ಈ ಸಲ ಬಿಡಲ್ಲ… ಟ್ರಾವಿಸ್ ಹೆಡ್​ಗೆ ಟೀಮ್ ಇಂಡಿಯಾ ವೇಗಿಯ ಚಾಲೆಂಜ್

Travis Head: ಈ ಸರಣಿಯಲ್ಲಿ ಅತಿ ಹೆಚ್ಚು ರನ್ ಗಳಿಸಿದ ಬ್ಯಾಟರ್ ಟ್ರಾವಿಸ್ ಹೆಡ್. ಮೂರು ಪಂದ್ಯಗಳಲ್ಲಿ ಎರಡು ಶತಕ ಸಿಡಿಸಿರುವ ಅವರು ಒಟ್ಟು 409 ರನ್ ಗಳಿಸಿದ್ದಾರೆ. ಇದೀಗ ಬಾಕ್ಸಿಂಗ್ ಡೇ ಟೆಸ್ಟ್​ಗಾಗಿ ಸಜ್ಜಾಗಿರುವ ಹೆಡ್ ಕಡೆಯಿಂದ ಭರ್ಜರಿ ಇನಿಂಗ್ಸ್ ನಿರೀಕ್ಷಿಸಲಾಗುತ್ತಿದೆ. ಇತ್ತ ಪಂದ್ಯದ ಆರಂಭಕ್ಕೂ ಮುನ್ನವೇ ಟೀಮ್ ಇಂಡಿಯಾ ವೇಗಿ ಟ್ರಾವಿಸ್ ಹೆಡ್ ಅವರನ್ನು ಕ್ರೀಸ್​ನಲ್ಲಿ ನೆಲೆಯೂರಲು ಬಿಡಲ್ಲ ಎಂಬ ಹೇಳಿಕೆಯೊಂದಿಗೆ ಗಮನ ಸೆಳೆದಿದ್ದಾರೆ.

ಈ ಸಲ ಬಿಡಲ್ಲ... ಟ್ರಾವಿಸ್ ಹೆಡ್​ಗೆ ಟೀಮ್ ಇಂಡಿಯಾ ವೇಗಿಯ ಚಾಲೆಂಜ್
Travis Head - Akash Deep
Follow us
ಝಾಹಿರ್ ಯೂಸುಫ್
|

Updated on: Dec 22, 2024 | 1:34 PM

ಎರಡು ಪಂದ್ಯಗಳು… ಎರಡು ಶತಕಗಳು… ಟೀಮ್ ಇಂಡಿಯಾ ವಿರುದ್ಧ ಕಳೆದೆರಡು ಪಂದ್ಯಗಳಲ್ಲಿ ಆಸ್ಟ್ರೇಲಿಯಾ ದಾಂಡಿಗ ಟ್ರಾವಿಸ್ ಹೆಡ್ ಸ್ಪೋಟಕ ಶತಕಗಳನ್ನು ಸಿಡಿಸಿ ಅಬ್ಬರಿಸಿದ್ದಾರೆ. ಈ ಅಬ್ಬರದೊಂದಿಗೆ ಇದೀಗ ಹೆಡ್ ಮೆಲ್ಬೋರ್ನ್​ನಲ್ಲಿ ನಡೆಯಲಿರುವ 4ನೇ ಟೆಸ್ಟ್ ಪಂದ್ಯಕ್ಕಾಗಿ ಸಜ್ಜಾಗುತ್ತಿದ್ದಾರೆ. ಆದರೆ ಎಂಸಿಜಿ ಮೈದಾನದಲ್ಲಿ ಟ್ರಾವಿಸ್ ಹೆಡ್ ಆಟ ನಡೆಯಲ್ಲ ಎಂದಿದ್ದಾರೆ ಟೀಮ್ ಇಂಡಿಯಾ ವೇಗಿ ಆಕಾಶ್ ದೀಪ್.

ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ಬಾಕ್ಸಿಂಗ್ ಟೆಸ್ಟ್ ಪಂದ್ಯದ ನಿಮಿತ್ತು ಸುದ್ದಿಗೋಷ್ಠಿಯಲ್ಲಿ ಕಾಣಿಸಿಕೊಂಡ ಆಕಾಶ್ ದೀಪ್, ಈ ಬಾರಿ ನಾವು ಪರಿಣಾಮಕಾರಿಯಾಗಿ ದಾಳಿ ಸಂಘಟಿಸುತ್ತೇವೆ. ಇದಕ್ಕಾಗಿ ಕಠಿಣ ಅಭ್ಯಾಸವನ್ನು ಸಹ ನಡೆಸಿದ್ದೇವೆ. ಅಷ್ಟೇ ಅಲ್ಲದೆ ಆಸ್ಟ್ರೇಲಿಯಾ ದಾಂಡಿಗ ಟ್ರಾವಿಸ್ ಹೆಡ್​ಗಾಗಿ ವಿಶೇಷ ಪ್ಲ್ಯಾನ್​ಗಳನ್ನು ರೂಪಿಸಿದ್ದೇವೆ ಎಂದು ತಿಳಿಸಿದ್ದಾರೆ.

ನನ್ನ ಪ್ರಕಾರ ಟ್ರಾವಿಸ್ ಹೆಡ್, ವಿಶೇಷವಾಗಿ ಶಾರ್ಟ್ ಬಾಲ್‌ಗಳ ವಿರುದ್ಧ ಚೆನ್ನಾಗಿ ಆಡುತ್ತಾರೆ. ಆದರೆ ಈ ಬಾರಿ ನಾವು ಅವರನ್ನು ಕ್ರೀಸ್‌ನಲ್ಲಿ ನೆಲೆಯೂರಲು ಬಿಡುವುದಿಲ್ಲ. ನಾವು ನಿರ್ದಿಷ್ಟ ಪ್ರದೇಶಗಳಲ್ಲಿ ಬೌಲಿಂಗ್ ಮಾಡುತ್ತೇವೆ. ಅಲ್ಲದೆ ಅವರ ಮೇಲೆ ಒತ್ತಡ ಹೇರಿ ತಪ್ಪುಗಳನ್ನು ಮಾಡಲು ಅವರನ್ನು ಒತ್ತಾಯಿಸುತ್ತೇವೆ. ಈ ಮೂಲಕ ನಾವು ಹೆಡ್ ಅವರನ್ನು ಬೇಗನೆ ಔಟ್ ಮಾಡಲಿದ್ದೇವೆ ಎಂದು ಆಕಾಶ್ ದೀಪ್ ತಿಳಿಸಿದ್ದಾರೆ.

ಇದೀಗ ಆಕಾಶ್ ದೀಪ್ ಬಹಿರಂಗವಾಗಿ ನೀಡಿರುವ ಹೇಳಿಕೆಯನ್ನು ಟ್ರಾವಿಸ್ ಹೆಡ್ ಸವಾಲಾಗಿ ಸ್ವೀಕರಿಸುವ ಸಾಧ್ಯತೆಯಿದೆ. ಅದರಂತೆ ಅವರು ಕ್ರೀಸ್​ನಲ್ಲಿ ನೆಲೆಯೂರಲಿದ್ದಾರಾ? ಅಥವಾ ಟೀಮ್ ಇಂಡಿಯಾ ಬೌಲರ್​ಗಳು ಈ ಬಾರಿ ಬೇಗನೆ ಯಶಸ್ಸು ಪಡೆಯಲಿದ್ದಾರಾ ಎಂಬುದನ್ನು ಕಾದು ನೋಡಬೇಕಿದೆ.

ಆಸ್ಟ್ರೇಲಿಯಾ ತಂಡ: ಪ್ಯಾಟ್ ಕಮ್ಮಿನ್ಸ್ (ನಾಯಕ), ಉಸ್ಮಾನ್ ಖ್ವಾಜಾ, ಟ್ರಾವಿಸ್ ಹೆಡ್, ಸ್ಟೀವ್ ಸ್ಮಿತ್, ಶಾನ್ ಅಬಾಟ್, ಸ್ಕಾಟ್ ಬೋಲ್ಯಾಂಡ್, ಅಲೆಕ್ಸ್ ಕ್ಯಾರಿ, ಸ್ಯಾಮ್ ಕೊನ್​ಸ್ಟಾಸ್, ಜ್ಯೆ ರಿಚರ್ಡ್ಸನ್, ಜೋಶ್ ಇಂಗ್ಲಿಷ್, ಮಾರ್ನಸ್ ಲಾಬುಶೇನ್, ನಾಥನ್ ಲಿಯಾನ್, ಮಿಚೆಲ್ ಮಾರ್ಷ್, ಮಿಚೆಲ್ ಸ್ಟಾರ್ಕ್, ಬ್ಯೂ ವೆಬ್‌ಸ್ಟರ್.

ಇದನ್ನೂ ಓದಿ: ಭಾರತ vs ಪಾಕಿಸ್ತಾನ್ ಮುಖಾಮುಖಿಗೆ ಮುಹೂರ್ತ ಫಿಕ್ಸ್

ಭಾರತ ಟೆಸ್ಟ್ ತಂಡ: ರೋಹಿತ್ ಶರ್ಮಾ (ನಾಯಕ), ಜಸ್​ಪ್ರೀತ್ ಬುಮ್ರಾ (ಉಪನಾಯಕ), ಯಶಸ್ವಿ ಜೈಸ್ವಾಲ್, ಅಭಿಮನ್ಯು ಈಶ್ವರನ್, ಶುಭ್​ಮನ್ ಗಿಲ್ , ವಿರಾಟ್ ಕೊಹ್ಲಿ , ಕೆಎಲ್ ರಾಹುಲ್, ರಿಷಭ್ ಪಂತ್ (ವಿಕೆಟ್ ಕೀಪರ್), ಸರ್ಫರಾಝ್ ಖಾನ್, ಧ್ರುವ್ ಜುರೆಲ್ (ವಿಕೆಟ್ ಕೀಪರ್), ರವೀಂದ್ರ ಜಡೇಜಾ , ಮೊಹಮ್ಮದ್ ಸಿರಾಜ್ , ಆಕಾಶ್ ದೀಪ್, ಪ್ರಸಿದ್ಧ್ ಕೃಷ್ಣ, ಹರ್ಷಿತ್ ರಾಣ, ನಿತೀಶ್ ಕುಮಾರ್ ರೆಡ್ಡಿ, ವಾಷಿಂಗ್ಟನ್ ಸುಂದರ್, ದೇವದತ್ ಪಡಿಕ್ಕಲ್.

ನಿಯೋಗ ಹೊತ್ತು ತಂದಿದ್ದ ಕಬ್ಬನ್ನು ಕಚೇರಿಯಲ್ಲೇ ಮುರಿದು ತಿಂದ ಸಿದ್ದರಾಮಯ್ಯ
ನಿಯೋಗ ಹೊತ್ತು ತಂದಿದ್ದ ಕಬ್ಬನ್ನು ಕಚೇರಿಯಲ್ಲೇ ಮುರಿದು ತಿಂದ ಸಿದ್ದರಾಮಯ್ಯ
ಕೆಡಿಪಿ ಸಭೆಗಳನ್ನು ಹಗುರವಾಗಿ ಪರಿಗಣಿಸುವ ಪ್ರವೃತ್ತಿ ನಿಲ್ಲಬೇಕು
ಕೆಡಿಪಿ ಸಭೆಗಳನ್ನು ಹಗುರವಾಗಿ ಪರಿಗಣಿಸುವ ಪ್ರವೃತ್ತಿ ನಿಲ್ಲಬೇಕು
ಸುದೀಪ್ ಬಿಗ್​ಬಾಸ್ ಬಿಡಲು ಅಸಲಿ ಕಾರಣ ಬಿಚ್ಚಿಟ್ಟ ಪ್ರಥಮ್
ಸುದೀಪ್ ಬಿಗ್​ಬಾಸ್ ಬಿಡಲು ಅಸಲಿ ಕಾರಣ ಬಿಚ್ಚಿಟ್ಟ ಪ್ರಥಮ್
ಬೆಂಗಳೂರಿನ ಈ ಮಾರ್ಗದಲ್ಲಿ ಫುಲ್ ಟ್ರಾಫಿಕ್ ಜಾಮ್..!
ಬೆಂಗಳೂರಿನ ಈ ಮಾರ್ಗದಲ್ಲಿ ಫುಲ್ ಟ್ರಾಫಿಕ್ ಜಾಮ್..!
ಮಂತ್ರಾಲಯ ಸಂಸ್ಕೃತ ಶಾಲೆ ವಿದ್ಯಾರ್ಥಿಗಳು ಸಾವು: ಅಪಘಾತಕ್ಕೆ ಕಾರಣವೇನು?
ಮಂತ್ರಾಲಯ ಸಂಸ್ಕೃತ ಶಾಲೆ ವಿದ್ಯಾರ್ಥಿಗಳು ಸಾವು: ಅಪಘಾತಕ್ಕೆ ಕಾರಣವೇನು?
ಒಬ್ಬನಿಗೆ ಮದುವೆಯಾಗಿ ಕೇವಲ 4 ತಿಂಗಳಾಗಿತ್ತು, ಮತ್ತೊಬ್ಬನ ಪತ್ನಿ ಗರ್ಭಿಣಿ!
ಒಬ್ಬನಿಗೆ ಮದುವೆಯಾಗಿ ಕೇವಲ 4 ತಿಂಗಳಾಗಿತ್ತು, ಮತ್ತೊಬ್ಬನ ಪತ್ನಿ ಗರ್ಭಿಣಿ!
ಜಿಟಿಡಿ ಹೇಳಿದ ಧಮ್ ಮಾತಿಗೆ ಬಿಜೆಪಿ ನಾಯಕ ರವಿ ಪ್ರತಿಕ್ರಿಯೆ ನೀಡಲಿಲ್ಲ
ಜಿಟಿಡಿ ಹೇಳಿದ ಧಮ್ ಮಾತಿಗೆ ಬಿಜೆಪಿ ನಾಯಕ ರವಿ ಪ್ರತಿಕ್ರಿಯೆ ನೀಡಲಿಲ್ಲ
ಬಿಗ್​ಬಾಸ್ ಮನೆಯಲ್ಲಿ ರಾಜಿ ಸಂಧಾನ, ದೂರಾದವರು ಒಂದಾದರೇ?
ಬಿಗ್​ಬಾಸ್ ಮನೆಯಲ್ಲಿ ರಾಜಿ ಸಂಧಾನ, ದೂರಾದವರು ಒಂದಾದರೇ?
ಮಡಿದವರು ಶಿಗ್ಗಾವಿ ಕ್ಷೇತ್ರದ ಸವಣೂರು ತಾಲ್ಲೂಕಿನ ತರಕಾರಿ ವ್ಯಾಪಾರಸ್ಥರು
ಮಡಿದವರು ಶಿಗ್ಗಾವಿ ಕ್ಷೇತ್ರದ ಸವಣೂರು ತಾಲ್ಲೂಕಿನ ತರಕಾರಿ ವ್ಯಾಪಾರಸ್ಥರು
ಬಾಗಲಕೋಟೆಯಲ್ಲಿ ಎದೆ ಝಲ್​ ಎನಿಸುವ ಟ್ಯ್ರಾಕ್ಟರ್​ ರೇಸ್​: ವಿಡಿಯೋ ನೋಡಿ
ಬಾಗಲಕೋಟೆಯಲ್ಲಿ ಎದೆ ಝಲ್​ ಎನಿಸುವ ಟ್ಯ್ರಾಕ್ಟರ್​ ರೇಸ್​: ವಿಡಿಯೋ ನೋಡಿ