್ಟ್ ಸರಣಿಯಲ್ಲಿ ಒಟ್ಟು ನಾಲ್ಕು ಪಂದ್ಯಗಳು ನಡೆಯಲಿವೆ.
ಭಾರತ vs ಆಸ್ಟ್ರೇಲಿಯಾ ಬಾರ್ಡರ್-ಗವಾಸ್ಕರ್ ಟ್ರೋಫಿ ಟೆಸ್ಟ್ ಸರಣಿಗೆ ಸ್ಥಳಗಳು ಯಾವುವು?
ನಾಲ್ಕು ಸ್ಥಳಗಳು – ನಾಗ್ಪುರದ ವಿದರ್ಭ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂ, ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂ, ಧರ್ಮಶಾಲಾದ ಹಿಮಾಚಲ ಪ್ರದೇಶ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂ, ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂ.
India vs Australia: ಆಸ್ಟ್ರೇಲಿಯಾ ವಿರುದ್ಧದ ಪಂದ್ಯದಿಂದ ಟೀಮ್ ಇಂಡಿಯಾದ ಸ್ಟಾರ್ ಆಟಗಾರ ಔಟ್
ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಏಕದಿನ ಸರಣಿ ಯಾವಾಗ ಆರಂಭವಾಗುತ್ತದೆ?
ಮಾರ್ಚ್ 17 ರಂದು ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಏಕದಿನ ಸರಣಿ ಆರಂಭವಾಗಲಿದೆ.
ಭಾರತ vs ಆಸ್ಟ್ರೇಲಿಯಾ ಬಾರ್ಡರ್-ಗವಾಸ್ಕರ್ ಟ್ರೋಫಿ ಟೆಸ್ಟ್ ಪಂದ್ಯಗಳು ಎಷ್ಟು ಗಂಟೆಗೆ ಪ್ರಾರಂಭವಾಗುತ್ತವೆ?
ಭಾರತ ಮತ್ತು ಆಸ್ಟ್ರೇಲಿಯಾ ಬಾರ್ಡರ್-ಗವಾಸ್ಕರ್ ಟ್ರೋಫಿ ಸರಣಿಯ ಎಲ್ಲ ಪಂದ್ಯಗಳು ಬೆಳಗ್ಗೆ 9:30 ಕ್ಕೆ ಆರಂಭವಾಗಲಿವೆ.
ಭಾರತ vs ಆಸ್ಟ್ರೇಲಿಯಾ ಬಾರ್ಡರ್-ಗವಾಸ್ಕರ್ ಟ್ರೋಫಿ ಟೆಸ್ಟ್ ಸರಣಿಯನ್ನು ಯಾವ ಚಾನಲ್ನಲ್ಲಿ ನೇರ ಪ್ರಸಾರವಾಗಲಿದೆ?
ಭಾರತ vs ಆಸ್ಟ್ರೇಲಿಯಾ ಬಾರ್ಡರ್-ಗವಾಸ್ಕರ್ ಟ್ರೋಫಿ ಟೆಸ್ಟ್ ಸರಣಿಯನ್ನು ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್ ಪ್ರಸಾರ ಮಾಡುತ್ತದೆ. ಡಿಸ್ನಿ+ ಹಾಟ್‌ಸ್ಟಾರ್ ಅಪ್ಲಿಕೇಶನ್‌ನಲ್ಲಿ ಲೈವ್ ಸ್ಟ್ರೀಮ್ ವೀಕ್ಷಿಸಬಹುದು.
ಮೊದಲೆರಡು ಟೆಸ್ಟ್‌ಗೆ ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ (ಉಪ ನಾಯಕ), ಶುಭ್ಮನ್ ಗಿಲ್, ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ, ಕೆಎಸ್ ಭರತ್ (ವಿಕೆಟ್ ಕೀಪರ್), ಇಶಾನ್ ಕಿಶನ್ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ಅಕ್ಷರ್ ಪಟೇಲ್, ಕುಲ್ದೀಪ್ ಯಾದವ್, ರವೀಂದ್ರ ಜಡೇಜಾ, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಉಮೇಶ್ ಯಾದವ್, ಜಯದೇವ್ ಉನದ್ಕತ್, ಸೂರ್ಯಕುಮಾರ್ ಯಾದವ್, ಶ್ರೇಯಸ್ ಅಯ್ಯರ್.
ಆಸ್ಟ್ರೇಲಿಯಾ ಟೆಸ್ಟ್ ತಂಡ: ಪ್ಯಾಟ್ ಕಮಿನ್ಸ್ (ನಾಯಕ), ಆಷ್ಟನ್ ಅಗರ್, ಸ್ಕಾಟ್ ಬೋಲ್ಯಾಂಡ್, ಅಲೆಕ್ಸ್ ಕ್ಯಾರಿ, ಕ್ಯಾಮರೋನ್ ಗ್ರೀನ್, ಪೀಟರ್ ಹ್ಯಾಂಡ್ಸ್‌ಕಾಂಬ್ , ಜೋಶ್ ಹ್ಯಾಝಲ್‌ವುಡ್, ಟ್ರಾವಿಸ್ ಹೆಡ್, ಉಸ್ಮಾನ್ ಖ್ವಾಜಾ, ಮಾರ್ನಸ್ ಲಾಬುಶೇನ್, ನಾಥನ್ ಲಿಯಾನ್, ಲ್ಯಾನ್ಸ್ ಮೋರಿಸ್, ಟಾಡ್ ಮರ್ಫಿ, ಮ್ಯಾಥ್ಯೂ ರೆನ್‌ಶಾಮಿ, ಸ್ಟೀವ್ ಸ್ಮಿತ್, ಮಿಚೆಲ್ ಸ್ಟಾರ್ಕ್, ಮಿಚೆಲ್ ಸ್ವೆಪ್ಸನ್, ಡೇವಿಡ್ ವಾರ್ನರ್.
ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 12:12 pm, Fri, 3 February 23