IND vs ENG: ಹೈದರಾಬಾದ್‌ ಪಿಚ್​ ಯಾರಿಗೆ ಸಹಕಾರಿ? ಕೋಚ್ ದ್ರಾವಿಡ್ ಹೇಳಿದ್ದೇನು?

Rajiv Gandhi International Cricket Stadium Pitch Report: ವಾಸ್ತವವಾಗಿ ಭಾರತದ ಪಿಚ್​ಗಳು ಸ್ಪಿನ್ನರ್‌ಗಳಿಗೆ ಹೆಚ್ಚು ನೆರವಾಗುತ್ತವೆ ಎಂಬುದನ್ನು ಹೊಸದಾಗಿ ಹೇಳಬೇಕಿಲ್ಲ. ಇದಕ್ಕೆ ಹೈದರಾಬಾದ್‌ ಪಿಚ್​ ಕೂಡ ಹೊರತಾಗಿಲ್ಲ. ಇನ್ನು ಪತ್ರಿಕಾಗೋಷ್ಠಿಯಲ್ಲಿ ಈ ಬಗ್ಗೆ ಮಾತನಾಡಿದ ದ್ರಾವಿಡ್, ‘ಪಂದ್ಯದಲ್ಲಿ ಆಟ ಮುಂದುವರಿದಂತೆ ಪಿಚ್ ಸ್ಪಿನ್ನರ್‌ಗಳಿಗೆ ನೆರವಾಗಲಿದೆ ಎಂದಿದ್ದಾರೆ.

IND vs ENG: ಹೈದರಾಬಾದ್‌ ಪಿಚ್​ ಯಾರಿಗೆ ಸಹಕಾರಿ? ಕೋಚ್ ದ್ರಾವಿಡ್ ಹೇಳಿದ್ದೇನು?
ಹೈದರಾಬಾದ್‌ ಪಿಚ್ ವರದಿ
Follow us
ಪೃಥ್ವಿಶಂಕರ
|

Updated on: Jan 24, 2024 | 9:01 PM

ಭಾರತ ಮತ್ತು ಇಂಗ್ಲೆಂಡ್ (India vs England) ನಡುವಿನ 5 ಪಂದ್ಯಗಳ ಟೆಸ್ಟ್ ಸರಣಿಯ ಮೊದಲ ಪಂದ್ಯಕ್ಕೆ ಆತಿಥ್ಯವಹಿಸಲು ಹೈದರಾಬಾದ್‌ನ ರಾಜೀವ್ ಗಾಂಧಿ ಕ್ರಿಕೆಟ್ ಸ್ಟೇಡಿಯಂ (Rajiv Gandhi International Cricket Stadium) ಸಜ್ಜಾಗಿದೆ. ಈ ಪಂದ್ಯಕ್ಕಾಗಿ ಇಂಗ್ಲೆಂಡ್ ತಂಡ ಈಗಾಗಲೇ ತನ್ನ ಆಡುವ ಹನ್ನೊಂದರ ಬಳಗವನ್ನು ಪ್ರಕಟಿಸಿದೆ. ಆದರೆ ಟೀಂ ಇಂಡಿಯಾ ಮಾತ್ರ ಎಂದಿನಂತೆ ಪ್ಲೇಯಿಂಗ್ ಇಲೆವೆಲ್ ಬಗೆಗಿನ ಸಸ್ಪೆನ್ಸ್ ಅನ್ನು ಟಾಸ್​ವರೆಗೆ ಕಾಯ್ದಿರಲು ಚಿಂತಿಸಿದೆ. ಪ್ರಕಟವಾಗಿರುವ ಇಂಗ್ಲೆಂಡ್ ತಂಡವನ್ನು ಗಮನಿಸಿದರೆ, ಹೈದರಾಬಾದ್‌ ಪಿಚ್ ಸ್ಪಿನ್ನರ್‌ಗಳಿಗೆ ಹೆಚ್ಚು ನೆರವಾಗುವ ಸಾಧ್ಯತೆ ಇದೆ. ಏಕೆಂದರೆ ಇಂಗ್ಲೆಂಡ್ ತಂಡ ತನ್ನ ಬೌಲಿಂಗ್ ವಿಭಾಗದಲ್ಲಿ ಏಕೈಕ ವೇಗದ ಬೌಲರ್​ಗೆ ಅವಕಾಶ ನೀಡಿದ್ದು, ಉಳಿದಂತೆ ಸ್ಪಿನ್ನರ್‌ಗಳಿಗೆ ಹೆಚ್ಚು ಮಣೆ ಹಾಕಿದೆ. ಇದಕ್ಕೆ ಪೂರಕವಾಗಿ ಪತ್ರಿಕಾಗೋಷ್ಠಿಯಲ್ಲಿ ಟೀಂ ಇಂಡಿಯಾ ಕೋಚ್ ರಾಹುಲ್ ದ್ರಾವಿಡ್ (Rahul Dravid) ಕೂಡ ಹೈದರಾಬಾದ್‌ ಪಿಚ್​ ಸ್ಪಿನ್ನರ್‌ಗಳಿಗೆ ನೆರವಾಗುವ ಸುಳಿವು ನೀಡಿದ್ದಾರೆ.

ವಾಸ್ತವವಾಗಿ ಭಾರತದ ಪಿಚ್​ಗಳು ಸ್ಪಿನ್ನರ್‌ಗಳಿಗೆ ಹೆಚ್ಚು ನೆರವಾಗುತ್ತವೆ ಎಂಬುದನ್ನು ಹೊಸದಾಗಿ ಹೇಳಬೇಕಿಲ್ಲ. ಇದಕ್ಕೆ ಹೈದರಾಬಾದ್‌ ಪಿಚ್​ ಕೂಡ ಹೊರತಾಗಿಲ್ಲ. ಇನ್ನು ಪತ್ರಿಕಾಗೋಷ್ಠಿಯಲ್ಲಿ ಈ ಬಗ್ಗೆ ಮಾತನಾಡಿದ ದ್ರಾವಿಡ್, ‘ಪಂದ್ಯದಲ್ಲಿ ಆಟ ಮುಂದುವರಿದಂತೆ ಪಿಚ್ ಸ್ಪಿನ್ನರ್‌ಗಳಿಗೆ ನೆರವಾಗಲಿದೆ. ಪಿಚ್ ಸಾಕಷ್ಟು ಶುಷ್ಕವಾಗಿ ಕಾಣುತ್ತದೆ. ಆದರೆ ಪಿಚ್ ಬಗ್ಗೆ ಈಗಲೇ ಹೇಳುವುದು ಕಷ್ಟ. ಪಂದ್ಯ ಆರಂಭವಾದಾಗ ಅದರ ಬಗ್ಗೆ ತಿಳಿಯಲಿದೆ. ನಾನು ನೋಡಿದಾಗ ಈ ಪಿಚ್ ಚೆನ್ನಾಗಿ ಕಾಣಿಸುತ್ತಿದೆ. ಆದಾಗ್ಯೂ, ಸ್ಪಿನ್ನರ್‌ಗಳು ಪಿಚ್‌ನಿಂದ ಸಾಕಷ್ಟು ನೆರವು ಪಡೆಯಲ್ಲಿದ್ದಾರೆ. ಆಟ ಮುಂದುವರೆದಂತೆ ಚೆಂಡು ಖಂಡಿತವಾಗಿಯೂ ಹೆಚ್ಚು ಟರ್ನ್​ ಆಗಲಿದೆ ಎಂದು ದ್ರಾವಿಡ್ ಹೇಳಿದ್ದಾರೆ.

IND vs ENG: ಕೊನೆಗೂ ಭಾರತದ ವೀಸಾ ಪಡೆದ ಇಂಗ್ಲೆಂಡ್ ಯುವ ಸ್ಪಿನ್ನರ್

ಸ್ಪಿನ್ನರ್‌ಗಳಿಗೆ ಹೆಚ್ಚು ನೆರವು

ದ್ರಾವಿಡ್ ಹೇಳಿದ್ದು ನಿಜವಾದರೆ, ಹೈದರಾಬಾದ್ ಪಿಚ್ ಇಂಗ್ಲೆಂಡ್‌ ಆಟಗಾರರಿಗೆ ಕಬ್ಬಿಣದ ಕಡಲೆಯಾಗಲಿದೆ. ಏಕಂದರೆ ಆಂಗ್ಲ ಬ್ಯಾಟ್ಸ್‌ಮನ್‌ಗಳಿಗೆ ಹೆಚ್ಚಾಗಿ ಇಂತಹ ಪಿಚ್‌ಗಳಲ್ಲಿ ಆಡಿದ ಅನುಭವವಿಲ್ಲ. ಹೀಗಾಗಿ ಆಂಗ್ಲರು, ಭಾರತೀಯ ಬೌಲರ್‌ಗಳನ್ನು ಎದುರಿಸಲು ಬೇರೆ ದಾರಿ ಕಂಡುಕೊಳ್ಳಬೇಕಾಗಿದೆ.

ಇಬ್ಬರಿಗೂ ನೆರವು ಸಿಗಲಿದೆ

ಹೈದರಾಬಾದ್ ಕ್ರಿಕೆಟ್ ಸಂಸ್ಥೆಯ ಅಧಿಕಾರಿಯೊಬ್ಬರು ಮಾಧ್ಯಮಗಳಿಗೆ ಹೇಳಿಕೆ ನೀಡಿ, ‘ಪಿಚ್ ಸಿದ್ಧಪಡಿಸಲು ನಮಗೆ ಸಾಕಷ್ಟು ಸಮಯ ಸಿಕ್ಕಿತ್ತು. ಈ ಪಿಚ್​ನಲ್ಲಿ ಬ್ಯಾಟ್ಸ್‌ಮನ್‌ಗಳು ಮತ್ತು ಬೌಲರ್‌ಗಳಿಬ್ಬರು ಹೆಚ್ಚಿನ ನೆರವು ಪಡೆಯಲ್ಲಿದ್ದಾರೆ. ಆದರೆ ಪಂದ್ಯ ಮುಂದುವರೆದಂತೆ ಪಿಚ್ ಸ್ವಭಾವ ಬದಲಾಗುತ್ತದೆ. ಆದರೆ ಈ ಪರಿಸ್ಥಿತಿಗಳಿಗೆ ಹೊಂದಿಕೊಳ್ಳಲು ಉಭಯ ತಂಡಗಳ ಆಟಗಾರರಿಗೆ ಸಾಕಷ್ಟು ಅನುಭವವಿದೆ ಎಂದು ನಾನು ಭಾವಿಸುತ್ತೇನೆ ಎಂದಿದ್ದಾರೆ.

ಆರು ವರ್ಷಗಳ ನಂತರ ಟೆಸ್ಟ್ ಪಂದ್ಯ

ವಾಸ್ತವವಾಗಿ ಆರು ವರ್ಷಗಳ ನಂತರ ಹೈದರಾಬಾದ್‌ನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ಟೆಸ್ಟ್ ಪಂದ್ಯ ನಡೆಯುತ್ತಿದೆ. 2018 ರಲ್ಲಿ ಭಾರತ ಮತ್ತು ವೆಸ್ಟ್ ಇಂಡೀಸ್ ನಡುವೆ ಇಲ್ಲಿ ಕೊನೆಯ ಟೆಸ್ಟ್ ಪಂದ್ಯ ನಡೆದಿತ್ತು. ಈ ಪಂದ್ಯವನ್ನು ವಿರಾಟ್ ಕೊಹ್ಲಿ ನಾಯಕತ್ವದಲ್ಲಿ ಭಾರತ 10 ವಿಕೆಟ್‌ಗಳಿಂದ ಗೆದ್ದಿತ್ತು. ಆ ಬಳಿಕ ಈ ಮೈದಾನದಲ್ಲಿ 2023ರ ಅಕ್ಟೋಬರ್‌ನಲ್ಲಿ ಶ್ರೀಲಂಕಾ ಮತ್ತು ಪಾಕಿಸ್ತಾನ ನಡುವೆ ಕೊನೆಯ ಏಕದಿನ ವಿಶ್ವಕಪ್ ಪಂದ್ಯ ನಡೆದಿತ್ತು. ಇನ್ನು ಈ ಮೈದಾನದಲ್ಲಿ ಆಡಿದ ಐದು ಟೆಸ್ಟ್‌ಗಳಲ್ಲಿ ಭಾರತ ನಾಲ್ಕರಲ್ಲಿ ಗೆದ್ದಿದ್ದರೆ, 2010ರಲ್ಲಿ ನಡೆದಿದ್ದ ನ್ಯೂಜಿಲೆಂಡ್ ವಿರುದ್ಧ ಟೆಸ್ಟ್ ಪಂದ್ಯ ಡ್ರಾದಲ್ಲಿ ಕೊನೆಗೊಂಡಿತ್ತು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ತ್ಯಾಜ್ಯದ ರಾಶಿ: ಭಕ್ತರ ಮೇಲೆ ಸಿಟ್ಟಾದ ವೈದ್ಯನಾಥ ದೈವ
ತ್ಯಾಜ್ಯದ ರಾಶಿ: ಭಕ್ತರ ಮೇಲೆ ಸಿಟ್ಟಾದ ವೈದ್ಯನಾಥ ದೈವ
ನಿನ್ನ ರೌಡಿಸಂ ನನ್ನ ಹತ್ರ ಬೇಡ: ರಜತ್​ಗೆ ಖಡಕ್ ಆವಾಜ್ ಹಾಕಿದ ಚೈತ್ರಾ
ನಿನ್ನ ರೌಡಿಸಂ ನನ್ನ ಹತ್ರ ಬೇಡ: ರಜತ್​ಗೆ ಖಡಕ್ ಆವಾಜ್ ಹಾಕಿದ ಚೈತ್ರಾ
ಶಿಕ್ಷಕರ ಕೊರತೆ ಬಗ್ಗೆ ವಿದ್ಯಾರ್ಥಿಗಳ ವಿಡಿಯೋ ವೈರಲ್​: ಶಾಲೆಗೆ ಸಂಸದ ಭೇಟಿ
ಶಿಕ್ಷಕರ ಕೊರತೆ ಬಗ್ಗೆ ವಿದ್ಯಾರ್ಥಿಗಳ ವಿಡಿಯೋ ವೈರಲ್​: ಶಾಲೆಗೆ ಸಂಸದ ಭೇಟಿ
70 ಅಡಿ ಸೇತುವೆ ಮೇಲಿಂದ ಗಂಗಾ ನದಿಗೆ ಹಾರಿದ ಯುವತಿ; ವಿಡಿಯೋ ಇಲ್ಲಿದೆ
70 ಅಡಿ ಸೇತುವೆ ಮೇಲಿಂದ ಗಂಗಾ ನದಿಗೆ ಹಾರಿದ ಯುವತಿ; ವಿಡಿಯೋ ಇಲ್ಲಿದೆ
ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ