AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs ENG 3rd Test: 3ನೇ ಟೆಸ್ಟ್​ಗೆ ಎರಡೇ ದಿನ ಬಾಕಿ: ರಾಜ್ಕೋಟ್​ನಲ್ಲಿ ಟೀಮ್ ಇಂಡಿಯಾ ದಾಖಲೆ ಹೇಗಿದೆ?

India vs England 3rd Test: ಭಾರತ ಹಾಗೂ ಇಂಗ್ಲೆಂಡ್ ನಡುವಣ ಟೆಸ್ಟ್ ಸದ್ಯ 1-1 ಅಂಕಗಳ ಅಂತರದಿಂದ ಸಮಬಲದಲ್ಲಿವೆ. ಸರಣಿಯ ಮೂರನೇ ಪಂದ್ಯ ಫೆಬ್ರವರಿ 15 ರಿಂದ ರಾಜ್‌ಕೋಟ್‌ನ ಸೌರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂನಲ್ಲಿ ನಡೆಯಲಿದೆ. ಈ ಮೈದಾನದಲ್ಲಿ ಭಾರತ ತಂಡದ ಟೆಸ್ಟ್ ಅಂಕಿಅಂಶಗಳು ಅದ್ಭುತವಾಗಿವೆ. ರಾಜ್‌ಕೋಟ್ ನೆಲದಲ್ಲಿ ಇದುವರೆಗೂ ಸೋಲನ್ನು ಎದುರಿಸಿಲ್ಲ.

IND vs ENG 3rd Test: 3ನೇ ಟೆಸ್ಟ್​ಗೆ ಎರಡೇ ದಿನ ಬಾಕಿ: ರಾಜ್ಕೋಟ್​ನಲ್ಲಿ ಟೀಮ್ ಇಂಡಿಯಾ ದಾಖಲೆ ಹೇಗಿದೆ?
IND vs ENG 3rd Test
Vinay Bhat
|

Updated on: Feb 13, 2024 | 7:32 AM

Share

ಇಂಗ್ಲೆಂಡ್ ತಂಡ ಪ್ರಸ್ತುತ ಭಾರತ (India vs England) ಪ್ರವಾಸದಲ್ಲಿದೆ. ಉಭಯ ತಂಡಗಳ ನಡುವೆ ಐದು ಟೆಸ್ಟ್ ಪಂದ್ಯಗಳ ಸರಣಿ ನಡೆಯುತ್ತಿದೆ. ಸರಣಿಯ ಮೂರನೇ ಪಂದ್ಯ ಫೆಬ್ರವರಿ 15 ರಿಂದ ರಾಜ್‌ಕೋಟ್‌ನ ಸೌರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂನಲ್ಲಿ ನಡೆಯಲಿದೆ. ಈ ಮೈದಾನದಲ್ಲಿ ಭಾರತ ತಂಡದ ಟೆಸ್ಟ್ ಅಂಕಿಅಂಶಗಳು ಅದ್ಭುತವಾಗಿವೆ. ರಾಜ್‌ಕೋಟ್ ನೆಲದಲ್ಲಿ ಟೀಮ್ ಇಂಡಿಯಾ ಇದುವರೆಗೆ ಒಂದೇ ಒಂದು ಸೋಲನ್ನು ಕಂಡಿಲ್ಲ. ಹೀಗಾಗಿ ಭಾರತ ತಂಡ ತನ್ನ ಗೆಲುವಿನ ನಾಗಾಲೋಟವನ್ನು ಮುಂದುವರಿಸುವ ಮೂಲಕ ಮೂರನೇ ಟೆಸ್ಟ್‌ನಲ್ಲಿ ಗೆದ್ದು ಮುನ್ನಡೆ ಸಾಧಿಸುವತ್ತ ಚಿತ್ತ ನೆಟ್ಟಿದೆ.

ಭಾರತ-ಇಂಗ್ಲೆಂಡ್ ಪಂದ್ಯ ಡ್ರಾ:

ಭಾರತ ತಂಡ ಇದುವರೆಗೆ ರಾಜ್​ಕೋಟ್ ಮೈದಾನದಲ್ಲಿ ಎರಡು ಟೆಸ್ಟ್ ಪಂದ್ಯಗಳನ್ನು ಆಡಿದೆ. ಇದರಲ್ಲಿ ಒಂದು ಪಂದ್ಯ ಗೆದ್ದು 1 ಪಂದ್ಯ ಡ್ರಾದಲ್ಲಿ ಅಂತ್ಯಗೊಂಡಿದೆ. ನವೆಂಬರ್ 2016 ರಲ್ಲಿ, ಭಾರತ ತಂಡವು ಸೌರಾಷ್ಟ್ರದಲ್ಲಿ ತಮ್ಮ ಮೊದಲ ಟೆಸ್ಟ್ ಪಂದ್ಯವನ್ನು ಆಡಿತು. ಈ ಪಂದ್ಯದಲ್ಲಿ ಅಲಸ್ಟೈರ್ ಕುಕ್ ನೇತೃತ್ವದ ಇಂಗ್ಲೆಂಡ್ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿ ಮೊದಲ ಇನ್ನಿಂಗ್ಸ್‌ನಲ್ಲಿ 537 ರನ್ ಗಳಿಸಿತ್ತು.

ಇಶಾನ್ ಕಿಶನ್​ಗೆ ಬಿಗ್ ಶಾಕ್ ನೀಡಿದ ಬಿಸಿಸಿಐ: ಇನ್ನುಂದೆ ತಂಡ ಸೇರುವುದು ಸುಲಭವಲ್ಲ

ಭಾರತ ತಂಡ ಮೊದಲ ಇನ್ನಿಂಗ್ಸ್‌ನಲ್ಲಿ 488 ರನ್ ಗಳಿಸಲಷ್ಟೇ ಶಕ್ತವಾಯಿತು. ಇಂಗ್ಲೆಂಡ್ 260/3 ಸ್ಕೋರ್‌ನಲ್ಲಿ ಇನಿಂಗ್ಸ್ ಡಿಕ್ಲೇರ್ ಮಾಡಿಕೊಂಡಿತು. ವಿರಾಟ್ ಕೊಹ್ಲಿ ನೇತೃತ್ವದ ಭಾರತ ತಂಡ ಎರಡನೇ ಇನ್ನಿಂಗ್ಸ್‌ನಲ್ಲಿ 6 ವಿಕೆಟ್ ನಷ್ಟಕ್ಕೆ 172 ರನ್ ಗಳಿಸಿ ಪಂದ್ಯ ಡ್ರಾ ಆಗಿತ್ತು.

ವೆಸ್ಟ್ ಇಂಡೀಸ್ ಹೀನಾಯ ಸೋಲು:

ಅಕ್ಟೋಬರ್ 2018 ರಲ್ಲಿ ಭಾರತ- ವೆಸ್ಟ್ ಇಂಡೀಸ್ ನಡುವೆ ರಾಜ್‌ಕೋಟ್‌ನಲ್ಲಿ ಟೆಸ್ಟ್ ಆಡಿಸಲಾಗಿತ್ತು. ಈ ಪಂದ್ಯದಲ್ಲಿ ಭಾರತ ತಂಡ 272 ರನ್‌ಗಳ ಇನಿಂಗ್ಸ್‌ ಜಯ ಸಾಧಿಸಿತ್ತು. ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಭಾರತ ತಂಡ 649/9 ಸ್ಕೋರ್‌ಗೆ ಮೊದಲ ಇನಿಂಗ್ಸ್ ಡಿಕ್ಲೇರ್ ಮಾಡಿಕೊಂಡಿತು. ವೆಸ್ಟ್ ಇಂಡೀಸ್ ತಂಡ ಮೊದಲ ಇನಿಂಗ್ಸ್ ನಲ್ಲಿ 181 ರನ್ ಹಾಗೂ ಎರಡನೇ ಇನಿಂಗ್ಸ್ ನಲ್ಲಿ 196 ರನ್ ಗಳಿಗೆ ಆಲೌಟ್ ಆಯಿತು. ಪೃಥ್ವಿ ಶಾ (134) ಅಮೋಘ ಶತಕದೊಂದಿಗೆ ಪಂದ್ಯಶ್ರೇಷ್ಠ ಪ್ರಶಸ್ತಿ ಗೆದ್ದಿದ್ದರು. ವಿರಾಟ್ ಕೊಹ್ಲಿ 139 ರನ್ ಮತ್ತು ರವೀಂದ್ರ ಜಡೇಜಾ ಅಜೇಯ 100 ರನ್ ಗಳಿಸಿದರು.

ರಾಜ್​ಕೋಟ್ ಮೈದಾನವೆಂದರೆ ಆಂಗ್ಲರಿಗೆ ಬಲು ಅಚ್ಚುಮೆಚ್ಚು

ಪ್ರಸ್ತುತ ಸರಣಿಯ ಬಗ್ಗೆ ಮಾತನಾಡುವುದಾದರೆ, ಉಭಯ ತಂಡಗಳು 1-1 ಅಂಕಗಳ ಅಂತರದಿಂದ ಸಮಬಲದಲ್ಲಿವೆ. ಹೈದರಾಬಾದ್‌ನಲ್ಲಿ ನಡೆದ ಮೊದಲ ಟೆಸ್ಟ್‌ನಲ್ಲಿ ಇಂಗ್ಲೆಂಡ್ 28 ರನ್‌ಗಳ ಜಯ ಸಾಧಿಸಿತ್ತು. ವಿಶಾಖಪಟ್ಟಣದಲ್ಲಿ ನಡೆದ ಎರಡನೇ ಪಂದ್ಯದಲ್ಲಿ ಭಾರತ ತಂಡ 106 ರನ್‌ಗಳಿಂದ ಗೆದ್ದು ಬೀಗಿತ್ತು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಬಿಜೆಪಿ ಶಾಸಕರೇ ಅವರ ವಿರುದ್ಧ ಇದ್ದಾರೆ ಎಂದ ಸುರ್ಜೇವಾಲಾ
ಬಿಜೆಪಿ ಶಾಸಕರೇ ಅವರ ವಿರುದ್ಧ ಇದ್ದಾರೆ ಎಂದ ಸುರ್ಜೇವಾಲಾ
ಜೈಲಲ್ಲಿ ಪವಿತ್ರಾ ಗೌಡಗೆ ಕೆಲಸ ಮಾಡಿಕೊಡಲು ಆಳುಗಳು ಇದ್ದಾರೆ: ಸಂಧ್ಯಾ ಆರೋಪ
ಜೈಲಲ್ಲಿ ಪವಿತ್ರಾ ಗೌಡಗೆ ಕೆಲಸ ಮಾಡಿಕೊಡಲು ಆಳುಗಳು ಇದ್ದಾರೆ: ಸಂಧ್ಯಾ ಆರೋಪ
ವಡೋದರಾದಲ್ಲಿ 4 ಕೋಟಿಗೂ ಅಧಿಕ ಮೌಲ್ಯದ ಅಕ್ರಮ ಆಲ್ಕೋಹಾಲ್ ಬಾಟಲಿಗಳ ಧ್ವಂಸ
ವಡೋದರಾದಲ್ಲಿ 4 ಕೋಟಿಗೂ ಅಧಿಕ ಮೌಲ್ಯದ ಅಕ್ರಮ ಆಲ್ಕೋಹಾಲ್ ಬಾಟಲಿಗಳ ಧ್ವಂಸ
ಪರಿಷತ್‌ ಚುನಾವಣೆ: ಗೆಲುವು ಬೆನ್ನಲ್ಲೇ ತಿಪ್ಪಣ್ಣಪ್ಪ ಕಮಕನೂರು ಭಾವುಕ
ಪರಿಷತ್‌ ಚುನಾವಣೆ: ಗೆಲುವು ಬೆನ್ನಲ್ಲೇ ತಿಪ್ಪಣ್ಣಪ್ಪ ಕಮಕನೂರು ಭಾವುಕ
ಬಿಜೆಪಿ ಅಭ್ಯರ್ಥಿಗಳಿಗೆ ಕಷ್ಟ ಆಗಿದ್ಯಾಕೆ? ರಘು ಕೌಟಿಲ್ಯ ಏನಂದ್ರು ನೋಡಿ
ಬಿಜೆಪಿ ಅಭ್ಯರ್ಥಿಗಳಿಗೆ ಕಷ್ಟ ಆಗಿದ್ಯಾಕೆ? ರಘು ಕೌಟಿಲ್ಯ ಏನಂದ್ರು ನೋಡಿ
ಪರಿಷತ್​​ ಚುನಾವಣೆ ಫಲಿತಾಂಶ: ಕಾಂಗ್ರೆಸ್​​ ನಾಯಕರಿಂದ ಸುದ್ದಿಗೋಷ್ಠಿ
ಪರಿಷತ್​​ ಚುನಾವಣೆ ಫಲಿತಾಂಶ: ಕಾಂಗ್ರೆಸ್​​ ನಾಯಕರಿಂದ ಸುದ್ದಿಗೋಷ್ಠಿ
ಸಂಪೂರ್ಣ ಬತ್ತಿದ ಕಾವೇರಿ: ಮೈಸೂರು, ಬೆಂಗಳೂರಲ್ಲಿ ಕುಡಿಯುವ ನೀರಿಗೂ ಬರ?
ಸಂಪೂರ್ಣ ಬತ್ತಿದ ಕಾವೇರಿ: ಮೈಸೂರು, ಬೆಂಗಳೂರಲ್ಲಿ ಕುಡಿಯುವ ನೀರಿಗೂ ಬರ?
ಮಾಜಿ ಸಂಸದೆ ಸುಮಲತಾ ಅಂಬರೀಶ್ ಬಗ್ಗೆ ರೇವಣ್ಣ ಅಚ್ಚರಿಯ ಹೇಳಿಕೆ
ಮಾಜಿ ಸಂಸದೆ ಸುಮಲತಾ ಅಂಬರೀಶ್ ಬಗ್ಗೆ ರೇವಣ್ಣ ಅಚ್ಚರಿಯ ಹೇಳಿಕೆ
ಪರಿಷತ್ ಚುನಾವಣೆ: ಗೆಲುವಿನ ವಿಶ್ವಾಸ ವ್ಯಕ್ತಪಡಿಸಿದ ಕಾಂಗ್ರೆಸ್​ ನಾಯಕರು
ಪರಿಷತ್ ಚುನಾವಣೆ: ಗೆಲುವಿನ ವಿಶ್ವಾಸ ವ್ಯಕ್ತಪಡಿಸಿದ ಕಾಂಗ್ರೆಸ್​ ನಾಯಕರು
ಬಿಗ್​​ಬಾಸ್​​ಗೆ ಹೋಗಲು ರೆಡಿ ಆಗಿದ್ದಾರಾ ಸೂರಜ್: ಹಾಸ್ಯ ನಟ ಹೇಳಿದ್ದೇನು?
ಬಿಗ್​​ಬಾಸ್​​ಗೆ ಹೋಗಲು ರೆಡಿ ಆಗಿದ್ದಾರಾ ಸೂರಜ್: ಹಾಸ್ಯ ನಟ ಹೇಳಿದ್ದೇನು?