
ಟಿ20 ವಿಶ್ವಕಪ್ನ (T20 World Cup 2024) ಸೂಪರ್ 8 ಹಂತದಲ್ಲಿ ಇಂದು ಭಾರತ, ಬಾಂಗ್ಲಾದೇಶವನ್ನು (IND vs BAN) ಎದುರಿಸುತ್ತಿದೆ. ಭಾರತ ತಂಡವು ಗೆಲುವಿನ ಅಭಿಯಾನವನ್ನು ಮುಂದುವರಿಸುವ ಮೂಲಕ ಸೆಮಿಫೈನಲ್‌ಗೆ ತನ್ನ ಹಕ್ಕನ್ನು ಬಲಪಡಿಸಲು ಪ್ರಯತ್ನಿಸಿದರೆ, ಇತ್ತ ಬಾಂಗ್ಲಾದೇಶ ತಂಡಕ್ಕೆ ಇದು ಮಾಡು ಇಲ್ಲವೇ ಮಡಿ ಪಂದ್ಯವಾಗಿದೆ. ಏಕೆಂದರೆ ಬಾಂಗ್ಲಾ ತಂಡ ಈ ಸುತ್ತಿನಲ್ಲಿ ಈಗಾಗಲೇ ಒಂದು ಪಂದ್ಯವನ್ನು ಸೋತಿರುವುದರಿಂದ, ಈ ಪಂದ್ಯದಲ್ಲಿ ಬಾಂಗ್ಲಾ ತಂಡ ಮತ್ತೊಂದು ಸೋಲು ಕಂಡರೆ ಅದು ಬಹುತೇಕ ಟಿ20 ವಿಶ್ವಕಪ್ನಿಂದ ಹೊರಬೀಳಲಿದೆ. ಹೀಗಾಗಿ ಸೆಮಿಫೈನಲ್ ದೃಷ್ಟಿಯಿಂದ ಎರಡೂ ತಂಡಗಳಿಗು ಇದು ಮಹತ್ವದ ಪಂದ್ಯವಾಗಿದೆ. ಇನ್ನು ಈ ಪಂದ್ಯದ ಟಾಸ್ ಕೂಡ ಮುಗಿದಿದ್ದು, ಪಂದ್ಯದಲ್ಲಿ ಬಾಂಗ್ಲಾದೇಶದ ನಾಯಕ ನಜ್ಮುಲ್ ಹೊಸೈನ್ ಶಾಂಟೊ ಟಾಸ್ ಗೆದ್ದು ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದ್ದಾರೆ. ಇದಲ್ಲದೆ ಎರಡು ತಂಡಗಳ ಪ್ಲೇಯಿಂಗ್ 11 ಕೂಡ ಖಚಿತವಾಗಿದೆ.ಅದರಂತೆ ಬಾಂಗ್ಲಾ ತಂಡದಲ್ಲಿ 1 ಬದಲಾವಣೆಯಾಗಿದ್ದರೆ, ಟೀಂ ಇಂಡಿಯಾ ತನ್ನ ಗೆಲುವಿನ ಸಂಯೋಜನೆಯನ್ನು ಮುಂದುವರೆಸುತ್ತಿದೆ. ಅಂದರೆ ಭಾರತ ತಂಡದಲ್ಲಿ ಯಾವುದೇ ಬದಲಾವಣೆ ಇಲ್ಲ.
ಟಿ20 ವಿಶ್ವಕಪ್‌ನಲ್ಲಿ ಬಾಂಗ್ಲಾದೇಶ ವಿರುದ್ಧ ಟೀಂ ಇಂಡಿಯಾ ಯಾವಾಗಲೂ ಮೇಲುಗೈ ಸಾಧಿಸಿದೆ. ಬಾಂಗ್ಲಾದೇಶ ತಂಡ ಭಾರತದ ವಿರುದ್ಧ ಒಂದು ಪಂದ್ಯವನ್ನೂ ಗೆಲ್ಲಲು ಸಾಧ್ಯವಾಗಿಲ್ಲ. ಉಭಯ ತಂಡಗಳ ನಡುವೆ 4 ಪಂದ್ಯಗಳು ನಡೆದಿದ್ದು, ಭಾರತ ತಂಡ ಎಲ್ಲವನ್ನು ಗೆದ್ದಿದೆ. ಇದೀಗ ಎರಡೂ ತಂಡಗಳು ಆ್ಯಂಟಿಗುವಾದಲ್ಲಿ ಐದನೇ ಬಾರಿ ಮುಖಾಮುಖಿಯಾಗಲಿವೆ.
ಭಾರತ ಮತ್ತು ಬಾಂಗ್ಲಾದೇಶ ಟಿ20 ಕ್ರಿಕೆಟ್‌ನಲ್ಲಿ ಇದುವರೆಗೆ 13 ಬಾರಿ ಮುಖಾಮುಖಿಯಾಗಿದ್ದು, ಬಾಂಗ್ಲಾದೇಶ ಕೇವಲ ಒಂದು ಬಾರಿ ಮಾತ್ರ ಗೆದ್ದಿದೆ. ಅಂದರೆ ಟೀಂ ಇಂಡಿಯಾ 12 ಬಾರಿ ನೆರೆಯ ತಂಡವನ್ನು ಸೋಲಿಸಿದೆ. ಇನ್ನು 14ನೇ ಪಂದ್ಯದಲ್ಲಿ ಯಾರು ಗೆಲ್ಲುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ.
India vs Bangladesh T20 WC Live Score: ಟಾಸ್ ಗೆದ್ದ ಬಾಂಗ್ಲಾ; ಭಾರತ ಬ್ಯಾಟಿಂಗ್
ಬಾಂಗ್ಲಾದೇಶ: ತಂಝಿದ್ ಹಸನ್, ಲಿಟನ್ ದಾಸ್ (ವಿಕೆಟ್ ಕೀಪರ್), ನಜ್ಮುಲ್ ಹೊಸೈನ್ ಶಾಂಟೊ (ನಾಯಕ), ತೌಹೀದ್ ಹೃದೋಯ್, ಶಕೀಬ್ ಅಲ್ ಹಸನ್, ಮಹಮ್ಮದುಲ್ಲಾ, ಜಾಕಿರ್ ಅಲಿ, ರಶೀದ್ ಹೊಸೈನ್, ಮೆಹದಿ ಹಸನ್, ತಂಝೀಮ್ ಹಸನ್ ಶಕೀಬ್, ಮುಸ್ತಫಿಜುರ್ ರಹಮಾನ್.
ಭಾರತ: ರೋಹಿತ್ ಶರ್ಮಾ (ನಾಯಕ), ವಿರಾಟ್ ಕೊಹ್ಲಿ, ರಿಷಭ್ ಪಂತ್ (ವಿಕೆಟ್ ಕೀಪರ್), ಸೂರ್ಯಕುಮಾರ್ ಯಾದವ್, ಶಿವಂ ದುಬೆ, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಅರ್ಷದೀಪ್ ಸಿಂಗ್, ಕುಲ್ದೀಪ್ ಯಾದವ್, ಜಸ್ಪ್ರೀತ್ ಬುಮ್ರಾ.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 7:40 pm, Sat, 22 June 24