AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs ENG: ಕಟಕ್​ನಲ್ಲಿ ಕಣಕ್ಕಿಳಿದರೂ ಕೊಹ್ಲಿ ಕಡೆಯಿಂದ ಭರ್ಜರಿ ಪ್ರದರ್ಶನ ನಿರೀಕ್ಷಿಸಬೇಡಿ..!

Virat Kohli: ಇಂಗ್ಲೆಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಿಂದ ಹೊರಗುಳಿದಿದ್ದ ಟೀಮ್ ಇಂಡಿಯಾದ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ ದ್ವಿತೀಯ ಪಂದ್ಯದಲ್ಲಿ ಕಣಕ್ಕಿಳಿಯುವ ಸಾಧ್ಯತೆಯಿದೆ. ಕಟಕ್​ನ ಬಾರಾಬಾತಿ ಕ್ರೀಡಾಂಗಣದಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಕಡೆಯಿಂದ ಭರ್ಜರಿ ಪ್ರದರ್ಶನವನ್ನು ನಿರೀಕ್ಷಿಸುವಂತಿಲ್ಲ. ಏಕೆಂದರೆ...

IND vs ENG: ಕಟಕ್​ನಲ್ಲಿ ಕಣಕ್ಕಿಳಿದರೂ ಕೊಹ್ಲಿ ಕಡೆಯಿಂದ ಭರ್ಜರಿ ಪ್ರದರ್ಶನ ನಿರೀಕ್ಷಿಸಬೇಡಿ..!
Virat Kohli
ಝಾಹಿರ್ ಯೂಸುಫ್
|

Updated on: Feb 08, 2025 | 11:53 AM

Share

ಭಾರತ ಮತ್ತು ಇಂಗ್ಲೆಂಡ್ ನಡುವಣ 2ನೇ ಏಕದಿನ ಪಂದ್ಯಕ್ಕಾಗಿ ವೇದಿಕೆ ಸಜ್ಜಾಗಿದೆ. ಭಾನುವಾರ (ಫೆ.9) ನಡೆಯಲಿರುವ ಈ ಪಂದ್ಯಕ್ಕೆ ಕಟಕ್​ನ ಬಾರಾಬತಿ ಕ್ರೀಡಾಂಗಣದ ಆತಿಥ್ಯವಹಿಸಲಿದೆ. ಈ ಪಂದ್ಯದಲ್ಲಿ ಟೀಮ್ ಇಂಡಿಯಾ ಪರ ವಿರಾಟ್ ಕೊಹ್ಲಿ ಕಣಕ್ಕಿಳಿಯುವುದು ಬಹುತೇಕ ಖಚಿತವಾಗಿದೆ. ನಾಗ್ಪುರದಲ್ಲಿ ನಡೆದ ಮೊದಲ ಪಂದ್ಯದ ವೇಳೆ ಮೊಣಕಾಲಿನ ನೋವಿನ ಕಾರಣ ಕೊಹ್ಲಿ ಕಣಕ್ಕಿಳಿದಿರಲಿಲ್ಲ.

ಇದಾಗ್ಯೂ ವಿರಾಟ್ ಕೊಹ್ಲಿಯ ಮೊಣಕಾಲಿಗೆ ಗಂಭೀರ ಗಾಯವಾಗಿಲ್ಲ. ಅಲ್ಲದೆ ದ್ವಿತೀಯ ಪಂದ್ಯದ ವೇಳೆಗೆ ಅವರು ಫಿಟ್​ನೆಸ್ ಸಾಧಿಸಲಿದ್ದಾರೆ ಎಂದು ಶುಭ್​ಮನ್ ಗಿಲ್ ಮಾಹಿತಿ ನೀಡಿದ್ದಾರೆ. ಹೀಗಾಗಿ ಕಟಕ್​ನಲ್ಲಿ ಕಿಂಗ್ ಕೊಹ್ಲಿ ಕಣಕ್ಕಿಳಿಯುವುದು ಬಹುತೇಕ ಖಚಿತ ಎನ್ನಬಹುದು.

ಆದರೆ ಕಟಕ್​ನ ಬಾರಾಬತಿ ಕ್ರೀಡಾಂಗಣದಲ್ಲಿ ಕೊಹ್ಲಿ ಕಣಕ್ಕಿಳಿದರೂ ಭರ್ಜರಿ ಪ್ರದರ್ಶನ ನೀಡುವ ಸಾಧ್ಯತೆಯಿಲ್ಲ. ಏಕೆಂದರೆ ಮೈದಾನದಲ್ಲಿ ವಿರಾಟ್ ಕೊಹ್ಲಿ ಕಡೆಯಿಂದ ನಿರೀಕ್ಷಿತ ಆಟ ಈವರೆಗೆ ಮೂಡಿಬಂದಿಲ್ಲ.

ಶತಕಗಳ ಸರದಾರ:

ಏಕದಿನ ಕ್ರಿಕೆಟ್​ನಲ್ಲಿ ಅತ್ಯಧಿಕ ಶತಕ ಸಿಡಿಸಿದ ಬ್ಯಾಟರ್ ವಿರಾಟ್ ಕೊಹ್ಲಿ. ಈವರೆಗೆ ಆಡಿದ 295 ಏಕದಿನ ಪಂದ್ಯಗಳ 283 ಇನ್ನಿಂಗ್ಸ್‌ಗಳಲ್ಲಿ ಅವರು 13,906 ರನ್ ಗಳಿಸಿದ್ದಾರೆ. ಅಂದರೆ ಕಿಂಗ್ ಕೊಹ್ಲಿ 58 ಕ್ಕಿಂತ ಹೆಚ್ಚಿನ ಸರಾಸರಿಯಲ್ಲಿ ರನ್​ ಗಳಿಸಿದ್ದಾರೆ.

ಇದರ ನಡುವೆ 50 ಶತಕ ಹಾಗೂ 72 ಅರ್ಧಶತಕಗಳನ್ನು ಸಹ ಬಾರಿಸಿದ್ದಾರೆ. ಆದರೆ ಈ 50 ಸೆಂಚುರಿಗಳಲ್ಲಿ ಕಟಕ್​ನಲ್ಲಿ ಒಂದೇ ಒಂದು ಶತಕ ಮೂಡಿಬಂದಿಲ್ಲ ಎಂಬುದೇ ಅಚ್ಚರಿ.

ಕಟಕ್‌ನಲ್ಲಿ ಕೊಹ್ಲಿ ವಿಫಲ:

ವಿರಾಟ್ ಕೊಹ್ಲಿ ಕಟಕ್‌ನ ಬಾರಾಬತಿ ಕ್ರೀಡಾಂಗಣದಲ್ಲಿ ನಾಲ್ಕು ಪಂದ್ಯಗಳನ್ನು ಆಡಿದ್ದಾರೆ. ಈ ನಾಲ್ಕು ಮ್ಯಾಚ್​ಗಳಲ್ಲಿ ಕಲೆಹಾಕಿದ ಒಟ್ಟು ಸ್ಕೋರ್ 118 ರನ್​ಗಳು. ಅಂದರೆ ಕೇವಲ 29.5 ಸರಾಸರಿಯಲ್ಲಿ ಮಾತ್ರ ರನ್​ಗಳಿಸಿದ್ದಾರೆ.

ಈ ಮೈದಾನದಲ್ಲಿ ಅತಿ ಹೆಚ್ಚು ರನ್‌ಗಳಿಸಿದ ದಾಖಲೆ ಸಚಿನ್ ತೆಂಡೂಲ್ಕರ್ ಹೆಸರಿನಲ್ಲಿದೆ. ಅವರು 10 ಏಕದಿನ ಪಂದ್ಯಗಳಲ್ಲಿ 84.81 ಸರಾಸರಿಯಲ್ಲಿ ಒಟ್ಟು 469 ರನ್ ಗಳಿಸಿದ್ದಾರೆ. ಆದರೆ ಬಾರಾಬತಿ ಕ್ರೀಡಾಂಗಣದಲ್ಲಿ ಕೊಹ್ಲಿ ಬ್ಯಾಟ್ ಸದ್ದು ಮಾಡಿದ್ದೇ ವಿರಳ. ಹೀಗಾಗಿ ದ್ವಿತೀಯ ಪಂದ್ಯದಲ್ಲಿ ಕಿಂಗ್ ಕೊಹ್ಲಿ ಕಡೆಯಿಂದ ಭರ್ಜರಿ ಪ್ರದರ್ಶನ ನಿರೀಕ್ಷಿಸುವಂತಿಲ್ಲ.

ಇದನ್ನೂ ಓದಿ: ಭಾರತದಲ್ಲಿ ಇತಿಹಾಸ ನಿರ್ಮಿಸಿದ ಜೇಕಬ್ ಬೆಥೆಲ್

ಇದಾಗ್ಯೂ ಈ ಮೈದಾನದಲ್ಲಿ ಟೀಮ್ ಇಂಡಿಯಾದ ಗೆಲುವಿನ ದಾಖಲೆ ಉತ್ತಮವಾಗಿದೆ. ಭಾರತ ತಂಡವು ಬಾರಾಬಾತಿ ಕ್ರೀಡಾಂಗಣದಲ್ಲಿ ಇಲ್ಲಿಯವರೆಗೆ 17 ಏಕದಿನ ಪಂದ್ಯಗಳನ್ನು ಆಡಿದೆ. ಈ ವೇಳೆ 13 ಪಂದ್ಯಗಳಲ್ಲಿ ಜಯ ಸಾಧಿಸಿದರೆ, ನಾಲ್ಕು ಮ್ಯಾಚ್​ಗಳಲ್ಲಿ ಮಾತ್ರ ಸೋಲನುಭವಿಸಿದೆ.

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ