IND vs BAN 2nd Test: ಉಮೇಶ್- ಅಶ್ವಿನ್ ದಾಳಿಗೆ ತತ್ತರಿಸಿದ ಬಾಂಗ್ಲಾ; 227 ರನ್​ಗಳಿಗೆ ಆಲೌಟ್..!

IND vs BAN 2nd Test: ಉಮೇಶ್ ಯಾದವ್ ಮತ್ತು ರವಿಚಂದ್ರನ್ ಅಶ್ವಿನ್ ದಾಳಿಗೆ ತತ್ತರಿಸಿದ ಬಾಂಗ್ಲಾದೇಶ ತಂಡ ಮೊದಲ ಇನ್ನಿಂಗ್ಸ್​ನಲ್ಲಿ ಕೇವಲ 227 ರನ್‌ಗಳಿಗೆ ಆಲೌಟ್ ಆಗಿದೆ.

IND vs BAN 2nd Test: ಉಮೇಶ್- ಅಶ್ವಿನ್ ದಾಳಿಗೆ ತತ್ತರಿಸಿದ ಬಾಂಗ್ಲಾ; 227 ರನ್​ಗಳಿಗೆ ಆಲೌಟ್..!
ಟೀಂ ಇಂಡಿಯಾ
Follow us
| Updated By: ಪೃಥ್ವಿಶಂಕರ

Updated on:Dec 22, 2022 | 4:37 PM

ಭಾರತ ಹಾಗೂ ಬಾಂಗ್ಲಾದೇಶ (India vs Bangladesh) ನಡುವೆ ಢಾಕಾದಲ್ಲಿ ನಡೆಯುತ್ತಿರುವ ಎರಡನೇ ಟೆಸ್ಟ್‌ನ ಮೊದಲ ದಿನವೇ ಟೀಂ ಇಂಡಿಯಾ ಮೇಲುಗೈ ಸಾಧಿಸಿದೆ. ಢಾಕಾದ ಶೇರ್-ಎ-ಬಾಂಗ್ಲಾ ಸ್ಟೇಡಿಯಂನಲ್ಲಿ ಡಿಸೆಂಬರ್ 22 ರಂದು ಆರಂಭವಾದ ಟೆಸ್ಟ್ ಪಂದ್ಯದ ಮೊದಲ ದಿನದಂದು ಉಮೇಶ್ ಯಾದವ್ ಮತ್ತು ರವಿಚಂದ್ರನ್ ಅಶ್ವಿನ್ (Umesh Yadav and Ravichandran Ashwin) ದಾಳಿಗೆ ತತ್ತರಿಸಿದ ಬಾಂಗ್ಲಾದೇಶ ತಂಡ ಮೊದಲ ಇನ್ನಿಂಗ್ಸ್​ನಲ್ಲಿ ಕೇವಲ 227 ರನ್‌ಗಳಿಗೆ ಆಲೌಟ್ ಆಗಿದೆ. ಆದರೆ ಬಾಂಗ್ಲಾದೇಶ ಪರ ಮಿಂಚಿದ ತಂಡದ ಮಾಜಿ ನಾಯಕ ಮೊಮಿನುಲ್ ಹಕ್ (Mominul Haque) 84 ರನ್​ಗಳ ಅತ್ಯುತ್ತಮ ಇನ್ನಿಂಗ್ಸ್ ಆಡಿದರು. ಇನ್ನುಳಿದಂತೆ ಬಾಂಗ್ಲಾ ಪರ ಮತ್ತ್ಯಾವ ಆಟಗಾರನೂ ಬಿಗ್ ಇನ್ನಿಂಗ್ಸ್ ಆಡುವಲ್ಲಿ ಸಫಲರಾಗಲಿಲ್ಲ. ಟೀಂ ಇಂಡಿಯಾ ಪರ ಉಮೇಶ್ ಯಾದವ್ ಮತ್ತು ರವಿಚಂದ್ರನ್ ಅಶ್ವಿನ್ ತಲಾ 4 ವಿಕೆಟ್ ಪಡೆದು ಮಿಂಚಿದರೆ, 12 ವರ್ಷಗಳ ಬಳಿಕ ತಂಡಕ್ಕೆ ಎಂಟ್ರಿಕೊಟ್ಟ ಜಯದೇವ್ ಉನದ್ಕಟ್ 2 ವಿಕೆಟ್ ಪಡೆದರು.

ಬಾಂಗ್ಲಾ ಇನ್ನಿಂಗ್ಸ್ ಹೀಗಿತ್ತು

ಈ ಪಂದ್ಯದಲ್ಲಿ ಟಾಸ್ ಗೆದ್ದ ಬಾಂಗ್ಲಾದೇಶ ಮೊದಲು ಬ್ಯಾಟಿಂಗ್ ಮಾಡಲು ನಿರ್ಧರಿಸಿತ್ತು. ತಂಡದ ಪರ ಆರಂಭಿಕರಾಗಿ ಕಣಕ್ಕಿಳಿದಿದ್ದ ಝಾಕಿರ್ ಹಸನ್ ಮತ್ತು ನಜ್ಮುಲ್ ಹಸನ್ ಶಾಂಟೊ 15ನೇ ಓವರ್​ವರೆಗೆ ಬ್ಯಾಟಿಂಗ್ ಮಾಡಿ 39 ರನ್ ಜೊತೆಯಾಟ ನಡೆಸಿ ಉತ್ತಮ ಅಡಿಪಾಯ ಹಾಕಿಕೊಟ್ಟರು. ನಂತರ ಝಾಕಿರ್ ಅವರನ್ನು ಔಟ್ ಮಾಡುವ ಮೂಲಕ ಉನದ್ಕಟ್ ಈ ಜೊತೆಯಾಟವನ್ನು ಮುರಿದರು.

40ನೇ ವಯಸ್ಸಿನಲ್ಲೂ ಐಪಿಎಲ್ ಆಡುವ ಆಸೆ; ಮಿನಿ ಹರಾಜಿನಲ್ಲಿರುವ 5 ಅತ್ಯಂತ ಹಿರಿಯ ಆಟಗಾರರಿವರು

ನಂತರದ ಓವರ್​ನಲ್ಲಿಯೇ ನಜ್ಮುಲ್ ಹಸನ್ ಶಾಂಟೊ ವಿಕೆಟ್ ಪಡೆಯುವ ಮೂಲಕ ಅಶ್ವಿನ್ ತಂಡಕ್ಕೆ ಎರಡನೇ ಯಶಸ್ಸನ್ನು ತಂದುಕೊಟ್ಟರು. ಹೀಗಾಗಿ ಕೇವಲ 39 ರನ್ ಆಗುವಷ್ಟರಲ್ಲೇ ತಂಡದ ಎರಡು ವಿಕೆಟ್ ಉರುಳಿದವು. ಎರಡನೇ ವಿಕೆಟ್ ಬಳಿಕ ಜೊತೆಯಾದ ಮೊಮಿನುಲ್ ಹಾಗೂ ಶಕೀಬ್ ತಂಡವನ್ನು ಅರ್ಧಶತಕದ ಗಡಿ ದಾಟಿಸಿದರು. ಈ ವೇಳೆ 16 ರನ್ ಗಳಿಸಿ ಆಡುತ್ತಿದ್ದ ಬಾಂಗ್ಲಾ ನಾಯಕಿನಿಗೆ ಉಮೇಶ್ ಪೆವಿಲಿಯನ್ ಹಾದಿ ತೋರಿದರೆ, ಮುಶ್ಫಿಕರ್ ರಹೀಮ್ 26 ರನ್​ಗಳಿಸಿದ್ದಾಗ​ ಉನದ್ಕಟ್ ಬೌಲಿಂಗ್​ನಲ್ಲಿ ವಿಕೆಟ್ ಒಪ್ಪಿಸಿದರು.

ಬಾಲಂಗೋಚಿಗಳು ಮಿಂಚಲಿಲ್ಲ

ಬಳಿಕ ಸ್ಫೋಟಕ ಬ್ಯಾಟಿಂಗ್​ಗೆ ಮುಂದಾಗಿದ್ದ ಲಿಟನ್ ದಾಸ್​ ಅವರನ್ನು ವೈಯಕ್ತಿಕ 25 ರನ್​ಗಳಲ್ಲಿ ಅಶ್ವಿನ್ ಬಲಿಪಡೆದರು. ಇನ್ನುಳಿದಂತೆ ಬಾಂಗ್ಲಾ ತಂಡದ ಬಾಲಗೊಂಚಿಗಳು ಬಂದಷ್ಟೇ ವೇಗವಾಗಿ ಪೆವಿಲಿಯನ್ ಸೇರಿಕೊಂಡಿದ್ದರಿಂದ ಅಂತಿಮವಾಗಿ ಬಾಂಗ್ಲಾ ತಂಡ ತನ್ನೇಲ್ಲ ವಿಕೆಟ್ ಕಳೆದುಕೊಂಡು 227 ರನ್ ಗಳಿಸಿತು.

ಬಾಂಗ್ಲಾ ತಂಡವನ್ನು 227 ರನ್​ಗಳಿಗೆ ಕಟ್ಟಿ ಹಾಕಿ ತನ್ನ ಮೊದಲ ಇನ್ನಿಂಗ್ಸ್ ಆರಂಭಿಸಿರುವ ಟೀಂ ಇಂಡಿಯಾ ದಿನದಾಟದಂತ್ಯಕ್ಕೆ ಯಾವುದೇ ವಿಕೆಟ್ ನಷ್ಟವಿಲ್ಲದೆ 19 ರನ್ ಗಳಿಸಿದೆ. ನಾಯಕ ರಾಹುಲ್ 3 ರನ್ ಹಾಗೂ ಗಿಲ್ 14 ರನ್ ಗಳಿಸಿ 2ನೇ ದಿನದಾಟಕ್ಕೆ ಬ್ಯಾಟಿಂಗ್ ಕಾಯ್ದುಕೊಂಡಿದ್ದಾರೆ.

12 ವರ್ಷಗಳ ಬಳಿಕ ಉನದ್ಕಟ್​ಗೆ ಅವಕಾಶ

ಕಳೆದ ಪಂದ್ಯದಲ್ಲಿ ಟೀಂ ಇಂಡಿಯಾದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ್ದ ಸ್ಪಿನ್ನರ್ ಕುಲ್ದೀಪ್ ಯಾದವ್ ಅವರನ್ನು ಎರಡನೇ ಟೆಸ್ಟ್​ನಿಂದ ಕೈಬಿಡಲಾಗಿದ್ದು, ಅವರ ಸ್ಥಾನದಲ್ಲಿ ಎಡಗೈ ವೇಗದ ಬೌಲರ್ ಜಯದೇವ್ ಉನದ್ಕಟ್ ತಂಡಕ್ಕೆ ಆಯ್ಕೆಯಾಗಿದ್ದಾರೆ. 12 ವರ್ಷಗಳ ಹಿಂದೆ ಟೆಸ್ಟ್‌ಗೆ ಪದಾರ್ಪಣೆ ಮಾಡಿದ್ದ ಜಯದೇವ್ ಈ ಟೆಸ್ಟ್‌ನಲ್ಲಿ ಭಾರತದ ವಿಕೆಟ್ ಖಾತೆ ತೆರೆಯುವ ಮೂಲಕ ತಂಡಕ್ಕೆ ಮೊದಲ ಯಶಸ್ಸನ್ನು ನೀಡಿದರು. ಅಲ್ಲದೆ ಕೆಲವು ಪ್ರಮುಖ ಜೊತೆಯಾಟಗಳನ್ನು ಮುರಿಯುವಲ್ಲಿ ಮತ್ತು ಬ್ಯಾಟ್ಸ್‌ಮನ್‌ಗಳ ಮೇಲೆ ಒತ್ತಡ ಹೇರುವಲ್ಲಿ ದೊಡ್ಡ ಪಾತ್ರವನ್ನು ವಹಿಸಿದರು.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 3:48 pm, Thu, 22 December 22

‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ