AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs ENG: ಲಾರ್ಡ್ಸ್‌ನಲ್ಲಿ ಟಾಸ್ ಗೆದ್ದವನೇ ಬಾಸ್; ಪಂದ್ಯದ ದಿನ ಹವಾಮಾನ ಹೇಗಿರಲಿದೆ?

India vs England 3rd ODI: ಭಾರತ-ಇಂಗ್ಲೆಂಡ್ ನಡುವಿನ ಏಕದಿನ ಸರಣಿಯ ನಿರ್ಣಾಯಕ 3ನೇ ಪಂದ್ಯ ಜುಲೈ 19 ರಂದು ಲಾರ್ಡ್ಸ್‌ನಲ್ಲಿ ನಡೆಯಲಿದೆ. 1-1 ರಲ್ಲಿ ಸರಣಿ ಸಮಬಲಗೊಂಡಿದ್ದು, ಗೆದ್ದವರಿಗೆ ಕಪ್. ಲಾರ್ಡ್ಸ್ ಪಿಚ್ ವೇಗದ ಬೌಲರ್‌ಗಳಿಗೆ ನೆರವಾಗಲಿದ್ದು, ಬ್ಯಾಟರ್‌ಗಳು ನೆಲೆಗೊಂಡರೆ ದೊಡ್ಡ ಸ್ಕೋರ್ ನಿರೀಕ್ಷಿಸಬಹುದು. ಪಂದ್ಯದ ದಿನದಂದು ಹವಾಮಾನ ಅನುಕೂಲಕರವಾಗಿರಲಿದೆ. ಟೀಂ ಇಂಡಿಯಾ ಸರಣಿ ಗೆಲ್ಲಲು ಸಜ್ಜಾಗಿದೆ.

IND vs ENG: ಲಾರ್ಡ್ಸ್‌ನಲ್ಲಿ ಟಾಸ್ ಗೆದ್ದವನೇ ಬಾಸ್; ಪಂದ್ಯದ ದಿನ ಹವಾಮಾನ ಹೇಗಿರಲಿದೆ?
Lord's
ಪೃಥ್ವಿಶಂಕರ
|

Updated on: Jul 18, 2026 | 9:24 PM

Share

ಭಾರತ-ಇಂಗ್ಲೆಂಡ್ (India vs England ) ನಡುವಿನ ಏಕದಿನ ಸರಣಿಯ ನಿರ್ಣಾಯಕ ಮೂರನೇ ಮತ್ತು ಅಂತಿಮ ಪಂದ್ಯ ಜುಲೈ 19 ರಂದು ಲಂಡನ್‌ನ ಐತಿಹಾಸಿಕ ಲಾರ್ಡ್ಸ್‌ನಲ್ಲಿ (Lord’s) ನಡೆಯಲಿದೆ. ಮೂರು ಪಂದ್ಯಗಳ ಸರಣಿ ಪ್ರಸ್ತುತ 1-1 ರಲ್ಲಿ ಸಮಬಲಗೊಂಡಿರುವುದರಿಂದ ಈ ಪಂದ್ಯದಲ್ಲಿ ಗೆದ್ದವರಿಗೆ ಸರಣಿ ಕೈಸೇರಲಿದೆ. ಹೀಗಾಗಿ ಉಭಯ ತಂಡಗಳು ಗೆಲ್ಲುವ ಇರಾದೆಯೊಂದಿಗೆ ಕಣಕ್ಕಿಳಿಯುತ್ತಿವೆ. ಆದರೆ ಈಗಾಗಲೇ ಟಿ20 ಸರಣಿ ಸೋತಿರುವ ಟೀಂ ಇಂಡಿಯಾ ಏಕದಿನ ಸರಣಿಯನ್ನಾದರೂ ತನ್ನದಾಗಿಸಿಕೊಳ್ಳುವ ಇರಾದೆಯಲ್ಲಿದೆ. ಹೀಗಾಗಿ ಲಾರ್ಡ್ಸ್‌ ಪಿಚ್ ಹೇಗಿರಲಿದೆ? ಪಂದ್ಯದ ದಿನದಂದು ಹವಾಮಾನ ಹೇಗಿರಲಿದೆ ಎಂಬುದನ್ನು ನೋಡೋಣ.

ಪಿಚ್ ವರದಿ

ಲಾರ್ಡ್ಸ್ ಪಿಚ್ ಸಾಂಪ್ರದಾಯಿಕವಾಗಿ ವೇಗದ ಬೌಲರ್‌ಗಳಿಗೆ ಅನುಕೂಲಕರವಾಗಿದೆ. ಹೊಸ ಚೆಂಡು ಉತ್ತಮ ಸೀಮ್ ಮತ್ತು ಹೆಚ್ಚುವರಿ ಬೌನ್ಸ್ ನೀಡುತ್ತದೆ. ಆದಾಗ್ಯೂ, ಬ್ಯಾಟರ್‌ಗಳು ಒಮ್ಮೆ ನೆಲೆಗೊಂಡ ನಂತರ, ದೊಡ್ಡ ಸ್ಕೋರ್‌ ದಾಖಲಾಗುವ ಸಾಧ್ಯತೆಯೂ ಇರುತ್ತದೆ. ಅಂಕಿಅಂಶಗಳ ಪ್ರಕಾರ, ಈ ಮೈದಾನದಲ್ಲಿ ಸರಾಸರಿ ಮೊದಲ ಇನ್ನಿಂಗ್ಸ್ ಸ್ಕೋರ್ 289 ರನ್‌ಗಳು ಮತ್ತು ಸರಾಸರಿ ಎರಡನೇ ಇನ್ನಿಂಗ್ಸ್ ಸ್ಕೋರ್ 201 ರನ್‌ಗಳಾಗಿದೆ. ಇಲ್ಲಿಯವರೆಗೆ, ಮೊದಲು ಬ್ಯಾಟ್ ಮಾಡುವ ತಂಡಗಳು ಈ ಮೈದಾನದಲ್ಲಿ ಉತ್ತಮ ಗೆಲುವಿನ ಶೇಕಡಾವಾರು ಪ್ರಮಾಣವನ್ನು ಹೊಂದಿವೆ.

ಹವಾಮಾನ ವರದಿ

ಪಂದ್ಯದ ದಿನದಂದು ಲಂಡನ್‌ನಲ್ಲಿ ಹವಾಮಾನವು ಕ್ರಿಕೆಟ್‌ಗೆ ಅನುಕೂಲಕರವಾಗಿರುತ್ತದೆ ಎಂದು ನಿರೀಕ್ಷಿಸಲಾಗಿದೆ. ತಾಪಮಾನವು ಸುಮಾರು 21 ಡಿಗ್ರಿ ಸೆಲ್ಸಿಯಸ್ ಇರುವ ನಿರೀಕ್ಷೆಯಿದೆ, ಮಳೆಯಾಗುವ ಸಾಧ್ಯತೆ ಕೇವಲ ಶೇ. 3 ರಷ್ಟು ಮಾತ್ರ. ಹೀಗಾಗಿ ಅಭಿಮಾನಿಗಳು ಯಾವುದೇ ಆತಂಕವಿಲ್ಲದೆ ಪೂರ್ಣ ಪಂದ್ಯವನ್ನು ವೀಕ್ಷಿಸುವ ಅವಕಾಶವಿದೆ.

IND vs ENG: ಲಾರ್ಡ್ಸ್‌ನಲ್ಲಿ ಮತ್ತೊಂದು ದಾಖಲೆ ನಿರ್ಮಿಸಲಿದ್ದಾರೆ ರೋಹಿತ್, ಕೊಹ್ಲಿ

ಹೆಡ್-ಟು-ಹೆಡ್ ದಾಖಲೆ

ಕಳೆದ ಹತ್ತು ಏಕದಿನ ಪಂದ್ಯಗಳಲ್ಲಿ ಉಭಯ ತಂಡಗಳ ಮುಖಾಮುಖಿ ನೋಡಿದರೆ, ಇದರಲ್ಲಿ ಭಾರತ ಸ್ಪಷ್ಟ ಮುನ್ನಡೆ ಸಾಧಿಸಿದೆ. ಭಾರತ 8 ಗೆಲುವುಗಳನ್ನು ದಾಖಲಿಸಿದ್ದರೆ, ಇಂಗ್ಲೆಂಡ್ ಕೇವಲ 2 ಪಂದ್ಯಗಳನ್ನು ಗೆದ್ದಿದೆ. ಆದಾಗ್ಯೂ, ಪ್ರಸ್ತುತ ಸರಣಿಯಲ್ಲಿ ಎರಡೂ ತಂಡಗಳು ತಲಾ ಒಂದು ಪಂದ್ಯವನ್ನು ಗೆದ್ದಿರುವುದರಿಂದ, ಮೂರನೇ ಏಕದಿನ ಪಂದ್ಯದ ಮೇಲೆ ಹೆಚ್ಚಿನ ಕುತೂಹಲ ಮೂಡಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಸಾಮೂಹಿಕ ಗಣೇಶ ವಿಸರ್ಜನೆ ವೇಳೆ ಕೋಮು ಸೌಹಾರ್ದತೆ ಮೆರೆದ ಮುಸ್ಲಿಂ ಬಾಂಧವರು
ಸಾಮೂಹಿಕ ಗಣೇಶ ವಿಸರ್ಜನೆ ವೇಳೆ ಕೋಮು ಸೌಹಾರ್ದತೆ ಮೆರೆದ ಮುಸ್ಲಿಂ ಬಾಂಧವರು
ಬದರಿನಾಥದ ಮಹಿಳೆಯರ ಜೊತೆ ಜಾನಪದ ನೃತ್ಯ ಮಾಡಿದ ಸಿಎಂ ಪುಷ್ಕರ್ ಸಿಂಗ್ ಧಾಮಿ!
ಬದರಿನಾಥದ ಮಹಿಳೆಯರ ಜೊತೆ ಜಾನಪದ ನೃತ್ಯ ಮಾಡಿದ ಸಿಎಂ ಪುಷ್ಕರ್ ಸಿಂಗ್ ಧಾಮಿ!
ವೇದಿಕೆ ಮೇಲೆಯೇ ಶಿಡ್ಲಘಟ್ಟ ತಹಶೀಲ್ದಾರ್​​ಗೆ ಡಿಸಿ ಕ್ಲಾಸ್
ವೇದಿಕೆ ಮೇಲೆಯೇ ಶಿಡ್ಲಘಟ್ಟ ತಹಶೀಲ್ದಾರ್​​ಗೆ ಡಿಸಿ ಕ್ಲಾಸ್
ಸಿನಿಮಾ ಸೆನ್ಸಾರ್​​ಗೆ ಹೊಸ ಮಾರ್ಗಸೂಚಿ: ಇಲ್ಲಿದೆ ಪೂರ್ಣ ಮಾಹಿತಿ ವಿಡಿಯೋ
ಸಿನಿಮಾ ಸೆನ್ಸಾರ್​​ಗೆ ಹೊಸ ಮಾರ್ಗಸೂಚಿ: ಇಲ್ಲಿದೆ ಪೂರ್ಣ ಮಾಹಿತಿ ವಿಡಿಯೋ
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು