IND vs BAN: ಬಾಂಗ್ಲಾ ವಿರುದ್ಧ ತಂಡದಲ್ಲಿ 5 ಬದಲಾವಣೆ ಮಾಡಿದ ರೋಹಿತ್! ಯಾರು ಇನ್, ಯಾರು ಔಟ್?

IND vs BAN: ಏಷ್ಯಾಕಪ್ 2023 ಸೂಪರ್ 4 ಐದನೇ ಪಂದ್ಯ ಭಾರತ ಮತ್ತು ಬಾಂಗ್ಲಾದೇಶ ನಡುವೆ ನಡೆಯುತ್ತಿದೆ. ಕೊಲಂಬೊದ ಆರ್ ಪ್ರೇಮದಾಸ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ಮೊದಲು ಬೌಲಿಂಗ್ ಆಯ್ದುಕೊಂಡಿದೆ.

IND vs BAN: ಬಾಂಗ್ಲಾ ವಿರುದ್ಧ ತಂಡದಲ್ಲಿ 5 ಬದಲಾವಣೆ ಮಾಡಿದ ರೋಹಿತ್! ಯಾರು ಇನ್, ಯಾರು ಔಟ್?
ಟೀಂ ಇಂಡಿಯಾ
Follow us
|

Updated on:Sep 15, 2023 | 3:01 PM

ಏಷ್ಯಾಕಪ್ 2023 (Asia Cup 2023) ಸೂಪರ್ 4 ಐದನೇ ಪಂದ್ಯ ಭಾರತ ಮತ್ತು ಬಾಂಗ್ಲಾದೇಶ (India vs Bangladesh) ನಡುವೆ ನಡೆಯುತ್ತಿದೆ. ಕೊಲಂಬೊದ ಆರ್ ಪ್ರೇಮದಾಸ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ಮೊದಲು ಬೌಲಿಂಗ್ ಆಯ್ದುಕೊಂಡಿದೆ. ಭಾರತ ತಂಡ ಏಷ್ಯಾಕಪ್‌ನ ಫೈನಲ್‌ಗೆ ಅರ್ಹತೆ ಪಡೆದಿದ್ದು, ಬಾಂಗ್ಲಾದೇಶ ತಂಡ ಈಗಾಗಲೇ ಟೂರ್ನಿಯಿಂದ ಹೊರಬಿದ್ದಿದೆ. ಹೀಗಾಗಿ ಉಭಯ ತಂಡಗಳಲ್ಲೂ ಹಲವು ಬದಲಾವಣೆಗಳನ್ನು ಮಾಡಲಾಗಿದೆ.ಟೀಂ ಇಂಡಿಯಾದಲ್ಲಿ (Team India) ಬರೋಬ್ಬರಿ ಐದು ಬದಲಾವಣೆಗಳನ್ನು ಮಾಡಲಾಗಿದ್ದು, ಇತ್ತ ಬಾಂಗ್ಲಾ ತಂಡದಲ್ಲೂ ಯುವ ಆಟಗಾರನಿಗೆ ಚೊಚ್ಚಲ ಅವಕಾಶವನ್ನು ನೀಡಲಾಗುತ್ತಿದೆ.

ಟೀಂ ಇಂಡಿಯಾದಲ್ಲಿ 5 ಬದಲಾವಣೆ

ಬಾಂಗ್ಲಾದೇಶ ವಿರುದ್ಧ ಟಾಸ್ ಗೆದ್ದ ಬಳಿಕ ಮಾತನಾಡಿದ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದರು. ಉಭಯ ತಂಡಗಳ ಆಡುವ ಹನ್ನೊಂದರ ಬಳಗದಲ್ಲಿ ಬದಲಾವಣೆ ಕೂಡ ಕಂಡುಬಂದಿದೆ. ಇದರಡಿಯಲ್ಲಿ ಭಾರತ ತಂಡದಲ್ಲಿ ಐದು ಬದಲಾವಣೆ ಮಾಡಲಾಗಿದ್ದು, ತಿಲಕ್ ವರ್ಮಾ ಭಾರತದ ಪರ ಪಾದಾರ್ಪಣೆ ಮಾಡುತ್ತಿದ್ದಾರೆ. ವಿರಾಟ್ ಕೊಹ್ಲಿ, ಹಾರ್ದಿಕ್ ಪಾಂಡ್ಯ, ಕುಲ್ದೀಪ್ ಯಾದವ್, ಮೊಹಮ್ಮದ್ ಸಿರಾಜ್, ಜಸ್ಪ್ರೀತ್ ಬುಮ್ರಾ ಅವರಿಗೆ ಈ ಪಂದ್ಯದಿಂದ ವಿಶ್ರಾಂತಿ ನೀಡಲಾಗಿದೆ. ಈ ಐವರ ಜಾಗದಲ್ಲಿ ತಿಲಕ್ ವರ್ಮಾ, ಸೂರ್ಯಕುಮಾರ್ ಯಾದವ್, ಮೊಹಮ್ಮದ್ ಶಮಿ, ಪ್ರಸಿದ್ಧ್ ಕೃಷ್ಣ, ಶಾರ್ದೂಲ್ ಠಾಕೂರ್ ಅವಕಾಶ ಪಡೆದಿದ್ದಾರೆ.

Asia cup 2023 India vs Bangladesh Live Score: ಟಾಸ್ ಗೆದ್ದ ಭಾರತ ಬೌಲಿಂಗ್ ಆಯ್ಕೆ

ತಿಲಕ್​ಗೆ ಚೊಚ್ಚಲ ಅವಕಾಶ

ಮೇಲೆ ಹೇಳಿದಂತೆ ಈ ಪಂದ್ಯದಲ್ಲಿ ಟೀಂ ಇಂಡಿಯಾ ಯುವ ಆಟಗಾರ ತಿಲಕ್ ವರ್ಮಾ ಅವರಿಗೆ ಪದಾರ್ಪಣೆ ಮಾಡುವ ಅವಕಾಶ ನೀಡಿದೆ. ಐಪಿಎಲ್‌ನಲ್ಲಿ ಮುಂಬೈ ಇಂಡಿಯನ್ಸ್‌ ಪರ ಅದ್ಭುತ ಪ್ರದರ್ಶನ ನೀಡಿದ್ದ ತಿಲಕ್ ಅವರು ವೆಸ್ಟ್ ಇಂಡೀಸ್ ಪ್ರವಾಸದಲ್ಲಿ ಟಿ20 ಮಾದರಿಗೆ ಪಾದಾರ್ಪಣೆ ಮಾಡಿದ್ದರು. ಸಿಕ್ಕ ಅವಕಾಶವನ್ನು ಸದುಪಯೋಗಪಡಿಸಿಕೊಂಡಿದ್ದ ತಿಲಕ್ ಇದಾದ ಬಳಿಕ ಐರ್ಲೆಂಡ್ ಪ್ರವಾಸಕ್ಕೂ ತೆರಳಿದ್ದರು. ಆ ನಂತರ ಏಷ್ಯಾಕಪ್‌ ತಂಡಕ್ಕೆ ಆಯ್ಕೆಯಾಗಿದ್ದ ತಿಲಕ್ ಇದೀಗ ಏಕದಿನ ಕ್ರಿಕೆಟ್‌ಗೆ ಪದಾರ್ಪಣೆ ಮಾಡುತ್ತಿದ್ದಾರೆ.

ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಶುಭ್​ಮನ್ ಗಿಲ್, ಸೂರ್ಯಕುಮಾರ್ ಯಾದವ್, ತಿಲಕ್ ವರ್ಮಾ, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಇಶಾನ್ ಕಿಶನ್, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಶಾರ್ದೂಲ್ ಠಾಕೂರ್, ಮೊಹಮ್ಮದ್ ಶಮಿ, ಪ್ರಸಿದ್ಧ್ ಕೃಷ್ಣ.

ಬಾಂಗ್ಲಾದೇಶ ತಂಡ: ಶಕೀಬ್ ಅಲ್ ಹಸನ್ (ನಾಯಕ), ತಂಝೀದ್ ಹಸನ್, ತಮೀಮ್ ಇಕ್ಬಾಲ್, ಅನಾಮುಲ್ ಹಕ್, ತೌಹಿತ್ ಹೃದಯ್, ಶಮೀಮ್ ಹೊಸೈನ್, ಮೆಹದಿ ಹಸನ್ ಮಿರಾಜ್, ಮಹೇದಿ ಹಸನ್, ನಸುಮ್ ಅಹ್ಮದ್, ತಂಝೀಮ್ ಹಸನ್ ಶಕೀಬ್, ಮುಸ್ತಫಿಜುರ್ ರಹಮಾನ್.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 2:47 pm, Fri, 15 September 23

ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್
ಬೆಳಗಾವಿಯಲ್ಲಿ ಪ್ರತಿಷ್ಠಾಪಿಸಲಾಗಿದೆ ಹುಣಸೆ ಬೀಜದಿಂದ ತಯಾರಿಸಿದ ಗಣೇಶ
ಬೆಳಗಾವಿಯಲ್ಲಿ ಪ್ರತಿಷ್ಠಾಪಿಸಲಾಗಿದೆ ಹುಣಸೆ ಬೀಜದಿಂದ ತಯಾರಿಸಿದ ಗಣೇಶ
ಸುಬ್ರಹ್ಮಣ್ಯದಲ್ಲಿ ಬ್ಯಾಂಕ್ ಮ್ಯಾನೇಜರ್ ಕರಕೌಶಲದಲ್ಲಿ ಮೂಡಿದ ಗಣಪ!
ಸುಬ್ರಹ್ಮಣ್ಯದಲ್ಲಿ ಬ್ಯಾಂಕ್ ಮ್ಯಾನೇಜರ್ ಕರಕೌಶಲದಲ್ಲಿ ಮೂಡಿದ ಗಣಪ!
ಬರೋಬ್ಬರಿ 111 ಎಸೆತಗಳು... ಕೆಟ್ಟ ರೀತಿಯಲ್ಲಿ ಔಟಾದ ಕೆಎಲ್ ರಾಹುಲ್
ಬರೋಬ್ಬರಿ 111 ಎಸೆತಗಳು... ಕೆಟ್ಟ ರೀತಿಯಲ್ಲಿ ಔಟಾದ ಕೆಎಲ್ ರಾಹುಲ್