IND vs ENG: ಎರಡನೇ ಟೆಸ್ಟ್​ಗೆ ಟೀಂ ಇಂಡಿಯಾದಲ್ಲಿ ಬದಲಾವಣೆ ಖಚಿತ; ಯಾರಿಗೆಲ್ಲ ಸಿಗಲಿದೆ ಅವಕಾಶ?

IND vs ENG: ಭಾರತ ಮತ್ತು ಇಂಗ್ಲೆಂಡ್ ನಡುವಿನ 5 ಪಂದ್ಯಗಳ ಟೆಸ್ಟ್ ಸರಣಿಯ ಎರಡನೇ ಪಂದ್ಯ ಫೆಬ್ರವರಿ 2 ರಿಂದ ವಿಶಾಖಪಟ್ಟಣಂ ಮೈದಾನದಲ್ಲಿ ನಡೆಯಲಿದೆ. ಈ ಪಂದ್ಯದಲ್ಲಿ ಟೀಂ ಇಂಡಿಯಾ ಆಡುವ 11ರಲ್ಲಿ ಬದಲಾವಣೆಗಳು ಖಚಿತವಾಗಿದ್ದು, ಆಂಗ್ಲ ಸ್ಪಿನ್ನರ್‌ಗಳ ವಿರುದ್ಧ ತಂಡವು ಯಾವ ರೀತಿಯ ತಂತ್ರವನ್ನು ಹೆಣೆಯುತ್ತದೆ ಎಂಬುದರ ಮೇಲೆ ಎಲ್ಲರ ಕಣ್ಣು ನೆಟ್ಟಿದೆ.

IND vs ENG: ಎರಡನೇ ಟೆಸ್ಟ್​ಗೆ ಟೀಂ ಇಂಡಿಯಾದಲ್ಲಿ ಬದಲಾವಣೆ ಖಚಿತ; ಯಾರಿಗೆಲ್ಲ ಸಿಗಲಿದೆ ಅವಕಾಶ?
ಟೀಂ ಇಂಡಿಯಾ
Follow us
ಪೃಥ್ವಿಶಂಕರ
|

Updated on: Feb 01, 2024 | 10:18 PM

ವಿಶಾಖಪಟ್ಟಣಂನಲ್ಲಿ (Visakhapatnam) ನಡೆಯಲಿರುವ ಭಾರತ ಮತ್ತು ಇಂಗ್ಲೆಂಡ್ (India vs England) ನಡುವಿನ ಎರಡನೇ ಟೆಸ್ಟ್ ಪಂದ್ಯಕ್ಕೆ ಇಂಗ್ಲೆಂಡ್ ಒಂದು ದಿನದ ಮುಂಚಿತವಾಗಿ ತನ್ನ ಆಡುವ ಹನ್ನೊಂದರ ಬಳಗವನ್ನು ಆಯ್ಕೆ ಮಾಡಿದೆ. ಅದೇ ಸಮಯದಲ್ಲಿ, ಭಾರತ ತಂಡದ ಆಡುವ 11 ರ ಬಗ್ಗೆ ಅನೇಕ ಪ್ರಶ್ನೆಗಳನ್ನು ಎತ್ತಲಾಗುತ್ತಿದೆ. ಹೈದರಾಬಾದ್ ಟೆಸ್ಟ್‌ನಲ್ಲಿ ಉತ್ತಮ ಪ್ರದರ್ಶನ ನೀಡಿದ ಇಬ್ಬರು ಆಟಗಾರರಾದ ಕೆಎಲ್ ರಾಹುಲ್ (KL Rahul) ಮತ್ತು ರವೀಂದ್ರ ಜಡೇಜಾ (Ravindra Jadeja) ಈ ಪಂದ್ಯದಲ್ಲಿ ಆಡುವುದಿಲ್ಲ. ಹೀಗಿರುವಾಗ ಅವರ ಸ್ಥಾನಕ್ಕೆ ಯಾರು ಬರುತ್ತಾರೆ ಎಂಬ ಪ್ರಶ್ನೆಗಳು ಎದ್ದಿವೆ. ರಾಹುಲ್ ಸ್ಥಾನಕ್ಕಾಗಿ ಸರ್ಫರಾಜ್ ಖಾನ್ ಮತ್ತು ರಜತ್ ಪಾಟಿದಾರ್ ನಡುವೆ ಪೈಪೋಟಿ ನಡೆದಿದೆ. ಇದಲ್ಲದೇ ಜಡೇಜಾ ಬದಲಿಗೆ ವಾಷಿಂಗ್ಟನ್ ಸುಂದರ್ ಅಥವಾ ಸೌರಭ್ ಕುಮಾರ್ ಅವರಿಗೆ ಅವಕಾಶ ಸಿಗುವ ಸಾಧ್ಯತೆಗಳಿವೆ. ಉಳಿದಂತೆ ತಂಡದಲ್ಲಿ ಯಾವೆಲ್ಲ ಬದಲಾವಣೆಗಳಾಗಲಿವೆ. ಎರಡನೇ ಟೆಸ್ಟ್​ಗೆ ಯಾರೆಲ್ಲ ತಂಡದಲ್ಲಿ ಅವಕಾಶ ಪಡೆಯುತ್ತಾರೆ ಎಂಬುದರ ವಿವರ ಇಲ್ಲಿದೆ.

ಮೊಹಮ್ಮದ್ ಸಿರಾಜ್​ಗೆ ಕೋಕ್?

ನಾಲ್ವರು ಸ್ಪಿನ್ನರ್‌ಗಳು ಅಥವಾ ಇಂಗ್ಲೆಂಡ್‌ನಂತೆ ಒಬ್ಬ ವೇಗಿಯೊಂದಿಗೆ ಕಣಕ್ಕಿಳಿಯುವಂತೆ ಹಲವು ಕ್ರಿಕೆಟ್ ಪಂಡಿತರು ಟೀಂ ಇಂಡಿಯಾದ ಮ್ಯಾನೇಜ್‌ಮೆಂಟ್‌ಗೆ ಸಲಹೆ ನೀಡಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ಉಪನಾಯಕ ಜಸ್ಪ್ರೀತ್ ಬುಮ್ರಾ ತಂಡದಲ್ಲಿ  ಆಡುವುದು ಖಚಿತ. ಆದರೆ ಮೊಹಮ್ಮದ್ ಸಿರಾಜ್ ಸ್ಥಾನಕ್ಕೆ ಅಪಾಯ ಎದುರಾಗಬಹುದು. ಈಗ ವಿಶಾಖಪಟ್ಟಣದಲ್ಲಿ ಟೀಂ ಇಂಡಿಯಾ ಸಿರಾಜ್ ಅವರನ್ನು ಬಿಟ್ಟುಬಿಡುತ್ತದೆಯೇ ಅಥವಾ ಮತ್ತೊಮ್ಮೆ ಇಬ್ಬರು ವೇಗಿಗಳೊಂದಿಗೆ ಹೋಗುತ್ತದೆಯೇ ಎಂದು ನೋಡಬೇಕಾಗಿದೆ. ಅಶ್ವಿನ್ ಮತ್ತು ಅಕ್ಷರ್ ಜೊತೆಗೆ ಕುಲ್ದೀಪ್ ಸ್ಪಿನ್‌ ವಿಭಾಗದಲ್ಲಿ ಅವಕಾಶ ಪಡೆಯುತ್ತಾರಾ ಅಥವಾ ಸೌರಭ್ ಕುಮಾರ್ ಮತ್ತು ವಾಷಿಂಗ್ಟನ್ ಸುಂದರ್ ತಂಡದಲ್ಲಿ ಸ್ಥಾನ ಪಡೆಯುತ್ತಾರೆಯೇ ಎಂದು ನೋಡಬೇಕಾಗಿದೆ.

IND vs ENG: ಬರೋಬ್ಬರಿ 4467 ದಿನಗಳ ನಂತರ ಈ ನಾಲ್ವರು ಆಟಗಾರರಿಲ್ಲದೆ ಕಣಕ್ಕಿಳಿಯುತ್ತಿದೆ ಭಾರತ..!

4 ಸ್ಪಿನ್ನರ್‌ಗಳಿಗೆ ಅವಕಾಶ?

ಭಾರತ ತಂಡವು ಕೇವಲ ಒಬ್ಬ ವೇಗಿಯನ್ನು ಕಣಕ್ಕಿಳಿಸಿದರೆ, ಉಳಿದಂತೆ ತಂಡದ ಬೌಲಿಂಗ್ ವಿಭಾಗದಲ್ಲಿ ನಾಲ್ವರು ಸ್ಪಿನ್ನರ್​ಗಳು ಕಾಣಿಸಿಕೊಳ್ಳುವುದು ಸ್ಪಷ್ಟ. ರವೀಂದ್ರ ಜಡೇಜಾ ಬದಲಿಗೆ ಕುಲ್ದೀಪ್ ಯಾದವ್‌ಗೆ ಅವಕಾಶ ಸಿಕ್ಕರೆ ಬ್ಯಾಟಿಂಗ್ ದುರ್ಬಲವಾಗಲಿದೆ. ಆದರೆ ವಾಷಿಂಗ್ಟನ್ ಸುಂದರ್ ಬಂದರೆ ಅನುಭವಿ ಸ್ಪಿನ್ನರ್ ಕೊರತೆ ತಪ್ಪಬಹುದು. ಸಿರಾಜ್ ಅವರನ್ನು ಕೈಬಿಟ್ಟರೆ ಟೀಂ ಇಂಡಿಯಾ ನಾಲ್ವರು ಸ್ಪಿನ್ನರ್‌ಗಳೊಂದಿಗೆ ಕಣಕ್ಕಿಳಿಯಬಹುದು. ಇಂತಹ ಪರಿಸ್ಥಿತಿಯಲ್ಲಿ ರವೀಂದ್ರ ಜಡೇಜಾ ಬದಲಿಗೆ ವಾಷಿಂಗ್ಟನ್ ಸುಂದರ್ ಬ್ಯಾಟಿಂಗ್ ಬಲಿಷ್ಠವಾಗಲಿದ್ದಾರೆ. ಕೊನೆಯಲ್ಲಿ ಕುಲ್ದೀಪ್ ಯಾದವ್ ಕೂಡ ಬ್ಯಾಟಿಂಗ್ ಮಾಡುವ ಸಾಮರ್ಥ್ಯ ಹೊಂದಿದ್ದಾರೆ.

ಉಭಯ ತಂಡಗಳು

ಇಂಗ್ಲೆಂಡ್ ತಂಡ: ಜ್ಯಾಕ್ ಕ್ರಾಲಿ, ಬೆನ್ ಡಕೆಟ್, ಆಲಿ ಪೋಪ್, ಜೋ ರೂಟ್, ಜಾನಿ ಬೈರ್‌ಸ್ಟೋವ್, ಬೆನ್ ಸ್ಟೋಕ್ಸ್ (ಸಿ), ಬೆನ್ ಫಾಕ್ಸ್ (ವಾಕ್), ಟಾಮ್ ಹಾರ್ಟ್ಲಿ, ರೆಹಾನ್ ಅಹ್ಮದ್, ಶೋಯೆಬ್ ಬಶೀರ್, ಜೇಮ್ಸ್ ಆಂಡರ್ಸನ್.

ಭಾರತದ ಸಂಭಾವ್ಯ ತಂಡ: ರೋಹಿತ್ ಶರ್ಮಾ (ನಾಯಕ), ಯಶಸ್ವಿ ಜೈಸ್ವಾಲ್, ಶುಭ್​ಮನ್ ಗಿಲ್, ಸರ್ಫರಾಜ್ ಖಾನ್ / ರಜತ್ ಪಾಟಿದಾರ್, ಶ್ರೇಯಸ್ ಅಯ್ಯರ್, ಕೆಎಸ್ ಭರತ್ (ವಿಕೆಟ್ ಕೀಪರ್), ಅಕ್ಷರ್ ಪಟೇಲ್, ರವಿಚಂದ್ರನ್ ಅಶ್ವಿನ್, ಕುಲ್ದೀಪ್ ಯಾದವ್ / ವಾಷಿಂಗ್ಟನ್ ಸುಂದರ್, ಮೊಹಮ್ಮದ್ ಸಿರಾಜ್, ಜಸ್ಪ್ರೀತ್ ಬುಮ್ರಾ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ಹೆಚ್​ಎಂಪಿ ವೈರಸ್ ವಿಷಯದಲ್ಲಿ ನಮ್ಮ ಸರ್ಕಾರ ಅಲರ್ಟ್ ಆಗಿದೆ: ಶಿವಕುಮಾರ್
ಹೆಚ್​ಎಂಪಿ ವೈರಸ್ ವಿಷಯದಲ್ಲಿ ನಮ್ಮ ಸರ್ಕಾರ ಅಲರ್ಟ್ ಆಗಿದೆ: ಶಿವಕುಮಾರ್
ತನ್ನ ತಂದೆ ಬಗ್ಗೆ ಮಾತಾಡಿದ ಬಿಜೆಪಿ ನಾಯಕನ ಹೇಳಿಕೆಗೆ ಕಣ್ಣೀರು ಹಾಕಿದ ಅತಿಶಿ
ತನ್ನ ತಂದೆ ಬಗ್ಗೆ ಮಾತಾಡಿದ ಬಿಜೆಪಿ ನಾಯಕನ ಹೇಳಿಕೆಗೆ ಕಣ್ಣೀರು ಹಾಕಿದ ಅತಿಶಿ
ರಾಮಚಂದ್ರಪ್ಪನಿಂದ ಪೀಡಿತ ಮತ್ತೊಬ್ಬ ಮಹಿಳೆ ತನ್ನ ವೇದನೆ ಹೇಳಿಕೊಂಡಿದ್ದಾರೆ
ರಾಮಚಂದ್ರಪ್ಪನಿಂದ ಪೀಡಿತ ಮತ್ತೊಬ್ಬ ಮಹಿಳೆ ತನ್ನ ವೇದನೆ ಹೇಳಿಕೊಂಡಿದ್ದಾರೆ
ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್
ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್
ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ
ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ