IND vs BAN, Asian Games: ಏಷ್ಯನ್ ಗೇಮ್ಸ್ ಸೆಮಿ ಫೈನಲ್: ಟಾಸ್ ಗೆದ್ದ ಭಾರತ ಬೌಲಿಂಗ್ ಆಯ್ಕೆ: ಗೆದ್ದ ತಂಡ ಫೈನಲ್​ಗೆ ಲಗ್ಗೆ

Asian Games Mens T20I 2023: India vs Bangladesh Semi Final 1: ಏಷ್ಯನ್ ಗೇಮ್ಸ್ ಪುರುಷರ ಟಿ20 ಸೆಮಿ ಫೈನಲ್ ಪಂದ್ಯದಲ್ಲಿ ಟಾಸ್ ಗೆದ್ದ ಟೀಮ್ ಇಂಡಿಯಾ ನಾಯಕ ರುತುರಾಜ್ ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಇಂದಿನ ಪಂದ್ಯಕ್ಕೆ ಟೀಮ್ ಇಂಡಿಯಾದಲ್ಲಿ ಒಂದು ಬದಲಾವಣೆ ಮಾಡಲಾಗಿದೆ. ಆವೇಶ್ ಖಾನ್ ಬದಲು ಶಹ್ಬಾಜ್ ಅಹ್ಮದ್ ಸ್ಥಾನ ಪಡೆದುಕೊಂಡಿದ್ದಾರೆ.

IND vs BAN, Asian Games: ಏಷ್ಯನ್ ಗೇಮ್ಸ್ ಸೆಮಿ ಫೈನಲ್: ಟಾಸ್ ಗೆದ್ದ ಭಾರತ ಬೌಲಿಂಗ್ ಆಯ್ಕೆ: ಗೆದ್ದ ತಂಡ ಫೈನಲ್​ಗೆ ಲಗ್ಗೆ
IND vs BAN Asian Games
Follow us
Vinay Bhat
|

Updated on: Oct 06, 2023 | 6:46 AM

ಚೀನಾದ ಹ್ಯಾಂಗ್‌ಝೌನಲ್ಲಿ ನಡೆಯುತ್ತಿರುವ ಏಷ್ಯನ್ ಗೇಮ್ಸ್​ನಲ್ಲಿ ಭಾರತ ಅತ್ಯುತ್ತಮ ಪ್ರದರ್ಶನ ತೋರುತ್ತಿದ್ದು, ಪದಕಗಳ ಸಂಖ್ಯೆ ನೂರರತ್ತ ತಲುಪುತ್ತಿದೆ. ಇದರ ನಡುವೆ ಪಿಂಗ್​ಫೆಂಗ್ ಕ್ಯಾಂಪಸ್ ಕ್ರಿಕೆಟ್ ಫೀಲ್ಡ್​ನಲ್ಲಿ ಏಷ್ಯನ್ ಗೇಮ್ಸ್ (Asian Games 2023) ಪುರುಷರ ಟಿ20 ಸೆಮಿ ಫೈನಲ್ ಪಂದ್ಯ ನಡೆಯುತ್ತಿದ್ದು ರುತುರಾಜ್ ಗಾಯಕ್ವಾಡ್ ನಾಯಕತ್ವದ ಭಾರತ ತಂಡ ಸೈಫ್ ಹಸನ್ ನೇತೃತ್ವದ ಬಾಂಗ್ಲಾದೇಶ ತಂಡವನ್ನು ಎದುರಿಸುತ್ತಿದೆ. ಈಗಾಗಲೇ ಟಾಸ್ ಗೆದ್ದ ಟೀಮ್ ಇಂಡಿಯಾ ನಾಯಕ ರುತುರಾಜ್ ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ.

ಇಂದಿನ ಪಂದ್ಯಕ್ಕೆ ಟೀಮ್ ಇಂಡಿಯಾದಲ್ಲಿ ಒಂದು ಬದಲಾವಣೆ ಮಾಡಲಾಗಿದೆ. ಆವೇಶ್ ಖಾನ್ ಬದಲು ಶಹ್ಬಾಜ್ ಅಹ್ಮದ್ ಸ್ಥಾನ ಪಡೆದುಕೊಂಡಿದ್ದಾರೆ. ಈ ಮೂಲಕ ಶಹ್ಬಾಜ್ ಅಂತರರಾಷ್ಟ್ರೀಯ ಟಿ20 ಕ್ರಿಕೆಟ್​ಗೆ ಪದಾರ್ಪಣೆ ಮಾಡಿದ್ದಾರೆ. ಉಳಿದಂತೆ ಓಪನರ್​ಗಳಾಗಿ ರುತುರಾಜ್ ಮತ್ತು ಯಶಸ್ವಿ ಜೈಸ್ವಾಲ್ ಇದ್ದರೆ ನಂತರದಲ್ಲಿ ತಿಲಕ್ ವರ್ಮಾ, ಜಿತೇಶ್ ಶರ್ಮಾ, ರಿಂಕು ಸಿಂಗ್ ಇದ್ದಾರೆ. ಆಲ್ರೌಂಡರ್​ಗಳಾಗಿ ಶಿವಂ ದುಬೆ ಹಾಗೂ ವಾಷಿಂಗ್ಟನ್ ಸುಂದರ್ ಕಾಣಿಸಿಕೊಂಡಿದ್ದಾರೆ. ಬಿಷ್ಟೋಯಿ, ಸಾಯಿ ಕಿಶೋರ್ ಹಾಗೂ ಅರ್ಶ್​ದೀಪ್ ಸಿಂಗ್ ಪ್ರಮುಖ ಬೌಲರ್​ಗಳಾಗಿದ್ದಾರೆ.

ವಿಶ್ವ ಚಾಂಪಿಯನ್ನರಿಗೆ ಮುಖಭಂಗ: ನ್ಯೂಝಿಲೆಂಡ್​ಗೆ ಭರ್ಜರಿ ಜಯ

ಇದನ್ನೂ ಓದಿ
Image
ಇಂಗ್ಲೆಂಡ್ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿ ದಾಖಲೆ ಬರೆದ ಕನ್ನಡಿಗ..!
Image
ವಿಶ್ವಕಪ್​ನ ಮೊದಲ ಪಂದ್ಯದಲ್ಲೇ ಹೊಸ ವಿಶ್ವ ದಾಖಲೆ ಬರೆದ ಇಂಗ್ಲೆಂಡ್
Image
ಶಾಹೀನ್ ಅಫ್ರಿದಿ ಅನ್​ ಫಿಟ್​: ಪಾಕ್ ತಂಡಕ್ಕೆ ಹೊಸ ಚಿಂತೆ ಶುರು..!
Image
ಭಾರತದ ಆತಿಥ್ಯವನ್ನು ಹಾಡಿ ಹೊಗಳಿದ ಪಾಕ್ ನಾಯಕ ಬಾಬರ್

ಇಂದಿನ ಪಂದ್ಯದಲ್ಲಿ ಗೆದ್ದ ತಂಡ ನೇರವಾಗಿ ಫೈನಲ್​ಗೆ ಪ್ರವೇಶ ಪಡೆಯಲಿದೆ. ಇದರ ಮೂಲಕ ಒಂದು ಪದಕ ಖಚಿತ ಪಡಿಸಿಕೊಳ್ಳುತ್ತದೆ. ಸೋತ ತಂಡ ಸೆಮಿ ಫೈನಲ್-2 ನಲ್ಲಿ ಸೋತ ತಂಡದ ವಿರುದ್ಧ ಕಂಚಿನ ಪದಕಕ್ಕಾಗಿ ಹೋರಾಟ ನಡೆಸಲಿದೆ. ಭಾರತ ತಂಡ ಕ್ವಾರ್ಟರ್ ಫೈನಲ್​ನಿಂದ ತನ್ನ ಅಭಿಯಾನ ಶುರು ಮಾಡಿತ್ತು. ಇಲ್ಲಿ ನೇಪಾಳ ವಿರುದ್ಧ ಬೊಂಬಾಟ್ ಪ್ರದರ್ಶನ ತೋರಿತ್ತು. ಯಶಸ್ವಿ ಜೈಸ್ವಾಲ್ ಶತಕ ಸಿಡಿಸಿ ಇತಿಹಾಸ ಸೃಷ್ಟಿಸಿದ್ದರೆ ರಿಂಕು ಸಿಂಗ್ ಪಂದ್ಯವನ್ನು ಅತ್ಯುತ್ತಮವಾಗಿ ಫಿನಿಶ್ ಮಾಡಿದ್ದರು. ರವಿ ಬಿಷ್ಟೋಯಿ ಬೌಲಿಂಗ್​ನಲ್ಲಿ ಮಿಂಚಿದ್ದರು.

ಭಾರತ ಪ್ಲೇಯಿಂಗ್ ಇಲೆವೆನ್: ರುತುರಾಜ್ ಗಾಯಕ್ವಾಡ್ (ನಾಯಕ) , ಯಶಸ್ವಿ ಜೈಸ್ವಾಲ್ , ತಿಲಕ್ ವರ್ಮಾ , ಜಿತೇಶ್ ಶರ್ಮಾ ( ವಿಕೆಟ್ ಕೀಪರ್ ) , ರಿಂಕು ಸಿಂಗ್ , ಶಿವಂ ದುಬೆ , ವಾಷಿಂಗ್ಟನ್ ಸುಂದರ್ , ಶಜ್ಬಾಜ್ ಅಹ್ಮದ್, ರವಿಶ್ರೀನಿವಾಸನ್ ಸಾಯಿ ಕಿಶೋರ್ , ರವಿ ಬಿಷ್ಣೋಯ್ , ಅರ್ಷ್​ದೀಪ್ ಸಿಂಗ್.

ಬಾಂಗ್ಲಾದೇಶ ಪ್ಲೇಯಿಂಗ್ XI: ಪರ್ವೇಜ್ ಹೊಸೈನ್ ಎಮನ್, ಮೊಹಮ್ಮದುಲ್ ಹಸನ್ ಜಾಯ್, ಜಾಕಿರ್ ಹಸನ್, ಸೈಫ್ ಹಸನ್ (ನಾಯಕ), ಅಫೀಫ್ ಹೊಸೈನ್, ಶಹದತ್ ಹೊಸೈನ್, ಜೇಕರ್ ಅಲಿ (ವಿಕೆಟ್ ಕೀಪರ್), ರಾಕಿಬುಲ್ ಹಸನ್, ಹಸನ್ ಮುರಾದ್, ಮೃತುಂಜಯ್ ಚೌಧುರಿ, ರಿಪಾನ್ ಮೊಂಡೋಲ್.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ