ಭಾರತ ಮತ್ತು ಇಂಗ್ಲೆಂಡ್ (India vs England) ನಡುವಣ ಮೊದಲ ಟೆಸ್ಟ್ ಪಂದ್ಯ ಶುರುವಾಗಿದೆ. ಹೈದರಾಬಾದ್ನ ರಾಜೀವ್ ಗಾಂಧಿ ಇಂಟರ್ನ್ಯಾಷನಲ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟಾಸ್ ಗೆದ್ದಿರುವ ಇಂಗ್ಲೆಂಡ್ ತಂಡದ ನಾಯಕ ಬೆನ್ ಸ್ಟೋಕ್ಸ್ ಬ್ಯಾಟಿಂಗ್ ಆಯ್ದುಕೊಂಡಿದ್ದಾರೆ. ಅದರಂತೆ ಟೀಮ್ ಇಂಡಿಯಾ ಮೊದಲ ದಿನದಾಟವನ್ನು ಬೌಲಿಂಗ್ನೊಂದಿಗೆ ಆರಂಭಿಸಲಿದೆ.
ಈ ಪಂದ್ಯಕ್ಕಾಗಿ ಉಭಯ ತಂಡಗಳು ಸ್ಪಿನ್ ಬೌಲರ್ಗಳಿಗೆ ಮಣೆಹಾಕಿದೆ. ಅಂದರೆ ಎರಡೂ ತಂಡಗಳ ಪ್ಲೇಯಿಂಗ್ ಇಲೆವೆನ್ನಲ್ಲೂ ಮೂವರು ಸ್ಪಿನ್ನರ್ಗಳು ಕಾಣಿಸಿಕೊಂಡಿದ್ದಾರೆ. ಇನ್ನು ಇಂಗ್ಲೆಂಡ್ ತಂಡದ ಆಡುವ ಬಳಗದಲ್ಲಿ ಏಕೈಕ ವೇಗ ಬೌಲರ್ ಕಾಣಿಸಿಕೊಂಡಿರುವುದು ವಿಶೇಷ.
ಟೀಮ್ ಇಂಡಿಯಾ ಪ್ಲೇಯಿಂಗ್ ಇಲೆವೆನ್ನಲ್ಲಿ ಸ್ಪಿನ್ ಆಲ್ರೌಂಡರ್ಗಳಾಗಿ ಅಕ್ಷರ್ ಪಟೇಲ್, ರವೀಂದ್ರ ಜಡೇಜಾ ಹಾಗೂ ರವಿಚಂದ್ರನ್ ಅಶ್ವಿನ್ ಸ್ಥಾನ ಪಡೆದಿದ್ದಾರೆ. ಹಾಗೆಯೇ ವಿಕೆಟ್ ಕೀಪರ್ ಬ್ಯಾಟ್ಸ್ಮನ್ ಆಗಿ ಕೆಎಸ್ ಭರತ್ ತಂಡದಲ್ಲಿದ್ದಾರೆ.
ಇನ್ನುಳಿದಂತೆ ಆರಂಭಿಕರಾಗಿ ರೋಹಿತ್ ಶರ್ಮಾ ಹಾಗೂ ಯಶಸ್ವಿ ಜೈಸ್ವಾಲ್ ಇನಿಂಗ್ಸ್ ಆರಂಭಿಸಿದರೆ, ಶುಭ್ಮನ್ ಗಿಲ್ ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿಯಲಿದ್ದಾರೆ. ಹಾಗೆಯೇ ಈ ಪಂದ್ಯದಿಂದ ಹೊರಗುಳಿದಿರುವ ವಿರಾಟ್ ಕೊಹ್ಲಿ ಸ್ಥಾನದಲ್ಲಿ ಕೆಎಲ್ ರಾಹುಲ್ ಅಥವಾ ಶ್ರೇಯಸ್ ಅಯ್ಯರ್ ಬ್ಯಾಟ್ ಬೀಸಲಿದ್ದಾರೆ.
ಹೈದರಾಬಾದ್ ಪಿಚ್ ಸ್ಪಿನ್ ಬೌಲರ್ಗಳಿಗೆ ಸಹಕಾರಿಯಾಗುವುದರಿಂದ ಇಂಗ್ಲೆಂಡ್ ತಂಡ ಕೂಡ ತನ್ನ ಪ್ಲೇಯಿಂಗ್ ಇಲೆವೆನ್ನಲ್ಲಿ ಮೂವರು ಸ್ಪಿನ್ನರ್ಗಳಿಗೆ ಮಣೆಹಾಕಿದೆ. ಅದರಂತೆ ಸ್ಪಿನ್ನರ್ಗಳಾಗಿ ಜ್ಯಾಕ್ ಲೀಚ್, ರೆಹಾನ್ ಅಹ್ಮದ್ ಹಾಗೂ ಟಾಮ್ ಹಾರ್ಟ್ಲಿ ಕಾಣಿಸಿಕೊಳ್ಳಲಿದ್ದಾರೆ. ವಿಶೇಷ ಎಂದರೆ ಈ ಪಂದ್ಯದ ಮೂಲಕ ಟಾಮ್ ಹಾರ್ಟ್ಲಿ ಟೆಸ್ಟ್ ಕ್ರಿಕೆಟ್ಗೆ ಪಾದಾರ್ಪಣೆ ಮಾಡಿದ್ದಾರೆ.
ಇದನ್ನೂ ಓದಿ: IPL 2024: RCB ಆಟಗಾರನಿಗೆ ಗಂಭೀರ ಗಾಯ: ಐಪಿಎಲ್ಗೆ ಡೌಟ್..!
ಭಾರತ- ಇಂಗ್ಲೆಂಡ್ ನಡುವಣ ಮೊದಲ ಟೆಸ್ಟ್ ಪಂದ್ಯದ ನೇರ ಪ್ರಸಾರವನ್ನು ಸ್ಟೋರ್ಟ್ಸ್ 18 ಚಾನೆಲ್ನಲ್ಲಿ ವೀಕ್ಷಿಸಬಹುದು. ಹಾಗೆಯೇ ಜಿಯೋ ಸಿನಿಮಾ ಆ್ಯಪ್ನಲ್ಲೂ ಈ ಸರಣಿಯ ಎಲ್ಲಾ ಪಂದ್ಯಗಳ ಲೈವ್ ಸ್ಟ್ರೀಮಿಂಗ್ ಇರಲಿದೆ.
Published On - 9:03 am, Thu, 25 January 24