IND vs BAN: ಹೀಗಿರಲಿದೆ ಟೀಮ್ ಇಂಡಿಯಾ ಪ್ಲೇಯಿಂಗ್ ಇಲೆವೆನ್

IND vs BAN: ಭಾರತ ಮತ್ತು ಬಾಂಗ್ಲಾದೇಶ್ ತಂಡಗಳು ಟಿ20 ಕ್ರಿಕೆಟ್​ನಲ್ಲಿ 13 ಬಾರಿ ಮುಖಾಮುಖಿಯಾಗಿದೆ. ಈ ವೇಳೆ ಟೀಮ್ ಇಂಡಿಯಾ 12 ಬಾರಿ ಜಯಭೇರಿ ಬಾರಿಸಿದೆ. ಇನ್ನು ಬಾಂಗ್ಲಾದೇಶ್ ತಂಡ ಗೆದ್ದಿರುವುದು ಕೇವಲ 1 ಬಾರಿ ಮಾತ್ರ. ಅಂದರೆ ಇಲ್ಲಿ ಬಾಂಗ್ಲಾದೇಶ್ ವಿರುದ್ಧ ಟೀಮ್ ಇಂಡಿಯಾ ಮೇಲುಗೈ ಹೊಂದಿರುವುದು ಸ್ಪಷ್ಟ.

IND vs BAN: ಹೀಗಿರಲಿದೆ ಟೀಮ್ ಇಂಡಿಯಾ ಪ್ಲೇಯಿಂಗ್ ಇಲೆವೆನ್
Team India
Follow us
ಝಾಹಿರ್ ಯೂಸುಫ್
|

Updated on: Jun 22, 2024 | 8:15 AM

T20 World Cup 2024: ಟಿ20 ವಿಶ್ವಕಪ್​ನ 47ನೇ ಪಂದ್ಯದಲ್ಲಿ ಭಾರತ ಮತ್ತು ಬಾಂಗ್ಲಾದೇಶ್ ತಂಡಗಳು ಮುಖಾಮುಖಿಯಾಗಲಿದೆ. ಅಂಟಿಗುವಾದ ಸರ್ ವಿವಿಯನ್ ರಿಚರ್ಡ್ಸ್ ಸ್ಟೇಡಿಯಂನಲ್ಲಿ ಜರುಗಲಿರುವ ಈ ಪಂದ್ಯಕ್ಕಾಗಿ ಟೀಮ್ ಇಂಡಿಯಾ ತನ್ನ ಆಡುವ ಬಳಗದಲ್ಲಿ ಬದಲಾವಣೆ ಮಾಡಿಕೊಳ್ಳುವ ಸಾಧ್ಯತೆಯಿಲ್ಲ. ಏಕೆಂದರೆ ಅಫ್ಘಾನಿಸ್ತಾನ್ ವಿರುದ್ಧದ ಪಂದ್ಯದಲ್ಲಿ ಟೀಮ್ ಇಂಡಿಯಾ ಸಾಂಘಿಕ ಪ್ರದರ್ಶನ ನೀಡಿದೆ. ಹೀಗಾಗಿ ಬಾಂಗ್ಲಾದೇಶ್ ವಿರುದ್ಧ ಕೂಡ ಅದೇ ಪ್ಲೇಯಿಂಗ್ ಇಲೆವೆನ್​ ಅನ್ನು ಕಣಕ್ಕಿಳಿಸುವ ಸಾಧ್ಯತೆ ಹೆಚ್ಚಿದೆ.

ಇದರಿಂದ ಈ ಪಂದ್ಯದಲ್ಲೂ ಟೀಮ್ ಇಂಡಿಯಾ ವೇಗಿ ಮೊಹಮ್ಮದ್ ಸಿರಾಜ್ ಬೆಂಚ್ ಕಾಯಬೇಕಾಗಿ ಬರಬಹುದು. ಏಕೆಂದರೆ ಕಳೆದ ಪಂದ್ಯದಲ್ಲಿ ಸಿರಾಜ್ ಬದಲಿಗೆ ಸ್ಪಿನ್ನರ್ ಕುಲ್ದೀಪ್ ಯಾದವ್​ಗೆ ಚಾನ್ಸ್ ನೀಡಲಾಗಿತ್ತು. ಸಿಕ್ಕ ಅವಕಾಶದಲ್ಲಿ ಉತ್ತಮ ಬೌಲಿಂಗ್ ಪ್ರದರ್ಶಿಸಿದ್ದ ಕುಲ್ದೀಪ್ 4 ಓವರ್​ಗಳಲ್ಲಿ 32 ರನ್ ನೀಡಿ 2 ವಿಕೆಟ್ ಕಬಳಿಸಿದ್ದರು. ಹೀಗಾಗಿ ಇಂದಿನ ಪಂದ್ಯದಲ್ಲೂ ಹಿರಿಯ ಸ್ಪಿನ್ನರ್​ ಅನ್ನೇ ಆಡುವ ಬಳಗದಲ್ಲಿ ಮುಂದುವರೆಸುವ ಸಾಧ್ಯತೆಯಿದೆ.

ಅದರಂತೆ ಟೀಮ್ ಇಂಡಿಯಾ ಪರ ಆರಂಭಿಕರಾಗಿ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿ ಇನಿಂಗ್ಸ್​ ಆರಂಭಿಸಲಿದ್ದಾರೆ. ಇನ್ನು ಮೂರನೇ ಕ್ರಮಾಂಕದಲ್ಲಿ ರಿಷಭ್ ಪಂತ್ ಮುಂದುವರೆಯಲಿದ್ದಾರೆ. ಹಾಗೆಯೇ ನಾಲ್ಕನೇ ಕ್ರಮಾಂಕದಲ್ಲಿ ಸೂರ್ಯಕುಮಾರ್ ಯಾದವ್, ಐದನೇ ಕ್ರಮಾಂಕದಲ್ಲಿ ಶಿವಂ ದುಬೆ ಬ್ಯಾಟ್ ಬೀಸಲಿದ್ದಾರೆ.

ಇನ್ನು ಆಲ್​ರೌಂಡರ್​ಗಳಾಗಿ ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ ಹಾಗೂ ಅಕ್ಷರ್ ಪಟೇಲ್ ಕಣಕ್ಕಿಳಿಯಲಿದ್ದಾರೆ. ಸ್ಪಿನ್ನರ್ ಆಗಿ ಕುಲ್ದೀಪ್ ಯಾದವ್​ಗೆ ಸ್ಥಾನ ಸಿಗಲಿದೆ. ವೇಗಿಗಳಾಗಿ ಜಸ್​ಪ್ರೀತ್ ಬುಮ್ರಾ ಮತ್ತು ಅರ್ಷದೀಪ್ ಸಿಂಗ್ ಪ್ಲೇಯಿಂಗ್ ಇಲೆವೆನ್​ನಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಅದರಂತೆ ಟೀಮ್ ಇಂಡಿಯಾದ ಸಂಭಾವ್ಯ ಪ್ಲೇಯಿಂಗ್ ಇಲೆವೆನ್ ಹೀಗಿರಲಿದೆ…

  1. ರೋಹಿತ್ ಶರ್ಮಾ
  2. ವಿರಾಟ್ ಕೊಹ್ಲಿ
  3. ರಿಷಭ್ ಪಂತ್ (ವಿಕೆಟ್ ಕೀಪರ್)
  4. ಸೂರ್ಯಕುಮಾರ್ ಯಾದವ್
  5. ಶಿವಂ ದುಬೆ
  6. ಹಾರ್ದಿಕ್ ಪಾಂಡ್ಯ
  7. ರವೀಂದ್ರ ಜಡೇಜಾ
  8. ಅಕ್ಷರ್ ಪಟೇಲ್
  9. ಕುಲ್ದೀಪ್ ಯಾದವ್
  10. ಜಸ್​ಪ್ರೀತ್ ಬುಮ್ರಾ
  11. ಅರ್ಷದೀಪ್ ಸಿಂಗ್

ಇದನ್ನೂ ಓದಿ: Abhishek Sharma: 25 ಎಸೆತಗಳಲ್ಲಿ ಸ್ಪೋಟಕ ಸೆಂಚುರಿ ಸಿಡಿಸಿದ ಅಭಿಷೇಕ್ ಶರ್ಮಾ

ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಹಾರ್ದಿಕ್ ಪಾಂಡ್ಯ (ಉಪನಾಯಕ), ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್, ಸಂಜು ಸ್ಯಾಮ್ಸನ್, ಶಿವಂ ದುಬೆ, ರವೀಂದ್ರ ಜಡೇಜಾ, ಅಕ್ಸರ್ ಪಟೇಲ್, ಕುಲ್ದೀಪ್ ಯಾದವ್, ಯುಜ್ವೇಂದ್ರ ಚಹಲ್, ಅರ್ಷದೀಪ್ ಸಿಂಗ್, ಮೊಹಮ್ಮದ್ ಸಿರಾಜ್, ಜಸ್​ಪ್ರೀತ್ ಬುಮ್ರಾ.

ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್