IND vs BAN: ‘ನನ್ನನ್ನು ತಂಡದಿಂದ ಕೈಬಿಡಿ’; ನಾಯಕನ ಮುಂದೆ ವಿಶೇಷ ಬೇಡಿಕೆ ಇಟ್ಟ ರಿಷಬ್ ಪಂತ್..!

Rishabh Pant: ರಿಷಬ್ ಪಂತ್ ಕೇವಲ ಮೂರು ಪಂದ್ಯಗಳ ಏಕದಿನ ಸರಣಿಯಿಂದ ಹೊರಗುಳಿದಿದ್ದು, ಡಿಸೆಂಬರ್ 14 ರಿಂದ ಆರಂಭವಾಗಲಿರುವ ಟೆಸ್ಟ್ ಸರಣಿಗಾಗಿ ಮತ್ತೆ ಬಾಂಗ್ಲಾದೇಶಕ್ಕೆ ಮರಳಲಿದ್ದಾರೆ ಎಂದು ವರದಿಯಾಗಿದೆ.

IND vs BAN: ‘ನನ್ನನ್ನು ತಂಡದಿಂದ ಕೈಬಿಡಿ’; ನಾಯಕನ ಮುಂದೆ ವಿಶೇಷ ಬೇಡಿಕೆ ಇಟ್ಟ ರಿಷಬ್ ಪಂತ್..!
Rishabh Pant, rohit sharma
Follow us
TV9 Web
| Updated By: ಪೃಥ್ವಿಶಂಕರ

Updated on:Dec 05, 2022 | 3:54 PM

ಪ್ರಸ್ತುತ ಬಾಂಗ್ಲಾದೇಶ ಪ್ರವಾಸದಲ್ಲಿರುವ ಟೀಂ ಇಂಡಿಯಾ (India vs Bangladesh) ಏಕದಿನ ಸರಣಿಯೊಂದಿಗೆ ಪ್ರವಾಸವನ್ನು ಆರಂಭಿಸಿದೆ. ಭಾನುವಾರ ನಡೆದ ಮೊದಲ ಏಕದಿನ ಪಂದ್ಯವನ್ನು ಸೋತಿರುವ ರೋಹಿತ್ ಪಡೆ (Rohit Sharma) ಇದೀಗ ಎರಡನೇ ಏಕದಿನ ಪಂದ್ಯಕ್ಕಾಗಿ ತಯಾರಿ ನಡೆಸಿದೆ. ಆದರೆ ಈ ನಡುವೆ ಮೊದಲ ಪಂದ್ಯ ಆರಂಭಕ್ಕೂ ಕೆಲವೇ ನಿಮಿಷಗಳ ಮುನ್ನ ಟೀಂ ಇಂಡಿಯಾದಲ್ಲಿ ಆದ ಅದೊಂದು ಬದಲಾವಣೆ ಎಲ್ಲರನ್ನು ಅಚ್ಚರಿಗೊಳಿಸಿತ್ತು. ವಾಸ್ತವವಾಗಿ ಈ ಸರಣಿಗೆ ತಂಡದಲ್ಲಿ ಸ್ಥಾನ ಪಡೆದಿದ್ದ ಟೀಂ ಇಂಡಿಯಾ (Team India) ವಿಕೆಟ್ ಕೀಪರ್ ರಿಷಬ್ ಪಂತ್​ (Rishabh Pant) ಅವರನ್ನು ಕೊನೆ ಘಳಿಗೆಯಲ್ಲಿ ತಂಡದಿಂದ ಕೈಬಿಡಲಾಗಿತ್ತು. ಅಲ್ಲದೆ ಇಡೀ ಸರಣಿಯಿಂದಲೇ ಅವರನ್ನು ಹೊರಗಿಡಲಾಯಿತು. ಇಂಜುರಿ ಕಾರಣ ಪಂತ್​ರನ್ನು ತಂಡದಿಂದ ಕೈಬಿಟ್ಟಿರುವುದಾಗಿ ಬಿಸಿಸಿಐ ಹೇಳಿಕೆ ನೀಡಿತ್ತಾದರೂ, ಅಭ್ಯಾಸದ ವೇಳೆ ಆರಾಮಾಗಿಯೇ ಇದ್ದ ಪಂತ್​ರನ್ನು ಇದ್ದಕ್ಕಿದಂತೆ ತಂಡದಿಂದ ಕೈಬಿಡಲು ಕಾರಣ ಏನು ಎಂಬುದರ ಬಗ್ಗೆ ಎಲ್ಲರಲ್ಲೂ ಅನುಮಾನ ಮೂಡಿತ್ತು. ಇದೀಗ ಈ ಅನುಮಾನಕ್ಕೆ ತೆರೆ ಬಿದ್ದಿದ್ದು, ಸ್ವತಃ ಪಂತ್ ಅವರೇ ಇಡೀ ಸರಣಿಯಿಂದ ಹೊರಗುಳಿಯುವ ಯೋಚನೆ ಮಾಡಿದ್ದರು ಎಂದು ವರದಿಯಾಗಿದೆ.

ಕ್ರಿಕ್‌ಬಜ್‌ನ ವರದಿಯ ಪ್ರಕಾರ, ನ್ಯೂಜಿಲೆಂಡ್ ಪ್ರವಾಸ ಮುಗಿಸಿ ಬಾಂಗ್ಲಾದೇಶಕ್ಕೆ ಹಾರಿದ್ದ ರಿಷಬ್ ಪಂತ್ ನೆಟ್ ಅಭ್ಯಾಸದಲ್ಲೂ ಬಾಗಿಯಾಗಿದ್ದರು. ಆದರೆ ಬಳಿಕ ತಂಡದ ನಾಯಕ ರೋಹಿತ್ ಶರ್ಮಾ ಮತ್ತು ರಾಹುಲ್ ದ್ರಾವಿಡ್ ಅವರನ್ನು ಭೇಟಿ ಮಾಡಿದ ಪಂತ್​ ತನ್ನನ್ನು ಏಕದಿನ ಸರಣಿಯಿಂದ ಕೈಬಿಡುವಂತೆ ಮನವಿ ಮಾಡಿದ್ದರು ಎಂದು ವರದಿಯಾಗಿದೆ. ಪಂತ್ ಈ ರೀತಿ ಮಾಡಿದ್ದು ಏಕೆ ಎಂಬುದು ಇದುವರೆಗೂ ಬಹಿರಂಗಗೊಳದಿದ್ದರೂ, ಅವರ ವಿರುದ್ಧ ಯಾವುದೇ ಶಿಸ್ತು ಕ್ರಮ ಕೈಗೊಂಡಿಲ್ಲ ಎಂಬುದು ಸ್ಪಷ್ಟವಾಗಿದೆ.

ಟೆಸ್ಟ್ ಸರಣಿ ಆಡಲಿದ್ದಾರೆ ಪಂತ್

ಮಾಧ್ಯಮ ವರದಿಗಳ ಪ್ರಕಾರ, ರಿಷಬ್ ಪಂತ್ ಕೇವಲ ಮೂರು ಪಂದ್ಯಗಳ ಏಕದಿನ ಸರಣಿಯಿಂದ ಹೊರಗುಳಿದಿದ್ದು, ಡಿಸೆಂಬರ್ 14 ರಿಂದ ಆರಂಭವಾಗಲಿರುವ ಟೆಸ್ಟ್ ಸರಣಿಗಾಗಿ ಮತ್ತೆ ಬಾಂಗ್ಲಾದೇಶಕ್ಕೆ ಮರಳಲಿದ್ದಾರೆ ಎಂದು ವರದಿಯಾಗಿದೆ. ಅಲ್ಲದೆ ಒಂದು ವೇಳೆ ಪಂತ್ ಟೆಸ್ಟ್ ಸರಣಿಯಿಂದಲೂ ಹಿಂದೆ ಸರಿಯುವ ಚಿಂತನೆ ನಡೆಸಿದರೆ, ಅವರ ಬದಲಿಗೆ ವಿಕೆಟ್ ಕೀಪರ್ ಬ್ಯಾಟ್ಸ್​ಮನ್ ಆಗಿ ಇಶಾನ್ ಕಿಶನ್ ಈಗಾಗಲೇ ತಂಡದಲ್ಲಿರುವ ಕಾರಣ ತಂಡದ ಮ್ಯಾನೇಜ್‌ಮೆಂಟ್ ಪಂತ್ ಅವರ ಸ್ಥಾನಕ್ಕೆ ಬೇರೆ ಯಾವುದೇ ಆಟಗಾರರನ್ನು ಕರೆತರುವ ಯೋಚನೆ ಮಾಡಿಲ್ಲ ಎಂದು ವರದಿಯಾಗಿದೆ.

ಇದನ್ನೂ ಓದಿ: ಆಫ್ರಿಕಾದಲ್ಲಿ ನಡೆಯಲ್ಲಿರುವ ವಿಶ್ವಕಪ್​ಗೆ ಟೀಂ ಇಂಡಿಯಾ ಪ್ರಕಟ; ಸ್ಫೋಟಕ ಓಪನರ್​ಗೆ ತಂಡದ ನಾಯಕತ್ವ..!

ಇತರ ಆಟಗಾರರಿಗೂ ಪಂತ್ ನಿರ್ಧಾರದ ಬಗ್ಗೆ ಗೊತ್ತಿರಲಿಲ್ಲ

ರಿಷಬ್ ಪಂತ್ ಅವರನ್ನು ತಂಡದಿಂದ ಬಿಡುಗಡೆ ಮಾಡಿರುವುದು ಉಪನಾಯಕ ಕೆಎಲ್ ರಾಹುಲ್‌ಗೂ ತಿಳಿದಿರಲಿಲ್ಲ. ಡ್ರೆಸ್ಸಿಂಗ್ ರೂಮ್ ತಲುಪಿದ ನಂತರ ಪಂತ್​ರನ್ನು ತಂಡದಿಂದ ಕೈಬಿಟ್ಟಿರುವುದು ತಿಳಿಯಿತು ಎಂದು ರಾಹುಲ್ ಹೇಳಿದ್ದಾರೆ. ಇದಕ್ಕೆ ಕಾರಣ ರಾಹುಲ್‌ಗೂ ಗೊತ್ತಿರಲಿಲ್ಲ. ಪಂತ್ ಅನುಪಸ್ಥಿತಿಯಲ್ಲಿ, ಕೆಎಲ್ ರಾಹುಲ್ ತರಾತುರಿಯಲ್ಲಿ ವಿಕೆಟ್ ಕೀಪಿಂಗ್ ಮಾಡಿದ್ದರು ಎಂದು ವರದಿಯಾಗಿದೆ.

ಕಳಪೆ ಫಾರ್ಮ್​ನಿಂದಾಗಿ ವಿಶ್ರಾಂತಿ ತೆಗೆದುಕೊಂಡಿದ್ದಾರಾ ಪಂತ್?

ಬಹುದಿನಗಳಿಂದ ಕಳಪೆ ಫಾರ್ಮ್​ಗೆ ಸಿಲುಕಿರುವ ರಿಷಬ್ ಪಂತ್ ಏಷ್ಯಾಕಪ್, ಟಿ20 ವಿಶ್ವಕಪ್ ಸೇರಿದಂತೆ ನ್ಯೂಜಿಲೆಂಡ್ ಪ್ರವಾಸದಲ್ಲಿಯೂ ರನ್ ಗಳಿಸುವಲ್ಲಿ ವಿಫಲರಾಗಿದ್ದರು. ಹೀಗಾಗಿ ಪಂತ್​ರನ್ನು ತಂಡದಿಂದ ಕೈಬಿಡುವಂತೆ ಟೀಂ ಇಂಡಿಯಾದ ಮಾಜಿ ಆಟಗಾರರು ಬಿಸಿಸಿಐ ಮುಂದೆ ಮನವಿ ಇಟ್ಟಿದ್ದರು. ಬಹುಶಃ ಅದಕ್ಕಾಗಿಯೇ ಅವರು ಕೆಲವು ದಿನಗಳ ಕಾಲ ವಿರಾಮ ತೆಗೆದುಕೊಳ್ಳಲು ಮನಸ್ಸು ಮಾಡಿರಬಹುದು ಎಂಬುದು ಕ್ರಿಕೆಟ್ ವಲಯದಲ್ಲಿ ಕೇಳಿಬರುತ್ತಿರುವ ಮಾತಾಗಿದೆ.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 3:54 pm, Mon, 5 December 22

ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್