AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs BAN: ಕಾನ್ಪುರ ಪಿಚ್ ಯಾರಿಗೆ ಸಹಕಾರಿ? ಪಂದ್ಯಕ್ಕೂ ಮುನ್ನ ಪಿಚ್ ಕ್ಯುರೇಟರ್ ಹೇಳಿದ್ದೇನು?

Kanpur Green Park Stadium Pitch report : ಉಭಯ ತಂಡಗಳ ನಡುವೆ ನಡೆಯಲ್ಲಿರುವ ಎರಡನೇ ಟೆಸ್ಟ್ ಪಂದ್ಯಕ್ಕೆ ಕಾನ್ಪುರದ ಗ್ರೀನ್ ಪಾರ್ಕ್ ಸ್ಟೇಡಿಯಂ ಆತಿಥ್ಯವಹಿಸುತ್ತಿದೆ. ಇನ್ನು ಈ ಪಿಚ್ ಯಾರಿಗೆ ಹೆಚ್ಚು ಸಹಕಾರಿಯಾಗಲಿದೆ ಎಂಬುದನ್ನು ನೋಡುವುದಾದರೆ.. ಈ ಪಿಚ್ ವೇಗದ ಬೌಲರ್‌ಗಳು ಮತ್ತು ಸ್ಪಿನ್ನರ್‌ಗಳಿಗೆ ಸಹಾಯಕವಾಗಲಿದೆ ಎಂದು ನಿರೀಕ್ಷಿಸಲಾಗಿದೆ.

IND vs BAN: ಕಾನ್ಪುರ ಪಿಚ್ ಯಾರಿಗೆ ಸಹಕಾರಿ? ಪಂದ್ಯಕ್ಕೂ ಮುನ್ನ ಪಿಚ್ ಕ್ಯುರೇಟರ್ ಹೇಳಿದ್ದೇನು?
ಕಾನ್ಪುರ ಪಿಚ್ ವರದಿ
ಪೃಥ್ವಿಶಂಕರ
|

Updated on: Sep 26, 2024 | 9:30 PM

Share

ಚೆನ್ನೈ ಟೆಸ್ಟ್‌ನಲ್ಲಿ ಬಾಂಗ್ಲಾದೇಶವನ್ನು 280 ರನ್‌ಗಳಿಂದ ಮಣಿಸಿದ್ದ ಭಾರತ ತಂಡ ಇದೀಗ ಕಾನ್ಪುರ ಟೆಸ್ಟ್‌ನ ಮೇಲೆ ಕಣ್ಣಿಟ್ಟಿದೆ. ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ದೃಷ್ಟಿಯಿಂದ ರೋಹಿತ್ ಶರ್ಮಾ ಮತ್ತು ತಂಡಕ್ಕೆ ಈ ಪಂದ್ಯ ಅತ್ಯಂತ ಮಹತ್ವದ್ದಾಗಿದೆ. ಪ್ರಸ್ತುತ ಡಬ್ಲ್ಯುಟಿಸಿ ಮೂರನೇ ಆವೃತ್ತಿಯಲ್ಲಿ ಟೀಂ ಇಂಡಿಯಾ ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ. ಇದೀಗ ಬಾಂಗ್ಲಾದೇಶ ವಿರುದ್ಧದ ಎರಡನೇ ಪಂದ್ಯವನ್ನು ಗೆಲ್ಲುವ ಮೂಲಕ ತನ್ನ ಸ್ಥಾನವನ್ನು ಭದ್ರಪಡಿಸಿಕೊಳ್ಳುವ ಇರಾದೆಯಲ್ಲಿ ಟೀಂ ಇಂಡಿಯಾ ಇದೆ. ಏಕೆಂದರೆ ಈ ಪಂದ್ಯದಲ್ಲಿ ಟೀಂ ಇಂಡಿಯಾ ಸೋತರೆ ಅಥವಾ ಪಂದ್ಯವನ್ನು ಡ್ರಾ ಮಾಡಿಕೊಂಡರೆ ಡಬ್ಲ್ಯುಟಿಸಿ ಫೈನಲ್​ ರೇಸ್​ನಲ್ಲಿ ತಂಡಕ್ಕೆ ಕೊಂಚ ಹಿನ್ನಡೆಯುಂಟಾಗಲಿದೆ. ಹೀಗಾಗಿ ಈ ಪಂದ್ಯವನ್ನು ಗೆಲ್ಲಲೇಬೇಕಾ ಒತ್ತಡದಲ್ಲಿ ಟೀಂ ಇಂಡಿಯಾ ಇದೆ.

ಪಿಚ್ ಕ್ಯುರೇಟರ್ ಹೇಳಿದ್ದೇನು?

ಇನ್ನು ಉಭಯ ತಂಡಗಳ ನಡುವೆ ನಡೆಯಲ್ಲಿರುವ ಎರಡನೇ ಟೆಸ್ಟ್ ಪಂದ್ಯಕ್ಕೆ ಕಾನ್ಪುರದ ಗ್ರೀನ್ ಪಾರ್ಕ್ ಸ್ಟೇಡಿಯಂ ಆತಿಥ್ಯವಹಿಸುತ್ತಿದೆ. ಇನ್ನು ಈ ಪಿಚ್ ಯಾರಿಗೆ ಹೆಚ್ಚು ಸಹಕಾರಿಯಾಗಲಿದೆ ಎಂಬುದನ್ನು ನೋಡುವುದಾದರೆ.. ಈ ಪಿಚ್ ವೇಗದ ಬೌಲರ್‌ಗಳು ಮತ್ತು ಸ್ಪಿನ್ನರ್‌ಗಳಿಗೆ ಸಹಾಯಕವಾಗಲಿದೆ ಎಂದು ನಿರೀಕ್ಷಿಸಲಾಗಿದೆ. ಆರಂಭಿಕ ಹಂತದಲ್ಲಿ ವೇಗದ ಬೌಲರ್‌ಗಳಿಗೆ ಮತ್ತು ಪಂದ್ಯ ಮುಂದುವರೆದಂತೆ ಸ್ಪಿನ್ನರ್‌ಗಳಿಗೆ ಸಹಾಯವಾಗುವಂತೆ ಈ ಪಿಚ್ ಅನ್ನು ವಿನ್ಯಾಸಗೊಳಿಸಲಾಗಿದೆ ಎಂದು ಗ್ರೀನ್ ಪಾರ್ಕ್‌ನ ಕ್ಯುರೇಟರ್ ಹೇಳಿಕೆ ನೀಡಿದ್ದರು.

ಅವರ ಹೇಳಿಕೆಯ ಪ್ರಕಾರ ಪಿಚ್ ಮೊದಲ ಎರಡು ಸೆಷನ್‌ಗಳಲ್ಲಿ ವೇಗದ ಬೌಲರ್‌ಗಳಿಗೆ ಮತ್ತು ಕೊನೆಯ ಮೂರು ದಿನಗಳಲ್ಲಿ ಸ್ಪಿನ್ನರ್‌ಗಳಿಗೆ ಸಹಾಯ ಮಾಡುತ್ತದೆ. ಅಲ್ಲದೆ ಈ ಪಿಚ್ ಚೆನ್ನೈನಲ್ಲಿ ನಡೆದ ಪಂದ್ಯದ ಅನುಭವವನ್ನು ನೀಡಲಿದೆ. ಮೊದಲ ಎರಡು ಸೆಷನ್‌ಗಳಲ್ಲಿ ಬೌನ್ಸ್ ಇರಲಿದ್ದು, ಮೊದಲ ಎರಡು ದಿನಗಳಲ್ಲಿ ಬ್ಯಾಟಿಂಗ್‌ಗೆ ಸಹಾಯಕವಾಗಲಿದೆ. ಅಲ್ಲದೆ ಕೊನೆಯ ಮೂರು ದಿನಗಳಲ್ಲಿ ಸ್ಪಿನ್ನರ್​ಗಳ ಪಾತ್ರ ಪ್ರಮುಖವಾಗಲಿದೆ ಎಂಬ ಮಾಹಿತಿ ನೀಡಿದರು.

ಕಾನ್ಪುರದಲ್ಲಿ ಭಾರತದ ಪ್ರದರ್ಶನ

ಭಾರತ ಟೆಸ್ಟ್‌ನಲ್ಲಿ ಬಾಂಗ್ಲಾದೇಶದ ವಿರುದ್ಧ 14 ಪಂದ್ಯಗಳನ್ನು ಆಡಿದೆ. ಕಾನ್ಪುರದಲ್ಲಿ ಭಾರತ ಮತ್ತು ಬಾಂಗ್ಲಾದೇಶ ಟೆಸ್ಟ್‌ನಲ್ಲಿ ಮುಖಾಮುಖಿಯಾಗುತ್ತಿರುವುದು ಇದೇ ಮೊದಲು. ಕಾನ್ಪುರದಲ್ಲಿ ಭಾರತದ ದಾಖಲೆ ತುಂಬಾ ಪ್ರಬಲವಾಗಿದೆ. ಇಲ್ಲಿ ಆಡಿದ 23 ಟೆಸ್ಟ್‌ಗಳಲ್ಲಿ ಕೇವಲ ಮೂರು ಪಂದ್ಯಗಳಲ್ಲಿ ಸೋತಿದೆ. ಏಳು ಪಂದ್ಯಗಳನ್ನು ಗೆಲ್ಲುವಲ್ಲಿ ಯಶಸ್ವಿಯಾಗಿರುವ ಟೀಂ ಇಂಡಿಯಾ, ಉಳಿದಂತೆ 13 ಟೆಸ್ಟ್‌ಗಳನ್ನು ಡ್ರಾ ಮಾಡಿಕೊಳ್ಳುವಲ್ಲಿ ಯಶಸ್ವಿಯಾಗಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಬಳ್ಳಾರಿ ಗಲಭೆ: ಸಸ್ಪೆಂಡ್ ಬೆನ್ನಲ್ಲೇ ಆತ್ಮಹತ್ಯೆಗೆ ಯತ್ನಿಸಿದ್ರಾ ಪವನ್?
ಬಳ್ಳಾರಿ ಗಲಭೆ: ಸಸ್ಪೆಂಡ್ ಬೆನ್ನಲ್ಲೇ ಆತ್ಮಹತ್ಯೆಗೆ ಯತ್ನಿಸಿದ್ರಾ ಪವನ್?
ಟೈರ್ ಸ್ಪೋಟಗೊಂಡು ಮನೆಯ ಆವರಣಕ್ಕೆ ಹಾರಿ ಬಂದು ಬಿದ್ದ ಕಾರು
ಟೈರ್ ಸ್ಪೋಟಗೊಂಡು ಮನೆಯ ಆವರಣಕ್ಕೆ ಹಾರಿ ಬಂದು ಬಿದ್ದ ಕಾರು
ಗವಿ ಮಠದ ಜಾತ್ರೆಗೆ ರೆಡಿಯಾಗ್ತಿದೆ 10 ಲಕ್ಷ ರೂ. ವೆಚ್ಚದಲ್ಲಿ ಮೈಸೂರ್ ಪಾಕ್
ಗವಿ ಮಠದ ಜಾತ್ರೆಗೆ ರೆಡಿಯಾಗ್ತಿದೆ 10 ಲಕ್ಷ ರೂ. ವೆಚ್ಚದಲ್ಲಿ ಮೈಸೂರ್ ಪಾಕ್
ರಾಯಚೂರು: ಗೃಹಲಕ್ಷ್ಮಿ ಹಣದಲ್ಲಿ ಫ್ರಿಡ್ಜ್ ಖರೀದಿಸಿದ ಮಹಿಳೆ
ರಾಯಚೂರು: ಗೃಹಲಕ್ಷ್ಮಿ ಹಣದಲ್ಲಿ ಫ್ರಿಡ್ಜ್ ಖರೀದಿಸಿದ ಮಹಿಳೆ
ಡಿಕೆಶಿ ನಿವಾಸಕ್ಕೆ ದಿಢೀರ್ ರೇಣುಕಾಚಾರ್ಯ: 20 ನಿಮಿಷ ಮಾತುತೆ
ಡಿಕೆಶಿ ನಿವಾಸಕ್ಕೆ ದಿಢೀರ್ ರೇಣುಕಾಚಾರ್ಯ: 20 ನಿಮಿಷ ಮಾತುತೆ
ಕೊನೆಯ ಹಂತದಲ್ಲಿ ಈ ಮಾತು ಬೇಕಾ? ಅಶ್ವಿನಿ-ಗಿಲ್ಲಿಗೆ ಸುದೀಪ್ ಕ್ಲಾಸ್
ಕೊನೆಯ ಹಂತದಲ್ಲಿ ಈ ಮಾತು ಬೇಕಾ? ಅಶ್ವಿನಿ-ಗಿಲ್ಲಿಗೆ ಸುದೀಪ್ ಕ್ಲಾಸ್
'ನಮ್ಮನ್ನ ಬಿಟ್ಟು ಹೋಗ್ಬೇಡಿ ಟೀಚರ್ಸ್​' ಶಿಕ್ಷಕರ ಮುಂದೆ ಮಕ್ಕಳ ಕಣ್ಣೀರು!
'ನಮ್ಮನ್ನ ಬಿಟ್ಟು ಹೋಗ್ಬೇಡಿ ಟೀಚರ್ಸ್​' ಶಿಕ್ಷಕರ ಮುಂದೆ ಮಕ್ಕಳ ಕಣ್ಣೀರು!
ಶಾಲೆ ಗೇಟ್​ ಬಂದ್​ ಮಾಡಿ ಶಿಕ್ಷಕರನ್ನ ತಡೆದು ಕಣ್ಣೀರಿಟ್ಟ ಮಕ್ಕಳು
ಶಾಲೆ ಗೇಟ್​ ಬಂದ್​ ಮಾಡಿ ಶಿಕ್ಷಕರನ್ನ ತಡೆದು ಕಣ್ಣೀರಿಟ್ಟ ಮಕ್ಕಳು
ಅಕ್ರಮ‌ ಕಟ್ಟಡ ಹೆಸರಿನಲ್ಲಿ ಖಾಸಗಿ ಶಾಲೆ ತೆರವು: ಶಾಮಿಯಾನದಡಿ ಮಕ್ಕಳಿಗೆ ಪಾಠ
ಅಕ್ರಮ‌ ಕಟ್ಟಡ ಹೆಸರಿನಲ್ಲಿ ಖಾಸಗಿ ಶಾಲೆ ತೆರವು: ಶಾಮಿಯಾನದಡಿ ಮಕ್ಕಳಿಗೆ ಪಾಠ
ಬಣದ ಹುಣ್ಣಿಮೆಗೆ ಜನಸಾಗರ, ಬೆಳಗಾವಿಯಲ್ಲಿ ಬಸ್ ಕೊರತೆಯಿಂದ ಭಕ್ತರ ಪರದಾಟ
ಬಣದ ಹುಣ್ಣಿಮೆಗೆ ಜನಸಾಗರ, ಬೆಳಗಾವಿಯಲ್ಲಿ ಬಸ್ ಕೊರತೆಯಿಂದ ಭಕ್ತರ ಪರದಾಟ