ಏಷ್ಯಾಕಪ್ 2023 (Asia Cup 2023) ಸೂಪರ್ 4 ಐದನೇ ಪಂದ್ಯ ಭಾರತ ಮತ್ತು ಬಾಂಗ್ಲಾದೇಶ (India vs Bangladesh) ನಡುವೆ ನಡೆಯುತ್ತಿದೆ. ಕೊಲಂಬೊದ ಆರ್ ಪ್ರೇಮದಾಸ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ಮೊದಲು ಬೌಲಿಂಗ್ ಆಯ್ದುಕೊಂಡಿದೆ. ಭಾರತ ತಂಡ ಏಷ್ಯಾಕಪ್‌ನ ಫೈನಲ್‌ಗೆ ಅರ್ಹತೆ ಪಡೆದಿದ್ದು, ಬಾಂಗ್ಲಾದೇಶ ತಂಡ ಈಗಾಗಲೇ ಟೂರ್ನಿಯಿಂದ ಹೊರಬಿದ್ದಿದೆ. ಹೀಗಾಗಿ ಉಭಯ ತಂಡಗಳಲ್ಲೂ ಹಲವು ಬದಲಾವಣೆಗಳನ್ನು ಮಾಡಲಾಗಿದೆ.ಟೀಂ ಇಂಡಿಯಾದಲ್ಲಿ (Team India) ಬರೋಬ್ಬರಿ ಐದು ಬದಲಾವಣೆಗಳನ್ನು ಮಾಡಲಾಗಿದ್ದು, ಇತ್ತ ಬಾಂಗ್ಲಾ ತಂಡದಲ್ಲೂ ಯುವ ಆಟಗಾರನಿಗೆ ಚೊಚ್ಚಲ ಅವಕಾಶವನ್ನು ನೀಡಲಾಗುತ್ತಿದೆ.
ಬಾಂಗ್ಲಾದೇಶ ವಿರುದ್ಧ ಟಾಸ್ ಗೆದ್ದ ಬಳಿಕ ಮಾತನಾಡಿದ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದರು. ಉಭಯ ತಂಡಗಳ ಆಡುವ ಹನ್ನೊಂದರ ಬಳಗದಲ್ಲಿ ಬದಲಾವಣೆ ಕೂಡ ಕಂಡುಬಂದಿದೆ. ಇದರಡಿಯಲ್ಲಿ ಭಾರತ ತಂಡದಲ್ಲಿ ಐದು ಬದಲಾವಣೆ ಮಾಡಲಾಗಿದ್ದು, ತಿಲಕ್ ವರ್ಮಾ ಭಾರತದ ಪರ ಪಾದಾರ್ಪಣೆ ಮಾಡುತ್ತಿದ್ದಾರೆ. ವಿರಾಟ್ ಕೊಹ್ಲಿ, ಹಾರ್ದಿಕ್ ಪಾಂಡ್ಯ, ಕುಲ್ದೀಪ್ ಯಾದವ್, ಮೊಹಮ್ಮದ್ ಸಿರಾಜ್, ಜಸ್ಪ್ರೀತ್ ಬುಮ್ರಾ ಅವರಿಗೆ ಈ ಪಂದ್ಯದಿಂದ ವಿಶ್ರಾಂತಿ ನೀಡಲಾಗಿದೆ. ಈ ಐವರ ಜಾಗದಲ್ಲಿ ತಿಲಕ್ ವರ್ಮಾ, ಸೂರ್ಯಕುಮಾರ್ ಯಾದವ್, ಮೊಹಮ್ಮದ್ ಶಮಿ, ಪ್ರಸಿದ್ಧ್ ಕೃಷ್ಣ, ಶಾರ್ದೂಲ್ ಠಾಕೂರ್ ಅವಕಾಶ ಪಡೆದಿದ್ದಾರೆ.
Asia cup 2023 India vs Bangladesh Live Score: ಟಾಸ್ ಗೆದ್ದ ಭಾರತ ಬೌಲಿಂಗ್ ಆಯ್ಕೆ
ಮೇಲೆ ಹೇಳಿದಂತೆ ಈ ಪಂದ್ಯದಲ್ಲಿ ಟೀಂ ಇಂಡಿಯಾ ಯುವ ಆಟಗಾರ ತಿಲಕ್ ವರ್ಮಾ ಅವರಿಗೆ ಪದಾರ್ಪಣೆ ಮಾಡುವ ಅವಕಾಶ ನೀಡಿದೆ. ಐಪಿಎಲ್‌ನಲ್ಲಿ ಮುಂಬೈ ಇಂಡಿಯನ್ಸ್ ಪರ ಅದ್ಭುತ ಪ್ರದರ್ಶನ ನೀಡಿದ್ದ ತಿಲಕ್ ಅವರು ವೆಸ್ಟ್ ಇಂಡೀಸ್ ಪ್ರವಾಸದಲ್ಲಿ ಟಿ20 ಮಾದರಿಗೆ ಪಾದಾರ್ಪಣೆ ಮಾಡಿದ್ದರು. ಸಿಕ್ಕ ಅವಕಾಶವನ್ನು ಸದುಪಯೋಗಪಡಿಸಿಕೊಂಡಿದ್ದ ತಿಲಕ್ ಇದಾದ ಬಳಿಕ ಐರ್ಲೆಂಡ್ ಪ್ರವಾಸಕ್ಕೂ ತೆರಳಿದ್ದರು. ಆ ನಂತರ ಏಷ್ಯಾಕಪ್ ತಂಡಕ್ಕೆ ಆಯ್ಕೆಯಾಗಿದ್ದ ತಿಲಕ್ ಇದೀಗ ಏಕದಿನ ಕ್ರಿಕೆಟ್‌ಗೆ ಪದಾರ್ಪಣೆ ಮಾಡುತ್ತಿದ್ದಾರೆ.
All set for his ODI debut! 👌👌
Congratulations to Tilak Varma as he receives his #TeamIndia ODI cap from captain Rohit Sharma 👏 👏#AsiaCup2023 | #INDvBAN pic.twitter.com/kTwSEevAtn
— BCCI (@BCCI) September 15, 2023
🚨 Toss & Team News 🚨
Captain @ImRo45 has won the toss & #TeamIndia have elected to bowl against Bangladesh.
A look at our Playing XI 🔽
Follow the match ▶️ https://t.co/OHhiRDZM6W #AsiaCup2023 | #INDvBAN pic.twitter.com/SD6uyPHud3
— BCCI (@BCCI) September 15, 2023
ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಶುಭ್ಮನ್ ಗಿಲ್, ಸೂರ್ಯಕುಮಾರ್ ಯಾದವ್, ತಿಲಕ್ ವರ್ಮಾ, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಇಶಾನ್ ಕಿಶನ್, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಶಾರ್ದೂಲ್ ಠಾಕೂರ್, ಮೊಹಮ್ಮದ್ ಶಮಿ, ಪ್ರಸಿದ್ಧ್ ಕೃಷ್ಣ.
ಬಾಂಗ್ಲಾದೇಶ ತಂಡ: ಶಕೀಬ್ ಅಲ್ ಹಸನ್ (ನಾಯಕ), ತಂಝೀದ್ ಹಸನ್, ತಮೀಮ್ ಇಕ್ಬಾಲ್, ಅನಾಮುಲ್ ಹಕ್, ತೌಹಿತ್ ಹೃದಯ್, ಶಮೀಮ್ ಹೊಸೈನ್, ಮೆಹದಿ ಹಸನ್ ಮಿರಾಜ್, ಮಹೇದಿ ಹಸನ್, ನಸುಮ್ ಅಹ್ಮದ್, ತಂಝೀಮ್ ಹಸನ್ ಶಕೀಬ್, ಮುಸ್ತಫಿಜುರ್ ರಹಮಾನ್.
ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 2:47 pm, Fri, 15 September 23