IND vs ENG: ದಶಕದ ನಂತರ ಬೇಡದ ದಾಖಲೆಗೆ ಕೊರಳೊಡ್ಡಿದ ಟೀಂ ಇಂಡಿಯಾ

India vs England: ಮ್ಯಾಂಚೆಸ್ಟರ್ ಟೆಸ್ಟ್ ಪಂದ್ಯದಲ್ಲಿ ಇಂಗ್ಲೆಂಡ್ ತನ್ನ ಮೊದಲ ಇನ್ನಿಂಗ್ಸ್‌ನಲ್ಲಿ 669 ರನ್‌ಗಳ ದೊಡ್ಡ ಸ್ಕೋರ್ ಗಳಿಸಿದೆ. ಇದರೊಂದಿಗೆ 11 ವರ್ಷಗಳ ನಂತರ, ಭಾರತ ತಂಡದ ವಿರುದ್ಧ ವಿದೇಶದಲ್ಲಿ ಆಡಿದ ಟೆಸ್ಟ್ ಪಂದ್ಯದ ಇನ್ನಿಂಗ್ಸ್‌ನಲ್ಲಿ ತಂಡವೊಂದು 600 ಕ್ಕೂ ಹೆಚ್ಚು ರನ್ ಗಳಿಸಿದೆ.ಇದಕ್ಕೂ ಮುನ್ನ 2014 ರ ಆರಂಭದಲ್ಲಿ, ನ್ಯೂಜಿಲೆಂಡ್ ವೆಲ್ಲಿಂಗ್ಟನ್ ಟೆಸ್ಟ್‌ನಲ್ಲಿ ಭಾರತದ ವಿರುದ್ಧ 600 ಕ್ಕೂ ಹೆಚ್ಚು ರನ್ ಗಳಿಸಿತ್ತು.

IND vs ENG: ದಶಕದ ನಂತರ ಬೇಡದ ದಾಖಲೆಗೆ ಕೊರಳೊಡ್ಡಿದ ಟೀಂ ಇಂಡಿಯಾ
Team India

Updated on: Jul 26, 2025 | 8:36 PM

2024 ರಲ್ಲಿ ತವರಿನಲ್ಲಿ ನಡೆದಿದ್ದ ಟೆಸ್ಟ್ ಸರಣಿಯಲ್ಲಿ ಟೀಂ ಇಂಡಿಯಾ (Team India), ನ್ಯೂಜಿಲೆಂಡ್ ವಿರುದ್ಧ ಹೀನಾಯ ಸೋಲನ್ನು ಎದುರಿಸಬೇಕಾಯಿತು. 12 ವರ್ಷಗಳಲ್ಲಿ ಭಾರತ ತಂಡವು ತವರಿನಲ್ಲಿ ಅನುಭವಿಸಿದ ಮೊದಲ ಸರಣಿ ಸೋಲು ಅದು. ಆ ಬಳಿಕ ಆಸ್ಟ್ರೇಲಿಯಾ ಪ್ರವಾಸದಲ್ಲೂ ಟೀಂ ಇಂಡಿಯಾದ ಪ್ರದರ್ಶನ ತೀರ ಕಳಪೆಯಾಗಿತ್ತು. ಇದರಿಂದ ಸತತ ಮೂರನೇ ಬಾರಿಗೆ ಡಬ್ಲ್ಯೂಟಿಸಿ ಫೈನಲ್ (WTC Final) ಆಡುವ ಅವಕಾಶದಿಂದ ಭಾರತ ತಂಡ ವಂಚಿತವಾಗಿತ್ತು. ಇದೀಗ ನಾಲ್ಕನೇ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಆವೃತ್ತಿಯನ್ನು ಸರಣಿ ಗೆಲುವಿನೊಂದಿಗೆ ಆರಂಭಿಸಬೇಕೆಂಬ ಗುರಿ ಇಟ್ಟುಕೊಂಡಿದ್ದ ಭಾರತ ತಂಡಕ್ಕೆ ಸರಣಿ ಸೋಲಿನ ಆತಂಕ ಎದುರಾಗಿದೆ. ಇದರ ಜೊತೆಗೆ ತಂಡದ ಕಳಪೆ ಪ್ರದರ್ಶನ ದಶಕದ ಕರಾಳ ಇತಿಹಾಸ ಮತ್ತೆ ಮರುಕಳಿಸುವಂತೆ ಮಾಡಿದೆ.

11 ವರ್ಷಗಳ ನಂತರ ಅತಿ ಹೆಚ್ಚು ರನ್‌

ಓಲ್ಡ್ ಟ್ರಾಫರ್ಡ್ ಕ್ರೀಡಾಂಗಣದಲ್ಲಿ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯ ನಾಲ್ಕನೇ ಪಂದ್ಯದಲ್ಲಿ ಭಾರತದ ಬೌಲಿಂಗ್ ವಿಭಾಗ ಸಂಪೂರ್ಣವಾಗಿ ವಿಫಲವಾಯಿತು. ನಾಯಕ ಬೆನ್ ಸ್ಟೋಕ್ಸ್ ಮತ್ತು ಮಾಜಿ ನಾಯಕ ಜೋ ರೂಟ್ ಅದ್ಭುತ ಶತಕ ಬಾರಿಸಿ ತಂಡವನ್ನು ಮೊದಲ ಇನ್ನಿಂಗ್ಸ್‌ನಲ್ಲಿ 669 ರನ್‌ಗಳ ಬೃಹತ್ ಸ್ಕೋರ್​ಗೆ ಕೊಂಡೊಯ್ದರು. ಈ ಇನ್ನಿಂಗ್ಸ್‌ನಲ್ಲಿ ಟೀಮ್ ಇಂಡಿಯಾ ಒಟ್ಟು 157.1 ಓವರ್‌ಗಳನ್ನು ಬೌಲ್ ಮಾಡಿ ಇಂಗ್ಲೆಂಡ್‌ನ ಎಲ್ಲಾ 10 ವಿಕೆಟ್‌ಗಳನ್ನು ಕಬಳಿಸುವಲ್ಲಿ ಯಶಸ್ವಿಯಾಯಿತು.

ಈ ಇನ್ನಿಂಗ್ಸ್‌ನಲ್ಲಿ ಇಂಗ್ಲೆಂಡ್ 600 ರನ್‌ಗಳ ಗಡಿ ದಾಟಿದ ತಕ್ಷಣ, 11 ವರ್ಷಗಳ ಬಳಿಕ ಟೀಂ ಇಂಡಿಯಾ ಇಂತಹದೊಂದು ಬೇಡದ ದಾಖಲೆಗೆ ಕೊರಳೊಡ್ಡಬೇಕಾಗಿದೆ. ವಾಸ್ತವವಾಗಿ, 11 ವರ್ಷಗಳ ನಂತರ, ಭಾರತ ತಂಡದ ವಿರುದ್ಧ ವಿದೇಶದಲ್ಲಿ ಆಡಿದ ಟೆಸ್ಟ್ ಪಂದ್ಯದ ಇನ್ನಿಂಗ್ಸ್‌ನಲ್ಲಿ ತಂಡವೊಂದು 600 ಕ್ಕೂ ಹೆಚ್ಚು ರನ್ ಗಳಿಸಿದೆ. ಇದಕ್ಕೂ ಮುನ್ನ 2014 ರ ಆರಂಭದಲ್ಲಿ, ನ್ಯೂಜಿಲೆಂಡ್ ವೆಲ್ಲಿಂಗ್ಟನ್ ಟೆಸ್ಟ್‌ನಲ್ಲಿ ಭಾರತದ ವಿರುದ್ಧ 600 ಕ್ಕೂ ಹೆಚ್ಚು ರನ್ ಗಳಿಸಿತ್ತು.

IND vs ENG: ಡಕ್ ನಂತರ ಗೋಲ್ಡನ್ ಡಕ್; 42 ವರ್ಷಗಳ ನಂತರ ಭಾರತಕ್ಕೆ ಅತ್ಯಂತ ಕೆಟ್ಟ ಆರಂಭ

ಇಂಗ್ಲೆಂಡ್ ದಾಖಲೆಯ ಸ್ಕೋರ್

ಇಷ್ಟೇ ಅಲ್ಲ, ಇಂಗ್ಲೆಂಡ್ ತಂಡವು ಓಲ್ಡ್ ಟ್ರಾಫರ್ಡ್‌ನಲ್ಲಿ 669 ರನ್ ಗಳಿಸುವ ಮೂಲಕ ಅತಿ ಹೆಚ್ಚು ಸ್ಕೋರ್ ಗಳಿಸಿದ ದಾಖಲೆಯನ್ನು ಸಹ ಮಾಡಿದೆ. ಈ ಮೈದಾನದಲ್ಲಿ ಆಸ್ಟ್ರೇಲಿಯಾದ 61 ವರ್ಷಗಳ ಹಳೆಯ ಅತ್ಯಧಿಕ ಸ್ಕೋರ್ ದಾಖಲೆಯನ್ನು ಇಂಗ್ಲೆಂಡ್ ಮುರಿದಿದೆ. ಇದಕ್ಕೂ ಮೊದಲು, ಆಸ್ಟ್ರೇಲಿಯಾ 1964 ರಲ್ಲಿ 656 ರನ್‌ಗಳಿಗೆ ಇನ್ನಿಂಗ್ಸ್ ಡಿಕ್ಲೇರ್ ಮಾಡಿತ್ತು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:35 pm, Sat, 26 July 25