IND vs BAN: ಭಾರತದ ವಿರುದ್ಧ ಶತಕ ಸಿಡಿಸಿ ದಾಖಲೆ ಬರೆದ ಮೊಮಿನುಲ್ ಹಕ್

IND vs BAN, 2nd Test: ಭಾರತ ಮತ್ತು ಬಾಂಗ್ಲಾದೇಶ್ ನಡುವಣ 2ನೇ ಟೆಸ್ಟ್ ಪಂದ್ಯವು ಶುಕ್ರವಾರ ಶುರುವಾದರೆ, ಇನ್ನೂ ಸಹ ಮೊದಲ ಇನಿಂಗ್ಸ್ ಮುಗಿದಿಲ್ಲ. ಇದಕ್ಕೆ ಮುಖ್ಯ ಕಾರಣ 2ನೇ ಮತ್ತು 3ನೇ ದಿನದಾಟಗಳು ಸಂಪೂರ್ಣ ಮಳೆಗೆ ಅಹುತಿಯಾಗಿರುವುದು. ಇದೀಗ ನಾಲ್ಕನೇ ದಿನದಾಟದಲ್ಲಿ ಮೊಮಿನುಲ್ ಹಕ್ ಶತಕ ಪೂರೈಸಿದ್ದಾರೆ.

IND vs BAN: ಭಾರತದ ವಿರುದ್ಧ ಶತಕ ಸಿಡಿಸಿ ದಾಖಲೆ ಬರೆದ ಮೊಮಿನುಲ್ ಹಕ್
Mominul Haque
Follow us
|

Updated on: Sep 30, 2024 | 12:08 PM

ಕಾನ್ಪುರದ ಗ್ರೀನ್ ಪಾರ್ಕ್​ ಮೈದಾನದಲ್ಲಿ ನಡೆಯುತ್ತಿರುವ ಭಾರತದ ವಿರುದ್ಧದ 2ನೇ ಟೆಸ್ಟ್ ಪಂದ್ಯದಲ್ಲಿ ಬಾಂಗ್ಲಾದೇಶ್ ಬ್ಯಾಟರ್ ಮೊಮಿನುಲ್ ಹಕ್ ಶತಕ ಸಿಡಿಸಿ ಮಿಂಚಿದ್ದಾರೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಬಾಂಗ್ಲಾ ತಂಡವನ್ನು ಬ್ಯಾಟಿಂಗ್​ಗೆ ಆಹ್ವಾನಿಸಿದ್ದರು. ಅದರಂತೆ ಪ್ರಥಮ ಇನಿಂಗ್ಸ್ ಆಡುತ್ತಿರುವ ಬಾಂಗ್ಲಾದೇಶ್ ಪರ ಮೊಮಿನುಲ್ ಹಕ್ ಉತ್ತಮ ಬ್ಯಾಟಿಂಗ್ ಪ್ರದರ್ಶಿಸಿದ್ದಾರೆ.

ಬಾಂಗ್ಲಾದೇಶ್ ತಂಡವು ಕೇವಲ 29 ರನ್​ಗಳಿಗೆ 2 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದ್ದ ಸಂದರ್ಭ ಕ್ರೀಸ್​ಗೆ ಆಗಮಿಸಿದ ಮೊಮಿನುಲ್ ಹಕ್ ಟೀಮ್ ಇಂಡಿಯಾ ಬೌಲರ್​ಗಳನ್ನು ದಿಟ್ಟವಾಗಿಯೇ ಎದುರಿಸಿದರು. ಅದರಲ್ಲೂ ಆಫ್​ ಸೈಡ್​ನತ್ತ ಅತ್ಯುತ್ತಮ ಹೊಡೆತಗಳ ಮೂಲಕ ರನ್​ ಕಲೆಹಾಕುತ್ತಾ ಸಾಗಿದರು.

ಒಂದೆಡೆ ವಿಕೆಟ್ ಬೀಳುತ್ತಿದ್ದರೂ ಮತ್ತೊಂದೆಡೆ ಗಟ್ಟಿಯಾಗಿ ನೆಲೆಯೂರಿದ ಮೊಮಿನುಲ್ ಹಕ್ 172 ಎಸೆತಗಳಲ್ಲಿ ಶತಕ ಪೂರೈಸಿದರು. ಈ ಮೂಲಕ ಭಾರತದಲ್ಲಿ ಟೆಸ್ಟ್ ಶತಕ ಸಿಡಿಸಿದ ಬಾಂಗ್ಲಾದೇಶದ 2ನೇ ಬ್ಯಾಟರ್ ಎನಿಸಿಕೊಂಡರು.

ಇದಕ್ಕೂ ಮುನ್ನ 2017 ರಲ್ಲಿ ಹೈದರಾಬಾದ್​ನಲ್ಲಿ ನಡೆದ ಟೆಸ್ಟ್ ಪಂದ್ಯದಲ್ಲಿ ಮುಶ್ಫಿಕುರ್ ರಹೀಮ್ 127 ರನ್ ಬಾರಿಸಿದ್ದರು. ಇದೀಗ ಕಾನ್ಪುರದಲ್ಲಿ ಸೆಂಚುರಿ ಸಿಡಿಸುವ ಮೂಲಕ ಮೊಮಿನುಲ್ ಹಕ್ ಭಾರತದಲ್ಲಿ ಈ ಸಾಧನೆ ಮಾಡಿದ ಬಾಂಗ್ಲಾದೇಶ್ ತಂಡದ 2ನೇ ಬ್ಯಾಟ್ಸ್​ಮನ್ ಎನಿಸಿಕೊಂಡಿದ್ದಾರೆ.

ಇನ್ನು ಮೊಮಿನುಲ್ ಅವರ ಶತಕದ ನೆರವಿನಿಂದ ಬಾಂಗ್ಲಾದೇಶ್ ತಂಡವು ಭೋಜನಾ ವಿರಾಮದ ವೇಳೆಗೆ 6 ವಿಕೆಟ್ ಕಳೆದುಕೊಂಡು 205 ರನ್​ ಕಲೆಹಾಕಿದೆ. ಸದ್ಯ ಕ್ರೀಸ್​ನಲ್ಲಿ 176 ಎಸೆತಗಳಲ್ಲಿ 16 ಫೋರ್ ಹಾಗೂ 1 ಸಿಕ್ಸ್​ನೊಂದಿಗೆ 102 ರನ್ ಬಾರಿಸಿರುವ ಮೊಮಿನುಲ್ ಹಕ್ ಹಾಗೂ ಮೆಹದಿ ಹಸನ್ ಮಿರಾಝ್ (6) ಬ್ಯಾಟಿಂಗ್ ಕಾಯ್ದುಕೊಂಡಿದ್ದಾರೆ.

ಟೀಮ್ ಇಂಡಿಯಾ ಪರ ರವಿಚಂದ್ರನ್ ಅಶ್ವಿನ್ ಹಾಗೂ ಆಕಾಶ್ ದೀಪ್ ತಲಾ 2 ವಿಕೆಟ್ ಪಡೆದರೆ, ಮೊಹಮ್ಮದ್ ಸಿರಾಜ್ ಮತ್ತು ಜಸ್​ಪ್ರೀತ್ ಬುಮ್ರಾ ಒಂದೊಂದು ವಿಕೆಟ್ ಕಬಳಿಸಿದ್ದಾರೆ.

ಭಾರತ ಪ್ಲೇಯಿಂಗ್ 11: ಯಶಸ್ವಿ ಜೈಸ್ವಾಲ್, ರೋಹಿತ್ ಶರ್ಮಾ (ನಾಯಕ), ಶುಭ್​ಮನ್ ಗಿಲ್, ವಿರಾಟ್ ಕೊಹ್ಲಿ, ರಿಷಭ್ ಪಂತ್ (ವಿಕೆಟ್ ಕೀಪರ್), ಕೆಎಲ್ ರಾಹುಲ್, ರವೀಂದ್ರ ಜಡೇಜಾ, ರವಿಚಂದ್ರನ್ ಅಶ್ವಿನ್, ಆಕಾಶ್ ದೀಪ್, ಜಸ್​ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್.

ಇದನ್ನೂ ಓದಿ: IPL 2025 ರಲ್ಲಿ ಎಷ್ಟು ಪಂದ್ಯಗಳನ್ನಾಡಲಾಗುತ್ತದೆ? ಇಲ್ಲಿದೆ ಮಾಹಿತಿ

ಬಾಂಗ್ಲಾದೇಶ್ ಪ್ಲೇಯಿಂಗ್​ 11: ಶಾದ್ಮಾನ್ ಇಸ್ಲಾಂ, ಜಾಕಿರ್ ಹಸನ್, ನಜ್ಮುಲ್ ಹೊಸೈನ್ ಶಾಂತೊ (ನಾಯಕ), ಮೊಮಿನುಲ್ ಹಕ್, ಮುಶ್ಫಿಕರ್ ರಹೀಮ್, ಶಕೀಬ್ ಅಲ್ ಹಸನ್, ಲಿಟನ್ ದಾಸ್ (ವಿಕೆಟ್ ಕೀಪರ್), ಮೆಹದಿ ಹಸನ್ ಮಿರಾಝ್, ತೈಜುಲ್ ಇಸ್ಲಾಂ, ಹಸನ್ ಮಹಮೂದ್, ಖಾಲಿದ್ ಅಹ್ಮದ್.

ಬೆಂಗಳೂರಿನಲ್ಲಿ ಮಳೆ ಆರ್ಭಟ; ಮಾನ್ಯತಾ ಟೆಕ್​ಪಾರ್ಕ್​ ವಿಡಿಯೋ ವೈರಲ್!
ಬೆಂಗಳೂರಿನಲ್ಲಿ ಮಳೆ ಆರ್ಭಟ; ಮಾನ್ಯತಾ ಟೆಕ್​ಪಾರ್ಕ್​ ವಿಡಿಯೋ ವೈರಲ್!
ವಿಡಿಯೋ: ಸಣ್ಣ ವಿಷಯಕ್ಕೆ ಜಗದೀಶ್​-ಸುರೇಶ್ ನಡುವೆ ಜಟಾಪಟಿ
ವಿಡಿಯೋ: ಸಣ್ಣ ವಿಷಯಕ್ಕೆ ಜಗದೀಶ್​-ಸುರೇಶ್ ನಡುವೆ ಜಟಾಪಟಿ
ದರ್ಶನ್ ವಿರುದ್ಧದ ಕೊಲೆ ಪ್ರಕರಣದ ಬಗ್ಗೆ ಕೋಡಿಶ್ರೀ ಸ್ಫೋಟಕ ಮಾತು
ದರ್ಶನ್ ವಿರುದ್ಧದ ಕೊಲೆ ಪ್ರಕರಣದ ಬಗ್ಗೆ ಕೋಡಿಶ್ರೀ ಸ್ಫೋಟಕ ಮಾತು
ದೇವಸ್ಥಾನದಲ್ಲಿ ಭಜನೆ ಮಾಡುತ್ತಿದ್ದ ಮಹಿಳೆಯ ಮಾಂಗಲ್ಯ ಎಗರಿಸಿದ ಕಳ್ಳ
ದೇವಸ್ಥಾನದಲ್ಲಿ ಭಜನೆ ಮಾಡುತ್ತಿದ್ದ ಮಹಿಳೆಯ ಮಾಂಗಲ್ಯ ಎಗರಿಸಿದ ಕಳ್ಳ
ಬೆಂಗಳೂರು ಮಳೆ: ನಡು ರಸ್ತೆಯಲ್ಲೇ ಸಿಲುಕಿದ ಶಾಲಾ ವಾಹನ; ಮಕ್ಕಳು ಕಂಗಾಲು
ಬೆಂಗಳೂರು ಮಳೆ: ನಡು ರಸ್ತೆಯಲ್ಲೇ ಸಿಲುಕಿದ ಶಾಲಾ ವಾಹನ; ಮಕ್ಕಳು ಕಂಗಾಲು
ಮಳೆಯನ್ನು ಸ್ವಾಗತಿಸುತ್ತಾ ಬಿಬಿಎಂಪಿಯ ವಾರ್ ರೂಂ ಕಡೆ ತೆರಳಿದ ಶಿವಕುಮಾರ್!
ಮಳೆಯನ್ನು ಸ್ವಾಗತಿಸುತ್ತಾ ಬಿಬಿಎಂಪಿಯ ವಾರ್ ರೂಂ ಕಡೆ ತೆರಳಿದ ಶಿವಕುಮಾರ್!
ಇವರ ಅಪ್ಪನಿಗೆ ಹೊಡೆದು ಕೇಸ್ ಹಾಕಿಸಿಕೊಂಡಿಲ್ಲ: ಜಗದೀಶ್​ಗೆ ಚೈತ್ರಾ ಕ್ಲಾಸ್
ಇವರ ಅಪ್ಪನಿಗೆ ಹೊಡೆದು ಕೇಸ್ ಹಾಕಿಸಿಕೊಂಡಿಲ್ಲ: ಜಗದೀಶ್​ಗೆ ಚೈತ್ರಾ ಕ್ಲಾಸ್
ಕಾರ್ಪೊರೇಟರ್​ಗಳಿಲ್ಲದ ಮಹಾನಗರ ಪಾಲಿಕೆಯಲ್ಲಿ ಅಧಿಕಾರಿಗಳೇ ದೊರೆಗಳು!
ಕಾರ್ಪೊರೇಟರ್​ಗಳಿಲ್ಲದ ಮಹಾನಗರ ಪಾಲಿಕೆಯಲ್ಲಿ ಅಧಿಕಾರಿಗಳೇ ದೊರೆಗಳು!
ತಾಕತ್ತಿದ್ದರೆ ಜಮೀರ್ ವಿಜಯಪುರದಿಂದ ನನ್ನ ವಿರುದ್ಧ ಸ್ಪರ್ಧಿಸಲಿ: ಯತ್ನಾಳ್
ತಾಕತ್ತಿದ್ದರೆ ಜಮೀರ್ ವಿಜಯಪುರದಿಂದ ನನ್ನ ವಿರುದ್ಧ ಸ್ಪರ್ಧಿಸಲಿ: ಯತ್ನಾಳ್
ಕಾವೇರಿ ನೀರಾವರಿ ನಿಗಮವನ್ನೂ ಸಿಎಂ ತನಿಖೆಗೊಪ್ಪಿಸುವರೇ? ದೇವರಾಜೇಗೌಡ
ಕಾವೇರಿ ನೀರಾವರಿ ನಿಗಮವನ್ನೂ ಸಿಎಂ ತನಿಖೆಗೊಪ್ಪಿಸುವರೇ? ದೇವರಾಜೇಗೌಡ