IND vs ENG: ವೈಜಾಗ್​ನಲ್ಲಿ ರನ್ ಮಳೆಯಾ? ಬ್ಯಾಟರ್ಸ್​ಗಳ ಪೆವಿಲಿಯನ್ ಪರೇಡಾ? ಇಲ್ಲಿದೆ ಪಿಚ್ ವರದಿ

IND vs ENG: ಹೈದರಾಬಾದ್‌ನಲ್ಲಿ ನಡೆದ ಐದು ಪಂದ್ಯಗಳ ಟೆಸ್ಟ್ ಸರಣಿಯ ಮೊದಲ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ 28 ರನ್‌ಗಳ ಸೋಲು ಅನುಭವಿಸಿರುವ ರೋಹಿತ್ ಶರ್ಮಾ ನೇತೃತ್ವದ ಭಾರತ ತಂಡ ಇದೀಗ ಎರಡನೇ ಟೆಸ್ಟ್ ಪಂದ್ಯಕ್ಕೆ ಸಜ್ಜಾಗಿದೆ. ಉಭಯ ತಂಡಗಳ ನಡುವಿನ ಎರಡನೇ ಟೆಸ್ಟ್ ಪಂದ್ಯ ನಾಳೆಯಿಂದ ಅಂದರೆ ಫೆಬ್ರವರಿ 2 ರಿಂದ ವಿಶಾಖಪಟ್ಟಣಂನಲ್ಲಿ ಆರಂಭವಾಗಲಿದೆ.

IND vs ENG: ವೈಜಾಗ್​ನಲ್ಲಿ ರನ್ ಮಳೆಯಾ? ಬ್ಯಾಟರ್ಸ್​ಗಳ ಪೆವಿಲಿಯನ್ ಪರೇಡಾ? ಇಲ್ಲಿದೆ ಪಿಚ್ ವರದಿ
ವಿಶಾಖಪಟ್ಟಣಂ ಪಿಚ್ ವರದಿ
Follow us
ಪೃಥ್ವಿಶಂಕರ
|

Updated on: Feb 01, 2024 | 7:58 PM

ಹೈದರಾಬಾದ್‌ನಲ್ಲಿ ನಡೆದ ಐದು ಪಂದ್ಯಗಳ ಟೆಸ್ಟ್ ಸರಣಿಯ ಮೊದಲ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ 28 ರನ್‌ಗಳ ಸೋಲು ಅನುಭವಿಸಿರುವ ರೋಹಿತ್ ಶರ್ಮಾ (Rohit Sharma) ನೇತೃತ್ವದ ಭಾರತ ತಂಡ (India vs England) ಇದೀಗ ಎರಡನೇ ಟೆಸ್ಟ್ ಪಂದ್ಯಕ್ಕೆ ಸಜ್ಜಾಗಿದೆ. ಉಭಯ ತಂಡಗಳ ನಡುವಿನ ಎರಡನೇ ಟೆಸ್ಟ್ ಪಂದ್ಯ ನಾಳೆಯಿಂದ ಅಂದರೆ ಫೆಬ್ರವರಿ 2 ರಿಂದ ವಿಶಾಖಪಟ್ಟಣಂನಲ್ಲಿ (Visakhapatnam) ಆರಂಭವಾಗಲಿದೆ. ಸರಣಿಯಲ್ಲಿ ಮೇಲುಗೈ ಸಾಧಿಸುವ ನಿಟ್ಟಿನಲ್ಲಿ ಈ ಪಂದ್ಯ ಉಭಯ ತಂಡಗಳಿಗೂ ಮಹತ್ವದ್ದಾಗಿದೆ. ಅದರಲ್ಲೂ ಮೊದಲ ಟೆಸ್ಟ್ ಸೋತಿರುವ ಭಾರತಕ್ಕೆ ಈ ಪಂದ್ಯ ಪ್ರತಿಷ್ಠೆಯ ಪಂದ್ಯವಾಗಿದೆ. ತವರಿನಲ್ಲಿ ಅತ್ಯಂತ ಬಲಿಷ್ಠ ತಂಡ ಎನಿಸಿಕೊಂಡಿರುವ ಭಾರತಕ್ಕೆ ಮೊದಲ ಸೋಲು ಮರೆಯಲಾಗದ ಶಾಕ್ ನೀಡಿದೆ. ಹೀಗಾಗಿ ಎರಡನೇ ಟೆಸ್ಟ್ ಗೆಲ್ಲುವ ಮೂಲಕ ಹಳೆಯ ಸೋಲಿಗೆ ಸೇಡು ತೀರಿಸಿಕೊಳ್ಳುವ ಗುರಿಯೊಂದಿಗೆ ರೋಹಿತ್ ಪಡೆ ಕಣಕ್ಕಿಳಿಯುತ್ತಿದೆ.

ಮೇಲೆ ಹೇಳಿದಂತೆ ವಿಶಾಖಪಟ್ಟಣಂನ ವೈಎಸ್ ರಾಜಶೇಖರ ರೆಡ್ಡಿ ಕ್ರಿಕೆಟ್ ಸ್ಟೇಡಿಯಂನಲ್ಲಿ ಈ ಪಂದ್ಯ ನಡೆಯಲಿದೆ. ಹೀಗಿರುವಾಗ ಈ ಮೈದಾನದ ಪಿಚ್‌ ಬ್ಯಾಟ್ಸ್‌ಮನ್‌ಗಳು ಅಥವಾ ಬೌಲರ್‌ಗಳು ಈ ಇಬ್ಬರಲ್ಲಿ ಯಾರಿಗೆ ನೆರವಾಗಲಿದೆ? ಎಂಬುದನ್ನು ನಾವಿಲ್ಲಿ ತಿಳಿದುಕೊಳ್ಳೋಣ.

IND Vs ENG: ಟೀಂ ಇಂಡಿಯಾಗೆ ಬ್ಯಾಡ್ ನ್ಯೂಸ್; ಜಡೇಜಾ ವಾಪಸಾತಿ ಕಷ್ಟ! ಕೊಹ್ಲಿ ಬಗ್ಗೆಯೂ ಸಸ್ಪೆನ್ಸ್

ಪಿಚ್​ ಬ್ಯಾಟರ್​ಗಳಿಗೆ ನೆರವಾಗಲಿದೆ

ಎರಡನೇ ಟೆಸ್ಟ್ ಪಂದ್ಯ ನಡೆಯಲ್ಲಿರುವ ವಿಶಾಖಪಟ್ಟಣಂನ ವೈಎಸ್ ರಾಜಶೇಖರ ರೆಡ್ಡಿ ಕ್ರಿಕೆಟ್ ಮೈದಾನವನ್ನು ಬ್ಯಾಟ್ಸ್‌ಮನ್‌ಗಳ ಸ್ವರ್ಗವೆಂದು ಪರಿಗಣಿಸಲಾಗಿದೆ. ವಿಶಾಖಪಟ್ಟಣಂನಲ್ಲಿ ಬ್ಯಾಟ್ಸ್‌ಮನ್‌ಗಳು ಬೌಂಡರಿ ಮತ್ತು ಸಿಕ್ಸರ್‌ಗಳ ಮಳೆ ಸುರಿಸುವುದನ್ನು ಕಾಣುವುದು ಖಚಿತವಾಗಿದೆ. ಇದಕ್ಕೆ ಈ ಹಿಂದೆ ನಡೆದ ಪಂದ್ಯಗಳೆ ಪೂರವೆಗಳಾಗಿವೆ. ಅಂದರೆ ಭಾರತ ಮತ್ತು ಇಂಗ್ಲೆಂಡ್ ನಡುವಿನ ಎರಡನೇ ಟೆಸ್ಟ್ ಪಂದ್ಯದಲ್ಲಿ ಖಂಡಿತವಾಗಿಯೂ ರನ್‌ಗಳ ಮಹಾಪೂರವೇ ಹರಿದು ಬರಲಿದೆ.

ಇಲ್ಲಿ ಭಾರತ ಅಜೇಯ

ಇದಕ್ಕೆ ಪೂರಕವಾಗಿ.. ಈ ಹಿಂದೆ ಅಂದರೆ 2019 ರಲ್ಲಿ ನಡೆದಿದ್ದ ದಕ್ಷಿಣ ಆಫ್ರಿಕಾ ವಿರುದ್ಧ ಪಂದ್ಯದ ಮೊದಲ ಇನ್ನಿಂಗ್ಸ್​ನಲ್ಲಿ ಭಾರತ 502 ರನ್ ಕಲೆಹಾಕಿತ್ತು. ತಂಡದ ಪರ ದ ಮಯಾಂಕ್ ಅಗರ್ವಾಲ್ 215 ರನ್‌ಗಳ ಇನ್ನಿಂಗ್ಸ್ ಆಡಿದ್ದರೆ, ರೋಹಿತ್ ಶರ್ಮಾ 176 ರನ್‌ಗಳ ಬಿರುಗಾಳಿಯ ಇನ್ನಿಂಗ್ಸ್ ಆಡಿದ್ದರು. ಅಂತಿಮವಾಗಿ ಭಾರತ ತಂಡ ಈ ಪಂದ್ಯವನ್ನು 203 ರನ್‌ಗಳಿಂದ ಗೆದ್ದುಕೊಂಡಿತ್ತು. ಅದೇ ಸಮಯದಲ್ಲಿ, 2016 ರಲ್ಲಿ ಇಂಗ್ಲೆಂಡ್ ವಿರುದ್ಧ ಆಡಿದ ಟೆಸ್ಟ್ ಪಂದ್ಯದಲ್ಲಿಯೂ ಭಾರತ 246 ರನ್‌ಗಳ ಜಯ ಸಾಧಿಸಿತ್ತು.

ಟಾಸ್ ನಿರ್ಣಾಯಕ

ವಿಶಾಖಪಟ್ಟಣಂ ಪಿಚ್​ ಬ್ಯಾಟರ್​ಗಳಿಗೆ ನೆರವಾಗುವುದರಲ್ಲಿ ಯಾವುದೇ ಅನುಮಾನವಿಲ್ಲ. ಆದರೆ ಆಟ ಮುಂದುವರೆದಂತೆ, ಸ್ಪಿನ್ ಬೌಲರ್‌ಗಳು ನಾಲ್ಕನೇ ಇನ್ನಿಂಗ್ಸ್‌ನಲ್ಲಿ ಪ್ರಾಬಲ್ಯ ಸಾಧಿಸಬಹುದಾಗಿದೆ. ಅಂತಹ ಪರಿಸ್ಥಿತಿಯಲ್ಲಿ ಟಾಸ್ ಗೆದ್ದ ತಂಡವು ಮೊದಲು ಬ್ಯಾಟಿಂಗ್ ಮಾಡಲು ನಿರ್ಧರಿಸಬಹುದು ಇದರಿಂದ ಮೊದಲ ಇನ್ನಿಂಗ್ಸ್‌ನಲ್ಲಿ ದೊಡ್ಡ ಸ್ಕೋರ್ ಕಲೆಹಾಕಬಹುದು.

ಇಂಗ್ಲೆಂಡ್ ತಂಡ ಪ್ರಕಟ

ಇದನ್ನು ಗಮನದಲ್ಲಿಟ್ಟುಕೊಂಡೆಯೇ ಇಂಗ್ಲೆಂಡ್ ತಂಡ ಪಂದ್ಯದ ಆರಂಭಕ್ಕೂ ಮುಂಚೆಯೇ ತಂಡವನ್ನು ಪ್ರಕಟಿಸಿದ್ದು, ತಂಡದಲ್ಲಿ ಅವರು ಎರಡು ಬದಲಾವಣೆಗಳನ್ನು ಮಾಡಿದೆ. ಇದರಲ್ಲಿ ಮಾರ್ಕ್ ವುಡ್ ಬದಲಿಗೆ ಜೇಮ್ಸ್ ಆಂಡರ್ಸನ್ ಅವರನ್ನು ತಂಡಕ್ಕೆ ಆಯ್ಕೆ ಮಾಡಿದ್ದರೆ, ಹೈದರಾಬಾದ್ ಟೆಸ್ಟ್‌ನಲ್ಲಿ ಗಾಯಗೊಂಡಿದ್ದ ಸ್ಪಿನ್ನರ್ ಜಾಕ್ ಲೀಚ್ ಅವರ ಸ್ಥಾನದಲ್ಲಿ ಯುವ ಸ್ಪಿನ್ನರ್ ಶೋಯೆಬ್ ಬಶೀರ್ ಅವರನ್ನು ಆಡಿಸಲಾಗುತ್ತಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ
ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ
ವಾರಾಣಸಿಯಲ್ಲಿ 70 ವರ್ಷಗಳ ಬಳಿಕ ತೆರೆದ ಸಿದ್ಧೇಶ್ವರ ಮಹಾದೇವ ದೇಗುಲ
ವಾರಾಣಸಿಯಲ್ಲಿ 70 ವರ್ಷಗಳ ಬಳಿಕ ತೆರೆದ ಸಿದ್ಧೇಶ್ವರ ಮಹಾದೇವ ದೇಗುಲ
ಶರಣಾದ ನಕ್ಸಲರಿಗೆ ತ್ವರಿತವಾಗಿ ನ್ಯಾಯ ಒದಗಿಸಲಾಗುವುದು: ಸಿದ್ದರಾಮಯ್ಯ
ಶರಣಾದ ನಕ್ಸಲರಿಗೆ ತ್ವರಿತವಾಗಿ ನ್ಯಾಯ ಒದಗಿಸಲಾಗುವುದು: ಸಿದ್ದರಾಮಯ್ಯ
ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?