IND vs ENG: ರಾಜ್​ಕೋಟ್ ಮೈದಾನವೆಂದರೆ ಆಂಗ್ಲರಿಗೆ ಬಲು ಅಚ್ಚುಮೆಚ್ಚು

IND vs ENG: ಭಾರತ ಮತ್ತು ಇಂಗ್ಲೆಂಡ್ ನಡುವಿನ ಐದು ಪಂದ್ಯಗಳ ಟೆಸ್ಟ್ ಸರಣಿಯ ಮೂರನೇ ಪಂದ್ಯ ಫೆಬ್ರವರಿ 15 ರಿಂದ ರಾಜ್‌ಕೋಟ್‌ನಲ್ಲಿ ನಡೆಯಲಿದೆ. ಈ ಸರಣಿಯಲ್ಲಿ ಮುನ್ನಡೆ ಸಾಧಿಸುವ ಉದ್ದೇಶದೊಂದಿಗೆ ಎರಡೂ ತಂಡಗಳು ಸೌರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್​ನಲ್ಲಿ ಮುಖಾಮುಖಿಯಾಗಲಿವೆ.

IND vs ENG: ರಾಜ್​ಕೋಟ್ ಮೈದಾನವೆಂದರೆ ಆಂಗ್ಲರಿಗೆ ಬಲು ಅಚ್ಚುಮೆಚ್ಚು
ಇಂಗ್ಲೆಂಡ್ ತಂಡ

Updated on: Feb 12, 2024 | 10:49 PM

ಭಾರತ ಮತ್ತು ಇಂಗ್ಲೆಂಡ್ (India vs England) ನಡುವಿನ ಐದು ಪಂದ್ಯಗಳ ಟೆಸ್ಟ್ ಸರಣಿಯ ಮೂರನೇ ಪಂದ್ಯ ಫೆಬ್ರವರಿ 15 ರಿಂದ ರಾಜ್‌ಕೋಟ್‌ನಲ್ಲಿ (Rajkot) ನಡೆಯಲಿದೆ. ಈ ಸರಣಿಯಲ್ಲಿ ಮುನ್ನಡೆ ಸಾಧಿಸುವ ಉದ್ದೇಶದೊಂದಿಗೆ ಎರಡೂ ತಂಡಗಳು ಸೌರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್​ನಲ್ಲಿ ಮುಖಾಮುಖಿಯಾಗಲಿವೆ. ಹೈದರಾಬಾದ್​ನಲ್ಲಿ ನಡೆದ ಮೊದಲ ಪಂದ್ಯದಲ್ಲಿ ಭಾರತವನ್ನು ಬೆನ್ ಸ್ಟೋಕ್ಸ್ (Ben Stokes) ನೇತೃತ್ವದ ಇಂಗ್ಲೆಂಡ್ ತಂಡ 28 ರನ್‌ಗಳಿಂದ ಸೋಲಿಸಿತ್ತು. ಆದರೆ ಎರಡನೇ ಟೆಸ್ಟ್‌ನಲ್ಲಿ ತಿರುಗೇಟು ನೀಡಿದ ಟೀಂ ಇಂಡಿಯಾ (Team india) 106 ರನ್‌ಗಳಿಂದ ಗೆದ್ದು ಸರಣಿಯನ್ನು 1-1 ರಲ್ಲಿ ಸಮಬಲಗೊಳಿಸಿದೆ. ಇದೀಗ ಮೂರನೇ ಟೆಸ್ಟ್ ಗೆಲ್ಲುವ ತಂಡ ಸರಣಿಯಲ್ಲಿ ಮೇಲುಗೈ ಸಾಧಿಸಲಿದೆ. ಇನ್ನು ರಾಜ್​ಕೋಟ್ ಮೈದಾನದಲ್ಲಿ ಉಭಯ ತಂಡಗಳ ಪ್ರದರ್ಶನ ಹೇಗಿದೆ ಎಂಬುದನ್ನು ನೋಡುವುದಾದರೆ..

ಭಾರತೀಯರ ಪ್ರದರ್ಶನವಿದು

ರಾಜ್‌ಕೋಟ್‌ ಮೈದಾನದಲ್ಲಿ ಈಗಾಗಲೇ ಭಾರತ ಮತ್ತು ಇಂಗ್ಲೆಂಡ್ ನಡುವೆ ಪಂದ್ಯ ನಡೆದಿದೆ. 2016ರಲ್ಲಿ ನಡೆದ ಈ ಪಂದ್ಯ ಡ್ರಾದಲ್ಲಿ ಅಂತ್ಯಗೊಂಡಿತ್ತು. ಈ ಪಂದ್ಯದಲ್ಲಿ ಭಾರತದ ಪರ ಚೇತೇಶ್ವರ ಪೂಜಾರ ಮತ್ತು ಮುರಳಿ ವಿಜಯ್ ಶತಕದ ಇನಿಂಗ್ಸ್ ಆಡಿದ್ದರು. ಆದರೆ, ಈಗ ಇಬ್ಬರೂ ಭಾರತ ತಂಡದ ಭಾಗವಾಗಿಲ್ಲ. ಅದೇ ಸಮಯದಲ್ಲಿ, ಇಂಗ್ಲೆಂಡ್‌ ತಂಡದ ಬ್ಯಾಟ್ಸ್‌ಮನ್‌ಗಳ ಪ್ರದರ್ಶನವೂ ಈ ಮೈದಾನದಲ್ಲಿ ಕಡಿಮೆ ಏನಿಲ್ಲ.

IND vs ENG: ಕೆಎಲ್ ರಾಹುಲ್ ಔಟ್, ದೇವದತ್ ಪಡಿಕ್ಕಲ್ ಇನ್..! ಬಿಸಿಸಿಐ ಆಧಿಕೃತ ಮಾಹಿತಿ

ಆಂಗ್ಲರ ಪ್ರದರ್ಶನ ಹೇಗಿದೆ?

ಉಭಯ ತಂಡಗಳ ನಡುವೆ ರಾಜ್‌ಕೋಟ್​ನಲ್ಲಿ ನಡೆದ ಈ ಹಿಂದಿನ ಪಂದ್ಯದಲ್ಲಿ ಪ್ರಸ್ತುತ ಇಂಗ್ಲೆಂಡ್ ತಂಡದ ನಾಯಕ ಬೆನ್ ಸ್ಟೋಕ್ಸ್ ಭರ್ಜರಿ ಶತಕ ಸಿಡಿಸಿದ್ದರು. ಇವರಲ್ಲದೆ ಅಲೆಸ್ಟರ್ ಕುಕ್, ಮೊಯಿನ್ ಅಲಿ ಮತ್ತು ಜೋ ರೂಟ್ ಕೂಡ ಈ ಮೈದಾನದಲ್ಲಿ ಶತಕ ಬಾರಿಸಿದ್ದರು. ಆದರೀಗ ಕುಕ್ ಮತ್ತು ಅಲಿ ಇಂಗ್ಲೆಂಡ್‌ ತಂಡದಲ್ಲಿ ಆಡುತ್ತಿಲ್ಲ. ಆದರೆ ಗುರುವಾರದಿಂದ ಪ್ರಾರಂಭವಾಗುವ ಮೂರನೇ ಟೆಸ್ಟ್ ಪಂದ್ಯದಲ್ಲಿ ಸ್ಟೋಕ್ಸ್ ಮತ್ತು ರೂಟ್ ಆಡಲಿದ್ದಾರೆ. ಹೀಗಾಗಿ ಈ ಇಬ್ಬರು ದಾಂಡಿಗರು ಈ ಮೈದಾನದಲ್ಲಿ ತಮ್ಮ ಅದ್ಭುತ ಪ್ರದರ್ಶನವನ್ನು ಪುನರಾವರ್ತಿಸುವಲ್ಲಿ ಯಶಸ್ವಿಯಾಗುತ್ತಾರೆಯೇ ಅಥವಾ ಇಲ್ಲವೇ ಎಂಬುದನ್ನು ಕಾದು ನೋಡಬೇಕಾಗಿದೆ.

ಉಭಯ ತಂಡಗಳು

ಟೀಂ ಇಂಡಿಯಾ: ರೋಹಿತ್ ಶರ್ಮಾ (ನಾಯಕ), ಜಸ್ಪ್ರೀತ್ ಬುಮ್ರಾ (ಉಪನಾಯಕ), ಯಶಸ್ವಿ ಜೈಸ್ವಾಲ್, ಶುಭ್​ಮನ್ ಗಿಲ್, ದೇವದತ್ ಪಡಿಕ್ಕಲ್, ರಜತ್ ಪಾಟಿದಾರ್, ಸರ್ಫರಾಜ್ ಖಾನ್, ಧ್ರುವ್ ಜುರೆಲ್, ಕೆಎಸ್ ಭರತ್, ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ*, ಅಕ್ಸರ್ ಪಟೇಲ್, ವಾಷಿಂಗ್ಟನ್ ಸುಂದರ್, ಕುಲ್ದೀಪ್ ಯಾದವ್, ಮೊಹಮ್ಮದ್ ಸಿರಾಜ್, ಮುಖೇಶ್ ಕುಮಾರ್, ಆಕಾಶ್ ದೀಪ್.

ಇಂಗ್ಲೆಂಡ್ ತಂಡ: ಬೆನ್ ಸ್ಟೋಕ್ಸ್ (ನಾಯಕ), ರೆಹಾನ್ ಅಹ್ಮದ್, ಜೇಮ್ಸ್ ಆಂಡರ್ಸನ್, ಗಸ್ ಅಟ್ಕಿನ್ಸನ್, ಜಾನಿ ಬೈರ್‌ಸ್ಟೋವ್ (ವಿಕೆಟ್ ಕೀಪರ್), ಶೋಯೆಬ್ ಬಶೀರ್, ಝಾಕ್ ಕ್ರಾಲಿ, ಬೆನ್ ಡಕೆಟ್, ಬೆನ್ ಫೋಕ್ಸ್, ಟಾಮ್ ಹಾರ್ಟ್ಲಿ, ಆಲಿ ಪೋಪ್, ಆಲ್ಲಿ ರಾಬಿನ್ಸನ್, ಜೋ ರೂಟ್ಸನ್, ಮಾರ್ಕ್ ವುಡ್, ಡಾನ್ ಲಾರೆನ್ಸ್.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us