AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Breaking: ಇಂಗ್ಲೆಂಡ್ ವಿರುದ್ಧದ ಮೊದಲೆರಡು ಟೆಸ್ಟ್ ಪಂದ್ಯಗಳಿಗೆ ಟೀಂ ಇಂಡಿಯಾ ಪ್ರಕಟ..!

IND vs ENG: ಜನವರಿ 25 ರಿಂದ ಆರಂಭವಾಗಲಿರುವ ಭಾರತ ಮತ್ತು ಇಂಗ್ಲೆಂಡ್ ನಡುವಿನ ಐದು ಪಂದ್ಯಗಳ ಟೆಸ್ಟ್ ಸರಣಿಯ ಮೊದಲ ಎರಡು ಪಂದ್ಯಗಳಿಗೆ 16 ಸದಸ್ಯರ ಭಾರತ ತಂಡವನ್ನು ಬಿಸಿಸಿಐ ಹಿರಿಯ ಆಯ್ಕೆ ಮಂಡಳಿ ಇಂದು ಪ್ರಕಟಿಸಲಾಗಿದೆ. ಈ ಸರಣಿಗೆ ಇಂಗ್ಲೆಂಡ್ ತಂಡ ಈಗಾಗಲೇ ತನ್ನ ತಂಡವನ್ನು ಪ್ರಕಟಿಸಿತ್ತು, ಇದೀಗ ಭಾರತ ತಂಡವನ್ನೂ ಪ್ರಕಟಿಸಲಾಗಿದೆ.

Breaking: ಇಂಗ್ಲೆಂಡ್ ವಿರುದ್ಧದ ಮೊದಲೆರಡು ಟೆಸ್ಟ್ ಪಂದ್ಯಗಳಿಗೆ ಟೀಂ ಇಂಡಿಯಾ ಪ್ರಕಟ..!
ಟೀಂ ಇಂಡಿಯಾ
ಪೃಥ್ವಿಶಂಕರ
|

Updated on:Jan 12, 2024 | 11:20 PM

Share

ಜನವರಿ 25 ರಿಂದ ಆರಂಭವಾಗಲಿರುವ ಭಾರತ ಮತ್ತು ಇಂಗ್ಲೆಂಡ್ (India vs England) ನಡುವಿನ ಐದು ಪಂದ್ಯಗಳ ಟೆಸ್ಟ್ ಸರಣಿಯ (Test Series) ಮೊದಲ ಎರಡು ಪಂದ್ಯಗಳಿಗೆ 16 ಸದಸ್ಯರ ಭಾರತ ತಂಡವನ್ನು ಬಿಸಿಸಿಐ (BCCI) ಹಿರಿಯರ ಆಯ್ಕೆ ಸಮಿತಿಯೂ ಇಂದು ಪ್ರಕಟಿಸಿದೆ. ಈ ಸರಣಿಗೆ ಇಂಗ್ಲೆಂಡ್ ಮಂಡಳಿಯು ಈಗಾಗಲೇ ತನ್ನ ತಂಡವನ್ನು ಪ್ರಕಟಿಸಿತ್ತು, ಇದೀಗ ಭಾರತ ತಂಡವನ್ನೂ ಪ್ರಕಟಿಸಲಾಗಿದೆ. ಸರಣಿಯ ಮೊದಲ ಪಂದ್ಯ ಹೈದರಾಬಾದ್‌ನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯಲಿದೆ. ಎರಡನೇ ಪಂದ್ಯ ವಿಶಾಖಪಟ್ಟಣಂನ ವೈಎಸ್ ರಾಜಶೇಖರ ರೆಡ್ಡಿ ಎಸಿಎ-ವಿಡಿಸಿಎ ಅಂತರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯಲಿದೆ.

ಕಿಶನ್, ಶಮಿಗಿಲ್ಲ ಅವಕಾಶ

ಇಂಗ್ಲೆಂಡ್ ವಿರುದ್ಧ ನಡೆಯಲಿರುವ ಟೆಸ್ಟ್ ಸರಣಿಯ ಮೊದಲ ಎರಡು ಪಂದ್ಯಗಳಿಗೆ ಆಯ್ಕೆಯಾಗಿರುವ ತಂಡದಲ್ಲಿ ಮೊಹಮ್ಮದ್ ಶಮಿ ಹೆಸರಿಲ್ಲ. ಪ್ರಸ್ತುತ ಶಮಿ ಗಾಯದ ಸಮಸ್ಯೆಯಿಂದಾಗಿ ಟೀಂ ಇಂಡಿಯಾದಿಂದ ಹೊರಗುಳಿದಿದ್ದಾರೆ. ಈ ಸರಣಿಯಲ್ಲಿ ಶಮಿ ತಮ್ಮ ಗಾಯದಿಂದ ಹೊರಬಂದು ಟೀಂ ಇಂಡಿಯಾಕ್ಕೆ ಮರಳುತ್ತಾರೆ ಎಂದು ನಿರೀಕ್ಷಿಸಲಾಗಿತ್ತು. ಆದರೆ ಮೊದಲೆರಡು ಪಂದ್ಯಗಳಿಗೆ ಆಯ್ಕೆಯಾದ ತಂಡದಲ್ಲಿ ಶಮಿ ಹೆಸರಿಲ್ಲ. ಶಮಿ ಜೊತೆಗೆ ಯುವ ವಿಕೆಟ್‌ಕೀಪರ್ ಬ್ಯಾಟರ್ ಇಶಾನ್ ಕಿಶನ್ ಕೂಡ ಟೆಸ್ಟ್ ತಂಡದಲ್ಲಿ ಸ್ಥಾನ ಪಡೆದಿಲ್ಲ. ಇತ್ತೀಚೆಗೆ ದಕ್ಷಿಣ ಆಫ್ರಿಕಾ ವಿರುದ್ಧ ನಡೆದ ಟೆಸ್ಟ್ ಸರಣಿಗೆ ಅವರನ್ನು ಆಯ್ಕೆ ಮಾಡಲಾಗಿತ್ತು. ಆದರೆ ಟೆಸ್ಟ್ ಸರಣಿಯ ಆರಂಭಕ್ಕೂ ಮುನ್ನವೇ ಅವರು ಭಾರತಕ್ಕೆ ಮರಳಿದ್ದರು. ಇದೀಗ ಆಯ್ಕೆಯಾಗಿರುವ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ತಂಡದಲ್ಲೂ ಕಿಶನ್​ಗೆ ಅವಕಾಶ ನೀಡಲಾಗಿಲ್ಲ.

ಈ ಇಬ್ಬರು ಹೊಸ ಆಟಗಾರರಿಗೆ ಅವಕಾಶ

ಜನವರಿ ಅಂತ್ಯದಲ್ಲಿ ಆರಂಭವಾಗಲಿರುವ ಟೆಸ್ಟ್ ಸರಣಿಗೆ ಇಬ್ಬರು ಹೊಸ ಆಟಗಾರರನ್ನು ಟೆಸ್ಟ್ ತಂಡದಲ್ಲಿ ಸೇರಿಸಿಕೊಳ್ಳಲಾಗಿದೆ. ಆ ಆಟಗಾರರಲ್ಲಿ ಮೊದಲ ಹೆಸರು ಅವೇಶ್ ಖಾನ್. ಮೊಹಮ್ಮದ್ ಶಮಿ ಕೊರತೆಯನ್ನು ನೀಗಿಸಲು ಟೀಂ ಇಂಡಿಯಾದ ಟೆಸ್ಟ್ ತಂಡದಲ್ಲಿ ಆವೇಶ್​ಗೆ ಅವಕಾಶ ನೀಡಲಾಗಿದೆ. ಮತ್ತೊಂದೆಡೆ ಇಶಾನ್ ಕಿಶನ್ ಅವರ ಸ್ಥಾನವನ್ನು ತುಂಬಲು ಧ್ರುವ್ ಜುರೆಲ್ ವಿಕೆಟ್ ಕೀಪರ್ ಆಗಿ ತಂಡದಲ್ಲಿ ಅವಕಾಶ ಗಿಟ್ಟಿಸಿಕೊಂಡಿದ್ದಾರೆ. ಧ್ರುವ್ ಜುರೆಲ್ ಆಗಮನದೊಂದಿಗೆ ಭಾರತ ತಂಡದಲ್ಲಿ ಒಟ್ಟು 3 ವಿಕೆಟ್ ಕೀಪರ್‌ಗಳು ಸ್ಥಾನ ಪಡೆದಿದ್ದಾರೆ. ಧ್ರುವ್​ ಜೊತೆಗೆ ಕೆಎಲ್ ರಾಹುಲ್ ಮತ್ತು ಕೆಎಲ್ ಭರತ್ ಕೂಡ ಈ ಸ್ಥಾನದಲ್ಲಿ ಆಯ್ಕೆಯಾಗಿದ್ದಾರೆ.

ತಂಡದಲ್ಲಿ ನಾಲ್ವರು ಸ್ಪಿನ್ನರ್‌ಗಳು

ಭಾರತದಲ್ಲಿ ನಡೆಯಲಿರುವ ಟೆಸ್ಟ್ ಸರಣಿಗೆ ಭಾರತ ತಂಡದಲ್ಲಿ ನಾಲ್ವರು ಸ್ಪಿನ್ ಬೌಲರ್​ಗಳನ್ನು ಆಯ್ಕೆ ಮಾಡಲಾಗಿದೆ. ಆ ನಾಲ್ವರಲ್ಲಿ ಆರ್ ಅಶ್ವಿನ್, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್ ಮತ್ತು ಕುಲ್ದೀಪ್ ಯಾದವ್ ಸೇರಿದ್ದಾರೆ. ಉಳಿದಂತೆ ವೇಗದ ಬೌಲಿಂಗ್ ವಿಬಾಗದಲ್ಲಿ ಮೊಹಮ್ಮದ್ ಸಿರಾಜ್, ಮುಖೇಶ್ ಕುಮಾರ್, ಜಸ್ಪ್ರೀತ್ ಬುಮ್ರಾ (ಉಪನಾಯಕ), ಅವೇಶ್ ಖಾನ್ ಆಯ್ಕೆಯಾಗಿದ್ದಾರೆ.

ಮೊದಲೆರಡು ಟೆಸ್ಟ್ ಪಂದ್ಯಗಳಿಗೆ ಭಾರತ ತಂಡ

ರೋಹಿತ್ ಶರ್ಮಾ (ನಾಯಕ ), ಶುಭ್‌ಮನ್‌ ಗಿಲ್, ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ಶ್ರೇಯಸ್‌ ಅಯ್ಯರ್, ಕೆಎಲ್ ರಾಹುಲ್ (ವಿಕೇಟ್ ಕೀಪರ್), ಕೆಎಸ್ ಭರತ್ (ವಿಕೇಟ್ ಕೀಪರ್), ಧ್ರುವ್ ಜುರೆಲ್ (ವಿಕೇಟ್ ಕೀಪರ್), ಆರ್ ಅಶ್ವಿನ್, ಆರ್ ಜಡೇಜಾ, ಅಕ್ಸರ್ ಪಟೇಲ್, ಕುಲದೀಪ್ ಯಾದವ್, ಮೊಹಮ್ಮದ್ ಸಿರಾಜ್, ಮುಖೇಶ್ ಕುಮಾರ್, ಜಸ್ಪ್ರೀತ್ ಬುಮ್ರಾ (ಉಪನಾಯಕ), ಅವೇಶ್ ಖಾನ್.

Published On - 11:06 pm, Fri, 12 January 24

Follow Us
ಜಮ್ಮುವಿನ ಬಂಟ್ಲಾಬ್‌ನಲ್ಲಿ ಭೀಕರ ಅಪಘಾತ; ಸೇತುವೆ ಕುಸಿದು 7 ಜನ ಸಾವು
ಜಮ್ಮುವಿನ ಬಂಟ್ಲಾಬ್‌ನಲ್ಲಿ ಭೀಕರ ಅಪಘಾತ; ಸೇತುವೆ ಕುಸಿದು 7 ಜನ ಸಾವು
ದಂಡ ಕಟ್ಟಿದ ಬಳಿಕ ಫಾರ್ಮ್​ಗೆ ಮರಳಿದ ರಿಯಾನ್ ಪರಾಗ್
ದಂಡ ಕಟ್ಟಿದ ಬಳಿಕ ಫಾರ್ಮ್​ಗೆ ಮರಳಿದ ರಿಯಾನ್ ಪರಾಗ್
ಇರಾನ್​ ಪರಿಸ್ಥಿತಿ ಹೇಗಿದೆ?ಯುದ್ಧದ ನೆಲದಿಂದ ವರದಿ ಮಾಡಿದ ಟಿವಿ9 ರಿಪೋರ್ಟರ್
ಇರಾನ್​ ಪರಿಸ್ಥಿತಿ ಹೇಗಿದೆ?ಯುದ್ಧದ ನೆಲದಿಂದ ವರದಿ ಮಾಡಿದ ಟಿವಿ9 ರಿಪೋರ್ಟರ್
RV ರಸ್ತೆ-ಸಿಲ್ಕ್ ಬೋರ್ಡ್ ಡಬಲ್‌ ಡೆಕ್ಕರ್‌ ಫ್ಲೈಓವರ್​​​ಗೆ ಚಾಲನೆ
RV ರಸ್ತೆ-ಸಿಲ್ಕ್ ಬೋರ್ಡ್ ಡಬಲ್‌ ಡೆಕ್ಕರ್‌ ಫ್ಲೈಓವರ್​​​ಗೆ ಚಾಲನೆ
ಅವನ ಮರ್ಯಾದೆ ತೆಗೆಯದೇ ಬಿಡಲ್ಲ: ನಿರ್ಮಾಪಕನ ವಿರುದ್ಧ ಕಿಡಿಕಾರಿದ ಹಂಸಾ
ಅವನ ಮರ್ಯಾದೆ ತೆಗೆಯದೇ ಬಿಡಲ್ಲ: ನಿರ್ಮಾಪಕನ ವಿರುದ್ಧ ಕಿಡಿಕಾರಿದ ಹಂಸಾ
ಇರಾನ್​ ಯುದ್ಧಭೂಮಿಯಲ್ಲಿ ಟಿವಿ9; ಟೆಹ್ರಾನ್​ನ ನೈಜ ಚಿತ್ರಣ ಇಲ್ಲಿದೆ
ಇರಾನ್​ ಯುದ್ಧಭೂಮಿಯಲ್ಲಿ ಟಿವಿ9; ಟೆಹ್ರಾನ್​ನ ನೈಜ ಚಿತ್ರಣ ಇಲ್ಲಿದೆ
ಹಿಡಕಲ್ ಜಲಾಶಯದಲ್ಲಿ ಮುಳುಗಿ ಹೋಗಿದ್ದ ದೇಗುಲ ಗೋಚರ
ಹಿಡಕಲ್ ಜಲಾಶಯದಲ್ಲಿ ಮುಳುಗಿ ಹೋಗಿದ್ದ ದೇಗುಲ ಗೋಚರ
ಲಂಚದ ಬೇಡಿಕೆಯಿಟ್ಟ ಟಿಕೆಟ್​ ಇನ್​ಸ್ಪೆಕ್ಟರ್ ಮೈಚಳಿ ಬಿಡಿಸಿದ ಪ್ರಯಾಣಿಕ
ಲಂಚದ ಬೇಡಿಕೆಯಿಟ್ಟ ಟಿಕೆಟ್​ ಇನ್​ಸ್ಪೆಕ್ಟರ್ ಮೈಚಳಿ ಬಿಡಿಸಿದ ಪ್ರಯಾಣಿಕ
ಅಜ್ಜನಾದ ಡಿಕೆ ಶಿವಕುಮಾರ್, ಮೊಮ್ಮಗಳನ್ನ ನೋಡಲು ಆಸ್ಪತ್ರೆಗೆ ದೌಡು
ಅಜ್ಜನಾದ ಡಿಕೆ ಶಿವಕುಮಾರ್, ಮೊಮ್ಮಗಳನ್ನ ನೋಡಲು ಆಸ್ಪತ್ರೆಗೆ ದೌಡು
‘ವಸುದೇವ ಕುಟುಂಬ’ ಧಾರಾವಾಹಿ ನಿರ್ಮಾಪಕರ ಮೇಲೆ ಉರಿದು ಬಿದ್ದ ನಟಿ ಹಂಸ
‘ವಸುದೇವ ಕುಟುಂಬ’ ಧಾರಾವಾಹಿ ನಿರ್ಮಾಪಕರ ಮೇಲೆ ಉರಿದು ಬಿದ್ದ ನಟಿ ಹಂಸ