AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs AUS, World Cup Final: ಭಾರತ ತಂಡಕ್ಕೆ ಆಲ್ ದಿ ಬೆಸ್ಟ್​ ಎಂದ ಪ್ರಧಾನಿ ನರೇಂದ್ರ ಮೋದಿ

India vs Australia World Cup final: ಭಾರತ-ಆಸ್ಟ್ರೇಲಿಯಾ ಐಸಿಸಿ ಏಕದಿನ ವಿಶ್ವಕಪ್ ಫೈನಲ್ ಪಂದ್ಯಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಭಾರತ ತಂಡಕ್ಕೆ ಶುಭಕೋರಿದ್ದಾರೆ. ಭಾರತ ತಂಡಕ್ಕೆ ಆಲ್ ದಿ ಬೆಸ್ಟ್. 140 ಕೋಟಿ ಭಾರತೀಯರು ನಿಮ್ಮನ್ನು ಹುರಿದುಂಬಿಸುತ್ತಿದ್ದಾರೆ ಎಂದು ಹೇಳಿದ್ದಾರೆ.

IND vs AUS, World Cup Final: ಭಾರತ ತಂಡಕ್ಕೆ ಆಲ್ ದಿ ಬೆಸ್ಟ್​ ಎಂದ ಪ್ರಧಾನಿ ನರೇಂದ್ರ ಮೋದಿ
ಪ್ರಧಾನಿ ಮೋದಿ, ಭಾರತ ತಂಡ
ಗಂಗಾಧರ​ ಬ. ಸಾಬೋಜಿ
|

Updated on:Nov 19, 2023 | 2:44 PM

Share

2023ರ ವಿಶ್ವಕಪ್ ಫೈನಲ್​ ಪಂದ್ಯ (ICC world cup) ಶುರುವಾಗಿದೆ. ವಿಶ್ವಕಪ್ ಟ್ರೋಫಿಗಾಗಿ ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳು ಮುಖಾಮುಖಿಯಾಗಿದ್ದು, ಟಾಸ್​ ಗೆದ್ದ ಆಸ್ಟ್ರೇಲಿಯಾ ತಂಡ ಫೀಲ್ಡಿಂಗ್‌ ಆಯ್ಕೆ ಮಾಡಿಕೊಂಡಿದೆ. ಈ ಟೂರ್ನಿಯಲ್ಲಿ ಅಜೇಯವಾಗಿ ಫೈನಲ್​​ಗೆ ಲಗ್ಗೆ ಇಟ್ಟಿರುವ ಟೀಮ್ ಇಂಡಿಯಾನೇ ಕಪ್ ಗೆಲ್ಲೋದ್ರಲ್ಲಿ ಫೇವರೆಟ್ ತಂಡವಾಗಿದೆ. ಸತತ 10 ಪಂದ್ಯಗಳನ್ನ ಗೆಲ್ಲುವ ಮೂಲಕ ವಿಜಯಪಾತಾಕೆ ಹಾರಿಸಿದೆ. ಕ್ರಿಕೆಟ್​ ದಿಗ್ಗಜರು ಸೇರಿದಂತೆ ಸೆಲಿಬ್ರಿಟಿಗಳು ಭಾರತ ತಂಡಕ್ಕೆ ಶುಭಕೋರಿದ್ದಾರೆ. ಅದೇ ರೀತಿತಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಕೂಡ ತಮ್ಮ ಶುಭ ಹಾರೈಸಿದ್ದಾರೆ.

ಈ ಕುರಿತಾಗಿ ಟ್ವೀಟ್ ಮಾಡಿರುವ ಪ್ರಧಾನಿ ಮೋದಿ, ‘ಭಾರತ ತಂಡಕ್ಕೆ ಆಲ್ ದಿ ಬೆಸ್ಟ್. 140 ಕೋಟಿ ಭಾರತೀಯರು ನಿಮ್ಮನ್ನು ಹುರಿದುಂಬಿಸುತ್ತಿದ್ದಾರೆ. ನೀವು ಪ್ರಕಾಶಮಾನವಾಗಿ ಹೊಳೆಯಲಿ, ಚೆನ್ನಾಗಿ ಆಡಲಿ ಮತ್ತು ಕ್ರೀಡಾ ಮನೋಭಾವವನ್ನು ಎತ್ತಿಹಿಡಿಯಿರಿ’ ಬರೆದುಕೊಂಡಿದ್ದಾರೆ.

ಇದನ್ನೂ ಓದಿ: India vs Australia, WC Final LIVE Score: ಟೀಮ್ ಇಂಡಿಯಾದ ಮೊದಲ ವಿಕೆಟ್ ಪತನ

ಫೈನಲ್ ಪಂದ್ಯಕ್ಕೆ ಪ್ರಧಾನಿ ನರೇಂದ್ರ ಮೋದಿ ಮತ್ತು ಆಸ್ಟ್ರೇಲಿಯಾದ ಉಪಪ್ರಧಾನಿ ರಿಚರ್ಡ್ ಮಾರ್ಲ್ಸ್ ಭಾಗಿಯಾಗಿದ್ದಾರೆ. ಜೊತೆಗೆ ವಿಶೇಷ ಅಂದರೆ, ಚಾಂಪಿಯನ್ ಕ್ಯಾಪ್ಟನ್ ಎಂ.ಎಸ್.ಧೋನಿ ಸೇರಿದಂತೆ ವಿಶ್ವಕಪ್ ಗೆದ್ದ ತಂಡಗಳ ನಾಯಕರು ಕೂಡ ವಿಶ್ವಕಪ್ ರೋಚಕ ಸಮರಕ್ಕೆ ಸಾಕ್ಷಿಯಾಗಿದ್ದಾರೆ.

ಭಾರತ ತಂಡಕ್ಕೆ ಶುಭಕೋರಿದ ದಿಗ್ಗಜರು

ಪ್ರಧಾನಿ ಮೋದಿಯವರಲ್ಲದೆ, ಹಲವಾರು ರಾಜಕೀಯ ನಾಯಕರು ಟೀಮ್ ಇಂಡಿಯಾಕ್ಕೆ ಶುಭ ಹಾರೈಸಿದ್ದಾರೆ. ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರು ವಿಡಿಯೋ ಸಂದೇಶದಲ್ಲಿ ಭಾರತ ತಂಡಕ್ಕೆ ಶುಭ ಹಾರೈಸಿದ್ದು, ಕ್ರೀಡೆಯು ಯಾವಾಗಲೂ ಲಿಂಗ, ಪ್ರದೇಶ, ಭಾಷೆ, ಧರ್ಮ ಮತ್ತು ವರ್ಗವನ್ನು ಮೀರಿ ದೇಶವನ್ನು ಒಂದುಗೂಡಿಸುತ್ತದೆ ಎಂದು ಹೇಳಿದ್ದಾರೆ.

ಪ್ರಧಾನಿ ಮೋದಿ ಟ್ವೀಟ್​ 

ಈ ವರ್ಷ ನೀವು ಫೈನಲ್‌ಗೆ ಸಿದ್ಧರಾಗುತ್ತಿದ್ದಂತೆ, ಇಡೀ ದೇಶವು ನಿಮಗಾಗಿ ಕಾತುರರಾಗಿದೆ. ನಾನು ನಿಮಗೆ ನನ್ನ ಶುಭಾಶಯಗಳನ್ನು ತಿಳಿಸುತ್ತಿದ್ದೇನೆ. ಭಾರತ ತಂಡಕ್ಕೆ ಶುಭವಾಗಲಿ. ಜೈ ಹಿಂದ್ ಎಂದು ಹೇಳಿದ್ದಾರೆ.

ವಿಶ್ವಕಪ್‌ನಲ್ಲಿ ಆಡಿದ 10 ಪಂದ್ಯಗಳಲ್ಲಿಯೂ ಗೆದ್ದು ಅಜೇಯ ಓಟ ಮುಂದುವರಿಸಿರುವ ಭಾರತ, ಟ್ರೋಫಿ ಗೆಲ್ಲುವ ನಿರೀಕ್ಷೆಯನ್ನು ಹುಟ್ಟುಹಾಕಿದೆ. ಬ್ಯಾಟಿಂಗ್ ಮತ್ತು ಬೌಲಿಂಗ್‌ನಲ್ಲಿ ಬಲಿಷ್ಠವಾಗಿರುವ ಭಾರತ ಮೂರನೇ ಬಾರಿ ವಿಶ್ವಕಪ್ ಗೆಲ್ಲುವ ವಿಶ್ವಾಸದಲ್ಲಿದೆ.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 2:42 pm, Sun, 19 November 23

Follow Us
Gangadhar Saboji
Gangadhar Saboji

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ