IND vs BAN: 2ನೇ ಟಿ20 ಪಂದ್ಯಕ್ಕಾಗಿ ದೆಹಲಿಗೆ ಬಂದಿಳಿದ ಟೀಂ ಇಂಡಿಯಾ
IND vs BAN: ಬಾಂಗ್ಲಾದೇಶ ವಿರುದ್ಧ ಗ್ವಾಲಿಯರ್‌ನಲ್ಲಿ ನಡೆದ ಮೊದಲ ಟಿ20 ಪಂದ್ಯದಲ್ಲಿ ಅಮೋಘ ಗೆಲುವು ಸಾಧಿಸಿದ ಬಳಿಕ ಸೂರ್ಯಕುಮಾರ್ ಯಾದವ್ ನೇತೃತ್ವದ ಭಾರತ ತಂಡ ಸೋಮವಾರ ನವದೆಹಲಿಗೆ ಬಂದಿಳಿದಿದೆ. ಉಭಯ ತಂಡಗಳ ನಡುವಿನ ಎರಡನೇ ಟಿ20 ಪಂದ್ಯ ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಇದೇ ಬುಧವಾರ ನಡೆಯಲಿದೆ.
ಬಾಂಗ್ಲಾದೇಶ ವಿರುದ್ಧ ಗ್ವಾಲಿಯರ್‌ನಲ್ಲಿ ನಡೆದ ಮೊದಲ ಟಿ20 ಪಂದ್ಯದಲ್ಲಿ ಅಮೋಘ ಗೆಲುವು ಸಾಧಿಸಿದ ಬಳಿಕ ಸೂರ್ಯಕುಮಾರ್ ಯಾದವ್ ನೇತೃತ್ವದ ಭಾರತ ತಂಡ ಸೋಮವಾರ ನವದೆಹಲಿಗೆ ಬಂದಿಳಿದಿದೆ. ಉಭಯ ತಂಡಗಳ ನಡುವಿನ ಎರಡನೇ ಟಿ20 ಪಂದ್ಯ ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಇದೇ ಬುಧವಾರ ನಡೆಯಲಿದೆ. ಹೀಗಾಗಿ ಟೀಂ ಇಂಡಿಯಾ ದೆಹಲಿಗೆ ಪ್ರಯಾಣ ಬೆಳೆಸಿದ್ದು, ಇಂದಿರಾಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾರಿ ಪ್ರಮಾಣದ ಅಭಿಮಾನಿಗಳು ತಂಡದ ಆಟಗಾರರನ್ನು ಸ್ವಾಗತಿಸಿದರು. ಆ ಬಳಿಕ ತಂಡದ ಸದಸ್ಯರು ಹೋಟೆಲ್‌ಗೆ ತೆರಳಿದರು.
ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಬುಧವಾರ ನಡೆಯಲಿರುವ ಎರಡನೇ ಪಂದ್ಯವನ್ನು ಗೆಲ್ಲುವ ಮೂಲಕ ಭಾರತ ತಂಡ ಮೂರು ಪಂದ್ಯಗಳ ಸರಣಿಯಲ್ಲಿ 2-0 ಮುನ್ನಡೆ ಸಾಧಿಸಲು ಬಯಸಿದೆ. ದೆಹಲಿಯಲ್ಲಿ ಉಭಯ ತಂಡಗಳ ನಡುವೆ ಹೆಚ್ಚಿನ ಸ್ಕೋರಿಂಗ್ ಪಂದ್ಯವನ್ನು ಕಾಣಬಹುದು ಎಂದು ಊಹಿಲಾಗಿದೆ. ಗ್ವಾಲಿಯರ್‌ನಲ್ಲಿ ನಡೆದ ಮೊದಲ ಪಂದ್ಯವನ್ನು ಏಳು ವಿಕೆಟ್‌ಗಳಿಂದ ಗೆದ್ದಿರುವ ಭಾರತ ತಂಡ ಈಗಾಗಲೇ ಸರಣಿಯಲ್ಲಿ 1-0 ಅಂತರದಿಂದ ಮುನ್ನಡೆ ಸಾಧಿಸಿದೆ.
#WATCH | Delhi | Indian Cricket team arrives at the Delhi airport.
India will play against Bangladesh in the second T-20 international at Arun Jaitley Stadium on October 9. pic.twitter.com/Yw578Z1xrz
— ANI (@ANI) October 7, 2024
ಭಾರತಕ್ಕೆ ಏಕಪಕ್ಷೀಯ ಗೆಲುವು
ಬಾಂಗ್ಲಾದೇಶ ವಿರುದ್ಧದ ಮೊದಲ ಪಂದ್ಯದಲ್ಲಿ ಭಾರತ ತಂಡ ಎಲ್ಲಾ ವಿಭಾಗದಲ್ಲೂ ಆಕರ್ಷಕ ಪ್ರದರ್ಶನ ನೀಡಿತ್ತು. ವರುಣ್ ಚಕ್ರವರ್ತಿ ಮತ್ತು ಅರ್ಷದೀಪ್ ಸಿಂಗ್ ಅವರ ಮಾರಕ ಬೌಲಿಂಗ್ ಪ್ರದರ್ಶನದಿಂದಾಗಿ ಭಾರತ ತಂಡ ಮೊದಲು ಬ್ಯಾಟಿಂಗ್ ಮಾಡಿದ ಬಾಂಗ್ಲಾದೇಶವನ್ನು 19.5 ಓವರ್‌ಗಳಲ್ಲಿ 127 ರನ್‌ಗಳಿಗೆ ಆಲೌಟ್ ಮಾಡಿತು. ಇದಾದ ಬಳಿಕ ಅನುಭವಿ ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ ಹಾಗೂ ನಾಯಕ ಸೂರ್ಯಕುಮಾರ್ ಅವರ ಅಮೋಘ ಬ್ಯಾಟಿಂಗ್ ನೆರವಿನಿಂದ ಭಾರತ ತಂಡ 11.5 ಓವರ್‌ಗಳಲ್ಲಿ ಮೂರು ವಿಕೆಟ್‌ಗೆ 132 ರನ್ ಕಲೆಹಾಕಿ ಪಂದ್ಯವನ್ನು ಗೆದ್ದುಕೊಂಡಿತು. 16 ಎಸೆತಗಳಲ್ಲಿ ಐದು ಬೌಂಡರಿ ಹಾಗೂ 2 ಸಿಕ್ಸರ್ ನೆರವಿನಿಂದ 39 ರನ್ ಗಳಿಸಿ ಅಜೇಯರಾಗಿ ಉಳಿದ ಹಾರ್ದಿಕ್ ಭಾರತದ ಪರ ಗರಿಷ್ಠ ರನ್ ಗಳಿಸಿದರು. ಇನ್ನು ಬೌಲಿಂಗ್ನಲ್ಲಿ ಅರ್ಷದೀಪ್ ಮತ್ತು ವರುಣ್ ತಲಾ ಮೂರು ವಿಕೆಟ್ ಪಡೆದರೆ, ಅರ್ಷದೀಪ್ ತಮ್ಮ ಅತ್ಯುತ್ತಮ ಬೌಲಿಂಗ್ಗಾಗಿ ಪಂದ್ಯದ ಆಟಗಾರ ಪ್ರಶಸ್ತಿ ಕೂಡ ಪಡೆದರು.
ಟಿ20 ಸರಣಿಗೆ ಭಾರತ ತಂಡ: ಅಭಿಷೇಕ್ ಶರ್ಮಾ, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಸೂರ್ಯಕುಮಾರ್ ಯಾದವ್ (ನಾಯಕ), ತಿಲಕ್ ವರ್ಮಾ, ರಿಯಾನ್ ಪರಾಗ್, ಹಾರ್ದಿಕ್ ಪಾಂಡ್ಯ, ರಿಂಕು ಸಿಂಗ್, ವಾಷಿಂಗ್ಟನ್ ಸುಂದರ್, ರವಿ ಬಿಷ್ಣೋಯ್, ಮಯಾಂಕ್ ಯಾದವ್, ಅರ್ಷದೀಪ್ ಸಿಂಗ್, ಜಿತೇಶ್ ಶರ್ಮಾ, ವರುಣ್ ಚಕ್ರವರ್ತಿ, ನಿತೀಶ್ ರೆಡ್ಡಿ, ಹರ್ಷಿತ್ ರಾಣಾ.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ