IND vs BAN: ಮೊದಲ ಟೆಸ್ಟ್​ಗೆ ಟೀಮ್ ಇಂಡಿಯಾ ಪ್ಲೇಯಿಂಗ್ ಇಲೆವೆನ್ ಹೀಗಿರಲಿದೆ

|

Updated on: Sep 18, 2024 | 2:52 PM

India vs Bangladesh, 1st Test: ಭಾರತ ಮತ್ತು ಬಾಂಗ್ಲಾದೇಶ್ ತಂಡಗಳು ಟೆಸ್ಟ್ ಕ್ರಿಕೆಟ್​ನಲ್ಲಿ ಒಟ್ಟು 13 ಬಾರಿ ಮುಖಾಮುಖಿಯಾಗಿವೆ. ಈ ವೇಳೆ ಭಾರತ ತಂಡ 11 ಪಂದ್ಯಗಳಲ್ಲಿ ಜಯ ಸಾಧಿಸಿದೆ. ಅತ್ತ ಒಂದೇ ಒಂದು ಗೆಲುವು ದಾಖಲಿಸಲು ಸಾಧ್ಯವಾಗದ ಬಾಂಗ್ಲಾದೇಶ್ ತಂಡವು 2 ಪಂದ್ಯಗಳನ್ನು ಡ್ರಾ ಮಾಡಿಕೊಳ್ಳುವಲ್ಲಿ ಯಶಸ್ವಿಯಾಗಿತ್ತು. ಇದೀಗ 14ನೇ ಬಾರಿಗೆ ಮುಖಾಮುಖಿಯಾಗಲು ಉಭಯ ತಂಡಗಳು ಸಜ್ಜಾಗಿ ನಿಂತಿದೆ.

IND vs BAN: ಮೊದಲ ಟೆಸ್ಟ್​ಗೆ ಟೀಮ್ ಇಂಡಿಯಾ ಪ್ಲೇಯಿಂಗ್ ಇಲೆವೆನ್ ಹೀಗಿರಲಿದೆ
Team India
Follow us on

ಭಾರತ ಮತ್ತು ಬಾಂಗ್ಲಾದೇಶ್ ನಡುವಣ ಮೊದಲ ಟೆಸ್ಟ್ ಪಂದ್ಯವು ನಾಳೆಯಿಂದ (ಸೆ.19) ಶುರುವಾಗಲಿದೆ. ಚೆನ್ನೈ ಎಂಎ ಚಿದಂಬರಂ (ಚೆಪಾಕ್) ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯಕ್ಕಾಗಿ ಟೀಮ್ ಇಂಡಿಯಾ ಬಲಿಷ್ಠ ಪ್ಲೇಯಿಂಗ್ ಇಲೆವೆನ್ ಅನ್ನು ಕಣಕ್ಕಿಳಿಸಲಿದೆ. ಅದರಂತೆ ಟೀಮ್ ಇಂಡಿಯಾ ಪರ ಆರಂಭಿಕರಾಗಿ ಯಶಸ್ವಿ ಜೈಸ್ವಾಲ್ ಹಾಗೂ ನಾಯಕ ರೋಹಿತ್ ಶರ್ಮಾ ಕಾಣಿಸಿಕೊಳ್ಳುವುದು ಖಚಿತ.

ಮೂರನೇ ಕ್ರಮಾಂಕದಲ್ಲಿ ಶುಭ್​​ಮನ್ ಗಿಲ್ ಕಣಕ್ಕಿಳಿಯಲಿದ್ದಾರೆ. ನಾಲ್ಕನೇ ಕ್ರಮಾಂಕದಲ್ಲಿ ವಿರಾಟ್ ಕೊಹ್ಲಿ ಬ್ಯಾಟ್ ಬೀಸಲಿದ್ದಾರೆ. ಹಾಗೆಯೇ ಐದನೇ ಕ್ರಮಾಂಕದಲ್ಲಿ ಕೆಎಲ್ ರಾಹುಲ್ ಹಾಗೂ ಆರನೇ ಕ್ರಮಾಂಕದಲ್ಲಿ ವಿಕೆಟ್ ಕೀಪರ್ ಬ್ಯಾಟರ್ ಆಗಿ ರಿಷಭ್ ಪಂತ್ ಕಾಣಿಸಿಕೊಳ್ಳಲಿದ್ದಾರೆ.

ಇದನ್ನೂ ಓದಿ: IPL 2025: ಈ ಸಲ ಕಪ್ ನಮ್ದೆ… ಇದುವೇ ಕೆಎಲ್ ರಾಹುಲ್ ಇಚ್ಛೆ..!

ಇನ್ನು ಆಲ್​ರೌಂಡರ್​ಗಳಾಗಿ ರವೀಂದ್ರ ಜಡೇಜಾ ಹಾಗೂ ರವಿಚಂದ್ರನ್ ಅಶ್ವಿನ್ ಕಾಣಿಸಿಕೊಳ್ಳುವುದು ಖಚಿತ. ಇಲ್ಲಿ ಜಡೇಜಾ ಹಾಗೂ ಅಶ್ವಿನ್ ಆಲ್​ರೌಂಡರ್​ಗಳಾಗಿರುವ ಕಾರಣ 8ನೇ ಕ್ರಮಾಂಕದವರೆಗೆ ಬ್ಯಾಟಿಂಗ್ ಲೈನಪ್​ ಮುಂದುವರೆಸಬಹುದು.

ಇನ್ನುಳಿದಂತೆ ವೇಗಿಗಳಾಗಿ ಜಸ್​ಪ್ರೀತ್ ಬುಮ್ರಾ ಹಾಗೂ ಮೊಹಮ್ಮದ್ ಸಿರಾಜ್ ಕಾಣಿಸಿಕೊಂಡರೆ, ಸ್ಪಿನ್ನರ್ ಆಗಿ ಕುಲ್ದೀಪ್ ಯಾದವ್ ಕಣಕ್ಕಿಳಿಯಲಿದ್ದಾರೆ. ಈ ಮೂಲಕ ಮೊದಲ ಟೆಸ್ಟ್ ಪಂದ್ಯಕ್ಕೆ ಟೀಮ್ ಇಂಡಿಯಾ ಬಲಿಷ್ಠ ಪ್ಲೇಯಿಂಗ್ ಇಲೆವೆನ್ ರೂಪಿಸಲಿದೆ. ಅದರಂತೆ ಮೊದಲ ಪಂದ್ಯಕ್ಕೆ ಟೀಮ್ ಇಂಡಿಯಾ ಸಂಭಾವ್ಯ ಪ್ಲೇಯಿಂಗ್ ಇಲೆವೆನ್ ಹೀಗಿರಲಿದೆ…

  1. ಯಶಸ್ವಿ ಜೈಸ್ವಾಲ್
  2. ರೋಹಿತ್ ಶರ್ಮಾ
  3. ಶುಭ್​ಮನ್ ಗಿಲ್
  4. ವಿರಾಟ್ ಕೊಹ್ಲಿ
  5. ಕೆಎಲ್ ರಾಹುಲ್
  6. ರಿಷಭ್ ಪಂತ್
  7. ರವೀಂದ್ರ ಜಡೇಜಾ
  8. ರವಿಚಂದ್ರನ್ ಅಶ್ವಿನ್
  9. ಜಸ್​ಪ್ರೀತ್ ಬುಮ್ರಾ
  10. ಮೊಹಮ್ಮದ್ ಸಿರಾಜ್
  11. ಕುಲ್ದೀಪ್ ಯಾದವ್

ಭಾರತ ಟೆಸ್ಟ್ ತಂಡ:

ರೋಹಿತ್ ಶರ್ಮಾ (ನಾಯಕ), ಯಶಸ್ವಿ ಜೈಸ್ವಾಲ್, ಶುಭ್​ಮನ್ ಗಿಲ್, ವಿರಾಟ್ ಕೊಹ್ಲಿ, ಸರ್ಫರಾಝ್ ಖಾನ್, ಕೆಎಲ್ ರಾಹುಲ್, ರಿಷಭ್ ಪಂತ್ (ವಿಕೆಟ್ ಕೀಪರ್), ಧ್ರುವ್ ಜುರೆಲ್ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ, ಕುಲ್ದೀಪ್ ಯಾದವ್, ಅಕ್ಷರ್ ಪಟೇಲ್, ಮೊಹಮ್ಮದ್ ಸಿರಾಜ್, ಜಸ್​ಪ್ರೀತ್ ಬುಮ್ರಾ , ಆಕಾಶ್ ದೀಪ್ ಮತ್ತು ಯಶ್ ದಯಾಳ್.

 

ಭಾರತ vs ಬಾಂಗ್ಲಾದೇಶ್ ಸರಣಿ ವೇಳಾಪಟ್ಟಿ:

ತಂಡಗಳು ದಿನಾಂಕ ಸಮಯ ಸ್ಥಳ
1ನೇ ಟೆಸ್ಟ್, ಭಾರತ vs ಬಾಂಗ್ಲಾದೇಶ ಗುರುವಾರ, 19 ಸೆಪ್ಟೆಂಬರ್ 2024 9:30 AM ಚೆನ್ನೈ
2ನೇ ಟೆಸ್ಟ್, ಭಾರತ vs ಬಾಂಗ್ಲಾದೇಶ ಶುಕ್ರವಾರ, 27 ಸೆಪ್ಟೆಂಬರ್ 2024 9:30 AM ಕಾನ್ಪುರ