ಭಾರತ ಪ್ರವಾಸ ಕೈಗೊಂಡಿರುವ ಇಂಗ್ಲೆಂಡ್ ತಂಡ (India vs England) ಟೆಸ್ಟ್ ಸರಣಿಯಲ್ಲಿ ಗೆಲುವಿನೊಂದಿಗೆ ಶುಭಾರಂಭ ಮಾಡಿದೆ. ಐದು ಟೆಸ್ಟ್‌ಗಳ ಸರಣಿಯ ಮೊದಲ ಟೆಸ್ಟ್ ಪಂದ್ಯ ಹೈದರಾಬಾದ್‌ನ ರಾಜೀವ್ ಗಾಂಧಿ ಸ್ಟೇಡಿಯಂನಲ್ಲಿ ನಡೆಯಿತು. ಇದರಲ್ಲಿ ಭಾರತ 28 ರನ್‌ಗಳ ಸೋಲನ್ನು ಎದುರಿಸಬೇಕಾಯಿತು. ಹೈದರಾಬಾದ್ ಬಳಿಕ ಇದೀಗ ಸರಣಿಯ ಎರಡನೇ ಟೆಸ್ಟ್ ಪಂದ್ಯ ವಿಶಾಖಪಟ್ಟಣದಲ್ಲಿ (Visakhapatnam) ನಡೆಯಲಿದೆ. ಈ ಪಂದ್ಯದಲ್ಲಿ ಗೆಲುವು ಸಾಧಿಸುವ ಮೂಲಕ ಮತ್ತೆ ಗೆಲುವಿನ ಲಯಕ್ಕೆ ಮರಳುವ ಇರಾದೆಯಲ್ಲಿದೆ. ಇದಕ್ಕೆ ಪೂರಕವಾಗಿ ಎರಡನೇ ಟೆಸ್ಟ್ ನಡೆಯುತ್ತಿರುವ ವಿಶಾಖಪಟ್ಟಣಂನ ಮೈದಾನ ಕೂಡ ಭಾರತ ಗೆಲುವಿನ ನೆಚ್ಚಿನ ಫೆವರೇಟ್ ಎಂಬುದನ್ನು ಅಂಕಿಅಂಶಗಳ ಮೂಲಕ ಸಾಭೀತುಪಡಿಸುತ್ತಿದೆ. ವಿಶಾಖಪಟ್ಟಣದಲ್ಲಿ ಇದುವರೆಗೆ ಕೇವಲ ಎರಡು ಪಂದ್ಯಗಳು ಮಾತ್ರ ನಡೆದಿವೆ. ಇದರಲ್ಲಿ ಭಾರತ ಎರಡೂ ಪಂದ್ಯಗಳನ್ನು 200ಕ್ಕೂ ಹೆಚ್ಚು ರನ್‌ಗಳ ಅಂತರದಿಂದ ಗೆದ್ದುಕೊಂಡಿದೆ.
ಈ ಮೈದಾನದಲ್ಲಿ ಮೊದಲ ಟೆಸ್ಟ್ ಪಂದ್ಯ ಇಂಗ್ಲೆಂಡ್ ಮತ್ತು ಭಾರತ ನಡುವೆ ನಡೆದಿತ್ತು. ಇದರಲ್ಲಿ ಭಾರತ ಗೆಲುವು ಸಾಧಿಸಿತ್ತು. ಈ ಮೈದಾನದಲ್ಲಿ ಇಂಗ್ಲೆಂಡ್ ತಂಡವನ್ನು ಸೋಲಿಸುವ ಮೂಲಕ ಭಾರತ ಮತ್ತೊಮ್ಮೆ ಈ ದಾಖಲೆಯನ್ನು ಉಳಿಸಿಕೊಳ್ಳಲು ಬಯಸುತ್ತಿದೆ. ಜತೆಗೆ ಕಳೆದ ಪಂದ್ಯದಲ್ಲಿನ ಸೋಲಿಗೆ ಸೇಡು ತೀರಿಸಿಕೊಳ್ಳಲು ತಂಡ ಮುಂದಾಗಿದೆ. ಇನ್ನು ನೀವು ಈ ಪಂದ್ಯದ ನೇರ ಪ್ರಸಾರವನ್ನು ಎಲ್ಲಿ ಉಚಿತವಾಗಿ ವೀಕ್ಷಿಸಬಹುದು ಎಂಬುದರ ಬಗ್ಗೆ ಪೂರ್ಣ ಮಾಹಿತಿ ಇಲ್ಲಿದೆ.
IND Vs ENG: ಟೀಂ ಇಂಡಿಯಾಗೆ ಬ್ಯಾಡ್ ನ್ಯೂಸ್; ಜಡೇಜಾ ವಾಪಸಾತಿ ಕಷ್ಟ! ಕೊಹ್ಲಿ ಬಗ್ಗೆಯೂ ಸಸ್ಪೆನ್ಸ್
ಭಾರತ ಮತ್ತು ಇಂಗ್ಲೆಂಡ್ ನಡುವಿನ ಎರಡನೇ ಟೆಸ್ಟ್ ಪಂದ್ಯ ಫೆಬ್ರವರಿ 2 ರಿಂದ ಆರಂಭವಾಗಲಿದೆ.
ಭಾರತ ಮತ್ತು ಇಂಗ್ಲೆಂಡ್ ನಡುವಿನ ಎರಡನೇ ಟೆಸ್ಟ್ ಪಂದ್ಯ ವಿಶಾಖಪಟ್ಟಣಂನ ಡಾ. ವೈ.ಎಸ್. ರಾಜಶೇಖರ್ ರೆಡ್ಡಿ ಎಸಿಎ- ವಿಡಿಸಿಎ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯಲ್ಲಿದೆ.
ಭಾರತ ಮತ್ತು ಇಂಗ್ಲೆಂಡ್ ನಡುವಿನ ಎರಡನೇ ಟೆಸ್ಟ್ ಪಂದ್ಯ ಭಾರತೀಯ ಕಾಲಮಾನ ಬೆಳಗ್ಗೆ 9:30ಕ್ಕೆ ಆರಂಭವಾಗಲಿದೆ.
ಭಾರತ ಮತ್ತು ಇಂಗ್ಲೆಂಡ್ ನಡುವಿನ ಈ ಪಂದ್ಯವನ್ನು ಸ್ಪೋರ್ಟ್ಸ್-18 ನೆಟ್‌ವರ್ಕ್‌ನಲ್ಲಿ ನೇರ ಪ್ರಸಾರ ಮಾಡಲಾಗುತ್ತದೆ.
ಭಾರತ ಮತ್ತು ಇಂಗ್ಲೆಂಡ್ ನಡುವಿನ ಎರಡನೇ ಟೆಸ್ಟ್ ಪಂದ್ಯದ ಲೈವ್ ಸ್ಟ್ರೀಮಿಂಗ್ ಅನ್ನು ಜಿಯೋ ಸಿನಿಮಾದಲ್ಲಿ ಉಚಿತವಾಗಿ ವೀಕ್ಷಿಸಬಹುದಾಗಿದೆ.
ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಶುಭ್ಮನ್ ಗಿಲ್, ಯಶಸ್ವಿ ಜೈಸ್ವಾಲ್, ಶ್ರೇಯಸ್ ಅಯ್ಯರ್, ಕೆಎಸ್ ಭರತ್ (ವಿಕೆಟ್ ಕೀಪರ್), ಧ್ರುವ್ ಜುರೆಲ್ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ಅಕ್ಸರ್ ಪಟೇಲ್, ಕುಲ್ದೀಪ್ ಯಾದವ್, ಮೊಹಮ್ಮದ್ ಸಿರಾಜ್, ಮುಖೇಶ್ ಕುಮಾರ್, ಜಸ್ಪ್ರೀತ್ ಬುಮ್ರಾ , ರಜತ್ ಪಾಟಿದಾರ್, ಸರ್ಫರಾಜ್ ಖಾನ್, ವಾಷಿಂಗ್ಟನ್ ಸುಂದರ್, ಸೌರಭ್ ಕುಮಾರ್.
ಇಂಗ್ಲೆಂಡ್ ತಂಡ: ಬೆನ್ ಸ್ಟೋಕ್ಸ್ (ನಾಯಕ), ರೆಹಾನ್ ಅಹ್ಮದ್, ಜೇಮ್ಸ್ ಆಂಡರ್ಸನ್ (ಉಪನಾಯಕ), ಗಸ್ ಅಟ್ಕಿನ್ಸನ್, ಜಾನಿ ಬೈರ್‌ಸ್ಟೋವ್ (ವಿಕೆಟ್ ಕೀಪರ್), ಶೋಯೆಬ್ ಬಶೀರ್, ಹ್ಯಾರಿ ಬ್ರೂಕ್, ಜ್ಯಾಕ್ ಕ್ರಾಲಿ, ಬೆನ್ ಡಕೆಟ್, ಬೆನ್ ಫಾಕ್ಸ್ (ವಿಕೆಟ್ ಕೀಪರ್), ಟಾಮ್ ಹಾರ್ಟ್ಲೆ, ಒಲಿ ಪೋಪ್, ಆಲಿ ರಾಬಿನ್ಸನ್, ಜೋ ರೂಟ್, ಮಾರ್ಕ್ ವುಡ್.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ