AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆನ್​ ಸ್ಟೋಕ್ಸ್​ನ ಮಕಾಡೆ ಮಲಗಿಸಿದ ಮೊಹಮ್ಮದ್ ಸಿರಾಜ್

India vs England 3rd Test: ಲಾರ್ಡ್ಸ್​ನಲ್ಲಿ ನಡೆಯುತ್ತಿರುವ ಭಾರತ ಮತ್ತು ಇಂಗ್ಲೆಂಡ್ ನಡುವಣ 3ನೇ ಟೆಸ್ಟ್ ಪಂದ್ಯವು ಕೊನೆಯ ದಿನದಾಟಕ್ಕೆ ಕಾಲಿಟ್ಟಿದೆ. ಈ ಪಂದ್ಯದ ಮೊದಲ ಇನಿಂಗ್ಸ್​ನಲ್ಲಿ ಉಭಯ ತಂಡಗಳು 387 ರನ್​​ ಕಲೆಹಾಕಿತು. ಇನ್ನು ದ್ವಿತೀಯ ಇನಿಂಗ್ಸ್​ನಲ್ಲಿ ಇಂಗ್ಲೆಂಡ್ 192 ರನ್​ಗಳಿಗೆ ಆಲೌಟ್ ಆಗಿದೆ. ಈ ಗುರಿಯನ್ನು ಬೆನ್ನತ್ತಿರುವ ಟೀಮ್ ಇಂಡಿಯಾ ನಾಲ್ಕನೇ ದಿನದಾಟದ ಅಂತ್ಯಕ್ಕೆ 4 ವಿಕೆಟ್ ಕಳೆದುಕೊಂಡು 58 ರನ್ ಗಳಿಸಿದೆ.

ಬೆನ್​ ಸ್ಟೋಕ್ಸ್​ನ ಮಕಾಡೆ ಮಲಗಿಸಿದ ಮೊಹಮ್ಮದ್ ಸಿರಾಜ್
Ben Stokes
ಝಾಹಿರ್ ಯೂಸುಫ್
|

Updated on: Jul 14, 2025 | 8:31 AM

Share

ಲಂಡನ್​ನ ಲಾರ್ಡ್ಸ್​ ಮೈದಾನದಲ್ಲಿ ನಡೆಯುತ್ತಿರುವ ಭಾರತ ಮತ್ತು ಇಂಗ್ಲೆಂಡ್ ನಡುವಣ ಮೂರನೇ ಟೆಸ್ಟ್ ಪಂದ್ಯದಲ್ಲಿ ಜಿದ್ದಾಜಿದ್ದಿನ ಪೈಪೋಟಿ ಕಂಡು ಬರುತ್ತಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಇಂಗ್ಲೆಂಡ್ ತಂಡವು ಪ್ರಥಮ ಇನಿಂಗ್ಸ್​ನಲ್ಲಿ 387 ರನ್​ ಕಲೆಹಾಕಿತು. ಇದಕ್ಕುತ್ತರವಾಗಿ ಮೊದಲ ಇನಿಂಗ್ಸ್ ಆಡಿದ ಟೀಮ್ ಇಂಡಿಯಾ ಕೂಡ 387 ರನ್​ಗಳಿಸಿ ಆಲೌಟ್ ಆಗಿದೆ. ಅದರಂತೆ ಯಾವುದೇ ಮುನ್ನಡೆ ಇಲ್ಲದೆ ದ್ವಿತೀಯ ಇನಿಂಗ್ಸ್ ಆರಂಭಿಸಿದ ಇಂಗ್ಲೆಂಡ್ ತಂಡವನ್ನು 192 ರನ್​ಗಳಿಗೆ ಕಟ್ಟಿ ಹಾಕುವಲ್ಲಿ ಟೀಮ್ ಇಂಡಿಯಾ ಬೌಲರ್​ಗಳು ಯಶಸ್ವಿಯಾದರು.

ಈ ಯಶಸ್ಸಿಗಾಗಿ ಟೀಮ್ ಇಂಡಿಯಾ ಪರ ಮೊಹಮ್ಮದ್ ಸಿರಾಜ್ ಮಾರಕ ದಾಳಿ ಸಂಘಟಿಸಿದ್ದರು. ಅದರಲ್ಲೂ ಕ್ರೀಸ್ ಕಚ್ಚಿ ಆಡುತ್ತಿದ್ದ ಬೆನ್ ಸ್ಟೋಕ್ಸ್​ ವಿಕೆಟ್ ಪಡೆಯಲು ಸಿರಾಜ್ ಸಾಕಷ್ಟು ಬೆವರಿಳಿಸಬೇಕಾಯಿತು. ಇದರ ನಡುವೆ ಸಿರಾಜ್ ಎಸೆದ ಎಸೆತವೊಂದು ಸ್ಟೋಕ್ಸ್ ಅವರ ಖಾಸಗಿಭಾಗಕ್ಕೆ ತಗುಲಿದೆ. ಅತ್ತ ಚೆಂಡು ಬಡಿಯುತ್ತಿದ್ದಂತೆ ನೋವಿನಿಂದ ಸ್ಟೋಕ್ಸ್ ಕುಸಿದು ಬಿದ್ದಿದ್ದಾರೆ. ಅಲ್ಲದೆ ಕೆಲ ಕ್ಷಣಗಳ ಕಾಲ ಪಿಚ್​ನಲ್ಲಿ ಮಕಾಡೆ ಮಲಗಿದ್ದರು.

ಬೆನ್ ಸ್ಟೋಕ್ಸ್​ ವಿಡಿಯೋ:

ಇದೀಗ ಈ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಇದಾಗ್ಯೂ ಸ್ಟೋಕ್ಸ್ ವಿಕೆಟ್ ಪಡೆಯಲು ಮೊಹಮ್ಮದ್ ಸಿರಾಜ್​ಗೆ ಸಾಧ್ಯವಾಗಲೇ ಇಲ್ಲ. ಆ ಬಳಿಕ ದಾಳಿಗಿಳಿದ ಸ್ಪಿನ್ನರ್ ವಾಷಿಂಗ್ಟನ್ ಸುಂದರ್ ಕ್ಲೀನ್ ಬೌಲ್ಡ್ ಮಾಡುವ ಮೂಲಕ ಬೆನ್ ಸ್ಟೋಕ್ಸ್ (33) ಇನಿಂಗ್ಸ್ ಕೊನೆಗೊಳಿಸಿದರು.

ಕೊನೆಯ ದಿನದಾಟದಲ್ಲಿ ಫಲಿತಾಂಶ:

ಭಾರತ ಮತ್ತು ಇಂಗ್ಲೆಂಡ್ ನಡುವಣ ಮೂರನೇ ಟೆಸ್ಟ್ ಪಂದ್ಯದ ನಾಲ್ಕು ದಿನದಾಟಗಳು ಮುಗಿದಿವೆ. ಇನ್ನು ಕೊನೆಯ ದಿನದಾಟ ಮಾತ್ರ ಬಾಕಿಯಿದ್ದು, ಅಂತಿಮ ದಿನದಲ್ಲಿ ಟೀಮ್ ಇಂಡಿಯಾ 135 ರನ್​ಗಳನ್ನು ಕಲೆಹಾಕಿದರೆ ಮಾತ್ರ ಪಂದ್ಯವನ್ನು ಗೆಲ್ಲಬಹುದು. ಇದರ ನಡುವೆ ಇಂಗ್ಲೆಂಡ್ 6 ವಿಕೆಟ್ ಕಬಳಿಸಿದರೆ ಭಾರತ ತಂಡ ವಿಜಯವನ್ನು ಕಸಿದುಕೊಳ್ಳಲಿದ್ದಾರೆ.

ಇದನ್ನೂ ಓದಿ: ಒಂದು ಸೆಂಚುರಿಯೊಂದಿಗೆ 6 ಭರ್ಜರಿ ದಾಖಲೆ ಬರೆದ ಕೆಎಲ್ ರಾಹುಲ್

ಸದ್ಯ ಟೀಮ್ ಇಂಡಿಯಾ 4 ವಿಕೆಟ್ ಕಳೆದುಕೊಂಡು 58 ರನ್ ಕಲೆಹಾಕಿದ್ದು,  ಕೆಎಲ್ ರಾಹುಲ್ (33) ಹಾಗೂ ರಿಷಭ್ ಪಂತ್ (0) ಐದನೇ ದಿನದಾಟದಲ್ಲಿ ಇನಿಂಗ್ಸ್ ಮುಂದುವರೆಸಲಿದ್ದಾರೆ.

ಜರ್ಮನ್ ಚಾನ್ಸೆಲರ್ ಜತೆ ಸಬರಮತಿ ಆಶ್ರಮದಲ್ಲಿ ಗಾಳಿಪಟ ಹಾರಿಸಿದ ಮೋದಿ
ಜರ್ಮನ್ ಚಾನ್ಸೆಲರ್ ಜತೆ ಸಬರಮತಿ ಆಶ್ರಮದಲ್ಲಿ ಗಾಳಿಪಟ ಹಾರಿಸಿದ ಮೋದಿ
ಲಕ್ಕುಂಡಿ: ಈ ಹಿಂದೆ ನಿಧಿಗೆ ಆಸೆ ಪಟ್ಟವರು ರಕ್ತಕಾರಿ ಸತ್ತಿದ್ದಾರೆಂದ ಕಣವಿ!
ಲಕ್ಕುಂಡಿ: ಈ ಹಿಂದೆ ನಿಧಿಗೆ ಆಸೆ ಪಟ್ಟವರು ರಕ್ತಕಾರಿ ಸತ್ತಿದ್ದಾರೆಂದ ಕಣವಿ!
ಶಕ್ತಿ ಯೋಜನೆ ಎಫೆಕ್ಟ್​​​ಗೆ ಮಹಿಳೆಯರು ಸುಸ್ತೋ ಸುಸ್ತು
ಶಕ್ತಿ ಯೋಜನೆ ಎಫೆಕ್ಟ್​​​ಗೆ ಮಹಿಳೆಯರು ಸುಸ್ತೋ ಸುಸ್ತು
ಅಮೆರಿಕದಲ್ಲಿ ಇರಾನ್ ವಿರೋಧಿ ಪ್ರತಿಭಟನಾ ರ‍್ಯಾಲಿ ವೇಳೆ ನುಗ್ಗಿದ ಟ್ರಕ್
ಅಮೆರಿಕದಲ್ಲಿ ಇರಾನ್ ವಿರೋಧಿ ಪ್ರತಿಭಟನಾ ರ‍್ಯಾಲಿ ವೇಳೆ ನುಗ್ಗಿದ ಟ್ರಕ್
ಸೋಲಬಹುದು, ಸತ್ತಿಲ್ಲ; ಎವಿಕ್ಷನ್ ಸ್ಪೀಚ್ ಕೊಟ್ಟ ಗಿಲ್ಲಿ ನಟ 
ಸೋಲಬಹುದು, ಸತ್ತಿಲ್ಲ; ಎವಿಕ್ಷನ್ ಸ್ಪೀಚ್ ಕೊಟ್ಟ ಗಿಲ್ಲಿ ನಟ 
ಬಿಗ್ ಬಾಸ್​ಗೆ ಮಲ್ಲಮ್ಮ; ಅಟ್ಯಾಚ್​​ಮೆಂಟ್ ಈಗ ಉಳಿದಿಲ್ಲ ಎಂದ ಧ್ರುವಂತ್
ಬಿಗ್ ಬಾಸ್​ಗೆ ಮಲ್ಲಮ್ಮ; ಅಟ್ಯಾಚ್​​ಮೆಂಟ್ ಈಗ ಉಳಿದಿಲ್ಲ ಎಂದ ಧ್ರುವಂತ್
VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ