India vs Bangladesh: ಭಾರತ-ಬಾಂಗ್ಲಾದೇಶ್ ನಡುವಣ ಏಕದಿನ ಹಾಗೂ ಟೆಸ್ಟ್ ಸರಣಿಯಿಂದ ಟೀಮ್ ಇಂಡಿಯಾದ (Team India) ಆಲ್ರೌಂಡರ್ ರವೀಂದ್ರ ಜಡೇಜಾ (Ravindra Jadeja) ಹೊರಬಿದ್ದಿದ್ದಾರೆ. ಕಳೆದ ಏಷ್ಯಾಕಪ್ ವೇಳೆ ಗಾಯಗೊಂಡಿದ್ದ ಜಡೇಜಾ ಮೊಣಕಾಲಿನ ಕಾಲಿನ ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದರು. ಹೀಗಾಗಿ ಟಿ20 ವಿಶ್ವಕಪ್ನಲ್ಲಿ ಕಾಣಿಸಿಕೊಂಡಿರಲಿಲ್ಲ. ಇದಾಗ್ಯೂ ಬಾಂಗ್ಲಾ ವಿರುದ್ಧದ ಸರಣಿಯ ಮೂಲಕ ಜಡ್ಡು ಕಂಬ್ಯಾಕ್ ಮಾಡಲಿದ್ದಾರೆ ಎನ್ನಲಾಗಿತ್ತು. ಆದರೆ ಸಂಪೂರ್ಣ ಫಿಟ್ ಆಗದ ಕಾರಣ ಅವರನ್ನು ಏಕದಿನ ತಂಡದ ಆಯ್ಕೆಗೆ ಪರಿಗಣಿಸಿರಲಿಲ್ಲ.
ಇದೀಗ ಟೆಸ್ಟ್ ಸರಣಿಯಿಂದಲೂ ರವೀಂದ್ರ ಜಡೇಜಾ ಹೊರಬಿದ್ದಿದ್ದಾರೆ. ಅಲ್ಲದೆ ಅವರ ಬದಲಿಗೆ ಉತ್ತರ ಪ್ರದೇಶದ ಆಟಗಾರ ಸೌರಭ್ ಕುಮಾರ್ ಆಯ್ಕೆಯಾಗಲಿದ್ದಾರೆ ಎಂದು ವರದಿಯಾಗಿದೆ. ಹಾಗೆಯೇ ಹೆಚ್ಚುವರಿ ಆಟಗಾರನ ಸ್ಥಾನದಲ್ಲಿ ಸೂರ್ಯಕುಮಾರ್ ಯಾದವ್ಗೂ ಅವಕಾಶ ಸಿಗುವ ಸಾಧ್ಯತೆಯಿದೆ.
ಜಡೇಜಾ ಅವರು ಸಂಪೂರ್ಣ ಗುಣಮುಖರಾಗಿಲ್ಲ. ಹೀಗಾಗಿ ಟೆಸ್ಟ್ ಸರಣಿ ವೇಳೆಗೆ ಅವರು ಕಂಬ್ಯಾಕ್ ಮಾಡುವುದು ಅನುಮಾನ. ಅಲ್ಲದೆ ಮತ್ತಷ್ಟು ವಿಶ್ರಾಂತಿ ತೆಗೆದುಕೊಳ್ಳುವಂತೆ ವೈದ್ಯರ ತಂಡ ಸಲಹೆ ನೀಡಿದೆ. ಹೀಗಾಗಿ ಟೆಸ್ಟ್ ತಂಡದ ಆಯ್ಕೆಗೂ ನಾವು ಜಡೇಜಾ ಅವರನ್ನು ಪರಿಗಣಿಸುತ್ತಿಲ್ಲ ಎಂದು ಆಯ್ಕೆ ಸಮಿತಿಯ ಸದಸ್ಯರೊಬ್ಬರು ತಿಳಿಸಿದ್ದಾರೆ.
ಭಾರತ-ಬಾಂಗ್ಲಾದೇಶ್ ನಡುವಣ 3 ಪಂದ್ಯಗಳ ಏಕದಿನ ಸರಣಿಯು ಡಿಸೆಂಬರ್ 4 ರಿಂದ ಶುರುವಾಗಲಿದ್ದು, ಇದಾದ ಬಳಿಕ ಡಿಸೆಂಬರ್ 14 ರಿಂದ 2 ಪಂದ್ಯಗಳ ಟೆಸ್ಟ್ ಸರಣಿ ನಡೆಯಲಿದೆ.
ಬಾಂಗ್ಲಾದೇಶ ವಿರುದ್ಧದ ಏಕದಿನ ಸರಣಿಗೆ ಭಾರತ ತಂಡ ಹೀಗಿದೆ:
ರೋಹಿತ್ ಶರ್ಮಾ (ನಾಯಕ), ಕೆ.ಎಲ್. ರಾಹುಲ್ (ಉಪ ನಾಯಕ), ಶಿಖರ್ ಧವನ್, ವಿರಾಟ್ ಕೊಹ್ಲಿ, ರಜತ್ ಪಾಟೀದಾರ್, ಶ್ರೇಯಸ್ ಅಯ್ಯರ್, ರಾಹುಲ್ ತ್ರಿಪಾಠಿ, ರಿಷಭ್ ಪಂತ್ (ವಿಕೆಟ್ ಕೀಪರ್), ಇಶಾನ್ ಕಿಶನ್, ಶಾಬಾಜ್ ಅಹಮದ್, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ಶಾರ್ದೂಲ್ ಠಾಕೂರ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ದೀಪಕ್ ಚಾಹರ್, ಕುಲದೀಪ್ ಸೇನ್.
ಭಾರತ-ಬಾಂಗ್ಲಾದೇಶ್ ಏಕದಿನ ಸರಣಿ ವೇಳಾಪಟ್ಟಿ:
ಭಾರತ-ಬಾಂಗ್ಲಾದೇಶ್ ಟೆಸ್ಟ್ ಸರಣಿ ವೇಳಾಪಟ್ಟಿ: