ಭಾರತ ಮತ್ತು ಬಾಂಗ್ಲಾದೇಶ್ ನಡುವಿನ 2ನೇ ಟೆಸ್ಟ್ ಪಂದ್ಯವು ಶುಕ್ರವಾರದಿಂದ (ಸೆ.26) ಶುರುವಾಗಲಿದೆ. ಕಾನ್ಪುರದ ಗ್ರೀನ್ ಪಾರ್ಕ್ ಮೈದಾನದಲ್ಲಿ ಜರುಗಲಿರುವ ಈ ಪಂದ್ಯಕ್ಕಾಗಿ ಟೀಮ್ ಇಂಡಿಯಾ ಬಲಿಷ್ಠ ಪ್ಲೇಯಿಂಗ್ ಇಲೆವೆನ್ ಅನ್ನು ಕಣಕ್ಕಿಳಿಸಲಿದೆ. ಏಕೆಂದರೆ ಈ ಸರಣಿಯ ಬಳಿಕ ಟೀಮ್ ಇಂಡಿಯಾ ನ್ಯೂಝಿಲೆಂಡ್ ವಿರುದ್ದ ಮೂರು ಟೆಸ್ಟ್ ಪಂದ್ಯಗಳನ್ನಾಡಬೇಕಿದೆ. ಅದಕ್ಕೂ ಮುನ್ನ ಪ್ರಮುಖ ಸಮತೋಲಿತ ಆಡುವ ಬಳಗ ರೂಪಿಸುವ ಅನಿವಾರ್ಯತೆ ಟೀಮ್ ಇಂಡಿಯಾ ಮುಂದಿದೆ. ಹೀಗಾಗಿ ಬಾಂಗ್ಲಾದೇಶ್ ವಿರುದ್ಧದ ಎರಡನೇ ಪಂದ್ಯದಲ್ಲಿ ಟೀಮ್ ಇಂಡಿಯಾ ಪರ ಪ್ರಮುಖ ಆಟಗಾರರು ಕಣಕ್ಕಿಳಿಯಲಿದ್ದಾರೆ.
ಅದರಂತೆ ಇಲ್ಲಿ ಆರಂಭಿಕರಾಗಿ ಯಶಸ್ವಿ ಜೈಸ್ವಾಲ್ ಹಾಗೂ ರೋಹಿತ್ ಶರ್ಮಾ ಮುಂದುವರೆಯಲಿದ್ದಾರೆ. ಇನ್ನು ಮೂರನೇ ಕ್ರಮಾಂಕದಲ್ಲಿ ಶುಭ್ಮನ್ ಗಿಲ್ ಆಡುವುದು ಖಚಿತ. ಹಾಗೆಯೇ ನಾಲ್ಕನೇ ಕ್ರಮಾಂಕ ವಿರಾಟ್ ಕೊಹ್ಲಿಗೆ ಖಾಯಂ. ಐದನೇ ಸ್ಥಾನದಲ್ಲಿ ರಿಷಭ್ ಪಂತ್ ಬ್ಯಾಟ್ ಬೀಸಲಿದ್ದಾರೆ.
ಇನ್ನು ಆರನೇ ಕ್ರಮಾಂಕದಲ್ಲಿ ಕೆಎಲ್ ರಾಹುಲ್ಗೆ ಮತ್ತೊಂದು ಚಾನ್ಸ್ ನೀಡುವ ಸಾಧ್ಯತೆ ಹೆಚ್ಚಿದೆ. ಇನ್ನು ಏಳನೇ ಮತ್ತು ಎಂಟನೇ ಕ್ರಮಾಂಕಗಳಲ್ಲಿ ಆಲ್ರೌಂಡರ್ಗಳಾಗಿ ರವೀಂದ್ರ ಜಡೇಜಾ ಹಾಗೂ ರವಿಚಂದ್ರನ್ ಅಶ್ವಿನ್ ಕಣಕ್ಕಿಳಿಯಲಿದ್ದಾರೆ. ಹಾಗೆಯೇ ಸ್ಪಿನ್ನರ್ ಆಗಿ ಕುಲ್ದೀಪ್ ಯಾದವ್ಗೆ ಚಾನ್ಸ್ ಸಿಗುವ ಸಾಧ್ಯತೆಯಿದೆ.
ಇದನ್ನೂ ಓದಿ: IPL 2025: ಧೋನಿಯ ಸಂಭಾವನೆ ಕಡಿತ: ಅತೀ ಕಡಿಮೆ ಮೊತ್ತ ಪಡೆಯಲಿರುವ MSD
ಇಲ್ಲಿ ಕುಲ್ದೀಪ್ ಯಾದವ್ ಅವರನ್ನು ಕಣಕ್ಕಿಳಿಸಿದರೆ, ಮೊಹಮ್ಮದ್ ಸಿರಾಜ್ ಅಥವಾ ಆಕಾಶ್ ದೀಪ್ ಸ್ಥಾನ ಕಳೆದುಕೊಳ್ಳಬಹುದು. ಏಕೆಂದರೆ ಗ್ರೀನ್ ಪಾರ್ಕ್ ಮೈದಾನದ ಪಿಚ್ ಸ್ಪಿನ್ನರ್ಗಳಿಗೆ ಸಹಕಾರಿಯಾಗುವ ನಿರೀಕ್ಷೆಯಿದೆ. ಹೀಗಾಗಿ ಮೊದಲ ಟೆಸ್ಟ್ನಲ್ಲಿ ನಿರೀಕ್ಷಿತ ಪ್ರದರ್ಶನ ನೀಡದ ಸಿರಾಜ್ ಬದಲಿಗೆ ಕುಲ್ದೀಪ್ ಯಾದವ್ಗೆ ಚಾನ್ಸ್ ಸಿಗುವ ಸಾಧ್ಯತೆ ಹೆಚ್ಚಿದೆ. ಹಾಗೆಯೇ ಪ್ರಮುಖ ವೇಗಿಯಾಗಿ ಜಸ್ಪ್ರೀತ್ ಬುಮ್ರಾ ಕಣಕ್ಕಿಳಿಯಲಿದ್ದಾರೆ. ಅದರಂತೆ ಟೀಮ್ ಇಂಡಿಯಾದ ಸಂಭಾವ್ಯ ಪ್ಲೇಯಿಂಗ್ ಇಲೆವೆನ್ ಈ ಕೆಳಗಿನಂತಿದೆ….
ಭಾರತ ಟೆಸ್ಟ್ ತಂಡ:
ರೋಹಿತ್ ಶರ್ಮಾ (ನಾಯಕ), ಯಶಸ್ವಿ ಜೈಸ್ವಾಲ್, ಶುಭ್ಮನ್ ಗಿಲ್, ವಿರಾಟ್ ಕೊಹ್ಲಿ, ಕೆಎಲ್ ರಾಹುಲ್, ರಿಷಭ್ ಪಂತ್ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ, ಕುಲ್ದೀಪ್ ಯಾದವ್, ಅಕ್ಷರ್ ಪಟೇಲ್, ಮೊಹಮ್ಮದ್ ಸಿರಾಜ್, ಜಸ್ಪ್ರೀತ್ ಬುಮ್ರಾ , ಆಕಾಶ್ ದೀಪ್ ಮತ್ತು ಯಶ್ ದಯಾಳ್*, ಧ್ರುವ್ ಜುರೆಲ್* (ವಿಕೆಟ್ ಕೀಪರ್), ಸರ್ಫರಾಝ್ ಖಾನ್*.