IND vs BAN: ಡೋಲು ಬಜಾನದೊಂದಿಗೆ ಟೀಮ್ ಇಂಡಿಯಾಗೆ ಭರ್ಜರಿ ಸ್ವಾಗತ

IND vs BAN: ಭಾರತ ಮತ್ತು ಬಾಂಗ್ಲಾದೇಶ್ ನಡುವಣ ಎರಡನೇ ಟಿ20 ಪಂದ್ಯವು ಬುಧವಾರ ಜರುಗಲಿದೆ. ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯವು ಬಾಂಗ್ಲಾದೇಶ್ ಪಾಲಿಗೆ ನಿರ್ಣಾಯಕ. ಏಕೆಂದರೆ ಈ ಮ್ಯಾಚ್​ನಲ್ಲಿ ಬಾಂಗ್ಲಾ ತಂಡ ಸೋತರೆ ಸರಣಿ ಟೀಮ್ ಇಂಡಿಯಾ ಪಾಲಾಗಲಿದೆ.

IND vs BAN: ಡೋಲು ಬಜಾನದೊಂದಿಗೆ ಟೀಮ್ ಇಂಡಿಯಾಗೆ ಭರ್ಜರಿ ಸ್ವಾಗತ
|

Updated on: Oct 08, 2024 | 12:42 PM

ಬಾಂಗ್ಲಾದೇಶ್ ವಿರುದ್ಧದ ಎರಡನೇ ಟಿ20 ಪಂದ್ಯಕ್ಕಾಗಿ ಟೀಮ್ ಇಂಡಿಯಾ ದೆಹಲಿಗೆ ಬಂದಿಳಿದಿದೆ. ಸೋಮವಾರ ದೆಹಲಿಯ ಇಂದಿರಾ ಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಆಗಮಿಸಿದ ಭಾರತ ತಂಡವನ್ನು ಡೋಲು ಬಜಾನದೊಂದಿಗೆ ಸ್ವಾಗತಿಸಲಾಯಿತು. ಈ ಸ್ವಾಗತದೊಂದಿಗೆ ಟೀಮ್ ಇಂಡಿಯಾ ಆಟಗಾರರ ಹೆಸರಿನೊಂದಿಗೆ ಬ್ಯಾಡ್ ಬಜಾಯಿಸಿದ್ದು ವಿಶೇಷವಾಗಿತ್ತು. ಇದೇ ವೇಳೆ ಟೀಮ್ ಇಂಡಿಯಾ ನಾಯಕ ಸೂರ್ಯಕುಮಾರ್ ಯಾದವ್ ಕೆಲ ಕ್ಷಣಗಳ ಸ್ಟೆಪ್ಸ್ ಹಾಕಿದ್ದರು. ಇದೀಗ ಈ ವಿಡಿಯೋವನ್ನು ಬಿಸಿಸಿಐ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದು, ಭಾರೀ ವೈರಲ್ ಆಗಿದೆ.

ಇನ್ನು ಸೋಮವಾರ ದೆಹಲಿಗೆ ಆಗಮಿಸಿರುವ ಟೀಮ್ ಇಂಡಿಯಾ ಬುಧವಾರ 2ನೇ ಟಿ20 ಪಂದ್ಯವನ್ನಾಡಲಿದೆ. ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಭಾರತ ತಂಡ ಗೆದ್ದರೆ ಸರಣಿ ವಶಪಡಿಸಿಕೊಳ್ಳಬಹುದು. ಏಕೆಂದರೆ ಮೂರು ಪಂದ್ಯಗಳ ಸರಣಿಯ ಮೊದಲ ಮ್ಯಾಚ್​ನಲ್ಲಿ ಭಾರತ ತಂಡ 7 ವಿಕೆಟ್​ಗಳ ಜಯ ಸಾಧಿಸಿದೆ. ಇದೀಗ ಎರಡನೇ ಟಿ20 ಪಂದ್ಯದಲ್ಲಿ ಜಯಭೇರಿ ಬಾರಿಸುವ ಮೂಲಕ ಸರಣಿ ವಶಪಡಿಸಿಕೊಳ್ಳುವ ಇರಾದೆಯಲ್ಲಿದೆ.

ಹಾಗೆಯೇ ಈ ಸರಣಿಯ ಮೂರನೇ ಪಂದ್ಯವು ಅಕ್ಟೋಬರ್ 12 ರಂದು ನಡೆಯಲಿದ್ದು, ಈ ಪಂದ್ಯಕ್ಕೆ ಹೈದರಾಬಾದ್​ನ ರಾಜೀವ್ ಗಾಂಧಿ ಇಂಟರ್​ನ್ಯಾಷನಲ್ ಕ್ರಿಕೆಟ್ ಸ್ಟೇಡಿಯಂ ಆತಿಥ್ಯವಹಿಸಲಿದೆ. ಈ ಪಂದ್ಯದೊಂದಿಗೆ ಭಾರತ ಮತ್ತು ಬಾಂಗ್ಲಾದೇಶ್ ನಡುವಣ ಸರಣಿ ಮುಕ್ತಾಯಗೊಳ್ಳಲಿದೆ. ಇನ್ನು ಈ ಸರಣಿಯ ಬಳಿಕ ಟೀಮ್ ಇಂಡಿಯಾ ನ್ಯೂಝಿಲೆಂಡ್ ವಿರುದ್ಧದ ಮೂರು ಪಂದ್ಯಗಳ ಟೆಸ್ಟ್ ಸರಣಿ ಆಡಲಿದೆ. ಈ ಸರಣಿಯು ಅಕ್ಟೋಬರ್ 16 ರಿಂದ ಶುರುವಾಗಲಿದೆ.

Follow us
ಚಡ್ಡಿ ಗ್ಯಾಂಗ್ ಕಳ್ಳರ ಹಾವಳಿ ಪುನಃ ಶುರು, ಬೆಂಗಳೂರು ನಿವಾಸಿಗಳೇ ಎಚ್ಚರ!
ಚಡ್ಡಿ ಗ್ಯಾಂಗ್ ಕಳ್ಳರ ಹಾವಳಿ ಪುನಃ ಶುರು, ಬೆಂಗಳೂರು ನಿವಾಸಿಗಳೇ ಎಚ್ಚರ!
ಈ ರಾಶಿಯವರು ಸರ್ಕಾರಿ ಉದ್ಯೋಗದಲ್ಲಿ ಹೆಚ್ಚಿನ‌ ಪ್ರಗತಿ ಕಾಣಲಿದ್ದಾರೆ
ಈ ರಾಶಿಯವರು ಸರ್ಕಾರಿ ಉದ್ಯೋಗದಲ್ಲಿ ಹೆಚ್ಚಿನ‌ ಪ್ರಗತಿ ಕಾಣಲಿದ್ದಾರೆ
45 ಲಕ್ಷ ರೂ. ನೋಟುಗಳಿಂದ ದುರ್ಗಾದೇವಿಗೆ ಅಲಂಕಾರ! ಬೆರಗಾದ ಭಕ್ತರು
45 ಲಕ್ಷ ರೂ. ನೋಟುಗಳಿಂದ ದುರ್ಗಾದೇವಿಗೆ ಅಲಂಕಾರ! ಬೆರಗಾದ ಭಕ್ತರು
ನವರಾತ್ರಿ ಉತ್ಸವದಲ್ಲಿ ಕಣ್ಮನ ಸೆಳೆದ ಕಾಂತಾರ ಚಿತ್ರದ ಪಂಜುರ್ಲಿ ನೃತ್ಯ
ನವರಾತ್ರಿ ಉತ್ಸವದಲ್ಲಿ ಕಣ್ಮನ ಸೆಳೆದ ಕಾಂತಾರ ಚಿತ್ರದ ಪಂಜುರ್ಲಿ ನೃತ್ಯ
ಇದು ಮೌನವಾಗಿರುವ ಕಾಲ: ಜೈಲಿಂದ ಹೊರಬಂದ ಮುರುಘಾಶ್ರೀ ಮೊದಲ ಮಾತು
ಇದು ಮೌನವಾಗಿರುವ ಕಾಲ: ಜೈಲಿಂದ ಹೊರಬಂದ ಮುರುಘಾಶ್ರೀ ಮೊದಲ ಮಾತು
ನರಕದ ನೋವು ಹೆಚ್ಚಲು ಕಾರಣವಾದ ಚೈತ್ರಾ ಕುಂದಾಪುರ? ಎಲ್ಲ ಮುಗಿದ ಬಳಿಕ ಅಳು
ನರಕದ ನೋವು ಹೆಚ್ಚಲು ಕಾರಣವಾದ ಚೈತ್ರಾ ಕುಂದಾಪುರ? ಎಲ್ಲ ಮುಗಿದ ಬಳಿಕ ಅಳು
ಒಳ ಉಡುಪಿನ ವಿಷಯ ಪ್ರಸ್ತಾಪಿಸಿ ಮಹಿಳಾ ಸ್ಪರ್ಧಿಗಳಿಗೆ ಮುಜುಗರ ತಂದ ಜಗದೀಶ್
ಒಳ ಉಡುಪಿನ ವಿಷಯ ಪ್ರಸ್ತಾಪಿಸಿ ಮಹಿಳಾ ಸ್ಪರ್ಧಿಗಳಿಗೆ ಮುಜುಗರ ತಂದ ಜಗದೀಶ್
ಬೆಂಗಳೂರು: ನಿಂತಿದ್ದ ಮಹಿಳೆ ಮೇಲೆ ವಿದ್ಯುತ್ ಲೈನ್ ಬಿದ್ದು ಸಾವು
ಬೆಂಗಳೂರು: ನಿಂತಿದ್ದ ಮಹಿಳೆ ಮೇಲೆ ವಿದ್ಯುತ್ ಲೈನ್ ಬಿದ್ದು ಸಾವು
ರೋಹಿತ್ ಶರ್ಮಾ ಸ್ಟೈಲ್​ನಲ್ಲಿ ಟ್ರೋಫಿ ಎತ್ತಿ ಹಿಡಿದ ಫಾಫ್ ಡುಪ್ಲೆಸಿಸ್
ರೋಹಿತ್ ಶರ್ಮಾ ಸ್ಟೈಲ್​ನಲ್ಲಿ ಟ್ರೋಫಿ ಎತ್ತಿ ಹಿಡಿದ ಫಾಫ್ ಡುಪ್ಲೆಸಿಸ್
ದರ್ಶನ್​ಗೆ ಬೆನ್ನು ನೋವು; ಪತಿಯನ್ನು ನೋಡಲು ಜೈಲಿಗೆ ಬಂದ ವಿಜಯಲಕ್ಷ್ಮೀ  
ದರ್ಶನ್​ಗೆ ಬೆನ್ನು ನೋವು; ಪತಿಯನ್ನು ನೋಡಲು ಜೈಲಿಗೆ ಬಂದ ವಿಜಯಲಕ್ಷ್ಮೀ