T20 World Cup 2024: ಟಿ20 ವಿಶ್ವಕಪ್ನ 47ನೇ ಪಂದ್ಯದಲ್ಲಿ ಭಾರತ ಮತ್ತು ಬಾಂಗ್ಲಾದೇಶ್ ತಂಡಗಳು ಮುಖಾಮುಖಿಯಾಗಲಿದೆ. ಅಂಟಿಗುವಾದ ಸರ್ ವಿವಿಯನ್ ರಿಚರ್ಡ್ಸ್ ಸ್ಟೇಡಿಯಂನಲ್ಲಿ ಜರುಗಲಿರುವ ಈ ಪಂದ್ಯಕ್ಕಾಗಿ ಟೀಮ್ ಇಂಡಿಯಾ ತನ್ನ ಆಡುವ ಬಳಗದಲ್ಲಿ ಬದಲಾವಣೆ ಮಾಡಿಕೊಳ್ಳುವ ಸಾಧ್ಯತೆಯಿಲ್ಲ. ಏಕೆಂದರೆ ಅಫ್ಘಾನಿಸ್ತಾನ್ ವಿರುದ್ಧದ ಪಂದ್ಯದಲ್ಲಿ ಟೀಮ್ ಇಂಡಿಯಾ ಸಾಂಘಿಕ ಪ್ರದರ್ಶನ ನೀಡಿದೆ. ಹೀಗಾಗಿ ಬಾಂಗ್ಲಾದೇಶ್ ವಿರುದ್ಧ ಕೂಡ ಅದೇ ಪ್ಲೇಯಿಂಗ್ ಇಲೆವೆನ್ ಅನ್ನು ಕಣಕ್ಕಿಳಿಸುವ ಸಾಧ್ಯತೆ ಹೆಚ್ಚಿದೆ.
ಇದರಿಂದ ಈ ಪಂದ್ಯದಲ್ಲೂ ಟೀಮ್ ಇಂಡಿಯಾ ವೇಗಿ ಮೊಹಮ್ಮದ್ ಸಿರಾಜ್ ಬೆಂಚ್ ಕಾಯಬೇಕಾಗಿ ಬರಬಹುದು. ಏಕೆಂದರೆ ಕಳೆದ ಪಂದ್ಯದಲ್ಲಿ ಸಿರಾಜ್ ಬದಲಿಗೆ ಸ್ಪಿನ್ನರ್ ಕುಲ್ದೀಪ್ ಯಾದವ್ಗೆ ಚಾನ್ಸ್ ನೀಡಲಾಗಿತ್ತು. ಸಿಕ್ಕ ಅವಕಾಶದಲ್ಲಿ ಉತ್ತಮ ಬೌಲಿಂಗ್ ಪ್ರದರ್ಶಿಸಿದ್ದ ಕುಲ್ದೀಪ್ 4 ಓವರ್ಗಳಲ್ಲಿ 32 ರನ್ ನೀಡಿ 2 ವಿಕೆಟ್ ಕಬಳಿಸಿದ್ದರು. ಹೀಗಾಗಿ ಇಂದಿನ ಪಂದ್ಯದಲ್ಲೂ ಹಿರಿಯ ಸ್ಪಿನ್ನರ್ ಅನ್ನೇ ಆಡುವ ಬಳಗದಲ್ಲಿ ಮುಂದುವರೆಸುವ ಸಾಧ್ಯತೆಯಿದೆ.
ಅದರಂತೆ ಟೀಮ್ ಇಂಡಿಯಾ ಪರ ಆರಂಭಿಕರಾಗಿ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿ ಇನಿಂಗ್ಸ್ ಆರಂಭಿಸಲಿದ್ದಾರೆ. ಇನ್ನು ಮೂರನೇ ಕ್ರಮಾಂಕದಲ್ಲಿ ರಿಷಭ್ ಪಂತ್ ಮುಂದುವರೆಯಲಿದ್ದಾರೆ. ಹಾಗೆಯೇ ನಾಲ್ಕನೇ ಕ್ರಮಾಂಕದಲ್ಲಿ ಸೂರ್ಯಕುಮಾರ್ ಯಾದವ್, ಐದನೇ ಕ್ರಮಾಂಕದಲ್ಲಿ ಶಿವಂ ದುಬೆ ಬ್ಯಾಟ್ ಬೀಸಲಿದ್ದಾರೆ.
ಇನ್ನು ಆಲ್ರೌಂಡರ್ಗಳಾಗಿ ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ ಹಾಗೂ ಅಕ್ಷರ್ ಪಟೇಲ್ ಕಣಕ್ಕಿಳಿಯಲಿದ್ದಾರೆ. ಸ್ಪಿನ್ನರ್ ಆಗಿ ಕುಲ್ದೀಪ್ ಯಾದವ್ಗೆ ಸ್ಥಾನ ಸಿಗಲಿದೆ. ವೇಗಿಗಳಾಗಿ ಜಸ್ಪ್ರೀತ್ ಬುಮ್ರಾ ಮತ್ತು ಅರ್ಷದೀಪ್ ಸಿಂಗ್ ಪ್ಲೇಯಿಂಗ್ ಇಲೆವೆನ್ನಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಅದರಂತೆ ಟೀಮ್ ಇಂಡಿಯಾದ ಸಂಭಾವ್ಯ ಪ್ಲೇಯಿಂಗ್ ಇಲೆವೆನ್ ಹೀಗಿರಲಿದೆ…
ಇದನ್ನೂ ಓದಿ: Abhishek Sharma: 25 ಎಸೆತಗಳಲ್ಲಿ ಸ್ಪೋಟಕ ಸೆಂಚುರಿ ಸಿಡಿಸಿದ ಅಭಿಷೇಕ್ ಶರ್ಮಾ