IND vs AUS 3rd Test: ಭಾರತ-ಆಸ್ಟ್ರೇಲಿಯಾ ತೃತೀಯ ಟೆಸ್ಟ್ ಪಂದ್ಯ ಯಾವಾಗ?, ಎಲ್ಲಿ ನಡೆಯಲಿದೆ?: ಇಲ್ಲಿದೆ ಮಾಹಿತಿ

India vs Australia 3rd Test: ಮೊದಲ ಎರಡು ಟೆಸ್ಟ್​ನಲ್ಲಿ ಗೆಲ್ಲುವ ಮೂಲಕ​ ಬಾರ್ಡರ್- ಗವಾಸ್ಕರ್ ಟ್ರೋಫಿಯನ್ನು ಟೀಮ್ ಇಂಡಿಯಾ ತನ್ನಲ್ಲೇ ಉಳಿಸಿಕೊಂಡಿದೆ. ಇದೀಗ ತೃತೀಯ ಕದನಕ್ಕೆ ಉಭಯ ತಂಡಗಳು ಸಜ್ಜಾಗಬೇಕಿದೆ. ಹಾಗಾದರೆ, ಇಂಡೋ- ಆಸೀಸ್ ಮೂರನೇ ಟೆಸ್ಟ್ ಯಾವಾಗ ಆರಂಭ?

IND vs AUS 3rd Test: ಭಾರತ-ಆಸ್ಟ್ರೇಲಿಯಾ ತೃತೀಯ ಟೆಸ್ಟ್ ಪಂದ್ಯ ಯಾವಾಗ?, ಎಲ್ಲಿ ನಡೆಯಲಿದೆ?: ಇಲ್ಲಿದೆ ಮಾಹಿತಿ
IND vs AUS

Updated on: Feb 20, 2023 | 8:21 AM

ಬಾರ್ಡರ್- ಗವಾಸ್ಕರ್ ಟ್ರೋಫಿಯ ಭಾರತ ಹಾಗೂ ಆಸ್ಟ್ರೇಲಿಯಾ (India vs Australia) ನಡುವಣ ಮೊದಲೆರಡು ಟೆಸ್ಟ್ ಪಂದ್ಯ ಮುಕ್ತಾಯಗೊಂಡಿದೆ. ಈ ಎರಡೂ ಪಂದ್ಯದಲ್ಲಿ ಟೀಮ್ ಇಂಡಿಯಾ ಗೆಲುವು ಸಾಧಿಸುವ ಮೂಲಕ ನಾಲ್ಕು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ 2-0 ಮುನ್ನಡೆ ಪಡೆದುಕೊಂಡಿದೆ. ಅಲ್ಲದೆ ಬಾರ್ಡರ್- ಗವಾಸ್ಕರ್ (Border Gavaskar Trophy) ಟ್ರೋಫಿಯನ್ನು ತನ್ನಲ್ಲೇ ಉಳಿಸಿಕೊಂಡಿದೆ. ನಾಗ್ಪುರದಲ್ಲಿ ನಡೆದ ಮೊದಲ ಪಂದ್ಯದಲ್ಲಿ ರವೀಂದ್ರ ಜಡೇಜಾ (Ravindra Jadeja) ಹಾಗೂ ರವಿಚಂದ್ರನ್ ಅಶ್ವಿನ್ ಸ್ಪಿನ್ ತಂತ್ರ ಅರಿಯುವಲ್ಲಿ ವಿಫಲರಾದ ಪ್ಯಾಟ್ ಕಮಿನ್ಸ್ ಪಡೆ ಹೀನಾಯ ಸೋಲುಂಡಿತು. ದ್ವಿತೀಯ ಪಂದ್ಯದಲ್ಲೂ ಇದೇ ಮುಂದುವರೆಯಿತು. ಇಲ್ಲಿ ಜಡೇಜಾ, ಅಶ್ವಿನ್​ಗೆ ವೇಗಿಗಳು ಕೂಡ ಸಾಥ್ ನೀಡಿದರು. ಇದೀಗ ತೃತೀಯ ಕದನಕ್ಕೆ ಉಭಯ ತಂಡಗಳು ಸಜ್ಜಾಗಬೇಕಿದೆ. ಹಾಗಾದರೆ, ಇಂಡೋ- ಆಸೀಸ್ ಮೂರನೇ ಟೆಸ್ಟ್ ಯಾವಾಗ ಆರಂಭ?

ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಮೂರನೇ ಟೆಸ್ಟ್ ಪಂದ್ಯ ಯಾವಾಗ ನಡೆಯಲಿದೆ?

ತೃತೀಯ ಟೆಸ್ಟ್ ಪಂದ್ಯ ಮಾರ್ಚ್ 1 ರಿಂದ ಮಾರ್ಚ್ 5 ರವರೆಗೆ ನಡೆಯಲಿದೆ.

ಇದನ್ನೂ ಓದಿ
INDW vs IREW: ಭಾರತಕ್ಕಿಂದು ಮಾಡು ಇಲ್ಲವೇ ಮಡಿ ಪಂದ್ಯ: ಐರ್ಲೆಂಡ್ ವಿರುದ್ಧ ಗೆದ್ದರಷ್ಟೇ ಸಾಲದು
IND vs AUS 2nd Test: ಆಸ್ಟ್ರೇಲಿಯಾ ವಿರುದ್ಧ ಗೆದ್ದ ತಕ್ಷಣ ಟೀಮ್ ಇಂಡಿಯಾ ಆಟಗಾರರು ಭೇಟಿ ನೀಡಿದ್ದು ಎಲ್ಲಿಗೆ ನೋಡಿ
India Odi Squad: ಟೀಮ್ ಇಂಡಿಯಾದಲ್ಲಿ 5 ಆಲ್​ರೌಂಡರ್ಸ್​, 6 ಬೌಲರ್​ಗಳು..!
Cheteshwar Pujara: 100ನೇ ಪಂದ್ಯದಲ್ಲಿ 3 ದಾಖಲೆ ಬರೆದ ಪೂಜಾರ

ಮೂರನೇ ಟೆಸ್ಟ್ ಪಂದ್ಯ ಎಲ್ಲಿ ನಡೆಯಲಿದೆ?

ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ತೃತೀಯ ಟೆಸ್ಟ್ ಪಂದ್ಯ ಇಂದೋರ್​ನ ಹೋಲ್ಕರ್ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯಲಿದೆ.

WTC Point Table: ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್​ಗೇರಲು ಟೀಮ್ ಇಂಡಿಯಾಗೆ ಒಂದೆಜ್ಜೆ ಮಾತ್ರ ಬಾಕಿ..!

ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಮೂರನೇ ಟೆಸ್ಟ್ ಪಂದ್ಯ ಎಷ್ಟು ಗಂಟೆಗೆ ಪ್ರಾರಂಭವಾಗುತ್ತದೆ?

ಮೂರನೇ ಟೆಸ್ಟ್ ಪಂದ್ಯವು ಬೆಳಗ್ಗೆ 09:30 ಕ್ಕೆ ಆರಂಭವಾಗಲಿದೆ. ಒಂಬತ್ತು ಗಂಟೆಗೆ ಟಾಸ್ ಪ್ರಕ್ರಿಯೆ ನಡೆಯಲಿದೆ.

ಪಂದ್ಯದ ನೇರ ಪ್ರಸಾರವನ್ನು ಎಲ್ಲಿ ವೀಕ್ಷಿಸಬಹುದು?

ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ತೃತೀಯ ಟೆಸ್ಟ್ ಪಂದ್ಯದ ನೇರ ಪ್ರಸಾರವನ್ನು ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್ ಚಾನೆಲ್‌ಗಳಲ್ಲಿ ಪ್ರಸಾರ ಮಾಡಲಾಗುತ್ತದೆ. ಹಾಗೆಯೇ ಪಂದ್ಯದ ಲೈವ್ ಸ್ಟ್ರೀಮಿಂಗ್ ಡಿಸ್ನಿ + ಹಾಟ್‌ಸ್ಟಾರ್‌ನಲ್ಲಿ ಇರಲಿದೆ.

ಉಳಿದ ಎರಡು ಟೆಸ್ಟ್​ಗೆ ಭಾರತ ತಂಡ ಪ್ರಕಟ:

ಭಾರತ-ಆಸ್ಟ್ರೇಲಿಯಾ ನಡುವಣ 3ನೇ ಮತ್ತು 4ನೇ ಟೆಸ್ಟ್ ಪಂದ್ಯಗಳಿಗೆ ಟೀಮ್ ಇಂಡಿಯಾವನ್ನು ಬಿಸಿಸಿಐ ಪ್ರಕಟಿಸಿದೆ. ಮೊದಲ 2 ಟೆಸ್ಟ್ ಪಂದ್ಯಗಳಲ್ಲಿ ಕಾಣಿಸಿಕೊಂಡ ಆಟಗಾರರೇ ಉಳಿದ ಪಂದ್ಯಗಳಿಗೂ ಆಯ್ಕೆಯಾಗಿದ್ದಾರೆ. ಆದರೆ, ಉಪ ನಾಯಕ ಯಾರು ಎಂಬುದನ್ನು ಬಿಸಿಸಿಐ ಬಹಿರಂಗ ಪಡಿಸಿಲ್ಲ. 2ನೇ ಟೆಸ್ಟ್ ಪಂದ್ಯದಿಂದ ಕೈಬಿಡಲಾಗಿದ್ದ ಜಯದೇವ್ ಉನಾದ್ಕಟ್ ಅವರನ್ನು ಉಳಿದ ಎರಡು ಪಂದ್ಯಗಳಿಗಾಗಿ ಆಯ್ಕೆ ಮಾಡಲಾಗಿದೆ. ದೆಹಲಿ ಟೆಸ್ಟ್ ಪಂದ್ಯಕ್ಕೂ ಮುನ್ನ ಜಯದೇವ್ ಅವರನ್ನು ರಣಜಿ ಟ್ರೋಫಿ ಫೈನಲ್ ಆಡುವಂತೆ ಬಿಸಿಸಿಐ ಕೇಳಿಕೊಂಡಿತ್ತು. ಜಸ್​ಪ್ರೀತ್ ಬುಮ್ರಾ ಇನ್ನೂ ಆಯ್ಕೆ ಆಗಿಲ್ಲ. ಇಲ್ಲಿದೆ ನೋಡಿ ಉಳಿದ ಎರಡು ಟೆಸ್ಟ್​ಗೆ ಟೀಮ್ ಇಂಡಿಯಾ.

ಭಾರತ ಟೆಸ್ಟ್ ತಂಡ: ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್, ಶುಭಮನ್ ಗಿಲ್, ಚೇತೇಶ್ವರ್ ಪೂಜಾರ, ವಿರಾಟ್ ಕೊಹ್ಲಿ, ಕೆಎಸ್ ಭರತ್ (ವಿಕೆಟ್ ಕೀಪರ್), ಇಶಾನ್ ಕಿಶನ್ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ಅಕ್ಷರ್ ಪಟೇಲ್, ಕುಲದೀಪ್ ಯಾದವ್, ರವೀಂದ್ರ ಜಡೇಜಾ, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ಉಮೇಶ್ ಯಾದವ್, ಜಯದೇವ್ ಉನಾದ್ಕಟ್.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 8:20 am, Mon, 20 February 23