ಭಾರತ vs ಬಾಂಗ್ಲಾದೇಶ್ ಟೆಸ್ಟ್: 2ನೇ ದಿನದಾಟ ಮಳೆಗೆ ಆಹುತಿ

India vs Bangladesh 2nd Test: ಕಾನ್ಪುರದಲ್ಲಿ ನಡೆಯುತ್ತಿರುವ ಭಾರತ ಮತ್ತು ಬಾಂಗ್ಲಾದೇಶ್ ನಡುವಣ 2ನೇ ಟೆಸ್ಟ್ ಪಂದ್ಯದಲ್ಲಿ ಟಾಸ್ ಗೆದ್ದಿರುವ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಇನಿಂಗ್ಸ್ ಆರಂಭಿಸಿರುವ ಬಾಂಗ್ಲಾದೇಶ್ ತಂಡವು ಮೊದಲ ದಿನದಾಟದದಲ್ಲಿ 107 ರನ್​ ಕಲೆಹಾಕಿದೆ.

ಭಾರತ vs ಬಾಂಗ್ಲಾದೇಶ್ ಟೆಸ್ಟ್: 2ನೇ ದಿನದಾಟ ಮಳೆಗೆ ಆಹುತಿ
IND vs BAN
Follow us
ಝಾಹಿರ್ ಯೂಸುಫ್
|

Updated on:Sep 28, 2024 | 2:40 PM

ಕಾನ್ಪುರದಲ್ಲಿ ನಡೆಯಬೇಕಿದ್ದ ಭಾರತ ಮತ್ತು ಬಾಂಗ್ಲಾದೇಶ್ ನಡುವಣ 2ನೇ ಟೆಸ್ಟ್ ಪಂದ್ಯದ 2ನೇ ದಿನದಾಟವನ್ನು ಮಳೆಯ ಕಾರಣ ರದ್ದುಗೊಳಿಸಲಾಗಿದೆ. ಶುಕ್ರವಾರ ರಾತ್ರಿಯಿಂದ ಶುರುವಾದ ಮಳೆಯು ಶನಿವಾರ ಮಧ್ಯಾಹ್ನದವರೆಗೂ ಮುಂದುವರೆದಿದೆ. ಇದರಿಂದ ಮೈದಾನವು ಸಂಪೂರ್ಣ ತೇವಾಂಶದಿಂದ ಕೂಡಿದ್ದು, ಹೀಗಾಗಿ 2ನೇ ದಿನದಾಟವನ್ನು ರದ್ದುಗೊಳಿಸಲು ನಿರ್ಧರಿಸಲಾಗಿದೆ.

ಇದಕ್ಕೂ ಮುನ್ನ ಮೊದಲ ದಿನದಾಟ ಕೂಡ ಮಳೆಯ ಕಾರಣ ತಡವಾಗಿ ಶುರುವಾಗಿತ್ತು. ಈ ವೇಳೆ ಟಾಸ್ ಗೆದ್ದ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಇನಿಂಗ್ಸ್ ಆರಂಭಿಸಿದ ಬಾಂಗ್ಲಾದೇಶ್ ತಂಡವು 35 ಓವರ್​ಗಳಲ್ಲಿ 3 ವಿಕೆಟ್ ಕಳೆದುಕೊಂಡು 107 ರನ್ ಕಲೆಹಾಕಿತು. ಈ ವೇಳೆ ಕಾರ್ಮೋಡ ಆವರಿಸಿದ್ದರಿಂದ ಪಂದ್ಯವನ್ನು ಸ್ಥಗಿತಗೊಳಿಸಲಾಯಿತು.

ಇದೀಗ ಎರಡನೇ ದಿನದಾಟವು ಸಂಪೂರ್ಣವಾಗಿ ಮಳೆಗೆ ಅಹುತಿಯಾಗಿದೆ. ಇನ್ನುಳಿದಿರುವುದು ಕೇವಲ ಮೂರು ದಿನದಾಟಗಳು ಮಾತ್ರ. ಆದರೆ ಹವಾಮಾನ ಇಲಾಖೆಯ ವರದಿಯ ಪ್ರಕಾರ ಭಾನುವಾರ ಕೂಡ ಮಳೆ ಮುಂದವರೆಯಲಿದ್ದು, ಹೀಗಾಗಿ 3ನೇ ದಿನದಾಟ ಕೂಡ ಸಂಪೂರ್ಣವಾಗಿ ನಡೆಯುವುದು ಅನುಮಾನ. ಇನ್ನು ನಾಲ್ಕನೇ ಮತ್ತು ಐದನೇ ದಿನದಾಟಗಳಲ್ಲಿ ಫಲಿತಾಂಶ ಮೂಡಿಬರುವ ಸಾಧ್ಯತೆ ತುಂಬಾ ಕಡಿಮೆ. ಹೀಗಾಗಿ 2ನೇ ಟೆಸ್ಟ್ ಪಂದ್ಯವು ಡ್ರಾನಲ್ಲಿ ಅಂತ್ಯಗೊಳ್ಳುವ ಸಾಧ್ಯತೆಯಿದೆ.

ಟೀಮ್ ಇಂಡಿಯಾಗೆ ಟ್ರೋಫಿ:

ಒಂದು ವೇಳೆ ಕಾನ್ಪುರ್ ಟೆಸ್ಟ್ ಪಂದ್ಯವು ಡ್ರಾನಲ್ಲಿ ಕೊನೆಗೊಂಡರೆ ಟೀಮ್ ಇಂಡಿಯಾ ಸರಣಿ ಜಯಿಸಲಿದೆ. ಏಕೆಂದರೆ ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ 280 ರನ್​ಗಳ ಅಮೋಘ ಗೆಲುವು ದಾಖಲಿಸಿದೆ. ಹೀಗಾಗಿ ದ್ವಿತೀಯ ಟೆಸ್ಟ್ ಪಂದ್ಯವು ಡ್ರಾ ಆದರೆ ಭಾರತ ತಂಡವು 1-0 ಅಂತರದಿಂದ ಸರಣಿಯನ್ನು ವಶಪಡಿಸಿಕೊಳ್ಳಲಿದೆ.

ಭಾರತ ಪ್ಲೇಯಿಂಗ್ 11: ಯಶಸ್ವಿ ಜೈಸ್ವಾಲ್, ರೋಹಿತ್ ಶರ್ಮಾ (ನಾಯಕ), ಶುಭ್​ಮನ್ ಗಿಲ್, ವಿರಾಟ್ ಕೊಹ್ಲಿ, ರಿಷಭ್ ಪಂತ್ (ವಿಕೆಟ್ ಕೀಪರ್), ಕೆಎಲ್ ರಾಹುಲ್, ರವೀಂದ್ರ ಜಡೇಜಾ, ರವಿಚಂದ್ರನ್ ಅಶ್ವಿನ್, ಆಕಾಶ್ ದೀಪ್, ಜಸ್​ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್.

ಇದನ್ನೂ ಓದಿ: IPL 2025 ರಲ್ಲಿ ಎಷ್ಟು ಪಂದ್ಯಗಳನ್ನಾಡಲಾಗುತ್ತದೆ? ಇಲ್ಲಿದೆ ಮಾಹಿತಿ

ಬಾಂಗ್ಲಾದೇಶ್ ಪ್ಲೇಯಿಂಗ್​ 11: ಶಾದ್ಮಾನ್ ಇಸ್ಲಾಂ, ಜಾಕಿರ್ ಹಸನ್, ನಜ್ಮುಲ್ ಹೊಸೈನ್ ಶಾಂತೊ (ನಾಯಕ), ಮೊಮಿನುಲ್ ಹಕ್, ಮುಶ್ಫಿಕರ್ ರಹೀಮ್, ಶಕೀಬ್ ಅಲ್ ಹಸನ್, ಲಿಟನ್ ದಾಸ್ (ವಿಕೆಟ್ ಕೀಪರ್), ಮೆಹದಿ ಹಸನ್ ಮಿರಾಝ್, ತೈಜುಲ್ ಇಸ್ಲಾಂ, ಹಸನ್ ಮಹಮೂದ್, ಖಾಲಿದ್ ಅಹ್ಮದ್.

Published On - 2:35 pm, Sat, 28 September 24

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ