IND vs BAN: ಈ ಕಾರಣಕ್ಕಾಗಿ ಬಾಂಗ್ಲಾ ತಂಡದ ಫೀಲ್ಡಿಂಗ್ ಸೆಟ್ ಮಾಡಿದೆ ಎಂದ ಪಂತ್

Rishabh Pant: ಭೀಕರ ಕಾರು ಅಪಘಾತಕ್ಕೀಡಾಗಿ ಕ್ರಿಕೆಟ್​ನಿಂದ ದೂರ ಉಳಿದಿದ್ದ ಪಂತ್, ಇದೀಗ ಬಾಂಗ್ಲಾದೇಶ ವಿರುದ್ಧ ಟೆಸ್ಟ್ ಕ್ರಿಕೆಟ್​ನಲ್ಲಿ ಮತ್ತೊಮ್ಮೆ ಕಾಣಿಸಿಕೊಂಡಿದ್ದಾರೆ. ಅದರಂತೆ ತಮ್ಮ ಪುನರಾಗಮನದ ಪಂದ್ಯದಲ್ಲೇ ಶತಕ ಸಿಡಿಸಿ ಮಿಂಚಿದ ಪಂತ್, ಬ್ಯಾಟಿಂಗ್ ವೇಳೆ ತಾವು ಮಾಡಿದ ಅದೊಂದು ಕೆಲಸಕ್ಕೆ ಈಗ ಸ್ಪಷ್ಟನೆ ನೀಡಿದ್ದಾರೆ.

IND vs BAN: ಈ ಕಾರಣಕ್ಕಾಗಿ ಬಾಂಗ್ಲಾ ತಂಡದ ಫೀಲ್ಡಿಂಗ್ ಸೆಟ್ ಮಾಡಿದೆ ಎಂದ ಪಂತ್
ರಿಷಬ್ ಪಂತ್
Follow us
|

Updated on:Sep 22, 2024 | 10:34 PM

ಬಾಂಗ್ಲಾದೇಶದ ವಿರುದ್ಧ ಚೆನ್ನೈನಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯವನ್ನು ಟೀಂ ಇಂಡಿಯಾ 280 ರನ್​ಗಳಿಂದ ಗೆದ್ದುಕೊಂಡಿದೆ. ಈ ಪಂದ್ಯದಲ್ಲಿ ಟೀಂ ಇಂಡಿಯಾದ ಸಾಂಘೀಕ ಪ್ರದರ್ಶನವೇ ಗೆಲುವಿನ ಪ್ರಮುಖ ಕಾರಣವಾಗಿತ್ತು. ಅದರಲ್ಲೂ ತಂಡದ ಮೂವರು ಬ್ಯಾಟರ್​ಗಳು ಸಿಡಿಸಿದ ಶತಕ, ತಂಡವನ್ನು ಬೃಹತ್ ಮೊತ್ತದತ್ತ ಕೊಂಡೊಯ್ದಿತ್ತು. ಆ ಮೂರು ಶತಕಗಳಲ್ಲಿ ಒಂದು ಶತಕ ಅಭಿಮಾನಿಗಳ ಪಾಲಿಗೆ ಹಬ್ಬವಾಗಿತ್ತು. ಆ ಶತಕ ಯಾವುದೆಂದರೆ ಹಲವು ತಿಂಗಳುಗಳ ನಂತರ ಟೆಸ್ಟ್ ಕ್ರಿಕೆಟ್ ಆಡುತ್ತಿರುವ ತಂಡದ ವಿಕೆಟ್‌ಕೀಪರ್ ಬ್ಯಾಟ್ಸ್‌ಮನ್ ರಿಷಬ್ ಪಂತ್ ಸಿಡಿಸಿದ್ದ ಶತಕವಾಗಿತ್ತು. ಸುಮಾರು ಒಂದೂವರೆ ವರ್ಷಗಳ ಹಿಂದೆ ಭೀಕರ ಕಾರು ಅಪಘಾತಕ್ಕೀಡಾಗಿ ಕ್ರಿಕೆಟ್​ನಿಂದ ದೂರ ಉಳಿದಿದ್ದ ಪಂತ್, ಇದೀಗ ಬಾಂಗ್ಲಾದೇಶ ವಿರುದ್ಧ ಟೆಸ್ಟ್ ಕ್ರಿಕೆಟ್​ನಲ್ಲಿ ಮತ್ತೊಮ್ಮೆ ಕಾಣಿಸಿಕೊಂಡಿದ್ದಾರೆ. ಅದರಂತೆ ತಮ್ಮ ಪುನರಾಗಮನದ ಪಂದ್ಯದಲ್ಲೇ ಶತಕ ಸಿಡಿಸಿ ಮಿಂಚಿದ ಪಂತ್, ಬ್ಯಾಟಿಂಗ್ ವೇಳೆ ತಾವು ಮಾಡಿದ ಅದೊಂದು ಕೆಲಸಕ್ಕೆ ಈಗ ಸ್ಪಷ್ಟನೆ ನೀಡಿದ್ದಾರೆ.

ಬಾಂಗ್ಲಾ ತಂಡದ ಫೀಲ್ಡಿಂಗ್ ಸೆಟ್ ಮಾಡಿದ ಪಂತ್

ವಾಸ್ತವವಾಗಿ ಚೆನ್ನೈ ಟೆಸ್ಟ್‌ನ ಮೂರನೇ ದಿನದಾಟದಲ್ಲಿ ಭಾರತ ತಂಡ ತನ್ನ ಎರಡನೇ ಇನ್ನಿಂಗ್ಸ್‌ನಲ್ಲಿ ಬ್ಯಾಟಿಂಗ್ ಮಾಡುತ್ತಿತ್ತು. ಈ ವೇಳೆ ಶುಭ್​ಮನ್ ಗಿಲ್ ಹಾಗೂ ರಿಷಬ್ ಪಂತ್ ತಂಡದ ಇನ್ನಿಂಗ್ಸ್ ಕಟ್ಟುವ ಕೆಲಸ ಮಾಡುತ್ತಿದ್ದರು. ಈ ವೇಳೆ ತಮ್ಮ ಸ್ಫೋಟಕ ಬ್ಯಾಟಿಂಗ್‌ ಮೂಲಕ ಬಾಂಗ್ಲಾದೇಶ ತಂಡದ ಯೋಜನೆಯನ್ನು ಬುಡಮೇಲು ಮಾಡಿದ್ದ ಪಂತ್, ಇದ್ದಕ್ಕಿದ್ದಂತೆ ಬಾಂಗ್ಲಾದೇಶ ತಂಡದ ಫೀಲ್ಡಿಂಗ್ ಸೆಟ್ ಮಾಡುವ ಕೆಲಸಕ್ಕೆ ಮುಂದಾದರು.

ಬಾಂಗ್ಲಾದೇಶದ ವೇಗದ ಬೌಲರ್ ತಸ್ಕಿನ್ ಅಹ್ಮದ್ ಅವರ ಓವರ್ ಪ್ರಾರಂಭವಾಗುವ ಮೊದಲು, ಸ್ಟ್ರೈಕ್‌ನಲ್ಲಿದ್ದ ಪಂತ್, ಮಿಡ್‌ವಿಕೆಟ್‌ನಲ್ಲಿ ಫೀಲ್ಡರ್ ನಿಲ್ಲಿಸುವಂತೆ ಬಾಂಗ್ಲಾದೇಶದ ನಾಯಕನಿಗೆ ಸಲಹೆ ನೀಡಿದರು. ಆ ಬಳಿಕ ಪಂತ್ ಅವರ ಸಲಹೆಯಂತೆಯೇ ಕವರ್ಸ್​ ದಿಕ್ಕಿನಲ್ಲಿ ನಿಂತಿದ್ದ ಬಾಂಗ್ಲಾದೇಶ ಫೀಲ್ಡರ್, ಮಿಡ್‌ವಿಕೆಟ್‌ಗೆ ಬಂದು ನಿಂತ. ಪಂತ್ ಈ ರೀತಿಯಾಗಿ ಬಾಂಗ್ಲಾದೇಶ ತಂಡದ ಫೀಲ್ಡಿಂಗ್ ಸೆಟ್ ಮಾಡುವ ಧ್ವನಿಯು ಸ್ಟಂಪ್ ಮೈಕ್‌ನಲ್ಲಿ ರೆಕಾರ್ಡ್ ಆಗಿತ್ತು. ಆ ಬಳಿಕ ಸಾಕಷ್ಟು ವೈರಲ್ ಸಹ ಆಗಿತ್ತು. ಇದೀಗ ಪಂದ್ಯ ಮುಗಿದ ಬಳಿಕ ಪಂತ್, ತಾನು ಏಕೆ ಹಾಗೆ ಮಾಡಿದೆ ಎಂಬುದನ್ನು ಬಹಿರಂಗ ಪಡಿಸಿದ್ದಾರೆ.

ಜಡೇಜಾ ಅವರಿಂದ ಸ್ಫೂರ್ತಿ ಪಡೆದೆ

ಇಂದು ಪಂದ್ಯ ಮುಗಿದ ಬಳಿಕ ಜಿಯೋ ಸಿನಿಮಾದ ಕಾಮೆಂಟರಿ ಪ್ಯಾನೆಲ್‌ನೊಂದಿಗಿನ ಚರ್ಚೆಯ ಸಮಯದಲ್ಲಿ, ಮಾಜಿ ವಿಕೆಟ್‌ಕೀಪರ್ ಸಬಾ ಕರೀಮ್ ಅವರು ಪಂತ್ ಬಳಿ ಆ ಘಟನೆಯ ಬಗ್ಗೆ ಕೇಳಿದರು. ಇದಕ್ಕೆ ಪ್ರತಿಕ್ರಿಯಿಸಿದ ಪಂತ್, ಆ ವೇಳೆ ಸ್ಟುಡಿಯೋದಲ್ಲಿ ಹಾಜರಿದ್ದ ಅಜಯ್ ಜಡೇಜಾ ಅವರಿಂದ ಪಡೆದ ಸ್ಫೂರ್ತಿಯೇ ಇದಕ್ಕೆ ಕಾರಣ ಎಂದರು. ಅಜಯ್ ಜಡೇಜಾ ಅವರು ಎದುರಾಳಿ ಅಥವಾ ಪರಿಸ್ಥಿತಿಯನ್ನು ಲೆಕ್ಕಿಸದೆ ಯಾವಾಗಲೂ ಆಟದ ಗುಣಮಟ್ಟವನ್ನು ಸುಧಾರಿಸುವ ಗುರಿ ಇರಬೇಕೆಂದು ನನಗೆ ಸಲಹೆ ನೀಡಿದ್ದರು. ಹೀಗಾಗಿ ಒಂದೇ ಕಡೆ ಇಬ್ಬರು ಫೀಲ್ಡರ್ ಇದಿದ್ದನ್ನು ಗಮನಿಸಿದ ನಾನು ಮಿಡ್ ವಿಕೆಟ್‌ನಲ್ಲಿ ಯಾರೂ ಇಲ್ಲದಿರುವುದನ್ನು ಕಂಡು ಬಾಂಗ್ಲಾದೇಶದ ಫೀಲ್ಡರ್‌ಗಳನ್ನು ಆ ಜಾಗದಲ್ಲಿ ನಿಲ್ಲುವಂತೆ ಸೂಚಿಸಿದೆ ಎಂದು ಪಂತ್ ಹೇಳಿದ್ದಾರೆ.

ಪಂದ್ಯದಲ್ಲಿ ಪಂತ್ ಆಟ ಹೀಗಿತ್ತು

ಇನ್ನು ಈ ಪಂದ್ಯದಲ್ಲಿ ಗಮನಾರ್ಹ ಪ್ರದರ್ಶನ ನೀಡಿದ ಪಂತ್, ಮೊದಲ ಇನ್ನಿಂಗ್ಸ್​ನಲ್ಲಿ 39 ರನ್​ಗಳ ಅವಶ್ಯಕ ಇನ್ನಿಂಗ್ಸ್ ಆಡಿದರೆ, ಎರಡನೇ ಇನ್ನಿಂಗ್ಸ್‌ನಲ್ಲಿ ಪಂತ್ ಕೇವಲ 128 ಎಸೆತಗಳಲ್ಲಿ 109 ರನ್ ಗಳಿಸಿದರು. ಇದರಲ್ಲಿ ಅವರು 4 ಸಿಕ್ಸರ್ ಮತ್ತು 13 ಬೌಂಡರಿಗಳನ್ನು ಬಾರಿಸಿದರು. ಈ ವೇಳೆ ಗಿಲ್ ಜತೆಗೂಡಿ ನಾಲ್ಕನೇ ವಿಕೆಟ್‌ಗೆ 167 ರನ್‌ಗಳ ಜೊತೆಯಾಟವನ್ನು ನಡೆಸಿ ಟೀಂ ಇಂಡಿಯಾವನ್ನು ಸಂಕಷ್ಟದಿಂದ ಹೊರತಂದು ಪಂದ್ಯವನ್ನು ಗೆಲ್ಲುವ ಸ್ಥಿತಿಗೆ ತಂದರು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:32 pm, Sun, 22 September 24

ಈದ್ ಮಿಲಾದ್ ಮೆರವಣಿಗೆಯಲ್ಲಿ ಎದುರಾದ ಕೂಡಲಸಂಗಮ ಸ್ವಾಮೀಜಿ; ಪರಸ್ಪರ ಘೋಷಣೆ
ಈದ್ ಮಿಲಾದ್ ಮೆರವಣಿಗೆಯಲ್ಲಿ ಎದುರಾದ ಕೂಡಲಸಂಗಮ ಸ್ವಾಮೀಜಿ; ಪರಸ್ಪರ ಘೋಷಣೆ
ನಾವು ಇಲ್ಲದಿದ್ರೆ ಬೆಂಗಳೂರು ಖಾಲಿ ಎಂದ ಮಹಿಳೆಗೆ ಕರವೇ ನಾರಾಯಣಗೌಡ ಎಚ್ಚರಿಕೆ
ನಾವು ಇಲ್ಲದಿದ್ರೆ ಬೆಂಗಳೂರು ಖಾಲಿ ಎಂದ ಮಹಿಳೆಗೆ ಕರವೇ ನಾರಾಯಣಗೌಡ ಎಚ್ಚರಿಕೆ
ಸಾವಿನ ನಂತರದ ಕಥೆ; ಸ್ಮಶಾನದಲ್ಲಿ ಭೈರಾದೇವಿ ಶೂಟಿಂಗ್; ರಮೇಶ್ ಹೇಳಿದ್ದಿಷ್ಟು
ಸಾವಿನ ನಂತರದ ಕಥೆ; ಸ್ಮಶಾನದಲ್ಲಿ ಭೈರಾದೇವಿ ಶೂಟಿಂಗ್; ರಮೇಶ್ ಹೇಳಿದ್ದಿಷ್ಟು
ಮಹಿಷಾ ದಸರಾ ಆಚರಣೆ ಬಗ್ಗೆ ಸಂಸದ ಯದುವೀರ್ ಏನಂದ್ರು ಗೊತ್ತಾ?
ಮಹಿಷಾ ದಸರಾ ಆಚರಣೆ ಬಗ್ಗೆ ಸಂಸದ ಯದುವೀರ್ ಏನಂದ್ರು ಗೊತ್ತಾ?
ಕಿಯೋನಿಕ್ಸ್ 400 ಕೋಟಿ ರೂ. ಅಕ್ರಮ ಪ್ರಕರಣ; ಅಶ್ವತ್ಥನಾರಾಯಣ ಹೇಳಿದ್ದಿಷ್ಟು
ಕಿಯೋನಿಕ್ಸ್ 400 ಕೋಟಿ ರೂ. ಅಕ್ರಮ ಪ್ರಕರಣ; ಅಶ್ವತ್ಥನಾರಾಯಣ ಹೇಳಿದ್ದಿಷ್ಟು
ಹಿಂದೂ ಮೆರವಣಿಗೆಯಲ್ಲಿ ರಕ್ಷಣೆಗೆ ಶಸ್ತ್ರ ಸಮೇತ ನಾವು ಸಜ್ಜು: ಶ್ರೀರಾಮ ಸೇನೆ
ಹಿಂದೂ ಮೆರವಣಿಗೆಯಲ್ಲಿ ರಕ್ಷಣೆಗೆ ಶಸ್ತ್ರ ಸಮೇತ ನಾವು ಸಜ್ಜು: ಶ್ರೀರಾಮ ಸೇನೆ
ಕಾಳಿ ವೇಷ ಧರಿಸುತ್ತಿದ್ದಂತೆ ಏನಾಗುತ್ತಿತ್ತು, ವಿವರಿಸಿದ ನಟಿ ರಾಧಿಕಾ
ಕಾಳಿ ವೇಷ ಧರಿಸುತ್ತಿದ್ದಂತೆ ಏನಾಗುತ್ತಿತ್ತು, ವಿವರಿಸಿದ ನಟಿ ರಾಧಿಕಾ
ವಾರಣಾಸಿಯಲ್ಲಿ ಗಂಗಾ ಆರತಿ ವೀಕ್ಷಿಸಿದ ಕಾಂಗ್ರೆಸ್ ನಿಯೋಗ
ವಾರಣಾಸಿಯಲ್ಲಿ ಗಂಗಾ ಆರತಿ ವೀಕ್ಷಿಸಿದ ಕಾಂಗ್ರೆಸ್ ನಿಯೋಗ
Daily Devotional: ಹನುಮಾನ್ ಕಾರ್ಯಫಲ ಮಂತ್ರ ಬಗ್ಗೆ ತಿಳಿಯಿರಿ
Daily Devotional: ಹನುಮಾನ್ ಕಾರ್ಯಫಲ ಮಂತ್ರ ಬಗ್ಗೆ ತಿಳಿಯಿರಿ
Weekly Horoscope: ಸೆಪ್ಟೆಂಬರ್​​ 23 ರಿಂದ 29ರ ವಾರ ಭವಿಷ್ಯ ತಿಳಿಯಿರಿ
Weekly Horoscope: ಸೆಪ್ಟೆಂಬರ್​​ 23 ರಿಂದ 29ರ ವಾರ ಭವಿಷ್ಯ ತಿಳಿಯಿರಿ