IND vs BAN: ಬಾಂಗ್ಲಾ ವಿರುದ್ಧ ಚೊಚ್ಚಲ ಟೆಸ್ಟ್ ಶತಕ ಸಿಡಿಸಿದ ಶುಭ್​ಮನ್ ಗಿಲ್..!

Shubman Gill: ಮೊದಲ ಟೆಸ್ಟ್ ಪಂದ್ಯದ ಎರಡನೇ ಇನ್ನಿಂಗ್ಸ್​ನಲ್ಲಿ ಟೀಂ ಇಂಡಿಯಾದ ಆರಂಭಿಕ ಆಟಗಾರ ಶುಭ್​ಮನ್ ಗಿಲ್ ತಮ್ಮ ಚೊಚ್ಚಲ ಅಂತಾರಾಷ್ಟ್ರೀಯ ಟೆಸ್ಟ್ ಶತಕ ಸಿಡಿಸಿದ್ದಾರೆ.

IND vs BAN: ಬಾಂಗ್ಲಾ ವಿರುದ್ಧ ಚೊಚ್ಚಲ ಟೆಸ್ಟ್ ಶತಕ ಸಿಡಿಸಿದ ಶುಭ್​ಮನ್ ಗಿಲ್..!
shubman gill
Follow us
TV9 Web
| Updated By: ಪೃಥ್ವಿಶಂಕರ

Updated on:Dec 16, 2022 | 2:55 PM

ಕೊನೆಗೂ ಶುಭ್​ಮನ್ ಗಿಲ್ (Shubman Gill) ಶತಕದ ಬರ ನೀಗಿದೆ. ಚಟ್ಟೋಗ್ರಾಮ್‌ನಲ್ಲಿ ನಡೆಯುತ್ತಿರುವ ಭಾರತ ಮತ್ತು ಬಾಂಗ್ಲಾದೇಶ (India and Bangladesh) ನಡುವಿನ ಮೊದಲ ಟೆಸ್ಟ್ ಪಂದ್ಯದ ಎರಡನೇ ಇನ್ನಿಂಗ್ಸ್​ನಲ್ಲಿ ಟೀಂ ಇಂಡಿಯಾದ ಆರಂಭಿಕ ಆಟಗಾರ ಶುಭ್​ಮನ್ ಗಿಲ್ ತಮ್ಮ ಚೊಚ್ಚಲ ಅಂತಾರಾಷ್ಟ್ರೀಯ ಟೆಸ್ಟ್ ಶತಕ ಸಿಡಿಸಿದ್ದಾರೆ. ಗಿಲ್ ಈ ಹಿಂದೆ ಬ್ರಿಸ್ಬೇನ್ ಟೆಸ್ಟ್‌ನಲ್ಲಿ (Brisbane Test) ಶತಕ ವಂಚಿತರಾಗಿದ್ದರು. ಆಸ್ಟ್ರೇಲಿಯಾ ವಿರುದ್ಧದ ಎರಡನೇ ಇನ್ನಿಂಗ್ಸ್‌ನಲ್ಲಿ ಗಿಲ್ 91 ರನ್‌ಗಳ ವೈಯಕ್ತಿಕ ಸ್ಕೋರ್‌ನಲ್ಲಿ ತಮ್ಮ ವಿಕೆಟ್ ಒಪ್ಪಿಸಿ, ಶತಕ ವಂಚಿತರಾಗಿದ್ದರು. ಆದರೆ ಬಾಂಗ್ಲಾ ವಿರುದ್ಧ ಎಚ್ಚರ ತಪ್ಪದ ಗಿಲ್, ಆಸ್ಟ್ರೇಲಿಯಾ ವಿರುದ್ಧ ಮಾಡಿದ ಎಡವಟ್ಟನ್ನು ಇಲ್ಲಿ ಮಾಡಲಿಲ್ಲ. ಹೀಗಾಗಿ ಬರೋಬ್ಬರು 700 ದಿನಗಳ ನಂತರ ಶುಭ್‌ಮನ್ ಗಿಲ್ ಶತಕದ ಕಾಯುವಿಕೆ ಕೊನೆಗೊಂಡಿದೆ.

147 ಎಸೆತಗಳಲ್ಲಿ ಶತಕ ಪೂರೈಸಿದ ಗಿಲ್, ತಮ್ಮ ಇನ್ನಿಂಗ್ಸ್​ನಲ್ಲಿ 10 ಬೌಂಡರಿ ಹಾಗೂ 2 ಸಿಕ್ಸರ್ ಕೂಡ ಬಾರಿಸಿದರು. ಅದರಲ್ಲೂ 90 ರ ಗಡಿ ದಾಟಿದ ನಂತರವೂ ನಿರ್ಭೀತಿಯ ಬ್ಯಾಟಿಂಗ್ ಮಾಡಿದ ಗಿಲ್, ತಮ್ಮ ವೈಯಕ್ತಿಕ ಸ್ಕೋರ್ 95 ರಲ್ಲಿ ರಿವರ್ಸ್ ಸ್ವೀಪ್ ಆಡಿ ಬೌಂಡರಿ ಬಾರಿಸಿದರು. ಅಲ್ಲದೆ ಶತಕಕ್ಕೆ ಇನ್ನೊಂದು ರನ್ ಬೇಕಿರುವಾಗಲು ಧೃತಿಗೆಡದ ಗಿಲ್,​ ಮುಂದೆ ಹೋಗಿ ಲಾಂಗ್ ಆನ್‌ನಲ್ಲಿ ಫೋರ್ ಹೊಡೆದು, ಶತಕದ ಸಂಭ್ರಮಾಚರಣೆ ಮಾಡಿದರು.

Rohit Sharma: ಎರಡನೇ ಟೆಸ್ಟ್‌ಗೂ ಮುನ್ನ ರೋಹಿತ್ ಇಂಜುರಿ ಬಗ್ಗೆ ಸಿಕ್ತು ಬಿಗ್ ಅಪ್‌ಡೇಟ್..!

2. 110 ರನ್ ಗಳಿಸಿದ ನಂತರ ಔಟ್

ಶತಕ ಸಿಡಿಸಿದ ಬೆನ್ನಲ್ಲೇ ಹೊಡಿಬಡಿ ಆಡಕ್ಕೆ ಮುಂದಾದ ಗಿಲ್, ಅಂತಿಮವಾಗಿ 110 ರನ್​ಗಳಿಗೆ ತಮ್ಮ ವಿಕೆಟ್ ಒಪ್ಪಿಸಿದರು. ತಮ್ಮ ಇನ್ನಿಂಗ್ಸ್​ನಲ್ಲಿ 151 ಎಸೆತಗಳನ್ನು ಆಡಿದ ಗಿಲ್ 10 ಬೌಂಡರಿ ಹಾಗೂ 3 ಸಿಕ್ಸರ್ ಬಾರಿಸಿದರು. ಶತಕದ ನಂತರ ಮೆಹದಿ ಹಸನ್ ಎಸೆತದಲ್ಲಿ ಸಿಕ್ಸರ್ ಬಾರಿಸಿದ ಗಿಲ್, ಮತ್ತೊಂದು ಬಿಗ್ ಶಾಟ್ ಆಡುವ ಯತ್ನದಲ್ಲಿ ಕ್ಯಾಚಿತ್ತು ಔಟಾದರು.

3. ಗಿಲ್ ಕೈಹಿಡಿದ ಅದೃಷ್ಟ

ವಾಸ್ತವವಾಗಿ ಎರಡನೇ ಇನಿಂಗ್ಸ್‌ನ 32ನೇ ಓವರ್‌ನಲ್ಲಿ ಗಿಲ್ ವಿರುದ್ಧ ಎಲ್‌ಬಿಡಬ್ಲ್ಯೂಗೆ ಮನವಿ ಮಾಡಲಾಗಿತ್ತು. ಆದರೆ ಅಂಪೈರ್ ನಾಟೌಟ್ ಎಂದು ತೀರ್ಪು ನೀಡಿದರು. ನಂತರ ಬಾಂಗ್ಲಾದೇಶ ಡಿಆರ್​ಎಸ್ ತೆಗೆದುಕೊಂಡಿತು. ಆದರೆ ತಾಂತ್ರಿಕ ದೋಷದಿಂದ ಆ ಸಮಯದಲ್ಲಿ ಡಿಆರ್​ಎಸ್ ಲಭ್ಯವಿರಲಿಲ್ಲ. ಹೀಗಾಗಿ ಗಿಲ್​ಗೆ ಒಂದು ಜೀವದಾನ ಸಿಕ್ಕಿತು. ಸಿಕ್ಕ ಅವಕಾಶವನ್ನು ಉಪಯೋಗಿಸಿಕೊಂಡ ಗಿಲ್ ಶತಕ ಸಿಡಿಸುವಲ್ಲಿ ಯಶಸ್ವಿಯಾದರು. ಆದರೆ ಗಿಲ್​ರಂತೆಯೇ ಮೊದಲ ಇನ್ನಿಂಗ್ಸ್​ನಲ್ಲಿ ಶ್ರೇಯಸ್ ಅಯ್ಯರ್​ಗೆ ಒಂದಲ್ಲ ಅಂತಾ ಮೂರು ಜೀವದಾನಗಳು ಸಿಕ್ಕಿದ್ದವು. ಆದರೆ ಅಯ್ಯರ್​ಗೆ ಇದರ ಲಾಭ ಪಡೆಯಲಾಗಲಿಲ್ಲ. 86 ರನ್​ಗಳ ಇನ್ನಿಂಗ್ಸ್ ಆಡಿದ ಅಯ್ಯರ್ ಅಂತಿಮವಾಗಿ ವಿಕೆಟ್ ಒಪ್ಪಿಸಿದ್ದರು.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 2:37 pm, Fri, 16 December 22

ಟ್ರಂಪ್ ಪ್ರಮಾಣವಚನಕ್ಕೆ ಮುಂಜಾನೆಯಿಂದಲೇ ಕಿಕ್ಕಿರಿದು ಸೇರುತ್ತಿರುವ ಜನ
ಟ್ರಂಪ್ ಪ್ರಮಾಣವಚನಕ್ಕೆ ಮುಂಜಾನೆಯಿಂದಲೇ ಕಿಕ್ಕಿರಿದು ಸೇರುತ್ತಿರುವ ಜನ
ಪ್ರೀತಿಯ ಮಾತುಗಳಿಂದ ಸುದೀಪ್ ಎಲ್ಲರನ್ನೂ ಗೆದ್ದುಬಿಡುತ್ತಾರೆ: ಧನರಾಜ್
ಪ್ರೀತಿಯ ಮಾತುಗಳಿಂದ ಸುದೀಪ್ ಎಲ್ಲರನ್ನೂ ಗೆದ್ದುಬಿಡುತ್ತಾರೆ: ಧನರಾಜ್
ಮುಡಾದಿಂದ 142 ಜನ ಬೇನಾಮಿಯಾಗಿ ಸೈಟು ಪಡೆದಿದ್ದಾರೆ: ಶಿವಲಿಂಗೇಗೌಡ
ಮುಡಾದಿಂದ 142 ಜನ ಬೇನಾಮಿಯಾಗಿ ಸೈಟು ಪಡೆದಿದ್ದಾರೆ: ಶಿವಲಿಂಗೇಗೌಡ
ಬಿಗ್ ಬಾಸ್​ನಿಂದ ಧನರಾಜ್​ಗೆ ಎಷ್ಟು ಹಣ ಸಿಕ್ತು? ಸುತ್ತಿ ಬಳಸಿ ಉತ್ತರ
ಬಿಗ್ ಬಾಸ್​ನಿಂದ ಧನರಾಜ್​ಗೆ ಎಷ್ಟು ಹಣ ಸಿಕ್ತು? ಸುತ್ತಿ ಬಳಸಿ ಉತ್ತರ
ಕೋರ್ ಕಮಿಟಿ ಸಭೆ ಸೇರಿದಂತೆ ನಾಳೆ ರಾಜ್ಯ ಬಿಜೆಪಿಯ ಮೂರು ಮೀಟಿಂಗ್​ಗಳು
ಕೋರ್ ಕಮಿಟಿ ಸಭೆ ಸೇರಿದಂತೆ ನಾಳೆ ರಾಜ್ಯ ಬಿಜೆಪಿಯ ಮೂರು ಮೀಟಿಂಗ್​ಗಳು
ಕ್ರೇನ್ ಮೂಲಕ ಪುನಃ ಚಕ್ರಗಳ ಮೇಲೆ ನಿಲ್ಲುವಂದಾದ ಕೆಎಸ್ಸಾರ್ಟಿಟಿಸಿ ಬಸ್ಸು
ಕ್ರೇನ್ ಮೂಲಕ ಪುನಃ ಚಕ್ರಗಳ ಮೇಲೆ ನಿಲ್ಲುವಂದಾದ ಕೆಎಸ್ಸಾರ್ಟಿಟಿಸಿ ಬಸ್ಸು
ಪೊಲೀಸರು ನನ್ನ ಮಾತೇ ಕೇಳಲ್ಲ ಎಂದು ಜ್ಞಾನೇಂದ್ರ ಹೇಳಿದ್ದರು: ಯತ್ನಾಳ್
ಪೊಲೀಸರು ನನ್ನ ಮಾತೇ ಕೇಳಲ್ಲ ಎಂದು ಜ್ಞಾನೇಂದ್ರ ಹೇಳಿದ್ದರು: ಯತ್ನಾಳ್
‘ಬಾಯ್ಸ್ vs ಗರ್ಲ್ಸ್​’ ರಿಯಾಲಿಟಿ ಶೋನಲ್ಲಿ ಜಗದೀಶ್, ಶೋಭಾ ಶೆಟ್ಟಿ
‘ಬಾಯ್ಸ್ vs ಗರ್ಲ್ಸ್​’ ರಿಯಾಲಿಟಿ ಶೋನಲ್ಲಿ ಜಗದೀಶ್, ಶೋಭಾ ಶೆಟ್ಟಿ
ಯತ್ನಾಳ್ ದೂರು ನೀಡಿದರೆ ವಿಜಯೇಂದ್ರ ವಿರುದ್ಧ ತನಿಖೆ: ಪ್ರಿಯಾಂಕ್ ಖರ್ಗೆ
ಯತ್ನಾಳ್ ದೂರು ನೀಡಿದರೆ ವಿಜಯೇಂದ್ರ ವಿರುದ್ಧ ತನಿಖೆ: ಪ್ರಿಯಾಂಕ್ ಖರ್ಗೆ
ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು
ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು