IND vs BAN: ಬಾಂಗ್ಲಾ ಬೌಲರ್​ಗಳ ಬೆಂಡೆತ್ತಿ 6ನೇ ಟೆಸ್ಟ್ ಶತಕ ಸಿಡಿಸಿದ ಆರ್. ಅಶ್ವಿನ್..!

R Ashwin: ಚೆನ್ನೈನಲ್ಲಿ ನಡೆಯುತ್ತಿರುವ ಬಾಂಗ್ಲಾದೇಶ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ 8ನೇ ಕ್ರಮಾಂಕದಲ್ಲಿ ಬ್ಯಾಟಿಂಗ್​ಗೆ ಇಳಿದ ಆರ್​. ಅಶ್ವಿನ್ ತವರು ನೆಲದಲ್ಲಿ ಅಮೋಘ ಬ್ಯಾಟಿಂಗ್ ಪ್ರದರ್ಶಿಸಿ ತಮ್ಮ ಟೆಸ್ಟ್ ವೃತ್ತಿ ಜೀವನದ 6ನೇ ಶತಕವನ್ನು ಕೇವಲ 108 ಎಸೆತಗಳಲ್ಲಿ ಪೂರೈಸಿದರು.

IND vs BAN: ಬಾಂಗ್ಲಾ ಬೌಲರ್​ಗಳ ಬೆಂಡೆತ್ತಿ 6ನೇ ಟೆಸ್ಟ್ ಶತಕ ಸಿಡಿಸಿದ ಆರ್. ಅಶ್ವಿನ್..!
ಆರ್​. ಅಶ್ವಿನ್
Follow us
ಪೃಥ್ವಿಶಂಕರ
|

Updated on:Sep 19, 2024 | 5:41 PM

ಬಾಂಗ್ಲಾದೇಶ ವಿರುದ್ಧ ಚೆನ್ನೈನಲ್ಲಿ ನಡೆಯುತ್ತಿರುವ ಮೊದಲ ಟೆಸ್ಟ್‌ನ ಮೊದಲ ಇನ್ನಿಂಗ್ಸ್‌ನಲ್ಲಿ ಒಂದೆಡೆ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಶುಭ್​ಮನ್ ಗಿಲ್ ಅವರಂತಹ ಬ್ಯಾಟ್ಸ್‌ಮನ್‌ಗಳು 10 ಓವರ್‌ಗಳೊಳಗೆ ಪೆವಿಲಿಯನ್‌ ಸೇರಿಕೊಂಡರೆ, ಮತ್ತೊಂದೆಡೆ 8ನೇ ಕ್ರಮಾಂಕದಲ್ಲಿ ಬ್ಯಾಟಿಂಗ್‌ಗೆ ಬಂದ ಆರ್.ಅಶ್ವಿನ್, ಬಾಂಗ್ಲಾ ಬೌಲರ್​ಗಳ ಬೆವರಿಳಿಸಿ ಅದ್ಭುತ ಶತಕ ಸಿಡಿಸಿ ಮಿಂಚಿದ್ದಾರೆ. ತಂಡ ಸಂಕಷ್ಟದಲ್ಲಿದ್ದಾಗ 8ನೇ ಕ್ರಮಾಂಕದಲ್ಲಿ ಕ್ರೀಸ್​ಗೆ ಬಂದ ಅಶ್ವಿನ್, ಜಡೇಜಾ ಜೊತೆ ಉತ್ತಮ ಜೊತೆಯಾಟ ಕಟ್ಟಿದರು. ಹಾಗೆಯೇ ತಂಡದ ಇನ್ನಿಂಗ್ಸ್​ಗೆ ವೇಗ ನೀಡಿದ ಅಶ್ವಿನ್ ಅಮೋಘವಾಗಿ ಬ್ಯಾಟ್ ಬೀಸುವ ಮೂಲಕ ಶತಕ ಸಿಡಿಸಿ ಮಿಂಚಿದರು. ಕೇವಲ 108 ಎಸೆತಗಳಲ್ಲಿ ತಮ್ಮ 6ನೇ ಟೆಸ್ಟ್ ಶತಕವನ್ನು ಪೂರೈಸಿದ ಅಶ್ವಿನ್​ಗೆ ತವರು ನೆಲದಲ್ಲಿ ಇದು ಎರಡನೇ ಶತಕವಾಗಿದೆ.

15 ಫೆಬ್ರವರಿ 2021 ರಂದು ಇಂಗ್ಲೆಂಡ್ ವಿರುದ್ಧ ತಮ್ಮ ಕೊನೆಯ ಟೆಸ್ಟ್ ಶತಕವನ್ನು ಬಾರಿಸಿದ್ದ ಅಶ್ವಿನ್ ಇದೀಗ ಬರೋಬ್ಬರಿ 1312 ದಿನಗಳ ನಂತರ ಮತ್ತೊಮ್ಮೆ ಚೆನ್ನೈನಲ್ಲಿ ಶತಕದ ಇನ್ನಿಂಗ್ಸ್ ಕಟ್ಟಿದ್ದಾರೆ. ತಮ್ಮ ಇನ್ನಿಂಗ್ಸ್​ನಲ್ಲಿ ಇದುವರೆಗೆ 112 ಎಸೆತಗಳನ್ನು ಎದುರಿಸಿರುವ ಅಶ್ವಿನ್, 10 ಬೌಂಡರಿ ಹಾಗೂ 2 ಬೌಂಡರಿ ಸಹಿತ ಅಜೇಯ 102 ರನ್ ಕಲೆಹಾಕಿದ್ದಾರೆ. ಇನ್ನು ಎರಡನೇ ದಿನದಾಟದಲ್ಲಿ ಅಶ್ವಿನ್ ತಮ್ಮ ಇನ್ನಿಂಗ್ಸ್ ಅನ್ನು ಎಲ್ಲಿಯವರೆಗೆ ಕೊಂಡೊಯ್ಯುತ್ತಾರೆ ಎಂಬುದನ್ನು ಕಾದುನೋಡಬೇಕಿದೆ.

ಚೆನ್ನೈನಲ್ಲಿ ಅಶ್ವಿನ್ ಶತಕ

ಆರ್. ಅಶ್ವಿನ್ ಕ್ರೀಸ್​ಗೆ ಕಾಲಿಟ್ಟಾಗ ತಂಡದ 6 ಪ್ರಮುಖ ಬ್ಯಾಟ್ಸ್​ಮನ್​ಗಳು ಪೆವಿಲಿಯನ್ ಸೇರಿಕೊಂಡಿದ್ದರು. ರೋಹಿತ್, ವಿರಾಟ್, ಶುಭ್​ಮನ್, ಪಂತ್, ಜೈಸ್ವಾಲ್, ರಾಹುಲ್ ಅವರ ವಿಕೆಟ್ ಪತನಗೊಂಡಿತ್ತು. ಹೀಗಾಗಿ ಟೀಂ ಇಂಡಿಯಾ 200ರ ಗಡಿ ದಾಟಲು ಸಾಧ್ಯವೇ ಇಲ್ಲ ಅನ್ನಿಸಿತು. ಆದರೆ 8ನೇ ಕ್ರಮಾಂಕದಲ್ಲಿ ಬಂದ ಅಶ್ವಿನ್ ಕ್ರೀಸ್​ಗೆ ಬಂದ ಕೂಡಲೇ ಎರಡೆರಡು ಬೌಂಡರಿ ಬಾರಿಸಿ, ಬಾಂಗ್ಲಾ ಬೌಲರ್​ಗಳಿಗೆ ಈ ದಿನ ನನ್ನದು ಎಂಬ ಸುಳಿವು ನೀಡಿದರು. ಆ ನಂತರ ಕೇವಲ 58 ಎಸೆತಗಳಲ್ಲಿ ತಮ್ಮ ಅರ್ಧಶತಕ ಪೂರೈಸಿದ ಅಶ್ವಿನ್ ಇಲ್ಲಿಗೆ ನಿಲ್ಲದೆ ಮುಂದಿನ 50 ಎಸೆತಗಳಲ್ಲಿ ತಮ್ಮ ಶತಕವನ್ನು ಪೂರೈಸಿದರು. ಈ ವೇಳೆ ಅಶ್ವಿನ್​ ಜಡೇಜಾ ಜೊತೆಗೆ ದಾಖಲೆಯ ಜೊತೆಯಾಟವನ್ನು ಮಾಡಿದರು.

ಶತಕದ ‘ಸಿಕ್ಸ್’ ಬಾರಿಸಿದ ಅಶ್ವಿನ್

2011ರಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ತಮ್ಮ ಚೊಚ್ಚಲ ಶತಕ ಬಾರಿಸಿದ್ದ ಅಶ್ವಿನ್, ಇದಾದ ಬಳಿಕ 2013ರಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ಮತ್ತೊಮ್ಮೆ ಶತಕ ಸಿಡಿಸಿದ್ದರು. ನಂತರ 2016ರಲ್ಲಿ ಮತ್ತೊಮ್ಮೆ ವೆಸ್ಟ್ ಇಂಡೀಸ್ ವಿರುದ್ಧವೇ ಶತಕದ ಇನ್ನಿಂಗ್ಸ್ ಆಡಿದ್ದ ಅಶ್ವಿನ್​ಗೆ ಅದು ಮೂರನೇ ಟೆಸ್ಟ್ ಶತಕವಾಗಿದ್ದರೆ, ವಿದೇಶಿ ನೆಲದಲ್ಲಿ ಮೊದಲ ಶತಕವಾಗಿತ್ತು. ಅದೇ ಟೆಸ್ಟ್ ಸರಣಿಯಲ್ಲಿ ಅಶ್ವಿನ್ ತಮ್ಮ ನಾಲ್ಕನೇ ಶತಕವನ್ನು ಪೂರ್ಣಗೊಳಿಸಿದ್ದರು. ನಂತರ 2021ರಲ್ಲಿ ಇಂಗ್ಲೆಂಡ್ ವಿರುದ್ಧ ಶತಕ ಸಿಡಿಸಿದ್ದ ಅಶ್ವಿನ್ ಇದೀಗ ಬಾಂಗ್ಲಾದೇಶ ವಿರುದ್ಧ ಶತಕ ಸಿಡಿಸಿದ್ದಾರೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:55 pm, Thu, 19 September 24

ಮಂತ್ರಾಲಯ ಸಂಸ್ಕೃತ ಶಾಲೆ ವಿದ್ಯಾರ್ಥಿಗಳು ಸಾವು: ಅಪಘಾತಕ್ಕೆ ಕಾರಣವೇನು?
ಮಂತ್ರಾಲಯ ಸಂಸ್ಕೃತ ಶಾಲೆ ವಿದ್ಯಾರ್ಥಿಗಳು ಸಾವು: ಅಪಘಾತಕ್ಕೆ ಕಾರಣವೇನು?
ಒಬ್ಬನಿಗೆ ಮದುವೆಯಾಗಿ ಕೇವಲ 4 ತಿಂಗಳಾಗಿತ್ತು, ಮತ್ತೊಬ್ಬನ ಪತ್ನಿ ಗರ್ಭಿಣಿ!
ಒಬ್ಬನಿಗೆ ಮದುವೆಯಾಗಿ ಕೇವಲ 4 ತಿಂಗಳಾಗಿತ್ತು, ಮತ್ತೊಬ್ಬನ ಪತ್ನಿ ಗರ್ಭಿಣಿ!
ಜಿಟಿಡಿ ಹೇಳಿದ ಧಮ್ ಮಾತಿಗೆ ಬಿಜೆಪಿ ನಾಯಕ ರವಿ ಪ್ರತಿಕ್ರಿಯೆ ನೀಡಲಿಲ್ಲ
ಜಿಟಿಡಿ ಹೇಳಿದ ಧಮ್ ಮಾತಿಗೆ ಬಿಜೆಪಿ ನಾಯಕ ರವಿ ಪ್ರತಿಕ್ರಿಯೆ ನೀಡಲಿಲ್ಲ
ಬಿಗ್​ಬಾಸ್ ಮನೆಯಲ್ಲಿ ರಾಜಿ ಸಂಧಾನ, ದೂರಾದವರು ಒಂದಾದರೇ?
ಬಿಗ್​ಬಾಸ್ ಮನೆಯಲ್ಲಿ ರಾಜಿ ಸಂಧಾನ, ದೂರಾದವರು ಒಂದಾದರೇ?
ಮಡಿದವರು ಶಿಗ್ಗಾವಿ ಕ್ಷೇತ್ರದ ಸವಣೂರು ತಾಲ್ಲೂಕಿನ ತರಕಾರಿ ವ್ಯಾಪಾರಸ್ಥರು
ಮಡಿದವರು ಶಿಗ್ಗಾವಿ ಕ್ಷೇತ್ರದ ಸವಣೂರು ತಾಲ್ಲೂಕಿನ ತರಕಾರಿ ವ್ಯಾಪಾರಸ್ಥರು
ಬಾಗಲಕೋಟೆಯಲ್ಲಿ ಎದೆ ಝಲ್​ ಎನಿಸುವ ಟ್ಯ್ರಾಕ್ಟರ್​ ರೇಸ್​: ವಿಡಿಯೋ ನೋಡಿ
ಬಾಗಲಕೋಟೆಯಲ್ಲಿ ಎದೆ ಝಲ್​ ಎನಿಸುವ ಟ್ಯ್ರಾಕ್ಟರ್​ ರೇಸ್​: ವಿಡಿಯೋ ನೋಡಿ
ಬೇರೆ ಪಕ್ಷಗಳ ಕಾರ್ಯಕ್ರಮದಲ್ಲಿ ನಾನು ಭಾಗಿಯಾಗಿಲ್ಲ: ಜಿಟಿ ದೇವೇಗೌಡ
ಬೇರೆ ಪಕ್ಷಗಳ ಕಾರ್ಯಕ್ರಮದಲ್ಲಿ ನಾನು ಭಾಗಿಯಾಗಿಲ್ಲ: ಜಿಟಿ ದೇವೇಗೌಡ
ಶಿಲೆಸಿಕ್ಕ ಜಮೀನಲ್ಲಿ ಭವ್ಯ ರಾಮಮಂದಿರ ನಿರ್ಮಿಸಲು ಸ್ಥಳೀಯರ ಆಗ್ರಹ
ಶಿಲೆಸಿಕ್ಕ ಜಮೀನಲ್ಲಿ ಭವ್ಯ ರಾಮಮಂದಿರ ನಿರ್ಮಿಸಲು ಸ್ಥಳೀಯರ ಆಗ್ರಹ
ಮೇಲ್ಸೇತುವೆಯಲ್ಲಿ ಚಲಿಸುತ್ತಿದ್ದಾಗ ರೈಲಿನಿಂದ ಕೆಳಗೆ ಜಿಗಿದ ವ್ಯಕ್ತಿ
ಮೇಲ್ಸೇತುವೆಯಲ್ಲಿ ಚಲಿಸುತ್ತಿದ್ದಾಗ ರೈಲಿನಿಂದ ಕೆಳಗೆ ಜಿಗಿದ ವ್ಯಕ್ತಿ
ಮೈಕ್ರೋ ಫೈನಾನ್ಸ್​ಗಳ ಅಟ್ಟಹಾಸಕ್ಕೆ ಕಡಿವಾಣ ಹಾಕುತ್ತೇವೆ: ಪರಮೇಶ್ವರ್
ಮೈಕ್ರೋ ಫೈನಾನ್ಸ್​ಗಳ ಅಟ್ಟಹಾಸಕ್ಕೆ ಕಡಿವಾಣ ಹಾಕುತ್ತೇವೆ: ಪರಮೇಶ್ವರ್