ಶತಕ ವಂಚಿತನಾದ ನಿರಾಸೆಯಲ್ಲಿ ತಲೆ ಚಚ್ಚಿಕೊಂಡ ವಿರಾಟ್; ವೈರಲ್ ವಿಡಿಯೋ ನೋಡಿ

Virat Kohli: 85 ರನ್​ ಸಿಡಿಸಿ ಶತಕದತ್ತ ಮುನ್ನಡೆಯುತ್ತಿದ್ದ ವಿರಾಟ್ ಕೊಹ್ಲಿ, ಜೋಶ್ ಹ್ಯಾಜಲ್‌ವುಡ್ ಬೌಲಿಂಗ್​ನಲ್ಲಿ ಲಬುಶೇನ್​ ಕೈಗೆ ಕ್ಯಾಚಿತ್ತು ಔಟಾದರು. ವಿರಾಟ್ 116 ಎಸೆತಗಳಲ್ಲಿ 6 ಸಿಕ್ಸರ್ ನೆರವಿನಿಂದ 85 ರನ್ ಗಳಿಸಿದರು. ಈ ಮೂಲಕ ಕೇವಲ 15 ರನ್‌ಗಳಿಂದ ತಮ್ಮ ಶತಕವನ್ನು ತಪ್ಪಿಸಿಕೊಂಡರು.

ಶತಕ ವಂಚಿತನಾದ ನಿರಾಸೆಯಲ್ಲಿ ತಲೆ ಚಚ್ಚಿಕೊಂಡ ವಿರಾಟ್; ವೈರಲ್ ವಿಡಿಯೋ ನೋಡಿ
ವಿರಾಟ್ ಕೊಹ್ಲಿ
Follow us
ಪೃಥ್ವಿಶಂಕರ
|

Updated on: Oct 09, 2023 | 9:20 AM

ವಿಶ್ವಕಪ್‌ನಲ್ಲಿ (World Cup 2023) ಟೀಂ ಇಂಡಿಯಾ ಗೆಲುವಿನ ಆರಂಭ ಮಾಡಿದೆ. ಆಸ್ಟ್ರೇಲಿಯಾ ನೀಡಿದ 200 ರನ್‌ಗಳ ಸವಾಲನ್ನು ಟೀಂ ಇಂಡಿಯಾ (India vs Australia) 4 ವಿಕೆಟ್‌ ಕಳೆದುಕೊಂಡು ಪೂರೈಸಿತು. ಆದರೆ ಟೀಂ ಇಂಡಿಯಾಕ್ಕೆ 200 ರನ್​ಗಳ ಚೇಸ್ ಅಷ್ಟು ಸುಲಭವಾಗಿರಲಿಲ್ಲ. ಶುಭ್​ಮನ್ ಗಿಲ್ ಬದಲಿಗೆ ತಂಡದಲ್ಲಿ ಅವಕಾಶ ಪಡೆದಿದ್ದ ಇಶಾನ್ ಕಿಶನ್ ಶೂನ್ಯಕ್ಕೆ ವಿಕೆಟ್ ಒಪ್ಪಿಸಿ ನಿರಾಸೆ ಮೂಡಿಸಿದರು. ನಂತರದ ಓವರ್‌ನಲ್ಲಿ ಜೋಶ್ ಹ್ಯಾಜಲ್‌ವುಡ್ ನಾಯಕ ರೋಹಿತ್ ಶರ್ಮಾ ಮತ್ತು ಶ್ರೇಯಸ್ ಅಯ್ಯರ್ ಇಬ್ಬರಿಗೂ ಖಾತೆ ತೆರೆಯಲು ಅವಕಾಶ ನೀಡಲಿಲ್ಲ. ಹೀಗಾಗಿ ಟೀಂ ಇಂಡಿಯಾಗೆ 200 ರನ್‌ಗಳ ಸವಾಲು ಕೂಡ ಕಷ್ಟಕರವಾಯಿತು. ಆದರೆ ಆ ನಂತರ ಕೆಎಲ್ ರಾಹುಲ್ (KL Rahul) ಮತ್ತು ವಿರಾಟ್ ಕೊಹ್ಲಿ (Virat Kohli) ಇಬ್ಬರೂ ಟೀಂ ಇಂಡಿಯಾವನ್ನು ಗೆಲುವಿನ ದಡ ಸೇರಿಸಿದರು.

165 ರನ್‌ಗಳ ಜೊತೆಯಾಟ

ಇಶಾನ್, ರೋಹಿತ್ ಮತ್ತು ಶ್ರೇಯಸ್ ಶೂನ್ಯಕ್ಕೆ ಔಟಾಗುವುದರೊಂದಿಗೆ ಟೀಂ ಇಂಡಿಯಾ ಕೇವಲ 2 ರನ್​ಗಳಿಗೆ 3ವಿಕೆಟ್ ಕಳೆದುಕೊಂಡಿತು. ಆ ನಂತರ ಕೆಎಲ್ ಮತ್ತು ವಿರಾಟ್ ಇಬ್ಬರೂ ಟೀಂ ಇಂಡಿಯಾದ ಇನ್ನಿಂಗ್ಸ್ ನಿಭಾಯಿಸಿದರು. ಇಬ್ಬರೂ ತಲಾ ಅರ್ಧಶತಕ ಸಿಡಿಸಿ ಮಿಂಚಿದರು. 165 ರನ್‌ಗಳ ಜೊತೆಯಾಟವಾಡಿದ ಈ ಇಬ್ಬರು ಭಾರತವನ್ನು ಸಂಕಷ್ಟದಿಂದ ಪಾರು ಮಾಡಿದರು.

ಕಿಂಗ್ ಕೊಹ್ಲಿ ಕ್ಯಾಚ್ ಕೈಚೆಲ್ಲಿ ಸೋಲಿಗೆ ಆಹ್ವಾನ ನೀಡಿದ ಆಸ್ಟ್ರೇಲಿಯಾ! ವಿಡಿಯೋ ನೋಡಿ

15 ರನ್‌ಗಳಿಂದ ಶತಕ ಮಿಸ್

ಆದರೆ 85 ರನ್​ ಸಿಡಿಸಿ ಶತಕದತ್ತ ಮುನ್ನಡೆಯುತ್ತಿದ್ದ ವಿರಾಟ್ ಕೊಹ್ಲಿ, ಜೋಶ್ ಹ್ಯಾಜಲ್‌ವುಡ್ ಬೌಲಿಂಗ್​ನಲ್ಲಿ ಲಬುಶೇನ್​ ಕೈಗೆ ಕ್ಯಾಚಿತ್ತು ಔಟಾದರು. ವಿರಾಟ್ 116 ಎಸೆತಗಳಲ್ಲಿ 6 ಸಿಕ್ಸರ್ ನೆರವಿನಿಂದ 85 ರನ್ ಗಳಿಸಿದರು. ಈ ಮೂಲಕ ಕೇವಲ 15 ರನ್‌ಗಳಿಂದ ತಮ್ಮ ಶತಕವನ್ನು ತಪ್ಪಿಸಿಕೊಂಡರು.

ಸಂತೃಪ್ತಿ ವಿರಾಟ್​ಗೆ ಇತ್ತು

ಆಸೀಸ್ ವಿರುದ್ಧ ಸ್ಮರಣೀಯ ಇನ್ನಿಂಗ್ಸ್ ಆಡಿದ ಕೊಹ್ಲಿಯನ್ನು ತಂಡದ ಇತರರ ಆಟಗಾರರು ಚಪ್ಪಾಳೆ ಮೂಲಕ ಸ್ವಾಗತಿಸಿದರೆ, ಇತ್ತ ಟೀಂ ಇಂಡಿಯಾವನ್ನು ಸಂಕಷ್ಟದಿಂದ ಪಾರು ಮಾಡಿದ ಸಂತೃಪ್ತಿ ವಿರಾಟ್​ಗೆ ಇತ್ತು. ಆದರೆ ಟೀಂ ಇಂಡಿಯಾವನ್ನು ಗೆಲುವಿನ ದಡ ಸೇರಿಸಿ ಅಜೇಯರಾಗಿ ಮರಳಲು ಸಾಧ್ಯವಾಗಲಿಲ್ಲ ಎಂಬ ವಿಷಾದ ವಿರಾಟ್ ಮುಖದಲ್ಲಿ ಕಾಣುತ್ತಿತ್ತು. ಹೀಗಾಗಿ ಡ್ರೆಸ್ಸಿಂಗ್ ರೂಮ್ ತಲುಪಿದ ವಿರಾಟ್ ತಮ್ಮ ತಲೆಯನ್ನು ಚಚ್ಚಿಕೊಳ್ಳುವ ಮೂಲಕ ತಮ್ಮ ಅಸಮಾಧಾನವನ್ನು ವ್ಯಕ್ತಪಡಿಸಿದರು. ಇದೀಗ ವಿರಾಟ್ ಅವರ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗಿದೆ.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಶರಣಾದ ನಕ್ಸಲರ ಶಸ್ತ್ರಾಸ್ತ್ರ ಎಲ್ಲಿ? ಕೊನೆಗೂ ಉತ್ತರಿಸಿದ ಸಿದ್ದರಾಮಯ್ಯ
ಶರಣಾದ ನಕ್ಸಲರ ಶಸ್ತ್ರಾಸ್ತ್ರ ಎಲ್ಲಿ? ಕೊನೆಗೂ ಉತ್ತರಿಸಿದ ಸಿದ್ದರಾಮಯ್ಯ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ