AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs BAN 2nd Test: ಟೀಮ್ ಇಂಡಿಯಾ ಕರಾರುವಾಕ್ ದಾಳಿ: ಬಾಂಗ್ಲಾದೇಶ್ ಆಲೌಟ್

IND vs BAN 2nd Test: ಭಾರತ ಮತ್ತು ಬಾಂಗ್ಲಾದೇಶ್ ನಡುವಣ 2ನೇ ಟೆಸ್ಟ್ ಪಂದ್ಯವು ಶುಕ್ರವಾರದಿಂದ ಶುರುವಾದರೂ, ಇನ್ನೂ ಸಹ ಮೊದಲ ಇನಿಂಗ್ಸ್ ಮುಂದುವರೆದಿದೆ. ಇದಕ್ಕೆ ಕಾರಣ ಎರಡು ದಿನದಾಟಗಳು ಮಳೆಗೆ ಅಹುತಿಯಾಗಿರುವುದು. ಇದೀಗ ಬಾಂಗ್ಲಾ ತಂಡದ ಪ್ರಥಮ ಇನಿಂಗ್ಸ್ ಮುಗಿದಿದ್ದು, ಭಾರತ ತಂಡ ಮೊದಲ ಇನಿಂಗ್ಸ್​ನಲ್ಲಿ ಬ್ಯಾಟಿಂಗ್ ಮಾಡುತ್ತಿದೆ.

IND vs BAN 2nd Test: ಟೀಮ್ ಇಂಡಿಯಾ ಕರಾರುವಾಕ್ ದಾಳಿ: ಬಾಂಗ್ಲಾದೇಶ್ ಆಲೌಟ್
Team India
ಝಾಹಿರ್ ಯೂಸುಫ್
|

Updated on:Sep 30, 2024 | 1:36 PM

Share

ಕಾನ್ಪುರದಲ್ಲಿ ನಡೆಯುತ್ತಿರುವ ಭಾರತದ ವಿರುದ್ಧದ 2ನೇ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್​ನಲ್ಲಿ 233 ರನ್​ ಬಾರಿಸಿ ಬಾಂಗ್ಲಾದೇಶ್ ತಂಡ ಆಲೌಟ್ ಆಗಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದಿದ್ದ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಪ್ರಥಮ ಇನಿಂಗ್ಸ್ ಆರಂಭಿಸಿದ ಬಾಂಗ್ಲಾದೇಶ್ ತಂಡವು ಮೊದಲ ದಿನದಾಟದಲ್ಲಿ 35 ಓವರ್​ಗಳಲ್ಲಿ 3 ವಿಕೆಟ್ ಕಳೆದುಕೊಂಡು 107 ರನ್ ಕಲೆಹಾಕಿತ್ತು. ಈ ವೇಳೆ ಮಂದ ಬೆಳಕಿನ ಕಾರಣ ಪಂದ್ಯವನ್ನು ಸ್ಥಗಿತಗೊಳಿಸಲಾಗಿತ್ತು.

ಇನ್ನು 2ನೇ ಮತ್ತು 3ನೇ ದಿನದಾಟಗಳು ಮಳೆಯ ಕಾರಣ ರದ್ದಾಗಿತ್ತು. ಅದರಂತೆ 4ನೇ ದಿನದಾಟದೊಂದಿಗೆ ಮುಂದುವರೆದ ಪಂದ್ಯದಲ್ಲಿ ಟೀಮ್ ಇಂಡಿಯಾ ವೇಗಿಗಳು ಭರ್ಜರಿ ಬೌಲಿಂಗ್ ಪ್ರದರ್ಶಿಸಿದ್ದರು. ಇದಾಗ್ಯೂ 3ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಮೊಮಿನುಲ್ ಹಕ್ ಭಾರತೀಯ ಬೌಲರ್​ಗಳ ವಿರುದ್ಧ ಕೆಚ್ಚೆದೆಯ ಬ್ಯಾಟಿಂಗ್ ಮಾಡಿದರು.

ಆದರೆ ಇತರೆ ಬ್ಯಾಟರ್​ಗಳಿಂದ  ಹಕ್​ಗೆ ಉತ್ತಮ ಸಾಥ್ ಸಿಕ್ಕಿರಲಿಲ್ಲ. ಇದಾಗ್ಯೂ 194 ಎಸೆತಗಳನ್ನು ಎದುರಿಸಿದ ಮೊಮಿನುಲ್ ಹಕ್ 17 ಫೋರ್ ಹಾಗೂ 1 ಸಿಕ್ಸ್​ನೊಂದಿಗೆ ಅಜೇಯ 107 ರನ್ ಬಾರಿಸಿದರು. ಇನ್ನೊಂದೆಡೆ ಬಾಂಗ್ಲಾ ಬ್ಯಾಟರ್​ಗಳು ಪೆವಿಲಿಯನ್ ಪರೇಡ್ ನಡೆಸಿದ ಪರಿಣಾಮ ಕೇವಲ 233 ರನ್​ಗಳಿಗೆ ಆಲೌಟ್ ಆಯಿತು.

ಟೀಮ್ ಇಂಡಿಯಾ ಪರ ಜಸ್​ಪ್ರೀತ್ ಬುಮ್ರಾ 3 ವಿಕೆಟ್ ಪಡೆದರೆ, ಮೊಹಮ್ಮದ್ ಸಿರಾಜ್, ಆಕಾಶ್ ದೀಪ್ ಹಾಗೂ ರವಿಚಂದ್ರನ್ ಅಶ್ವಿನ್ ತಲಾ 2 ವಿಕೆಟ್ ಕಬಳಿಸಿ ಮಿಂಚಿದರು. ಇದೀಗ ಪ್ರಥಮ ಇನಿಂಗ್ಸ್ ಶುರು ಮಾಡಿರುವ ಟೀಮ್ ಇಂಡಿಯಾ ಪರ ರೋಹಿತ್ ಶರ್ಮಾ ಹಾಗೂ ಯಶಸ್ವಿ ಜೈಸ್ವಾಲ್ ಸ್ಪೋಟಕ ಬ್ಯಾಟಿಂಗ್ ಪ್ರದರ್ಶಿಸುತ್ತಿದ್ದಾರೆ. ಅದರಂತೆ ಮೊದಲ 2 ಓವರ್​ಗಳಲ್ಲಿ ಟೀಮ್ ಇಂಡಿಯಾ ಬ್ಯಾಟರ್​ಗಳು 29 ರನ್ ಬಾರಿಸಿದ್ದಾರೆ.

ಭಾರತ ಪ್ಲೇಯಿಂಗ್ 11: ಯಶಸ್ವಿ ಜೈಸ್ವಾಲ್, ರೋಹಿತ್ ಶರ್ಮಾ (ನಾಯಕ), ಶುಭ್​ಮನ್ ಗಿಲ್, ವಿರಾಟ್ ಕೊಹ್ಲಿ, ರಿಷಭ್ ಪಂತ್ (ವಿಕೆಟ್ ಕೀಪರ್), ಕೆಎಲ್ ರಾಹುಲ್, ರವೀಂದ್ರ ಜಡೇಜಾ, ರವಿಚಂದ್ರನ್ ಅಶ್ವಿನ್, ಆಕಾಶ್ ದೀಪ್, ಜಸ್​ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್.

ಇದನ್ನೂ ಓದಿ: IPL 2025 ರಲ್ಲಿ ಎಷ್ಟು ಪಂದ್ಯಗಳನ್ನಾಡಲಾಗುತ್ತದೆ? ಇಲ್ಲಿದೆ ಮಾಹಿತಿ

ಬಾಂಗ್ಲಾದೇಶ್ ಪ್ಲೇಯಿಂಗ್​ 11: ಶಾದ್ಮಾನ್ ಇಸ್ಲಾಂ, ಜಾಕಿರ್ ಹಸನ್, ನಜ್ಮುಲ್ ಹೊಸೈನ್ ಶಾಂತೊ (ನಾಯಕ), ಮೊಮಿನುಲ್ ಹಕ್, ಮುಶ್ಫಿಕರ್ ರಹೀಮ್, ಶಕೀಬ್ ಅಲ್ ಹಸನ್, ಲಿಟನ್ ದಾಸ್ (ವಿಕೆಟ್ ಕೀಪರ್), ಮೆಹದಿ ಹಸನ್ ಮಿರಾಝ್, ತೈಜುಲ್ ಇಸ್ಲಾಂ, ಹಸನ್ ಮಹಮೂದ್, ಖಾಲಿದ್ ಅಹ್ಮದ್.

Published On - 1:28 pm, Mon, 30 September 24

‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ