
ಮಹಿಳಾ ಏಕದಿನ ವಿಶ್ವಕಪ್‌ನ ಸೆಮಿಫೈನಲ್‌ನಲ್ಲಿ ( Women’s World Cup 2025 Semi-final) ಭಾರತ ಮತ್ತು ಆಸ್ಟ್ರೇಲಿಯಾ (India vs Australia) ತಂಡಗಳು ಪರಸ್ಪರ ಮುಖಾಮುಖಿಯಾಗಲಿವೆ. ಈ ಪಂದ್ಯವು ಅಕ್ಟೋಬರ್ 30 ರಂದು ನವಿ ಮುಂಬೈನ ಡಿವೈ ಪಾಟೀಲ್ ಕ್ರೀಡಾಂಗಣದಲ್ಲಿ ನಡೆಯಲಿದೆ. ಲೀಗ್ ಹಂತದಲ್ಲಿ ಉಭಯ ತಂಡಗಳು ಮುಖಾಮುಖಿಯಾಗಿದ್ದಾಗ ರನ್ ಮಳೆಯೇ ಹರಿದಿತ್ತು. ಈ ಪಂದ್ಯದಲ್ಲಿ ಟೀಂ ಇಂಡಿಯಾ 300 ಕ್ಕೂ ಅಧಿಕ ರನ್ ಕಲೆಹಾಕಿತ್ತು. ಆದಾಗ್ಯೂ ಆಸ್ಟ್ರೇಲಿಯಾದ ಬಲಿಷ್ಠ ಬ್ಯಾಟಿಂಗ್ನ ಎದುರು ಹರ್ಮನ್ ಪಡೆ ಸೋಲನುಭವಿಸಿತ್ತು. ಇದೀಗ ಸೆಮಿಫೈನಲ್‌ನಲ್ಲಿ ಆಸ್ಟ್ರೇಲಿಯಾವನ್ನು ಎದುರಿಸುತ್ತಿರುವ ಟೀಂ ಇಂಡಿಯಾ ಲೀಗ್ ಹಂತದ ಸೋಲಿಗೆ ಸೇಡು ತೀರಿಸಿಕೊಳ್ಳುವ ಇರಾದೆಯಲ್ಲಿದೆ.
2025 ರ ಮಹಿಳಾ ವಿಶ್ವಕಪ್‌ನಲ್ಲಿ ಭಾರತ ತಂಡದ ಪ್ರದರ್ಶನ ಸೋಲು ಗೆಲುವುಗಳಿಂದ ಕೂಡಿದೆ. ಆಡಿದ ಏಳು ಪಂದ್ಯಗಳಲ್ಲಿ ಮೂರರಲ್ಲಿ ಗೆದ್ದು, ಮೂರರಲ್ಲಿ ಸೋತಿದೆ. ಉಳಿದಂತೆ ಒಂದು ಪಂದ್ಯ ಮಳೆಯಿಂದಾಗಿ ರದ್ದಾಗಿದೆ. ಆದಾಗ್ಯೂ ಸೆಮಿಫೈನಲ್ ತಲುಪುವ ಮೂಲಕ ಹರ್ಮನ್‌ಪ್ರೀತ್ ಕೌರ್ ಪಡೆ ತವರಿನಲ್ಲಿ ಚೊಚ್ಚಲ ವಿಶ್ವಕಪ್ ಎತ್ತಿಹಿಡಿಯುವ ಗುರಿ ಹೊಂದಿದೆ. ಇನ್ನು ಆಸ್ಟ್ರೇಲಿಯಾ ವಿರುದ್ಧ ಸದಾ ಸಿಡಿಯುವ ಸ್ಮೃತಿ ಮಂಧಾನ, ಸೆಮಿಫೈನಲ್ ಪಂದ್ಯದಲ್ಲೂ ಅಬ್ಬರಿಸಬೇಕಿದೆ. ಇವರ ಜೊತೆ ಉಳಿದವರು ಕೂಡ ತಮ್ಮ ಸಾಮರ್ಥ್ಯಕ್ಕೂ ಮೀರಿದ ಪ್ರದರ್ಶನ ನೀಡಬೇಕಿದೆ. ಹಾಗಾದರೆ ಮಾತ್ರ ಭಾರತ, ಆಸ್ಟ್ರೇಲಿಯಾವನ್ನು ಸೋಲಿಸಬಹುದಾಗಿದೆ.
ಇತ್ತ ಆಸ್ಟ್ರೇಲಿಯಾ ಟೂರ್ನಿಯಲ್ಲಿ ಇಲ್ಲಿಯವರೆಗೆ ಅದ್ಭುತ ಪ್ರದರ್ಶನ ನೀಡಿದೆ. ಆಡಿದ ಏಳು ಗುಂಪು ಹಂತದ ಪಂದ್ಯಗಳಲ್ಲಿ ಆರನ್ನು ಗೆದ್ದು ಪಾಯಿಂಟ್ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ. ಆಸ್ಟ್ರೇಲಿಯಾ ತಂಡವು ಪ್ರತಿಯೊಂದು ವಿಭಾಗದಲ್ಲೂ ಅತ್ಯುತ್ತಮ ಸಮತೋಲನವನ್ನು ಪ್ರದರ್ಶಿಸಿದೆ. ಅಲಿಸಾ ಹೀಲಿ ಅವರ ನಾಯಕತ್ವ, ಎಲಿಸ್ ಪೆರ್ರಿ ಅವರ ಅನುಭವ ಮತ್ತು ಬೆತ್ ಮೂನಿ ಅವರ ಸ್ಥಿರ ಬ್ಯಾಟಿಂಗ್ ತಂಡವನ್ನು ಅಜೇಯ ಓಟದತ್ತ ಮುನ್ನಡೆಸಿದೆ.
World Cup 2025: ಟೀಂ ಇಂಡಿಯಾಕ್ಕೆ ಆಘಾತ; ವಿಶ್ವಕಪ್ನಿಂದ ಹೊರಬಿದ್ದ ಸ್ಟಾರ್ ಓಪನರ್
ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಮಹಿಳಾ ವಿಶ್ವಕಪ್ ಸೆಮಿಫೈನಲ್ ಪಂದ್ಯ ಅಕ್ಟೋಬರ್ 30 ರಂದು ನಡೆಯಲಿದೆ.
ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಮಹಿಳಾ ವಿಶ್ವಕಪ್ ಸೆಮಿಫೈನಲ್ ಪಂದ್ಯ ನವಿ ಮುಂಬೈನ ಡಿವೈ ಪಾಟೀಲ್ ಕ್ರೀಡಾಂಗಣದಲ್ಲಿ ನಡೆಯಲಿದೆ
ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಮಹಿಳಾ ವಿಶ್ವಕಪ್ ಸೆಮಿಫೈನಲ್ ಪಂದ್ಯ ಭಾರತೀಯ ಕಾಲಮಾನ ಮಧ್ಯಾಹ್ನ 3:00 ಗಂಟೆಗೆ ಆರಂಭವಾಗಲಿದೆ.
ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಮಹಿಳಾ ವಿಶ್ವಕಪ್ ಸೆಮಿಫೈನಲ್ ಪಂದ್ಯವನ್ನು ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್‌ನಲ್ಲಿ ನೇರ ಪ್ರಸಾರ ಮಾಡಲಾಗುತ್ತದೆ. ಆನ್‌ಲೈನ್ ವೀಕ್ಷಕರು ಜಿಯೋ ಹಾಟ್‌ಸ್ಟಾರ್ ಅಪ್ಲಿಕೇಶನ್ ಅಥವಾ ವೆಬ್‌ಸೈಟ್‌ನಲ್ಲಿ ಪಂದ್ಯವನ್ನು ಉಚಿತವಾಗಿ ವೀಕ್ಷಿಸಬಹುದು.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ