IND vs ENG 1st Test: ಟಾಸ್ ಗೆದ್ದ ಇಂಗ್ಲೆಂಡ್: ಟೀಮ್ ಇಂಡಿಯಾ ಪ್ಲೇಯಿಂಗ್ 11 ಹೀಗಿದೆ

India vs England 1st Test: ಭಾರತ ಮತ್ತು ಇಂಗ್ಲೆಂಡ್ ನಡುವಿನ 5 ಪಂದ್ಯಗಳ ಟೆಸ್ಟ್ ಸರಣಿಯು ಇಂದಿನಿಂದ (ಜ.25) ಶುರುವಾಗಿದೆ. ಈ ಸರಣಿಯ ಮೊದಲೆರಡು ಪಂದ್ಯಗಳಿಗೆ ವಿರಾಟ್ ಕೊಹ್ಲಿ ಅಲಭ್ಯರಾಗಿದ್ದಾರೆ. ವೈಯುಕ್ತಿಕ ಕಾರಣಗಳಿಂದಾಗಿ ಎರಡು ಪಂದ್ಯಗಳಿಂದ ಕಿಂಗ್ ಕೊಹ್ಲಿ ಹಿಂದೆ ಸರಿದಿದ್ದು, ಮೂರನೇ ಪಂದ್ಯದ ವೇಳೆ ಭಾರತ ತಂಡವನ್ನು ಕೂಡಿಕೊಳ್ಳುವ ಸಾಧ್ಯತೆಯಿದೆ.

IND vs ENG 1st Test: ಟಾಸ್ ಗೆದ್ದ ಇಂಗ್ಲೆಂಡ್: ಟೀಮ್ ಇಂಡಿಯಾ ಪ್ಲೇಯಿಂಗ್ 11 ಹೀಗಿದೆ
Team India
Follow us
TV9 Web
| Updated By: ಝಾಹಿರ್ ಯೂಸುಫ್

Updated on:Jan 25, 2024 | 9:06 AM

ಭಾರತ ಮತ್ತು ಇಂಗ್ಲೆಂಡ್ (India vs England) ನಡುವಣ ಮೊದಲ ಟೆಸ್ಟ್ ಪಂದ್ಯ ಶುರುವಾಗಿದೆ. ಹೈದರಾಬಾದ್​ನ ರಾಜೀವ್ ಗಾಂಧಿ ಇಂಟರ್​ನ್ಯಾಷನಲ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟಾಸ್ ಗೆದ್ದಿರುವ ಇಂಗ್ಲೆಂಡ್ ತಂಡದ ನಾಯಕ ಬೆನ್ ಸ್ಟೋಕ್ಸ್ ಬ್ಯಾಟಿಂಗ್ ಆಯ್ದುಕೊಂಡಿದ್ದಾರೆ. ಅದರಂತೆ ಟೀಮ್ ಇಂಡಿಯಾ ಮೊದಲ ದಿನದಾಟವನ್ನು ಬೌಲಿಂಗ್​ನೊಂದಿಗೆ ಆರಂಭಿಸಲಿದೆ.

ಈ ಪಂದ್ಯಕ್ಕಾಗಿ ಉಭಯ ತಂಡಗಳು ಸ್ಪಿನ್ ಬೌಲರ್​ಗಳಿಗೆ ಮಣೆಹಾಕಿದೆ. ಅಂದರೆ ಎರಡೂ ತಂಡಗಳ ಪ್ಲೇಯಿಂಗ್ ಇಲೆವೆನ್​ನಲ್ಲೂ ಮೂವರು ಸ್ಪಿನ್ನರ್​ಗಳು ಕಾಣಿಸಿಕೊಂಡಿದ್ದಾರೆ. ಇನ್ನು ಇಂಗ್ಲೆಂಡ್ ತಂಡದ ಆಡುವ ಬಳಗದಲ್ಲಿ ಏಕೈಕ ವೇಗ ಬೌಲರ್​ ಕಾಣಿಸಿಕೊಂಡಿರುವುದು ವಿಶೇಷ.

ಭಾರತದ ಆಡುವ ಬಳಗ:

ಟೀಮ್ ಇಂಡಿಯಾ ಪ್ಲೇಯಿಂಗ್ ಇಲೆವೆನ್​ನಲ್ಲಿ ಸ್ಪಿನ್ ಆಲ್​ರೌಂಡರ್​ಗಳಾಗಿ ಅಕ್ಷರ್ ಪಟೇಲ್, ರವೀಂದ್ರ ಜಡೇಜಾ ಹಾಗೂ ರವಿಚಂದ್ರನ್ ಅಶ್ವಿನ್ ಸ್ಥಾನ ಪಡೆದಿದ್ದಾರೆ. ಹಾಗೆಯೇ ವಿಕೆಟ್ ಕೀಪರ್ ಬ್ಯಾಟ್ಸ್​ಮನ್ ಆಗಿ ಕೆಎಸ್ ಭರತ್ ತಂಡದಲ್ಲಿದ್ದಾರೆ.

ಇನ್ನುಳಿದಂತೆ ಆರಂಭಿಕರಾಗಿ ರೋಹಿತ್ ಶರ್ಮಾ ಹಾಗೂ ಯಶಸ್ವಿ ಜೈಸ್ವಾಲ್ ಇನಿಂಗ್ಸ್​ ಆರಂಭಿಸಿದರೆ, ಶುಭ್​ಮನ್ ಗಿಲ್ ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿಯಲಿದ್ದಾರೆ. ಹಾಗೆಯೇ ಈ ಪಂದ್ಯದಿಂದ ಹೊರಗುಳಿದಿರುವ ವಿರಾಟ್ ಕೊಹ್ಲಿ ಸ್ಥಾನದಲ್ಲಿ ಕೆಎಲ್ ರಾಹುಲ್ ಅಥವಾ  ಶ್ರೇಯಸ್ ಅಯ್ಯರ್ ಬ್ಯಾಟ್ ಬೀಸಲಿದ್ದಾರೆ.

ಇಂಗ್ಲೆಂಡ್​ನ ಆಡುವ ಬಳಗ:

ಹೈದರಾಬಾದ್ ಪಿಚ್ ಸ್ಪಿನ್​ ಬೌಲರ್​ಗಳಿಗೆ ಸಹಕಾರಿಯಾಗುವುದರಿಂದ ಇಂಗ್ಲೆಂಡ್ ತಂಡ ಕೂಡ ತನ್ನ ಪ್ಲೇಯಿಂಗ್ ಇಲೆವೆನ್​ನಲ್ಲಿ ಮೂವರು ಸ್ಪಿನ್ನರ್​ಗಳಿಗೆ ಮಣೆಹಾಕಿದೆ. ಅದರಂತೆ ಸ್ಪಿನ್ನರ್​ಗಳಾಗಿ ಜ್ಯಾಕ್ ಲೀಚ್, ರೆಹಾನ್ ಅಹ್ಮದ್ ಹಾಗೂ ಟಾಮ್ ಹಾರ್ಟ್ಲಿ ಕಾಣಿಸಿಕೊಳ್ಳಲಿದ್ದಾರೆ. ವಿಶೇಷ ಎಂದರೆ ಈ ಪಂದ್ಯದ ಮೂಲಕ ಟಾಮ್ ಹಾರ್ಟ್ಲಿ ಟೆಸ್ಟ್​ ಕ್ರಿಕೆಟ್​ಗೆ ಪಾದಾರ್ಪಣೆ ಮಾಡಿದ್ದಾರೆ.

ಇಂಗ್ಲೆಂಡ್ ಪ್ಲೇಯಿಂಗ್ 11:

  • ಝಾಕ್ ಕ್ರಾಲಿ
  •  ಬೆನ್ ಡಕೆಟ್
  • ಒಲಿ ಪೋಪ್
  • ಜೋ ರೂಟ್
  •  ಜಾನಿ ಬೈರ್‌ಸ್ಟೋವ್
  • ಬೆನ್ ಸ್ಟೋಕ್ಸ್ (ನಾಯಕ)
  • ಬೆನ್ ಫೋಕ್ಸ್ (ವಿಕೆಟ್ ಕೀಪರ್)
  •  ರೆಹಾನ್ ಅಹ್ಮದ್
  •  ಟಾಮ್ ಹಾರ್ಟ್ಲಿ
  •  ಮಾರ್ಕ್ ವುಡ್
  • ಜ್ಯಾಕ್ ಲೀಚ್

ಭಾರತ ಪ್ಲೇಯಿಂಗ್ 11:

  • ರೋಹಿತ್ ಶರ್ಮಾ (ನಾಯಕ)
  • ಯಶಸ್ವಿ ಜೈಸ್ವಾಲ್
  • ಶುಭ್​ಮನ್ ಗಿಲ್
  • ಶ್ರೇಯಸ್ ಅಯ್ಯರ್
  • ಕೆಎಲ್ ರಾಹುಲ್
  • ಕೆಎಸ್ ಭರತ್ (ವಿಕೆಟ್ ಕೀಪರ್)
  • ರವೀಂದ್ರ ಜಡೇಜಾ
  • ಅಕ್ಷರ್ ಪಟೇಲ್
  • ರವಿಚಂದ್ರನ್ ಅಶ್ವಿನ್
  • ಜಸ್​ಪ್ರೀತ್ ಬುಮ್ರಾ (ಉಪನಾಯಕ)
  • ಮೊಹಮ್ಮದ್ ಸಿರಾಜ್.

ಇದನ್ನೂ ಓದಿ: IPL 2024: RCB ಆಟಗಾರನಿಗೆ ಗಂಭೀರ ಗಾಯ: ಐಪಿಎಲ್​ಗೆ ಡೌಟ್..!

ಯಾವ ಚಾನೆಲ್​ನಲ್ಲಿ ನೇರ ಪ್ರಸಾರ?

ಭಾರತ- ಇಂಗ್ಲೆಂಡ್ ನಡುವಣ ಮೊದಲ ಟೆಸ್ಟ್​ ಪಂದ್ಯದ ನೇರ ಪ್ರಸಾರವನ್ನು ಸ್ಟೋರ್ಟ್ಸ್ ​​18 ಚಾನೆಲ್​ನಲ್ಲಿ ವೀಕ್ಷಿಸಬಹುದು. ಹಾಗೆಯೇ ಜಿಯೋ ಸಿನಿಮಾ ಆ್ಯಪ್​ನಲ್ಲೂ ಈ ಸರಣಿಯ ಎಲ್ಲಾ ಪಂದ್ಯಗಳ ಲೈವ್ ಸ್ಟ್ರೀಮಿಂಗ್ ಇರಲಿದೆ.

Published On - 9:03 am, Thu, 25 January 24

ಚಾಮುಂಡಿ ಬೆಟ್ಟಕ್ಕೆ ಬಂದ ಸುದೀಪ್​; ಕಿಚ್ಚನ ನೋಡಲು ಜನಸಾಗರ
ಚಾಮುಂಡಿ ಬೆಟ್ಟಕ್ಕೆ ಬಂದ ಸುದೀಪ್​; ಕಿಚ್ಚನ ನೋಡಲು ಜನಸಾಗರ
ಸುದೀಪ್ ಇರುವಾಗಲೇ ಬಿಗ್ ಬಾಸ್ ಸ್ಪರ್ಧಿಗಳಿಗೆ ಸುತ್ತಿಗೆ ಪೆಟ್ಟು, ಮಾತಿನ ಏಟು
ಸುದೀಪ್ ಇರುವಾಗಲೇ ಬಿಗ್ ಬಾಸ್ ಸ್ಪರ್ಧಿಗಳಿಗೆ ಸುತ್ತಿಗೆ ಪೆಟ್ಟು, ಮಾತಿನ ಏಟು
ಹೊಸ ವರ್ಷ ಆಚರಣೆಗೆ ಬೆಂಗಳೂರು ಸಿದ್ಧ: ಬಂದೋಬಸ್ತ್ ಹೇಗಿರುತ್ತೆ ಗೊತ್ತಾ?
ಹೊಸ ವರ್ಷ ಆಚರಣೆಗೆ ಬೆಂಗಳೂರು ಸಿದ್ಧ: ಬಂದೋಬಸ್ತ್ ಹೇಗಿರುತ್ತೆ ಗೊತ್ತಾ?
ಬೆಂಕಿ ಹೊತ್ತಿಕೊಂಡ ಏರ್​ ಕೆನಡಾ ವಿಮಾನ ಲ್ಯಾಂಡಿಂಗ್ ಆಗಿದ್ಹೇಗೆ ನೋಡಿ
ಬೆಂಕಿ ಹೊತ್ತಿಕೊಂಡ ಏರ್​ ಕೆನಡಾ ವಿಮಾನ ಲ್ಯಾಂಡಿಂಗ್ ಆಗಿದ್ಹೇಗೆ ನೋಡಿ
ಹೈ ಡ್ರಾಮಾ... ಕಾಲಲ್ಲಿ ಕ್ಯಾಚ್ ಹಿಡಿದ ಕೆಎಲ್ ರಾಹುಲ್, ಗೆರೆ ದಾಟಿದ ಬುಮ್ರಾ
ಹೈ ಡ್ರಾಮಾ... ಕಾಲಲ್ಲಿ ಕ್ಯಾಚ್ ಹಿಡಿದ ಕೆಎಲ್ ರಾಹುಲ್, ಗೆರೆ ದಾಟಿದ ಬುಮ್ರಾ
ಸರ್ಕಾರಿ ಶಾಲೆಯ ಮಕ್ಕಳಿಗೆ ವಿಮಾನ ಪ್ರಯಾಣ ಭಾಗ್ಯ, ಪಾಲಕರ ಖುಷಿ ನೋಡಿ
ಸರ್ಕಾರಿ ಶಾಲೆಯ ಮಕ್ಕಳಿಗೆ ವಿಮಾನ ಪ್ರಯಾಣ ಭಾಗ್ಯ, ಪಾಲಕರ ಖುಷಿ ನೋಡಿ
Video: ಭೀಕರ ಅಪಘಾತ, ಅಗ್ನಿಶಾಮಕ ವಾಹನಕ್ಕೆ ಡಿಕ್ಕಿ ಹೊಡೆದ ಹೈಸ್ಪೀಡ್ ರೈಲು
Video: ಭೀಕರ ಅಪಘಾತ, ಅಗ್ನಿಶಾಮಕ ವಾಹನಕ್ಕೆ ಡಿಕ್ಕಿ ಹೊಡೆದ ಹೈಸ್ಪೀಡ್ ರೈಲು
ಬೆಳ್ಳಂಬೆಳಗ್ಗೆ ಬಾರ್​ಗಳ ಮೇಲೆ ದಾಳಿ, ಮಾಲೀಕರ ಕಿಕ್ ಇಳಿಸಿದ ಪೊಲೀಸರು
ಬೆಳ್ಳಂಬೆಳಗ್ಗೆ ಬಾರ್​ಗಳ ಮೇಲೆ ದಾಳಿ, ಮಾಲೀಕರ ಕಿಕ್ ಇಳಿಸಿದ ಪೊಲೀಸರು
ತ್ರಿವಿಕ್ರಮ್​ ಬಗ್ಗೆ ಭವ್ಯಾ ಹೇಳಿದ ಮಾತು ಕೇಳಿ ನಕ್ಕ ಕಿಚ್ಚ
ತ್ರಿವಿಕ್ರಮ್​ ಬಗ್ಗೆ ಭವ್ಯಾ ಹೇಳಿದ ಮಾತು ಕೇಳಿ ನಕ್ಕ ಕಿಚ್ಚ
3 ಸುಲಭ ಕ್ಯಾಚ್ ಕೈಚೆಲ್ಲಿದ ಜೈಸ್ವಾಲ್: ಆಕ್ರೋಶ ಹೊರಹಾಕಿದ ರೋಹಿತ್ ಶರ್ಮಾ
3 ಸುಲಭ ಕ್ಯಾಚ್ ಕೈಚೆಲ್ಲಿದ ಜೈಸ್ವಾಲ್: ಆಕ್ರೋಶ ಹೊರಹಾಕಿದ ರೋಹಿತ್ ಶರ್ಮಾ