IND vs BAN 2nd Test: ಬಾಂಗ್ಲಾದೇಶ್ ಆಲೌಟ್​: ಟೀಮ್ ಇಂಡಿಯಾಗೆ ಸುಲಭ ಗುರಿ

IND vs BAN 2nd Test: IND vs BAN 2nd Test: ಭಾರತ ಮತ್ತು ಬಾಂಗ್ಲಾದೇಶ್ ನಡುವಣ 2ನೇ ಟೆಸ್ಟ್ ಪಂದ್ಯವು ಶುಕ್ರವಾರದಿಂದ ಶುರುವಾಗಿತ್ತು. ಆದರೆ ಮಳೆಯ ಕಾರಣ 2 ದಿನದಾಟಗಳು ರದ್ದಾಗಿದ್ದವು. ಇದೀಗ ಪಂದ್ಯವು ಐದನೇ ದಿನದಾಟಕ್ಕೆ ಕಾಲಿಟ್ಟಿದ್ದು, ಈ ಮೂಲಕ ಟೀಮ್ ಇಂಡಿಯಾ ಭರ್ಜರಿ ಜಯ ಸಾಧಿಸುವ ಇರಾದೆಯಲ್ಲಿದೆ.

IND vs BAN 2nd Test: ಬಾಂಗ್ಲಾದೇಶ್ ಆಲೌಟ್​: ಟೀಮ್ ಇಂಡಿಯಾಗೆ ಸುಲಭ ಗುರಿ
IND vs BAN
Follow us
|

Updated on: Oct 01, 2024 | 12:20 PM

ಕಾನ್ಪುರದ ಗ್ರೀನ್​ ಪಾರ್ಕ್ ಮೈದಾನದಲ್ಲಿ ನಡೆಯುತ್ತಿರುವ 2ನೇ ಟೆಸ್ಟ್ ಪಂದ್ಯದ ದ್ವಿತೀಯ ಇನಿಂಗ್ಸ್​ನಲ್ಲಿ ಬಾಂಗ್ಲಾದೇಶ್ ತಂಡ ಕೇವಲ 145 ರನ್​ಗಳಿಗೆ ಆಲೌಟ್ ಆಗಿದೆ. ಇದರೊಂದಿಗೆ ಮೊದಲ ಇನಿಂಗ್ಸ್​ನ ಮುನ್ನಡೆಯೊಂದಿಗೆ ಟೀಮ್ ಇಂಡಿಯಾ ದ್ವಿತೀಯ ಇನಿಂಗ್ಸ್​ನಲ್ಲಿ ಕೇವಲ 95 ರನ್​ಗಳ ಗುರಿ ಪಡೆದುಕೊಂಡಿದೆ. ಅಂದರೆ ದ್ವಿತೀಯ ಇನಿಂಗ್ಸ್​ನಲ್ಲಿ ಭಾರತ ತಂಡವು 95 ರನ್​ಗಳಿಸಿದರೆ ಜಯ ಸಾಧಿಸಬಹುದು.

ಇದಕ್ಕೂ ಮುನ್ನ ಈ ಪಂದ್ಯದಲ್ಲಿ ಟಾಸ್ ಗೆದ್ದ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಇನಿಂಗ್ಸ್ ಆರಂಭಿಸಿದ ಬಾಂಗ್ಲಾದೇಶ್ ತಂಡವು ಮೊದಲ ದಿನದಾಟದಲ್ಲಿ 35 ಓವರ್​ಗಳಲ್ಲಿ 3 ವಿಕೆಟ್ ಕಳೆದುಕೊಂಡು 107 ರನ್ ಕಲೆಹಾಕಿತ್ತು. ಈ ವೇಳೆ ಮಂದ ಬೆಳಕಿನ ಕಾರಣ ಪಂದ್ಯವನ್ನು ಸ್ಥಗಿತಗೊಳಿಸಲಾಗಿತ್ತು. ಇನ್ನು 2ನೇ ಮತ್ತು 3ನೇ ದಿನದಾಟಗಳು ಮಳೆಯ ಕಾರಣ ರದ್ದಾಗಿತ್ತು.

4ನೇ ದಿನದಾಟದೊಂದಿಗೆ ಮುಂದುವರೆದ ಪಂದ್ಯದಲ್ಲಿ ಟೀಮ್ ಇಂಡಿಯಾ ವೇಗಿಗಳು ಭರ್ಜರಿ ಬೌಲಿಂಗ್ ಪ್ರದರ್ಶಿಸಿದ್ದರು. ಕರಾರುವಾಕ್ ದಾಳಿ ಸಂಘಟಿಸಿದ ಟೀಮ್ ಇಂಡಿಯಾ 233 ರನ್​ಗಳಿಗೆ ಬಾಂಗ್ಲಾದೇಶ್ ತಂಡವನ್ನು ಆಲೌಟ್ ಮಾಡುವಲ್ಲಿ ಯಶಸ್ವಿಯಾಗಿದ್ದರು. ಬಾಂಗ್ಲಾದೇಶ್ ಪರ ಮೊಮಿನುಲ್ ಹಕ್ ಅಜೇಯ 107 ರನ್ ಬಾರಿಸಿ ಮಿಂಚಿದರೆ, ಟೀಮ್ ಇಂಡಿಯಾ ಪರ ಜಸ್​ಪ್ರೀತ್ ಬುಮ್ರಾ 3 ವಿಕೆಟ್ ಕಬಳಿಸಿದ್ದರು.

ಇನ್ನು 233 ರನ್​ಗಳ ಪ್ರಥಮ ಇನಿಂಗ್ಸ್​ಗೆ ಉತ್ತರವಾಗಿ ಮೊದಲ ಇನಿಂಗ್ಸ್ ಆಡಿದ ಟೀಮ್ ಇಂಡಿಯಾ ಸ್ಪೋಟಕ ಬ್ಯಾಟಿಂಗ್​ಗೆ ಒತ್ತು ನೀಡಿದ್ದರು. ಪರಿಣಾಮ ರೋಹಿತ್ ಶರ್ಮಾ (23) ಹಾಗೂ ಯಶಸ್ವಿ ಜೈಸ್ವಾಲ್ ಜೊತೆಗೂಡಿ ಕೇವಲ 18 ಎಸೆತಗಳಲ್ಲಿ 50 ರನ್ ಕಲೆಹಾಕಿದ್ದರು. ಇನ್ನು ಹಿಟ್​ಮ್ಯಾನ್ ನಿರ್ಗಮನದ ಬಳಿಕ ಆಗಮಿಸಿದ ಶುಭ್​ಮನ್ ಗಿಲ್ (39) ಕೂಡ ಬಿರುಸಿನ ಬ್ಯಾಟಿಂಗ್​ಗೆ ಒತ್ತು ನೀಡಿದರು. ಅದರಂತೆ 100 ರನ್​ ಪೂರೈಸಲು ಟೀಮ್ ಇಂಡಿಯಾ ತೆಗೆದುಕೊಂಡಿದ್ದು ಕೇವಲ 10.1 ಓವರ್​ಗಳನ್ನು ಮಾತ್ರ.

ಆ ಬಳಿಕ ಬಂದ ವಿರಾಟ್ ಕೊಹ್ಲಿ 35 ಎಸೆತಗಳಲ್ಲಿ 47 ರನ್ ಬಾರಿಸಿದರೆ, ಕನ್ನಡಿಗ ಕೆಎಲ್ ರಾಹುಲ್ 43 ಎಸೆತಗಳಲ್ಲಿ 2 ಭರ್ಜರಿ ಸಿಕ್ಸ್ ಹಾಗೂ 7 ಫೋರ್​ಗಳೊಂದಿಗೆ 63 ರನ್​ ಚಚ್ಚಿದರು. ಈ ಮೂಲಕ 33.4 ಓವರ್​ಗಳಲ್ಲಿ 285 ರನ್​ಗಳಿಸಿ ಟೀಮ್ ಇಂಡಿಯಾ ಇನಿಂಗ್ಸ್ ಡಿಕ್ಲೇರ್ ಘೋಷಿಸಿತು.

ಬಾಂಗ್ಲಾ ಪಡೆಗೆ 52 ರನ್​ಗಳ ಹಿನ್ನಡೆ:

4ನೇ ದಿನದಾಟದಲ್ಲೇ ದ್ವಿತೀಯ ಇನಿಂಗ್ಸ್ ಆರಂಭಿಸಿದ ಬಾಂಗ್ಲಾದೇಶ್ ತಂಡಕ್ಕೆ ಆರಂಭಿಕ ಆಘಾತ ನೀಡುವಲ್ಲಿ ರವಿಚಂದ್ರನ್ ಅಶ್ವಿನ್ ಯಶಸ್ವಿಯಾದರು. ಪರಿಣಾಮ ನಾಲ್ಕನೇ ದಿನದಾಟದ ಮುಕ್ತಾಯದ ವೇಳೆಗೆ ಬಾಂಗ್ಲಾದೇಶ್ ತಂಡವು ಕೇವಲ 26 ರನ್​ಗಳಿಸಿ 2 ವಿಕೆಟ್ ಕಳೆದುಕೊಂಡಿತು. ಅದರಂತೆ ಐದನೇ ದಿನದಾಟದ ಆರಂಭದಲ್ಲೇ ಮೊಮಿನುಕ್ ಹಕ್ (2) ವಿಕೆಟ್ ಪಡೆಯುವಲ್ಲಿ ಅಶ್ವಿನ್ ಸಫಲರಾದರು.

ಈ ಹಂತದಲ್ಲಿ ಜೊತೆಗೂಡಿದ ನಾಯಕ ನಜ್ಮುಲ್ ಹೊಸೈನ್ ಶಾಂತೊ ಹಾಗೂ ಶಾದ್ಮಾನ್ ಅರ್ಧಶತಕ ಜೊತೆಯಾಟವಾಡಿದರು. ಈ ವೇಳೆ ದಾಳಿಗಿಳಿದ ಜಡೇಜಾ ಎಸೆತದಲ್ಲಿ ಶಾಂತೊ (19) ಬೌಲ್ಡ್ ಆದರು. ಅತ್ತ 101 ಎಸೆತಗಳಲ್ಲಿ 50 ರನ್ ಬಾರಿಸಿ ಕ್ರೀಸ್ ಕಚ್ಚಿ ನಿಂತಿದ್ದ ಶಾದ್ಮನ್​ಗೆ ಪೆವಿಲಿಯನ್ ಹಾದಿ ತೋರಿಸುವಲ್ಲಿ ಕೊನೆಗೂ ಆಕಾದ್ ದೀಪ್ ಯಶಸ್ವಿಯಾದರು.

ಇದರ ಬೆನ್ನಲ್ಲೇ ಲಿಟ್ಟನ್ ದಾಸ್ (1) ಹಾಗೂ ಶಕೀಬ್ ಅಲ್ ಹಸನ್ (2) ಔಟಾದರು. ಈ ಹಂತದಲ್ಲಿ ಕ್ರೀಸ್ ಕಚ್ಚಿ ನಿಂತ ಮುಶ್ಫಿಕುರ್ ರಹೀಮ್ 63 ಎಸೆತಗಳನ್ನು ಎದುರಿಸಿ 37 ರನ್ ಕಲೆಹಾಕಿದರು. ಅಂತಿಮವಾಗಿ ಬಾಂಗ್ಲಾದೇಶ್ ತಂಡವು ಕೇವಲ 146 ರನ್​ಗಳಿಗೆ ಆಲೌಟ್ ಆಗಿದೆ. ಟೀಮ್ ಇಂಡಿಯಾ ಪರ ರವೀಂದ್ರ ಜಡೇಜಾ, ಅಶ್ವಿನ್ ಹಾಗೂ ಜಸ್​ಪ್ರೀತ್ ಬುಮ್ರಾ ತಲಾ 3 ವಿಕೆಟ್ ಕಬಳಿಸಿದರು.

ಇನ್ನು ಮೊದಲ ಇನಿಂಗ್ಸ್​ನಲ್ಲಿ 52 ರನ್​ಗಳ ಮುನ್ನಡೆ ಸಾಧಿಸಿದ್ದ ಟೀಮ್ ಇಂಡಿಯಾ ದ್ವಿತೀಯ ಇನಿಂಗ್ಸ್​ನಲ್ಲಿ 95 ರನ್ ಕಲೆಹಾಕಿದರೆ ಈ ಪಂದ್ಯವನ್ನು ಗೆಲ್ಲಬಹುದು.

ಭಾರತ ಪ್ಲೇಯಿಂಗ್ 11: ಯಶಸ್ವಿ ಜೈಸ್ವಾಲ್, ರೋಹಿತ್ ಶರ್ಮಾ (ನಾಯಕ), ಶುಭ್​ಮನ್ ಗಿಲ್, ವಿರಾಟ್ ಕೊಹ್ಲಿ, ರಿಷಭ್ ಪಂತ್ (ವಿಕೆಟ್ ಕೀಪರ್), ಕೆಎಲ್ ರಾಹುಲ್, ರವೀಂದ್ರ ಜಡೇಜಾ, ರವಿಚಂದ್ರನ್ ಅಶ್ವಿನ್, ಆಕಾಶ್ ದೀಪ್, ಜಸ್​ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್.

ಇದನ್ನೂ ಓದಿ: IPL 2025 ರಲ್ಲಿ ಎಷ್ಟು ಪಂದ್ಯಗಳನ್ನಾಡಲಾಗುತ್ತದೆ? ಇಲ್ಲಿದೆ ಮಾಹಿತಿ

ಬಾಂಗ್ಲಾದೇಶ್ ಪ್ಲೇಯಿಂಗ್​ 11: ಶಾದ್ಮಾನ್ ಇಸ್ಲಾಂ, ಜಾಕಿರ್ ಹಸನ್, ನಜ್ಮುಲ್ ಹೊಸೈನ್ ಶಾಂತೊ (ನಾಯಕ), ಮೊಮಿನುಲ್ ಹಕ್, ಮುಶ್ಫಿಕರ್ ರಹೀಮ್, ಶಕೀಬ್ ಅಲ್ ಹಸನ್, ಲಿಟನ್ ದಾಸ್ (ವಿಕೆಟ್ ಕೀಪರ್), ಮೆಹದಿ ಹಸನ್ ಮಿರಾಝ್, ತೈಜುಲ್ ಇಸ್ಲಾಂ, ಹಸನ್ ಮಹಮೂದ್, ಖಾಲಿದ್ ಅಹ್ಮದ್.

ಅಧಿಕಾರಿಗಳ ನಿರ್ಲಕ್ಷ್ಯ; ಈರುಳ್ಳಿ ನೀರುಪಾಲು, ರೈತರು ಕಂಗಾಲು
ಅಧಿಕಾರಿಗಳ ನಿರ್ಲಕ್ಷ್ಯ; ಈರುಳ್ಳಿ ನೀರುಪಾಲು, ರೈತರು ಕಂಗಾಲು
‘ಮಾತಾಡೋದು ಕಲಿಯುತ್ತಿದ್ದೇನೆ’: ಚೈತ್ರಾ ಹೇಳಿದ್ದು ಕೇಳಿ ಕಂಗಾಲಾದ ಸುದೀಪ್​
‘ಮಾತಾಡೋದು ಕಲಿಯುತ್ತಿದ್ದೇನೆ’: ಚೈತ್ರಾ ಹೇಳಿದ್ದು ಕೇಳಿ ಕಂಗಾಲಾದ ಸುದೀಪ್​
ಮಾರ್ಟಿನ್​ ಸಿನಿಮಾದ ಅದ್ದೂರಿ ಪ್ರೀ-ರಿಲೀಸ್​ ಕಾರ್ಯಕ್ರಮ; ಇಲ್ಲಿದೆ ಲೈವ್
ಮಾರ್ಟಿನ್​ ಸಿನಿಮಾದ ಅದ್ದೂರಿ ಪ್ರೀ-ರಿಲೀಸ್​ ಕಾರ್ಯಕ್ರಮ; ಇಲ್ಲಿದೆ ಲೈವ್
ಉಡುಪಿಯ ಹೆಬ್ರಿಯಲ್ಲಿ ಮೇಘಸ್ಫೋಟ; ಭೀಕರ ಪ್ರವಾಹ ಸೃಷ್ಟಿ
ಉಡುಪಿಯ ಹೆಬ್ರಿಯಲ್ಲಿ ಮೇಘಸ್ಫೋಟ; ಭೀಕರ ಪ್ರವಾಹ ಸೃಷ್ಟಿ
‘ಡೆವಿಲ್​’ ಎದುರು ‘ಕರ್ನಾಟಕದ ಅಳಿಯ’ ಸಿನಿಮಾ ಬರೋದು ಫಿಕ್ಸ್: ಪ್ರಥಮ್
‘ಡೆವಿಲ್​’ ಎದುರು ‘ಕರ್ನಾಟಕದ ಅಳಿಯ’ ಸಿನಿಮಾ ಬರೋದು ಫಿಕ್ಸ್: ಪ್ರಥಮ್
ಉತ್ತರ ಕನ್ನಡ: ಮುರುಡೇಶ್ವರ ಕಡಲತೀರಕ್ಕೆ ಪ್ರವಾಸಿಗರಿಗೆ ನಿರ್ಬಂಧ
ಉತ್ತರ ಕನ್ನಡ: ಮುರುಡೇಶ್ವರ ಕಡಲತೀರಕ್ಕೆ ಪ್ರವಾಸಿಗರಿಗೆ ನಿರ್ಬಂಧ
ಬಿಗ್​ಬಾಸ್​ನಲ್ಲಿ ಮನೆಯಲ್ಲಿ ಯಾರು ಹಿಟ್? ಫ್ಲಾಪ್ ಆಗಿದ್ದು ಯಾರು?
ಬಿಗ್​ಬಾಸ್​ನಲ್ಲಿ ಮನೆಯಲ್ಲಿ ಯಾರು ಹಿಟ್? ಫ್ಲಾಪ್ ಆಗಿದ್ದು ಯಾರು?
ಮುಡಾ ಹಗರಣದ ಬಗ್ಗೆ ಪದೇ ಪದೆ ಮಾತಾಡೋದು ಬೇಡ: ಸಚಿವ ವಿ ಸೋಮಣ್ಣ
ಮುಡಾ ಹಗರಣದ ಬಗ್ಗೆ ಪದೇ ಪದೆ ಮಾತಾಡೋದು ಬೇಡ: ಸಚಿವ ವಿ ಸೋಮಣ್ಣ
ಅವರೇ ಹಾರೆ ಹಿಡಿದು ಗುಂಡಿ ಮುಚ್ಚಲು ಹೋಗಿದ್ದರಲ್ಲ ಈಗೇನಾಯ್ತು: ಹೆಚ್​ಡಿಕೆ
ಅವರೇ ಹಾರೆ ಹಿಡಿದು ಗುಂಡಿ ಮುಚ್ಚಲು ಹೋಗಿದ್ದರಲ್ಲ ಈಗೇನಾಯ್ತು: ಹೆಚ್​ಡಿಕೆ
ರಾಮಲೀಲಾ ನಾಟಕ ಪ್ರದರ್ಶನದ ವೇಳೆ ರಾಮ ಪಾತ್ರಧಾರಿ ಹೃದಯಾಘಾತದಿಂದ ಸಾವು
ರಾಮಲೀಲಾ ನಾಟಕ ಪ್ರದರ್ಶನದ ವೇಳೆ ರಾಮ ಪಾತ್ರಧಾರಿ ಹೃದಯಾಘಾತದಿಂದ ಸಾವು