IND Vs BAN, 3rd ODI: ವೈಟ್​ವಾಶ್ ಸುಳಿಯಲ್ಲಿ ಟೀಂ ಇಂಡಿಯಾ; ಅಂತಿಮ ಪಂದ್ಯದ ಆರಂಭ ಯಾವಾಗ?

IND Vs BAN, 3rd ODI Match Live Streaming: ಸರಣಿಯ ಆರಂಭಕ್ಕೂ ಮುನ್ನ ತಂಡದಲ್ಲಿ 20 ಆಟಗಾರರಿದ್ದರು. ಆದರೆ ಈಗ ಎರಡು ಪಂದ್ಯಗಳ ನಂತರ ಕೇವಲ 14 ಆಟಗಾರರು ಮಾತ್ರ ತಂಡದಲ್ಲಿದ್ದಾರೆ. ಒಂದು ವಾರದೊಳಗೆ ತಂಡದ ಆರು ಆಟಗಾರರು ಗಾಯಗೊಂಡಿದ್ದಾರೆ.

IND Vs BAN, 3rd ODI: ವೈಟ್​ವಾಶ್ ಸುಳಿಯಲ್ಲಿ ಟೀಂ ಇಂಡಿಯಾ; ಅಂತಿಮ ಪಂದ್ಯದ ಆರಂಭ ಯಾವಾಗ?
IND Vs BAN
Follow us
| Updated By: ಪೃಥ್ವಿಶಂಕರ

Updated on:Dec 09, 2022 | 5:45 PM

ಬಾಂಗ್ಲಾದೇಶ ವಿರುದ್ಧ ಏಕದಿನ ಸರಣಿ ಸೋತಿರುವ ಟೀಂ ಇಂಡಿಯಾ (India vs Bangladesh) ಕೊನೆಯ ಏಕದಿನ ಪಂದ್ಯದಲ್ಲಾದರೂ ಗೆಲುವಿನ ಲಯಕ್ಕೆ ಮರಳುತ್ತಾ ಎಂಬುದಕ್ಕೆ ಶನಿವಾರ ಉತ್ತರ ಸಿಗಲಿದೆ. ಉಭಯ ತಂಡಗಳ ನಡುವಿನ ಕೊನೆಯ ಏಕದಿನ ಪಂದ್ಯ ಚಿತ್ತಗಾಂಗ್​ನಲ್ಲಿ (Chittagong) ನಡೆಯಲ್ಲಿದ್ದು, ಬಲಿಷ್ಠ ಭಾರತ ತಂಡವನನ್ನು ವೈಟ್ ವಾಶ್ ಮುಖಭಂಗಕ್ಕೆ ಗುರಿ ಮಾಡಲು ಬಾಂಗ್ಲಾ ಪಡೆ ಹವಣಿಸುತ್ತಿದೆ. ಇತ್ತ ಮೂವರು ಆಟಗಾರರ ಇಂಜುರಿಯೊಂದಿಗೆ ತತ್ತರಿಸಿರುವ ಟೀಂ ಇಂಡಿಯಾ (Team India) ಯಾರನ್ನು ತಂಡದಲ್ಲಿ ಆಡುಸುತ್ತದೆ ಎಂಬುದು ಕೂಡ ದೊಡ್ಡ ಪ್ರಶ್ನೆಯಾಗಿದೆ. ಈಗಾಗಲೇ ಟೂರ್ನಿಯಿಂದ ಹೊರಬಿದ್ದಿರುವ ಖಾಯಂ ನಾಯಕ ರೋಹಿತ್ ಬದಲಿಗೆ ಉಪನಾಯಕ ಕೆಎಲ್ ರಾಹುಲ್ (KL Rahul) ತಂಡದ ನಾಯಕತ್ವವಹಿಸಿಕೊಂಡಿದ್ದು, ಸರಣಿಯನ್ನು ಗೆಲುವಿನೊಂದಿಗೆ ಅಂತ್ಯಗೊಳಿಸಲು ರಾಹುಲ್ ಪ್ರಯತ್ನಿಸಲಿದ್ದಾರೆ.

ಆಟಗಾರರ ಗಾಯ ಮತ್ತು ಫಿಟ್‌ನೆಸ್ ಸಮಸ್ಯೆಗಳಿಂದ ಕಂಗೆಟ್ಟಿರುವ ಭಾರತಕ್ಕೆ ಯಾರನ್ನು ತಂಡದಲ್ಲಿ ಆಡಿಸಬೇಕೆಂಬುದೇ ದೊಡ್ಡ ತಲೆನೋವಾಗಿ ಪರಿಣಮಿಸಿದೆ. ಸರಣಿಯ ಆರಂಭಕ್ಕೂ ಮುನ್ನ ತಂಡದಲ್ಲಿ 20 ಆಟಗಾರರಿದ್ದರು. ಆದರೆ ಈಗ ಎರಡು ಪಂದ್ಯಗಳ ನಂತರ ಕೇವಲ 14 ಆಟಗಾರರು ಮಾತ್ರ ತಂಡದಲ್ಲಿದ್ದಾರೆ. ಒಂದು ವಾರದೊಳಗೆ ತಂಡದ ಆರು ಆಟಗಾರರು ಗಾಯಗೊಂಡಿದ್ದಾರೆ.

ಮಿಂಚಿದ ಅಭಿಮನ್ಯು- ಸೌರಭ್; ಬಾಂಗ್ಲಾ ಎ ಮಣಿಸಿ ಅನಧಿಕೃತ ಟೆಸ್ಟ್ ಸರಣಿ ಗೆದ್ದ ಭಾರತ ಎ ತಂಡ..!

ಪಂದ್ಯದ ಬಗ್ಗೆ ಪೂರ್ಣ ಮಾಹಿತಿ ಇಲ್ಲಿದೆ

ಭಾರತ ಮತ್ತು ಬಾಂಗ್ಲಾದೇಶ ನಡುವಿನ 3ನೇ ಏಕದಿನ ಪಂದ್ಯ ಯಾವಾಗ ನಡೆಯಲಿದೆ?

ಭಾರತ ಮತ್ತು ಬಾಂಗ್ಲಾದೇಶ ನಡುವಿನ ಮೂರನೇ ಏಕದಿನ ಪಂದ್ಯ ಡಿಸೆಂಬರ್ 10 ಶನಿವಾರದಂದು ನಡೆಯಲಿದೆ.

ಭಾರತ ಮತ್ತು ಬಾಂಗ್ಲಾದೇಶ ನಡುವಿನ 3ನೇ ಏಕದಿನ ಪಂದ್ಯ ಎಲ್ಲಿ ನಡೆಯಲಿದೆ?

ಭಾರತ ಮತ್ತು ಬಾಂಗ್ಲಾದೇಶ ನಡುವಿನ ಮೂರನೇ ಏಕದಿನ ಪಂದ್ಯ ಚಿತ್ತಗಾಂಗ್‌ನ ಜಹುರ್ ಅಹ್ಮದ್ ಕ್ರೀಡಾಂಗಣದಲ್ಲಿ ನಡೆಯಲಿದೆ.

ಭಾರತ ಮತ್ತು ಬಾಂಗ್ಲಾದೇಶ ನಡುವಿನ 3ನೇ ಏಕದಿನ ಪಂದ್ಯ ಯಾವಾಗ ಆರಂಭವಾಗಲಿದೆ?

ಭಾರತ ಮತ್ತು ಬಾಂಗ್ಲಾದೇಶ ನಡುವಿನ ಮೂರನೇ ಏಕದಿನ ಪಂದ್ಯ ಬೆಳಗ್ಗೆ 11:30ಕ್ಕೆ ಆರಂಭವಾಗಲಿದ್ದು, ಟಾಸ್ 11 ಗಂಟೆಗೆ ನಡೆಯಲಿದೆ.

ಭಾರತ ಮತ್ತು ಬಾಂಗ್ಲಾದೇಶ ನಡುವಿನ 3 ನೇ ಏಕದಿನ ಪಂದ್ಯದ ನೇರ ಪ್ರಸಾರ ಯಾವ ಚಾನೆಲ್​ನಲ್ಲಿರಲಿದೆ?

ಭಾರತ ಮತ್ತು ಬಾಂಗ್ಲಾದೇಶ ನಡುವಿನ ಮೂರನೇ ಏಕದಿನ ಪಂದ್ಯ ಸೋನಿ ಸ್ಪೋರ್ಟ್ಸ್ ನೆಟ್‌ವರ್ಕ್‌ನಲ್ಲಿ ಪ್ರಸಾರವಾಗಲಿದೆ.

ಮೂರನೇ ಏಕದಿನ ಪಂದ್ಯದ ಲೈವ್ ಸ್ಟ್ರೀಮಿಂಗ್ ಎಲ್ಲಿ ವೀಕ್ಷಿಸಬಹುದು?

ಭಾರತ ಮತ್ತು ಬಾಂಗ್ಲಾದೇಶ ನಡುವಿನ ಮೂರನೇ ಏಕದಿನ ಪಂದ್ಯದ ಲೈವ್ ಸ್ಟ್ರೀಮಿಂಗ್ ಅನ್ನು ಸೋನಿ ಲೈವ್ ಅಪ್ಲಿಕೇಶನ್‌ನಲ್ಲಿ ನೋಡಬಹುದು.

ಉಭಯ ತಂಡಗಳು

ಭಾರತ: ಕೆಎಲ್ ರಾಹುಲ್ (ನಾಯಕ), ಶಿಖರ್ ಧವನ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಇಶಾನ್ ಕಿಶನ್, ಮೊಹಮ್ಮದ್ ಸಿರಾಜ್, ರಜತ್ ಪಾಟಿದಾರ್, ರಾಹುಲ್ ತ್ರಿಪಾಠಿ, ವಾಷಿಂಗ್ಟನ್ ಸುಂದರ್, ಶಹಬಾಜ್ ಅಹ್ಮದ್, ಅಕ್ಷರ್ ಪಟೇಲ್, ಶಾರ್ದೂಲ್ ಠಾಕೂರ್, ಉಮ್ರಾನ್ ಮಲಿಕ್, ಕುಲದೀಪ್ ಯಾದವ್

ಬಾಂಗ್ಲಾದೇಶ: ಲಿಟನ್ ದಾಸ್ (ನಾಯಕ), ಅನಾಮುಲ್ ಹಕ್ ಬಿಜಯ್, ಶಕೀಬ್ ಅಲ್ ಹಸನ್, ಮುಶ್ಫಿಕರ್ ರಹೀಮ್, ಅಫೀಫ್ ಹೊಸೈನ್, ಯಾಸಿರ್ ಅಲಿ ಚೌಧರಿ, ಮೆಹದಿ ಹಸನ್ ಮಿರಾಜ್, ಮುಸ್ತಾಫಿಜುರ್ ರೆಹಮಾನ್, ತಸ್ಕಿನ್ ಅಹ್ಮದ್, ಹಸನ್ ಮಹಮೂದ್, ಇಬಾದತ್ ಹುಸೇನ್ ಅಹ್ಮದ್, ನಜ್ಮುಲ್ ಚೌಧರಿ, ನಜ್ಮುಲ್ ಚೌಧರಿ ಶಾಂಟೋ, ಖಾಜಿ ನೂರುಲ್ ಹಸನ್ ಸೋಹನ್, ಶರೀಫುಲ್ ಇಸ್ಲಾಂ

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 5:34 pm, Fri, 9 December 22

ನೀವು ಏನಾದರೂ ಅಂದುಕೊಳ್ರಿ ನಾನಿರೋದು ಹೀಗೆ: ಶಿವಣ್ಣ
ನೀವು ಏನಾದರೂ ಅಂದುಕೊಳ್ರಿ ನಾನಿರೋದು ಹೀಗೆ: ಶಿವಣ್ಣ
ತುಂಬಿ ಹರಿಯುವ ಹೊಳೆಯಲ್ಲೇ ಗರ್ಭಿಣಿ ಹೆಂಡತಿಯನ್ನು ಹೊತ್ತು ನಡೆದ ಗಂಡ
ತುಂಬಿ ಹರಿಯುವ ಹೊಳೆಯಲ್ಲೇ ಗರ್ಭಿಣಿ ಹೆಂಡತಿಯನ್ನು ಹೊತ್ತು ನಡೆದ ಗಂಡ
ನಾಳೆ ಹಮ್ಮಿಕೊಂಡಿದ್ದ ಚಾಮುಂಡಿ ಚಲೋ ರದ್ದು: ಪ್ರತಾಪ್ ಸಿಂಹ ಹೇಳಿದ್ದಿಷ್ಟು
ನಾಳೆ ಹಮ್ಮಿಕೊಂಡಿದ್ದ ಚಾಮುಂಡಿ ಚಲೋ ರದ್ದು: ಪ್ರತಾಪ್ ಸಿಂಹ ಹೇಳಿದ್ದಿಷ್ಟು
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ
ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ
ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ
ಸ್ಯಾಮ್​ಸಂಗ್ ಎಲೆಕ್ಟ್ರಾನಿಕ್ಸ್ ಹಬ್ಬದ ವಿಶೇಷ ಮಾರಾಟ ಕೊಡುಗೆ ಆರಂಭ
ಸ್ಯಾಮ್​ಸಂಗ್ ಎಲೆಕ್ಟ್ರಾನಿಕ್ಸ್ ಹಬ್ಬದ ವಿಶೇಷ ಮಾರಾಟ ಕೊಡುಗೆ ಆರಂಭ
ಶಿವಣ್ಣ-ಉಪ್ಪಿ ನಟನೆಯ ‘45’ ಚಿತ್ರದ ಸುದ್ದಿಗೋಷ್ಠಿ ಲೈವ್ ನೋಡಿ
ಶಿವಣ್ಣ-ಉಪ್ಪಿ ನಟನೆಯ ‘45’ ಚಿತ್ರದ ಸುದ್ದಿಗೋಷ್ಠಿ ಲೈವ್ ನೋಡಿ