AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs BAN: ಭಾರತ- ಬಾಂಗ್ಲಾ ನಡುವಿನ ಮೊದಲ ಟೆಸ್ಟ್ ಪಂದ್ಯ ಯಾವಾಗ? ಯಾವ ಚಾನೆಲ್​ನಲ್ಲಿ ನೇರಪ್ರಸಾರ?

IND vs BAN: ಭಾರತ ಮತ್ತು ಬಾಂಗ್ಲಾದೇಶ ನಡುವಿನ ಎರಡು ಪಂದ್ಯಗಳ ಟೆಸ್ಟ್ ಸರಣಿಯ ಮೊದಲ ಪಂದ್ಯ ಸೆಪ್ಟೆಂಬರ್ 19 ರಿಂದ ಚೆನ್ನೈನಲ್ಲಿ ಆರಂಭವಾಗಲಿದೆ. ಇದಾದ ಬಳಿಕ ಎರಡನೇ ಟೆಸ್ಟ್ ಪಂದ್ಯ ಕಾನ್ಪುರದಲ್ಲಿ ನಡೆಯಲಿದೆ. ಡಬ್ಲ್ಯುಟಿಸಿ ಫೈನಲ್ ದೃಷ್ಟಿಯಿಂದ ಈ ಸರಣಿ ಟೀಂ ಇಂಡಿಯಾಕ್ಕೆ ಅತ್ಯಂತ ಮಹತ್ವದಾಗಿದೆ.

IND vs BAN: ಭಾರತ- ಬಾಂಗ್ಲಾ ನಡುವಿನ ಮೊದಲ ಟೆಸ್ಟ್ ಪಂದ್ಯ ಯಾವಾಗ? ಯಾವ ಚಾನೆಲ್​ನಲ್ಲಿ ನೇರಪ್ರಸಾರ?
ಟೀಂ ಇಂಡಿಯಾ
ಪೃಥ್ವಿಶಂಕರ
|

Updated on:Sep 16, 2024 | 10:43 PM

Share

ಭಾರತ ಮತ್ತು ಬಾಂಗ್ಲಾದೇಶ ನಡುವಿನ ಎರಡು ಪಂದ್ಯಗಳ ಟೆಸ್ಟ್ ಸರಣಿಯ ಮೊದಲ ಪಂದ್ಯ ಸೆಪ್ಟೆಂಬರ್ 19 ರಿಂದ ಚೆನ್ನೈನಲ್ಲಿ ಆರಂಭವಾಗಲಿದೆ. ಇದಾದ ಬಳಿಕ ಎರಡನೇ ಟೆಸ್ಟ್ ಪಂದ್ಯ ಕಾನ್ಪುರದಲ್ಲಿ ನಡೆಯಲಿದೆ. ಡಬ್ಲ್ಯುಟಿಸಿ ಫೈನಲ್ ದೃಷ್ಟಿಯಿಂದ ಈ ಸರಣಿ ಟೀಂ ಇಂಡಿಯಾಕ್ಕೆ ಅತ್ಯಂತ ಮಹತ್ವದಾಗಿದ್ದು, ರೋಹಿತ್ ಪಡೆ ಶತಾಯಗತಾಯ ಗೆಲ್ಲುವ ಇರಾದೆಯೊಂದಿಗೆ ಅಖಾಡಕ್ಕಿಳಿಯಲಿದೆ. ಇತ್ತ ಬಾಂಗ್ಲಾದೇಶ ಕೂಡ ತನ್ನ ಗೆಲುವಿನ ಸರಣಿಯನ್ನು ಮುಂದುವರೆಸುವ ಗುರಿ ಹೊಂದಿದೆ. ವಾಸ್ತವವಾಗಿ ಇತ್ತೀಚೆಗಷ್ಟೇ ಬಾಂಗ್ಲಾದೇಶ ತಂಡ ಪಾಕಿಸ್ತಾನವನ್ನು ಟೆಸ್ಟ್ ಸರಣಿಯಲ್ಲಿ 2-0 ಅಂತರದಲ್ಲಿ ಸೋಲಿಸಿ ಇತಿಹಾಸ ನಿರ್ಮಿಸಿದೆ. ಹೀಗಾಗಿ ಉಭಯ ತಂಡಗಳ ನಡುವೆ ಜಿದ್ದಾಜಿದ್ದಿನ ಹೋರಾಟವನ್ನು ನಿರೀಕ್ಷಿಸಲಾಗಿದೆ.

ಪಂದ್ಯದ ಬಗ್ಗೆ ಇಲ್ಲಿದೆ ಪೂರ್ಣ ಮಾಹಿತಿ

ಭಾರತ ಹಾಗೂ ಬಾಂಗ್ಲಾದೇಶ ನಡುವಿನ ಮೊದಲ ಟೆಸ್ಟ್ ಪಂದ್ಯ ಯಾವಾಗ?

ಭಾರತ ಹಾಗೂ ಬಾಂಗ್ಲಾದೇಶ ನಡುವಿನ ಮೊದಲ ಟೆಸ್ಟ್ ಪಂದ್ಯ ಸೆಪ್ಟೆಂಬರ್ 19 ರಿಂದ ಆರಂಭವಾಗಲಿದೆ.

ಭಾರತ ಹಾಗೂ ಬಾಂಗ್ಲಾದೇಶ ನಡುವಿನ ಮೊದಲ ಟೆಸ್ಟ್ ಪಂದ್ಯ ಎಲ್ಲಿ ನಡೆಯಲ್ಲಿದೆ?

ಭಾರತ ಹಾಗೂ ಬಾಂಗ್ಲಾದೇಶ ನಡುವಿನ ಮೊದಲ ಟೆಸ್ಟ್ ಪಂದ್ಯ ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆಯಲ್ಲಿದೆ.

ಭಾರತ ಹಾಗೂ ಬಾಂಗ್ಲಾದೇಶ ನಡುವಿನ ಮೊದಲ ಟೆಸ್ಟ್ ಪಂದ್ಯ ಯಾವ ಚಾನೆಲ್​ನಲ್ಲಿ ನೇರ ಪ್ರಸಾರವಾಗಲಿದೆ?

ಭಾರತ ಹಾಗೂ ಬಾಂಗ್ಲಾದೇಶ ನಡುವಿನ ಮೊದಲ ಟೆಸ್ಟ್ ಪಂದ್ಯವನ್ನು ಸ್ಪೋರ್ಟ್ಸ್ 18 ಚಾನೆಲ್​ನಲ್ಲಿ ನೇರ ಪ್ರಸಾರ ಮಾಡಲಾಗುತ್ತದೆ.

ಭಾರತ ಹಾಗೂ ಬಾಂಗ್ಲಾದೇಶ ನಡುವಿನ ಮೊದಲ ಟೆಸ್ಟ್ ಪಂದ್ಯದ ಲೈವ್ ಸ್ಟ್ರೀಮಿಂಗ್ ವೀಕ್ಷಿಸುವುದು ಹೇಗೆ?

ಭಾರತ ಹಾಗೂ ಬಾಂಗ್ಲಾದೇಶ ನಡುವಿನ ಮೊದಲ ಟೆಸ್ಟ್ ಪಂದ್ಯವನ್ನು ಜಿಯೋ ಸಿನಿಮಾ ಆ್ಯಪ್​ನಲ್ಲಿ ಉಚಿತವಾಗಿ ವೀಕ್ಷಿಸಬಹುದಾಗಿದೆ.

ಉಭಯ ತಂಡಗಳು

ಮೊದಲ ಟೆಸ್ಟ್ ಪಂದ್ಯಕ್ಕೆ ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಯಶಸ್ವಿ ಜೈಸ್ವಾಲ್, ಶುಭ್​ಮನ್ ಗಿಲ್, ವಿರಾಟ್ ಕೊಹ್ಲಿ, ಕೆಎಲ್ ರಾಹುಲ್, ಸರ್ಫರಾಜ್ ಖಾನ್, ರಿಷಭ್ ಪಂತ್ (ವಿಕೆಟ್ ಕೀಪರ್), ಧ್ರುವ ಜುರೆಲ್ (ವಿಕೆಟ್ ಕೀಪರ್), ಆರ್ ಅಶ್ವಿನ್, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಕುಲ್ದೀಪ್ ಯಾದವ್, ಮೊಹಮ್ಮದ್ ಸಿರಾಜ್, ಆಕಾಶ್ ದೀಪ್, ಜಸ್ಪ್ರೀತ್ ಬುಮ್ರಾ ಮತ್ತು ಯಶ್ ದಯಾಳ್.

ಟೆಸ್ಟ್ ಸರಣಿಗೆ ಬಾಂಗ್ಲಾದೇಶ ತಂಡ: ನಜ್ಮುಲ್ ಹುಸೇನ್ ಶಾಂಟೊ (ನಾಯಕ), ಜಾಕಿರ್ ಹಸನ್, ಮೊಮಿನುಲ್ ಹಕ್, ಮುಶ್ಫಿಕರ್ ರಹೀಮ್, ಶಾದ್ಮನ್ ಇಸ್ಲಾಂ, ಶಕೀಬ್ ಅಲ್ ಹಸನ್, ಮೆಹದಿ ಹಸನ್ ಮಿರಾಜ್, ಝಾಕರ್ ಅಲಿ ಅನಿಕ್, ತಸ್ಕಿನ್ ಅಹ್ಮದ್, ಲಿಟನ್ ದಾಸ್, ಹಸನ್ ಮಹಮೂದ್, ತೈಜುಲ್ ಇಸ್ಲಾಂ, ಮಹ್ಮುದುಲ್ ಹಸನ್ ಜಾಯ್, ನಹಿದ್ ರಾಣಾ, ಖಾಲಿದ್ ಅಹ್ಮದ್.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:41 pm, Mon, 16 September 24