IND vs BAN: ಸಂಜು- ಸೂರ್ಯ ಸಿಡಿಲಬ್ಬರಕ್ಕೆ 133 ರನ್​ಗಳಿಂದ ಸೋತ ಬಾಂಗ್ಲಾದೇಶ

IND vs BAN: ಮೂರನೇ ಟಿ20 ಪಂದ್ಯದಲ್ಲಿ ಬಾಂಗ್ಲಾದೇಶ ಹೀನಾಯ ಸೋಲು ಕಂಡಿದೆ. ಈ ಪಂದ್ಯವನ್ನು ಭಾರತ 133 ರನ್‌ಗಳಿಂದ ಗೆದ್ದಿದೆ. ಈ ಪಂದ್ಯವನ್ನು ಗೆದ್ದು ಟೀಂ ಇಂಡಿಯಾ ಸರಣಿಯನ್ನು ಕ್ಲೀನ್ ಸ್ವೀಪ್ ಮಾಡಿದೆ. ಭಾರತ ನೀಡಿದ 298 ರನ್​ಗಳ ಗುರಿ ಬೆನ್ನತ್ತಿದ ಬಾಂಗ್ಲಾದೇಶ 7 ವಿಕೆಟ್ ಕಳೆದುಕೊಂಡು 164 ರನ್ ಗಳಿಸಲಷ್ಟೇ ಶಕ್ತವಾಯಿತು.

IND vs BAN: ಸಂಜು- ಸೂರ್ಯ ಸಿಡಿಲಬ್ಬರಕ್ಕೆ 133 ರನ್​ಗಳಿಂದ ಸೋತ ಬಾಂಗ್ಲಾದೇಶ
ಟೀಂ ಇಂಡಿಯಾ
Follow us
ಪೃಥ್ವಿಶಂಕರ
|

Updated on:Oct 12, 2024 | 11:05 PM

ಬಾಂಗ್ಲಾದೇಶ ವಿರುದ್ಧದ ಮೂರು ಪಂದ್ಯಗಳ ಟಿ20 ಸರಣಿಯಲ್ಲಿ ಮೊದಲೆರಡು ಪಂದ್ಯಗಳನ್ನು ಗೆದ್ದು ಸರಣಿ ವಶಪಡಿಸಿಕೊಂಡಿದ್ದ ಟೀಂ ಇಂಡಿಯಾ, ಇದೀಗ ಮೂರನೇ ಹಾಗೂ ಕೊನೆಯ ಪಂದ್ಯದಲ್ಲೂ ಬಾಂಗ್ಲಾದೇಶವನ್ನು ಮಣಿಸಿದೆ. ಹೈದರಾಬಾದ್​ನಲ್ಲಿ ನಡೆದ ಈ ಪಂದ್ಯದಲ್ಲಿ ಟೀಂ ಇಂಡಿಯಾ, ಬಾಂಗ್ಲಾದೇಶ ತಂಡವನ್ನು ಬರೋಬ್ಬರಿ 133 ರನ್​ಗಳಿಂದ ಸೋಲಿಸಿದೆ. ಈ ಮೂಲಕ ಮೂರು ಪಂದ್ಯಗಳ ಟಿ20 ಸರಣಿಯನ್ನು ಕ್ಲೀನ್ ಸ್ವೀಪ್ ಮಾಡಿದೆ. ಇತ್ತ ಟೆಸ್ಟ್ ಸರಣಿಯನ್ನೂ 2-0 ಅಂತರದಿಂದ ಕಳೆದುಕೊಂಡಿದ್ದ ಬಾಂಗ್ಲಾದೇಶ ತಂಡಕ್ಕೆ ಭಾರತ ಪ್ರವಾಸದಲ್ಲಿ ಒಂದೇ ಒಂದು ಗೆಲುವು ದಾಖಲಿಸಲು ಸಾಧ್ಯವಾಗಲಿಲ್ಲ. ಭಾರತಕ್ಕೆ ಬರುವ ಮುನ್ನ ಪಾಕಿಸ್ತಾನವನ್ನು ಅವರದ್ದೇ ನೆಲದಲ್ಲಿ ಮಣಿಸಿದ್ದ ಬಾಂಗ್ಲಾ ತಂಡದ ಮೇಲೆ ಸಾಕಷ್ಟು ನಿರೀಕ್ಷೆಗಳನ್ನು ಇಡಲಾಗಿತ್ತು. ಆದರೆ ಭಾರತವನ್ನು ಭಾರತದಲ್ಲಿ ಮಣಿಸಲು ಸಾಧ್ಯವೇ ಇಲ್ಲ ಎಂಬುದನ್ನು ಸಾಭೀತು ಮಾಡುವಲ್ಲಿ ಟೀಂ ಇಂಡಿಯಾ ಯಶಸ್ವಿಯಾಗಿದೆ.

ಅಬ್ಬರಿಸಿದ ಬ್ಯಾಟಿಂಗ್ ವಿಭಾಗ

ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾ 6 ವಿಕೆಟ್ ನಷ್ಟಕ್ಕೆ 297 ರನ್ ಗಳಿಸಿತು. ತಂಡದ ಪರ ಶತಕದ ಇನ್ನಿಂಗ್ಸ್ ಆಡಿದ ಸಂಜು ಸ್ಯಾಮ್ಸನ್ ಗೆಲುವಿನ ರೂವಾರಿಗಳಲ್ಲಿ ಪ್ರಮುಖರಾಗಿದ್ದಾರೆ. ತಮ್ಮ ಇನ್ನಿಂಗ್ಸ್​ನಲ್ಲಿ 111 ರನ್ ಬಾರಿಸಿದ ಸಂಜು ಕೇವಲ 22 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರೆ, ಆ ಬಳಿಕ 40 ಎಸೆತಗಳಲ್ಲಿ ಶತಕ ಸಿಡಿಸಿದರು. ಸಂಜುಗೆ ಸಾಥ್ ನೀಡಿದ ನಾಯಕ ಸೂರ್ಯಕುಮಾರ್ ಯಾದವ್ 35 ಎಸೆತಗಳಲ್ಲಿ 8 ಬೌಂಡರಿ ಹಾಗೂ 5 ಸಿಕ್ಸರ್ ನೆರವಿನಿಂದ 75 ರನ್ ಗಳಿಸಿದರು.

ಕೊನೆಯಲ್ಲಿ ಸ್ಕೋರ್ ಬೋರ್ಡ್​ ವೇಗ ಹೆಚ್ಚಿಸದ ಹಾರ್ದಿಕ್ ಪಾಂಡ್ಯ 18 ಎಸೆತಗಳಲ್ಲಿ 47 ರನ್ ಬಾರಿಸಿದರೆ, ಬ್ಯಾಟಿಂಗ್ ಕ್ರಮಾಂಕದಲ್ಲಿ ಮುಂಬಡ್ತಿ ಪಡೆದು ಬಂದ ರಿಯಾನ್ ಪರಾಗ್ 13 ಎಸೆತಗಳಲ್ಲಿ 34 ರನ್ ಗಳಿಸಿದರು. ಉಳಿದಂತೆ ರಿಂಕು ಸಿಂಗ್ ಔಟಾಗದೆ 8 ರನ್ ಬಾರಿಸಿದರೆ, ಅಭಿಷೇಕ್ ಶರ್ಮಾ 4 ರನ್ ಕೊಡುಗೆ ನೀಡಿದರು. ವಾಷಿಂಗ್ಟನ್ ಸುಂದರ್ 1 ರನ್ ಗಳಿಸಿ ಅಜೇಯರಾಗಿ ಮರಳಿದರು. ಬಾಂಗ್ಲಾದೇಶ ಪರ ತಂಜಿಮ್ ಹಸನ್ ಶಾಕಿಬ್ 3 ವಿಕೆಟ್ ಪಡೆದರೆ, ತಸ್ಕಿನ್ ಅಹ್ಮದ್, ಮುಸ್ತಫಿಜುರ್ ಮತ್ತು ಮಹಮ್ಮದುಲ್ಲಾ ತಲಾ 1 ವಿಕೆಟ್ ಪಡೆದರು.

ತತ್ತರಿಸಿದ ಬಾಂಗ್ಲಾ ಇನ್ನಿಂಗ್ಸ್

ಭಾರತ ನೀಡಿದ 297 ರನ್​ಗಳ ಬೃಹತ್ ಗುರಿಗೆ ಉತ್ತರವಾಗಿ ಬಾಂಗ್ಲಾದೇಶ ನಿಗದಿತ ಓವರ್‌ಗಳಲ್ಲಿ ಏಳು ವಿಕೆಟ್‌ಗೆ 164 ರನ್ ಗಳಿಸಲಷ್ಟೇ ಶಕ್ತವಾಯಿತು. ಬಾಂಗ್ಲಾದೇಶ ಪರ ತೌಹೀದ್ ಹೃದೋಯ್ 42 ಎಸೆತಗಳಲ್ಲಿ 63 ರನ್ ಗಳಿಸಿ ಅಜೇಯರಾಗಿ ಉಳಿದರೆ ಲಿಟ್ಟನ್ ದಾಸ್ 42 ರನ್​​ಗಳ ಕಾಣಿಕೆ ನೀಡಿದರು. ಉಳಿದಂತೆ ಯಾರಿಂದಲೂ ಹೇಳಿಕೊಳ್ಳುವಂತಹ ಪ್ರದರ್ಶನ ಕಂಡುಬರಲಿಲ್ಲ. ಭಾರತದ ಪರ ರವಿ ಬಿಷ್ಣೋಯ್ ಗರಿಷ್ಠ ಮೂರು ವಿಕೆಟ್ ಪಡೆದರೆ, ವೇಗದ ಬೌಲರ್ ಮಯಾಂಕ್ ಯಾದವ್ ಎರಡು ವಿಕೆಟ್ ಪಡೆದರು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:55 pm, Sat, 12 October 24

ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್