IND vs ENG: ರೋಹಿತ್, ಜಡೇಜಾ ಶತಕ, ಸರ್ಫರಾಜ್ ಅರ್ಧಶತಕ; ಮೊದಲ ದಿನ ಭಾರತದ ಮೇಲುಗೈ

IND vs ENG: ರಾಜ್‌ಕೋಟ್‌ನಲ್ಲಿ ನಡೆಯುತ್ತಿರುವ ಮೂರನೇ ಟೆಸ್ಟ್‌ನ ಮೊದಲ ದಿನದಂದು ರೋಹಿತ್ ಶರ್ಮಾ, ರವೀಂದ್ರ ಜಡೇಜಾ ಮತ್ತು ಸರ್ಫರಾಜ್ ಖಾನ್ ಭಾರತದ ಪರ ಅಮೋಘ ಬ್ಯಾಟಿಂಗ್ ಪ್ರದರ್ಶಿಸಿದರು. ಇದರಲ್ಲಿ ರೋಹಿತ್ ಮತ್ತು ಜಡೇಜಾ ತಲಾ ಶತಕ ಸಿಡಿಸಿದರೆ, ಸರ್ಫರಾಜ್ ಖಾನ್ ಚೊಚ್ಚಲ ಪಂದ್ಯದಲ್ಲೇ 62 ರನ್ ಸಿಡಿಸಿದರು.

IND vs ENG: ರೋಹಿತ್, ಜಡೇಜಾ ಶತಕ, ಸರ್ಫರಾಜ್ ಅರ್ಧಶತಕ; ಮೊದಲ ದಿನ ಭಾರತದ ಮೇಲುಗೈ
ಟೀಂ ಇಂಡಿಯಾ
Follow us
ಪೃಥ್ವಿಶಂಕರ
|

Updated on:Feb 15, 2024 | 7:07 PM

ಭಾರತ ಮತ್ತು ಇಂಗ್ಲೆಂಡ್ (India vs England) ನಡುವಿನ ಐದು ಪಂದ್ಯಗಳ ಟೆಸ್ಟ್ ಸರಣಿಯ ಮೂರನೇ ಪಂದ್ಯ ರಾಜ್‌ಕೋಟ್‌ನಲ್ಲಿ ನಡೆಯುತ್ತಿದೆ. ಪಂದ್ಯದಲ್ಲಿ ಟಾಸ್ ಗೆದ್ದು ಮೊದಲ ಇನ್ನಿಂಗ್ಸ್ ಆರಂಭಿಸಿರುವ ಭಾರತ ಮೊದಲ ದಿನದಾಟದ ಅಂತ್ಯಕ್ಕೆ 5 ವಿಕೆಟ್‌ ಕಳೆದುಕೊಂಡು 326 ರನ್ ಕಲೆಹಾಕಿದೆ. ಮೊದಲ ದಿನ ತಂಡದ ಪರ ನಾಯಕ ರೋಹಿತ್ ಶರ್ಮಾ (Rohit Sharma), ರವೀಂದ್ರ ಜಡೇಜಾ (Ravindra Jadeja) ಮತ್ತು ಸರ್ಫರಾಜ್ ಖಾನ್ (Sarfaraz Khan)  ಭರ್ಜರಿ ಪ್ರದರ್ಶನ ನೀಡಿದರು. ಆರಂಭಿಕರಾಗಿ ಕಣಕ್ಕಿಳಿದಿದ್ದ ನಾಯಕ ರೋಹಿತ್ ಶರ್ಮಾ 131 ರನ್​ಗಳ ಶತಕದ ಇನ್ನಿಂಗ್ಸ್ ಆಡಿದರೆ, ರೋಹಿತ್ ಜೊತೆಗೆ 200 ಕ್ಕೂ ಅಧಿಕ ರನ್​ಗಳ ಜೊತೆಯಾಟ ನಡೆಸಿದ ಜಡೇಜಾ ದಿನವಿಡೀ ಬ್ಯಾಟಿಂಗ್ ಮಾಡಿ ಅಜೇಯ ಶತಕ ಬಾರಿಸಿದ್ದಾರೆ. ಹಾಗೆಯೇ ಎರಡನೇ ದಿನಕ್ಕೆ ಬ್ಯಾಟಿಂಗ್ ಕೂಡ ಕಾಯ್ದುಕೊಂಡಿದ್ದಾರೆ. ನಾಯಕ ರೋಹಿತ್ ವಿಕೆಟ್ ಪತನವಾದ ಬಳಿಕ ಜಡೇಜಾ ಜೊತೆಯಾದ ಸರ್ಫರಾಜ್ ಖಾನ್ ತಮ್ಮ ಚೊಚ್ಚಲ ಟೆಸ್ಟ್ ಪಂದ್ಯದಲ್ಲೇ ಅರ್ಧಶತಕದ ಸ್ಫೋಟಕ ಇನ್ನಿಂಗ್ಸ್ ಕಟ್ಟಿದರು.

ಭಾರತದ ಪರ ಎರಡು ಶತಕ

ಬ್ಯಾಟಿಂಗ್ ಆರಂಭಿಸಿದ ಮೊದಲ ಸೆಷನ್‌ನಲ್ಲಿಯೇ ಟೀಂ ಇಂಡಿಯಾದ ಬ್ಯಾಟಿಂಗ್ ಹಳಿತಪ್ಪಿತು. ತಂಡ ಕೇವಲ 33 ರನ್​ಗಳಿಗೆ 3 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತು. ಈ ವೇಳೆ ಜೊತೆಯಾದ ರೋಹಿತ್ ಶರ್ಮಾ ಮತ್ತು ರವೀಂದ್ರ ಜಡೇಜಾ ಜೋಡಿ 204 ರನ್​ಗಳ ಜೊತೆಯಾಟ ನೀಡಿ ಟೀಂ ಇಂಡಿಯಾ ಇನ್ನಿಂಗ್ಸ್ ನಿಭಾಯಿಸಿದರು. ನಾಯಕ ರೋಹಿತ್ ಶರ್ಮಾ 196 ಎಸೆತಗಳಲ್ಲಿ 14 ಬೌಂಡರಿ ಮತ್ತು 3 ಸಿಕ್ಸರ್‌ ಸಹಿತ 131 ರನ್ ಗಳಿಸಿದರು.

IND vs ENG: ಚೊಚ್ಚಲ ಪಂದ್ಯದಲ್ಲೇ ಅತಿ ವೇಗದ ಅರ್ಧಶತಕ ಸಿಡಿಸಿ ದಾಖಲೆ ಬರೆದ ಸರ್ಫರಾಜ್ ಖಾನ್..!

ಸರ್ಫರಾಜ್ ಖಾನ್ ಅರ್ಧಶತಕ

ರೋಹಿತ್ ಶರ್ಮಾ ಔಟಾದ ನಂತರ ಜೊತೆಯಾದ ರವೀಂದ್ರ ಜಡೇಜಾ ಮತ್ತು ಸರ್ಫರಾಜ್ ಖಾನ್ ತಂಡದ ಇನ್ನಿಂಗ್ಸ್ ಮುನ್ನಡೆಸಿದರು. ಇವರಿಬ್ಬರು ಐದನೇ ವಿಕೆಟ್‌ಗೆ 77 ರನ್‌ಗಳ ಜೊತೆಯಾಟ ನೀಡಿದರು. ಆದರೆ ರವೀಂದ್ರ ಜಡೇಜಾ ಅವರ ರಾಂಗ್ ಕಾಲ್​ನಿಂದಾಗಿ ಸರ್ಫರಾಜ್ ಖಾನ್ ರನ್ ಔಟ್ ಆಗಬೇಕಾಯಿತು. ಸರ್ಫರಾಜ್ 66 ಎಸೆತಗಳಲ್ಲಿ 9 ಬೌಂಡರಿ ಹಾಗೂ 1 ಸಿಕ್ಸರ್ ಸಹಿತ 62 ರನ್ ಗಳಿಸಿದರು. ಮೊದಲ ದಿನದಾಟದ ಅಂತ್ಯಕ್ಕೆ ರವೀಂದ್ರ ಜಡೇಜಾ 110 ರನ್ ಹಾಗೂ ಕುಲ್ದೀಪ್ ಯಾದವ್ 1 ರನ್ ಗಳಿಸಿ ಎರಡನೇ ದಿನಕ್ಕೆ ಬ್ಯಾಟಿಂಗ್ ಕಾಯ್ದುಕೊಂಡಿದ್ದಾರೆ.

ಇಂಗ್ಲೆಂಡ್ ಪರ ಬೌಲಿಂಗ್​ನಲ್ಲಿ ಮಿಂಚಿದ ಮಾರ್ಕ್ ವುಡ್ 17 ಓವರ್​ಗಳಲ್ಲಿ 69 ರನ್ ನೀಡಿ 3 ವಿಕೆಟ್ ಪಡೆದರೆ, ಟಾಮ್ ಹಾರ್ಟ್ಲಿ ಒಂದು ವಿಕೆಟ್ ಪಡೆದರು. ಮೊದಲ ಇನ್ನಿಂಗ್ಸ್​ನಲ್ಲಿ ಭಾರತ ಮೇಲುಗೈ ಸಾಧಿಸಬೇಕೆಂದರೆ 400ಕ್ಕೂ ಅಧಿಕ ರನ್ ಅಗತ್ಯವಿದೆ. ಈ ಕಡೆ ಇಂಗ್ಲೆಂಡ್‌ಗೆ, ಭಾರತವನ್ನು ಬೇಗನೆ ಔಟ್ ಮಾಡುವ ಸವಾಲು ಎದುರಾಗಲಿದೆ.

ಎರಡೂ ತಂಡಗಳು

ಭಾರತ ತಂಡ: ಯಶಸ್ವಿ ಜೈಸ್ವಾಲ್, ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ರಜತ್ ಪಾಟಿದಾರ್, ಸರ್ಫ್ರಾಜ್ ಖಾನ್, ರವೀಂದ್ರ ಜಡೇಜಾ, ಧ್ರುವ್ ಜುರೆಲ್ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ಕುಲ್ದೀಪ್ ಯಾದವ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್.

ಇಂಗ್ಲೆಂಡ್ ತಂಡ: ಝಾಕ್ ಕ್ರಾಲಿ, ಬೆನ್ ಡಕೆಟ್, ಒಲ್ಲಿ ಪೋಪ್, ಜೋ ರೂಟ್, ಜಾನಿ ಬೈರ್ಸ್ಟೋವ್, ಬೆನ್ ಸ್ಟೋಕ್ಸ್ (ನಾಯಕ), ಬೆನ್ ಫೋಕ್ಸ್ (ವಿಕೆಟ್ ಕೀಪರ್), ರೆಹಾನ್ ಅಹ್ಮದ್, ಟಾಮ್ ಹಾರ್ಟ್ಲಿ, ಮಾರ್ಕ್ ವುಡ್, ಜೇಮ್ಸ್ ಆಂಡರ್ಸನ್.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:20 pm, Thu, 15 February 24

ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ