IND vs BAN: 15 ಬೌಂಡರಿ, 3 ಸಿಕ್ಸರ್; ಏಕದಿನ ಕ್ರಿಕೆಟ್​ನಲ್ಲಿ ಚೊಚ್ಚಲ ಶತಕ ಸಿಡಿಸಿದ ಇಶಾನ್ ಕಿಶನ್..!

Ishan Kishan: ರೋಹಿತ್ ಬದಲು ತಂಡದಲ್ಲಿ ಸ್ಥಾನ ಪಡೆದಿದ್ದ ಕಿಶನ್ ಕೇವಲ 85 ಎಸೆತಗಳಲ್ಲಿ 15 ಬೌಂಡರಿ ಹಾಗೂ 3 ಸಿಕ್ಸರ್ ಸಹಿತ ಶತಕ ಪೂರೈಸಿದ್ದಾರೆ. ಆರಂಭದಿಂದಲೂ ಬಾಂಗ್ಲಾ ಬೌಲರ್​ಗಳ ಮೇಲೆ ದಾಳಿ ಆರಂಭಿಸಿದ ಕಿಶನ್, ಧವನ್ ವಿಕೆಟ್ ಬಳಿಕವೂ ಕಿಂಗ್ ಕೊಹ್ಲಿ ಜೊತೆ ಅವಶ್ಯಕ ಶತಕದ ಜೊತೆಯಾಟ ಆಡಿದ್ದಾರೆ.

IND vs BAN: 15 ಬೌಂಡರಿ, 3 ಸಿಕ್ಸರ್; ಏಕದಿನ ಕ್ರಿಕೆಟ್​ನಲ್ಲಿ ಚೊಚ್ಚಲ ಶತಕ ಸಿಡಿಸಿದ ಇಶಾನ್ ಕಿಶನ್..!
Ishan Kishan
Follow us
TV9 Web
| Updated By: ಪೃಥ್ವಿಶಂಕರ

Updated on:Dec 10, 2022 | 1:50 PM

ಚಿತ್ತಗಾಂಗ್​ನಲ್ಲಿ ನಡೆಯುತ್ತಿರುವ ಬಾಂಗ್ಲಾ ವಿರುದ್ಧದ ಮೂರನೇ ಹಾಗೂ ಅಂತಿಮ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾದ (India vs Bangladesh) ಆರಂಭಿಕ ಬ್ಯಾಟ್ಸ್​ಮನ್ ಇಶಾನ್ ಕಿಶನ್ (Ishan Kishan) ಭರ್ಜರಿ ಶತಕ ಸಿಡಿಸಿ ಮಿಂಚಿದ್ದಾರೆ. ಈ ಪಂದ್ಯದಲ್ಲಿ ಇಂಜುರಿಗೊಂಡಿದ್ದ ರೋಹಿತ್ ಬದಲು ತಂಡದಲ್ಲಿ ಸ್ಥಾನ ಪಡೆದಿದ್ದ ಕಿಶನ್ ಕೇವಲ 85 ಎಸೆತಗಳಲ್ಲಿ 15 ಬೌಂಡರಿ ಹಾಗೂ 3 ಸಿಕ್ಸರ್ ಸಹಿತ ಶತಕ ಪೂರೈಸಿದ್ದಾರೆ. ಆರಂಭದಿಂದಲೂ ಬಾಂಗ್ಲಾ ಬೌಲರ್​ಗಳ ಮೇಲೆ ದಾಳಿ ಆರಂಭಿಸಿದ ಕಿಶನ್, ಧವನ್ ವಿಕೆಟ್ ಬಳಿಕವೂ ಕಿಂಗ್ ಕೊಹ್ಲಿ (Virat Kohli) ಜೊತೆ ಅವಶ್ಯಕ ಶತಕದ ಜೊತೆಯಾಟ ಆಡಿದ್ದಾರೆ.

ಈ ಪಂದ್ಯದಲ್ಲಿ ರೋಹಿತ್ ಶರ್ಮಾ ಬದಲಿಗೆ ಓಪನಿಂಗ್ ಮಾಡಿರುವ ಇಶಾನ್, ಇದೇ ಅಕ್ಟೋಬರ್ 11 ರಂದು ದೆಹಲಿಯಲ್ಲಿ ನಡೆದ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಭಾರತದ ಪರ ಕೊನೆಯ ಏಕದಿನ ಪಂದ್ಯವನ್ನು ಆಡಿದ್ದರು. ಆದರೆ ಆ ಪಂದ್ಯದ ನಂತರ ಅವರಿಗೆ ಏಕದಿನ ತಂಡದಲ್ಲಿ ಅವಕಾಶ ಸಿಕ್ಕಿರಲಿಲ್ಲ. ಇದೀಗ ರೋಹಿತ್ ಗಾಯಗೊಂಡಿರುವ ಕಾರಣ ಬಾಂಗ್ಲಾದೇಶ ಪ್ರವಾಸದ ಮೂರನೇ ಏಕದಿನ ಪಂದ್ಯದಲ್ಲಿ ಇಶಾನ್​ಗೆ ಅವಕಾಶ ಸಿಕ್ಕಿದ್ದು, ಸಿಕ್ಕ ಅವಕಾಶವನ್ನು ಕಿಶನ್ ಅದ್ಭುತವಾಗಿ ಬಳಸಿಕೊಂಡಿದ್ದಾರೆ.

ಕೊಹ್ಲಿ ಬೆಂಬಲ

ಬರೋಬ್ಬರಿ 11 ವರ್ಷಗಳ ಬಳಿಕ ಇಬ್ಬರು ಎಡಗೈ ದಾಂಡಿಗರನ್ನು ಕಣಕ್ಕಿಳಿಸಿದ ಭಾರತದ ತಂತ್ರಕ್ಕೆ ಧವನ್ ಸಾಥ್ ನೀಡಲಿಲ್ಲ. ಕೇವಲ 3 ರನ್ ಗಳಿಸಿದ ಧವನ್ ಹುಸೇನ್ ಬೌಲಿಂಗ್​ನಲ್ಲಿ ವಿಕೆಟ್ ಒಪ್ಪಿಸಿದರು. ಧವನ್ ವಿಕೆಟ್ ಉರುಳುವುದರೊಂದಿಗೆ ಕೇವಲ 15 ರನ್​ಗಳಿಗೆ ಈ ಇಬ್ಬರ ಜೊತೆಯಾಟ ಅಂತ್ಯಗೊಂಡಿತು. ಆದರೆ ಆ ಬಳಿಕ ಬಂದ ಕಿಂಗ್ ಕೊಹ್ಲಿ, ಕಿಶನ್​ಗೆ ಉತ್ತಮ ಸಾಥ್ ನೀಡುತ್ತಿದ್ದಾರೆ. ಈ ಸುದ್ದಿ ಬರೆಯುವ ವೇಳೆಗೆ ಈ ಜೋಡಿ ಕೇವಲ 29 ಓವರ್​ಗಳಲ್ಲಿ 229 ರನ್ ಕಲೆಹಾಕಿದೆ. ಇದರಲ್ಲಿ ಕಿಶನ್ ಅಜೇಯ 164 ರನ್ ಗಳಿಸಿ ಆಡುತ್ತಿದ್ದರೆ, ಕೊಹ್ಲಿ ಅಜೇಯ 57 ರನ್ ಬಾರಿಸಿ ಕ್ರೀಸ್​ನಲ್ಲಿದ್ದಾರೆ.

IND vs BAN: 11 ವರ್ಷಗಳ ಬಳಿಕ ಏಕದಿನ ಕ್ರಿಕೆಟ್​ನಲ್ಲಿ ವಿಭಿನ್ನ ಪ್ರಯತ್ನಕ್ಕೆ ಕೈಹಾಕಿದ ಟೀಂ ಇಂಡಿಯಾ..!

ಈ ಪಂದ್ಯಕ್ಕೆ ಉಭಯ ತಂಡಗಳು

ಬಾಂಗ್ಲಾದೇಶ ತಂಡ

ಲಿಟ್ಟನ್ ದಾಸ್ (ನಾಯಕ), ಅನಾಮುಲ್ ಹಕ್, ಯಾಸಿರ್ ಅಲಿ, ಶಕೀಬ್ ಅಲ್ ಹಸನ್, ಮುಶ್ಫಿಕರ್ ರಹೀಮ್, ಮಹಮ್ಮದುಲ್ಲಾ, ಅಫೀಫ್ ಹೊಸೈನ್, ಮೆಹದಿ ಹಸನ್, ತಸ್ಕಿನ್ ಅಹ್ಮದ್, ಮುಸ್ತಾಫಿಜುರ್ ರೆಹಮಾನ್, ಎಬಾದತ್ ಹೊಸೈನ್

ಭಾರತ ತಂಡ

ಇಶಾನ್ ಕಿಶನ್, ಕೆಎಲ್ ರಾಹುಲ್ (ನಾಯಕ), ಶಿಖರ್ ಧವನ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ವಾಷಿಂಗ್ಟನ್ ಸುಂದರ್, ಶಾರ್ದೂಲ್ ಠಾಕೂರ್, ದೀಪಕ್ ಚಾಹರ್, ಉಮ್ರಾನ್ ಮಲಿಕ್, ಮೊಹಮ್ಮದ್ ಸಿರಾಜ್, ಕುಲದೀಪ್ ಯಾದವ್

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 1:32 pm, Sat, 10 December 22

ಮ್ಯಾಕ್ಸ್ 25 ದಿನ ಪೂರೈಸಿದ್ದಕ್ಕೆ ಅಭಿಮಾನಿಗಳಿಗೆ ಸುದೀಪ್ ಸ್ಪೆಷಲ್ ವಿಡಿಯೋ
ಮ್ಯಾಕ್ಸ್ 25 ದಿನ ಪೂರೈಸಿದ್ದಕ್ಕೆ ಅಭಿಮಾನಿಗಳಿಗೆ ಸುದೀಪ್ ಸ್ಪೆಷಲ್ ವಿಡಿಯೋ
ಪ್ರಯಾಗ್​ರಾಜ್ ಕುಂಭಮೇಳದ ಹಲವು ಟೆಂಟ್​ಗಳಲ್ಲಿ ಅಗ್ನಿ ಜ್ವಾಲೆ ನರ್ತನ
ಪ್ರಯಾಗ್​ರಾಜ್ ಕುಂಭಮೇಳದ ಹಲವು ಟೆಂಟ್​ಗಳಲ್ಲಿ ಅಗ್ನಿ ಜ್ವಾಲೆ ನರ್ತನ
ನಂಜನಗೂಡು ನಂಜುಂಡೇಶ್ವರನ ಆಶೀರ್ವಾದ ಪಡೆದ ಡಾಲಿ ಧನಂಜಯ್
ನಂಜನಗೂಡು ನಂಜುಂಡೇಶ್ವರನ ಆಶೀರ್ವಾದ ಪಡೆದ ಡಾಲಿ ಧನಂಜಯ್
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ