
ಭಾರತ ಮತ್ತು ಇಂಗ್ಲೆಂಡ್ ನಡುವಣ ಮೂರನೇ ಟೆಸ್ಟ್ ಪಂದ್ಯದ ನಾಲ್ಕನೇ ದಿನದಾಟವು ರಣರೋಚಕ ಹೋರಾಟಕ್ಕೆ ಸಾಕ್ಷಿಯಾಗಿತ್ತು. ಈ ಪಂದ್ಯದ ನಾಲ್ಕನೇ ದಿನ ದ್ವಿತೀಯ ಇನಿಂಗ್ಸ್ ಮುಂದುವರೆಸಿದ್ದ ಇಂಗ್ಲೆಂಡ್ ತಂಡವನ್ನು 192 ರನ್ಗಳಿಗೆ ಆಲೌಟ್ ಮಾಡುವಲ್ಲಿ ಟೀಮ್ ಇಂಡಿಯಾ ಬೌಲರ್ಗಳು ಯಶಸ್ವಿಯಾದರು. ಇದಾದ ಬಳಿಕ ದ್ವಿತೀಯ ಇನಿಂಗ್ಸ್ ಆರಂಭಿಸಿದ ಟೀಮ್ ಇಂಡಿಯಾ ಕೇವಲ 53 ರನ್ಗಳಿಗೆ 3 ವಿಕೆಟ್ ಕಳೆದುಕೊಂಡಿತು.
ಈ ಹಂತದಲ್ಲಿ ನೈಟ್ ವಾಚ್ಮ್ಯಾನ್ ಆಗಿ ಕಣಕ್ಕಿಳಿದ ಆಕಾಶ್ ದೀಪ್ ಅವರನ್ನು ಇಂಗ್ಲೆಂಡ್ ಬೌಲರ್ಗಳು ಕೆಣಕಲಾರಂಭಿಸಿದರು. ಅದರಲ್ಲೂ ಒಂದು ಹೆಜ್ಜೆ ಮುಂದೆ ಹೋದ ಬ್ರೈಡನ್ ಕಾರ್ಸ್, ಆಕಾಶ್ ಅವರನ್ನು ಗುರಿಯಾಗಿಸಿ ಚೆಂಡೆಸೆಯಲು ಮುಂದಾದರು. ಇದೇ ವೇಳೆ ಸ್ಟ್ರೈಕ್ನಲ್ಲಿದ್ದ ಆಕಾಶ್ ದೀಪ್ ಎಸೆಯೋ ನೋಡೋಣ ಎಂದು ತಿರುಗೇಟು ನೀಡಿದರು. ಇದರ ನಡುವೆ ಇಂಗ್ಲೆಂಡ್ ತಂಡದ ನಾಯಕ ಬೆನ್ ಸ್ಟೋಕ್ಸ್, ಚಪ್ಪಾಳೆ ತಟ್ಟುತ್ತಾ ಕೆಎಲ್ ರಾಹುಲ್ ಅವರನ್ನು ಸಹ ಕೆಣಕುವ ಪ್ರಯತ್ನ ಮಾಡಿದರು.
ಇದಕ್ಕೂ ಮುನ್ನ ಮೂರನೇ ದಿನದಾಟದ ಅಂತ್ಯದಲ್ಲಿ ಇಂಗ್ಲೆಂಡ್ ಬ್ಯಾಟರ್ ಝಾಕ್ ಕ್ರಾಲಿ ಸಮಯ ವ್ಯರ್ಥ ಮಾಡುತ್ತಿದ್ದಾಗ, ಟೀಮ್ ಇಂಡಿಯಾ ಆಟಗಾರರು ಚಪ್ಪಾಳೆ ತಟ್ಟುತ್ತಾ ಗೇಲಿ ಮಾಡಿದ್ದರು. ಇತ್ತ ನಾಲ್ಕನೇ ದಿನದಾಟದ ಅಂತ್ಯದ ವೇಳೆ ಆಕಾಶ್ ದೀಪ್ ಕೂಡ ಸಮಯ ವ್ಯರ್ಥ ಮಾಡುವ ಕಾಯಕಕ್ಕೆ ಕೈ ಹಾಕಿದ್ದರಿಂದ ಸ್ಟೋಕ್ಸ್ ಚಪ್ಪಾಳೆ ತಟ್ಟುತ್ತಾ ಟೀಮ್ ಇಂಡಿಯಾ ಬ್ಯಾಟರ್ಗಳನ್ನು ಕೆಣಕಲು ಮುಂದಾದರು.
THIS IS PEAK TEST CRICKET 🥶
– Akash Deep Vs Carse at Lord’s.
— Tanuj (@ImTanujSingh) July 13, 2025
ಇದೀಗ ಟೀಮ್ ಇಂಡಿಯಾ ಬ್ಯಾಟರ್ಗಳ ಹಾಗೂ ಇಂಗ್ಲೆಂಡ್ ಆಟಗಾರರ ನಡುವಣ ಜಟಾಪಟಿ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಅಲ್ಲದೆ ಈ ಜಟಾಪಟಿಯು ಐದನೇ ದಿನದಾಟದಲ್ಲೂ ಮುಂದುವರೆಯುವ ನಿರೀಕ್ಷೆಯಿದೆ.
ನಾಲ್ಕನೇ ದಿನದಾಟದ ಮುಕ್ತಾಯದ ವೇಳೆ ಟೀಮ್ ಇಂಡಿಯಾ ಯಶಸ್ವಿ ಜೈಸ್ವಾಲ್ (0), ಕರುಣ್ ನಾಯರ್ (14), ಶುಭ್ಮನ್ ಗಿಲ್ (6) ಹಾಗೂ ಆಕಾಶ್ ದೀಪ್ (1) ವಿಕೆಟ್ ಕಳೆದುಕೊಂಡು 58 ರನ್ ಕಲೆಹಾಕಿದೆ. ಇನ್ನು ಕೊನೆಯ ದಿನದಾಟದಲ್ಲಿ ಟೀಮ್ ಇಂಡಿಯಾಗೆ ಗೆಲ್ಲಲು 135 ರನ್ಗಳ ಅವಶ್ಯಕತೆಯಿದ್ದು, ಇತ್ತ ಕ್ರೀಸ್ನಲ್ಲಿ ಕೆಎಲ್ ರಾಹುಲ್ (33) ಹಾಗೂ ರಿಷಭ್ ಪಂತ್ ಬ್ಯಾಟಿಂಗ್ ಮಾಡಲಿದ್ದಾರೆ.
ಇಂಗ್ಲೆಂಡ್ ಪ್ಲೇಯಿಂಗ್ 11: ಝಾಕ್ ಕ್ರಾಲಿ , ಬೆನ್ ಡಕೆಟ್ , ಒಲೀ ಪೋಪ್ , ಜೋ ರೂಟ್ , ಹ್ಯಾರಿ ಬ್ರೂಕ್ , ಬೆನ್ ಸ್ಟೋಕ್ಸ್ (ನಾಯಕ) , ಜೇಮಿ ಸ್ಮಿತ್ (ವಿಕೆಟ್ ಕೀಪರ್) , ಕ್ರಿಸ್ ವೋಕ್ಸ್ , ಬ್ರೈಡನ್ ಕಾರ್ಸ್ , ಜೋಫ್ರಾ ಆರ್ಚರ್ , ಶೋಯೆಬ್ ಬಶೀರ್.
ಇದನ್ನೂ ಓದಿ: ಒಂದು ಸೆಂಚುರಿಯೊಂದಿಗೆ 6 ಭರ್ಜರಿ ದಾಖಲೆ ಬರೆದ ಕೆಎಲ್ ರಾಹುಲ್
ಭಾರತ ಪ್ಲೇಯಿಂಗ್ 11: ಯಶಸ್ವಿ ಜೈಸ್ವಾಲ್ , ಕೆಎಲ್ ರಾಹುಲ್ , ಕರುಣ್ ನಾಯರ್ , ಶುಭ್ಮನ್ ಗಿಲ್ (ನಾಯಕ) , ರಿಷಭ್ ಪಂತ್ (ವಿಕೆಟ್ ಕೀಪರ್) , ನಿತೀಶ್ ಕುಮಾರ್ ರೆಡ್ಡಿ , ರವೀಂದ್ರ ಜಡೇಜಾ , ವಾಷಿಂಗ್ಟನ್ ಸುಂದರ್ , ಆಕಾಶ್ ದೀಪ್ , ಜಸ್ಪ್ರೀತ್ ಬುಮ್ರಾ , ಮೊಹಮ್ಮದ್ ಸಿರಾಜ್.