ಬಾರ್ಡರ್- ಗವಾಸ್ಕರ್ ಟ್ರೋಫಿಯ ಭಾರತ ಹಾಗೂ ಆಸ್ಟ್ರೇಲಿಯಾ (India vs Australia) ನಡುವಣ ಮೊದಲ ಟೆಸ್ಟ್ ಎರಡುವರೆ ದಿನಕ್ಕೇ ಮುಕ್ತಾಯಗೊಂಡಿತು. ನಾಗ್ಪುರದ ವಿದರ್ಭ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಭಾರತೀಯ ಸ್ಪಿನ್ ದಾಳಿಗೆ ನಲುಗಿದ ಕಾಂಗರೂಗಳು ಪೆವಿಲಿಯನ್ ಪರೇಡ್ ನಡೆಸಿದರು. ರವೀಂದ್ರ ಜಡೇಜಾ (Ravindra Jadeja) ಹಾಗೂ ರವಿಚಂದ್ರನ್ ಅಶ್ವಿನ್ ಸ್ಪಿನ್ ತಂತ್ರ ಅರಿಯುವಲ್ಲಿ ವಿಫಲರಾದ ಪ್ಯಾಟ್ ಕಮಿನ್ಸ್ ಪಡೆ ಹೀನಾಯ ಸೋಲುಂಡಿತು. ಇನ್ನಿಂಗ್ಸ್ ಹಾಗೂ 132 ರನ್ಗಳ ಭರ್ಜರಿ ಜಯದೊಂದಿಗೆ ಟೀಮ್ ಇಂಡಿಯಾ (Team India) ನಾಲ್ಕು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ 1-0 ಮುನ್ನಡೆ ಪಡೆದುಕೊಂಡಿದೆ. ಇದೀಗ ಉಭಯ ತಂಡಗಳು ದ್ವಿತೀಯ ಟೆಸ್ಟ್ ಮೇಲೆ ಕಣ್ಣಿಟ್ಟಿದೆ. ಹಾಗಾದರೆ ಭಾರತ- ಆಸ್ಟ್ರೇಲಿಯಾ ಎರಡನೇ ಟೆಸ್ಟ್ ಯಾವಾಗ?.
ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಎರಡನೇ ಟೆಸ್ಟ್ ಪಂದ್ಯ ಯಾವಾಗ ನಡೆಯಲಿದೆ?
ಎರಡನೇ ಟೆಸ್ಟ್ ಪಂದ್ಯ ಫೆಬ್ರವರಿ 17 ರಿಂದ ಫೆಬ್ರವರಿ 21 ರವರೆಗೆ ನಡೆಯಲಿದೆ.
ದ್ವಿತೀಯ ಟೆಸ್ಟ್ ಪಂದ್ಯ ಎಲ್ಲಿ ನಡೆಯಲಿದೆ?
ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ದ್ವಿತೀಯ ಟೆಸ್ಟ್ ಪಂದ್ಯ ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ನಡೆಯಲಿದೆ.
ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಎರಡನೇ ಟೆಸ್ಟ್ ಪಂದ್ಯ ಎಷ್ಟು ಗಂಟೆಗೆ ಪ್ರಾರಂಭವಾಗುತ್ತದೆ?
ಎರಡನೇ ಟೆಸ್ಟ್ ಪಂದ್ಯವು ಬೆಳಗ್ಗೆ 09:30 ಕ್ಕೆ ಆರಂಭವಾಗಲಿದೆ. ಒಂಬತ್ತು ಗಂಟೆಗೆ ಟಾಸ್ ಪ್ರಕ್ರಿಯೆ ನಡೆಯಲಿದೆ.
ಪಂದ್ಯದ ನೇರ ಪ್ರಸಾರವನ್ನು ಎಲ್ಲಿ ವೀಕ್ಷಿಸಬಹುದು?
ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಎರಡನೇ ಟೆಸ್ಟ್ ಪಂದ್ಯದ ನೇರ ಪ್ರಸಾರವನ್ನು ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್ ಚಾನೆಲ್‌ಗಳಲ್ಲಿ ಪ್ರಸಾರ ಮಾಡಲಾಗುತ್ತದೆ. ಹಾಗೆಯೇ ಪಂದ್ಯದ ಲೈವ್ ಸ್ಟ್ರೀಮಿಂಗ್ ಡಿಸ್ನಿ + ಹಾಟ್‌ಸ್ಟಾರ್‌ನಲ್ಲಿ ಇರಲಿದೆ.
Rohit Sharma: ಸಚಿನ್ ತೆಂಡೂಲ್ಕರ್ ದಾಖಲೆ ಸರಿಗಟ್ಟಿದ ರೋಹಿತ್ ಶರ್ಮಾ
ಮೂರನೇ ಟೆಸ್ಟ್ ಸ್ಥಳಾಂತರ?:
ಮಾರ್ಚ್ 1 ರಿಂದ ಧರ್ಮಶಾಲಾದ ಹಿಮಾಚಲ ಪ್ರದೇಶ ಕ್ರಿಕೆಟ್ ಅಸೋಸಿಯೇಷನ್ನಲ್ಲಿ ಆಯೋಜಿಸಲಾಗಿರುವ ಮೂರನೇ ಟೆಸ್ಟ್ ಪಂದ್ಯ ನಡೆಯುವುದು ಅನುಮಾನ ಎನ್ನಲಾಗುತ್ತಿದೆ. ಇಲ್ಲಿನ ಪಿಚ್ ಅನ್ನು ಇತ್ತೀಚೆಗಷ್ಟೆ ನವೀಕರಣಗೊಳಿಸಲಾಗಿತ್ತು. ಆದರೆ, ಪಿಚ್ ಸಂಪೂರ್ಣ ಸಜ್ಜಾದ ಕಾರಣ ಅಂತರರಾಷ್ಟ್ರೀಯ ಪಂದ್ಯ ಆಡಲು ಯೋಗ್ಯವಾಗಿಲ್ಲ ಎಂದು ಹೇಳಲಾಗಿದೆ. ಬಿಸಿಸಿಐ ಪಿಚ್ ಪರಿಶೀಲನೆ ನಡೆಸುವ ವಿಶೇಷ ಅಧಿಕಾರಿಗಳನ್ನು ಹೊಂದಿದೆ. ಇವರು ಇನ್ನೆರಡು ದಿನಗಳಲ್ಲಿ ಧರ್ಮಶಾಲಗೆ ತೆರಳಿ ಪಿಚ್ ಅನ್ನು ತಪಾಸಣೆ ನಡೆಸಿ ವರದಿ ಸಲ್ಲಿಸಲಿದ್ದಾರೆ. ಪಿಚ್ ಇನ್ನೂ ಸಂಪೂರ್ಣ ಸಿದ್ಧವಾಗಿಲ್ಲ ಎಂದಾದರೆ ಮೂರನೇ ಟೆಸ್ಟ್ ಸ್ಥಳಾಂತರಗೊಳ್ಳಲಿದೆ. ಧರ್ಮಶಾಲ ಪಿಚ್ ಅನ್ನು ಇತ್ತೀಚೆಗಷ್ಟೆ ಉತ್ತಮ ಗುಣಮಟ್ಟದಲ್ಲಿ ನಿರ್ಮಿಸಲಾಗಿತ್ತು. ಆದರೆ, ನಿರಂತರ ಮಳೆ ಸುರಿಯುತ್ತಿರುವ ಕಾರಣ ಕಾಮಗಾರಿ ವಿಳಂಬವಾಗಿದೆ. ಧರ್ಮಶಾಲ ಬಿಟ್ಟರೆ ಭಾರತ-ಆಸ್ಟ್ರೇಲಿಯಾ ಪಂದ್ಯ ವಿಶಾಖಪಟ್ಟಣಂನ ವೈಜಾಗ್ನಲ್ಲಿ ಆಯೋಜಿಸುವ ಸಾಧ್ಯತೆ ಇದೆ ಎನ್ನಲಾಗಿದೆ.
ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ (ಉಪ ನಾಯಕ), ಶುಭ್ಮನ್ ಗಿಲ್, ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ, ಕೆಎಸ್ ಭರತ್ (ವಿಕೆಟ್ ಕೀಪರ್), ಇಶಾನ್ ಕಿಶನ್ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ಅಕ್ಷರ್ ಪಟೇಲ್, ಕುಲ್ದೀಪ್ ಯಾದವ್, ರವೀಂದ್ರ ಜಡೇಜಾ, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಉಮೇಶ್ ಯಾದವ್, ಜಯದೇವ್ ಉನದ್ಕತ್, ಸೂರ್ಯಕುಮಾರ್ ಯಾದವ್, ಶ್ರೇಯಸ್ ಅಯ್ಯರ್.
ಆಸ್ಟ್ರೇಲಿಯಾ ಟೆಸ್ಟ್ ತಂಡ: ಪ್ಯಾಟ್ ಕಮಿನ್ಸ್ (ನಾಯಕ), ಆಷ್ಟನ್ ಅಗರ್, ಸ್ಕಾಟ್ ಬೋಲ್ಯಾಂಡ್, ಅಲೆಕ್ಸ್ ಕ್ಯಾರಿ, ಕ್ಯಾಮರೋನ್ ಗ್ರೀನ್, ಪೀಟರ್ ಹ್ಯಾಂಡ್ಸ್‌ಕಾಂಬ್ , ಜೋಶ್ ಹ್ಯಾಝಲ್‌ವುಡ್, ಟ್ರಾವಿಸ್ ಹೆಡ್, ಉಸ್ಮಾನ್ ಖ್ವಾಜಾ, ಮಾರ್ನಸ್ ಲಾಬುಶೇನ್, ನಾಥನ್ ಲಿಯಾನ್, ಲ್ಯಾನ್ಸ್ ಮೋರಿಸ್, ಟಾಡ್ ಮರ್ಫಿ, ಮ್ಯಾಥ್ಯೂ ರೆನ್‌ಶಾಮಿ, ಸ್ಟೀವ್ ಸ್ಮಿತ್, ಮಿಚೆಲ್ ಸ್ಟಾರ್ಕ್, ಮಿಚೆಲ್ ಸ್ವೆಪ್ಸನ್, ಡೇವಿಡ್ ವಾರ್ನರ್.
ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 7:55 am, Sun, 12 February 23