AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs ENG: ಟಿ20ಯಲ್ಲಿ ವೇಗದ ಶತಕ; ಆಂಗ್ಲರನ್ನು ಅಟ್ಟಾಡಿಸಿ ಹೊಡೆದ ಅಭಿಷೇಕ್ ಶರ್ಮಾ

Abhishek Sharma Century: ಇಂಗ್ಲೆಂಡ್ ವಿರುದ್ಧ ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಐದನೇ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾದ ಆರಂಭಿಕ ಆಟಗಾರ ಅಭಿಷೇಕ್ ಶರ್ಮಾ ಕೇವಲ 37 ಎಸೆತಗಳಲ್ಲಿ ತಮ್ಮ ಟಿ20 ವೃತ್ತಿಜೀವನದ ಎರಡನೇ ಶತಕವನ್ನು ಸಿಡಿಸಿದ್ದಾರೆ. ಅಭಿ ಅವರ ಈ ಶತಕದ ಇನ್ನಿಂಗ್ಸ್​ನಲ್ಲಿ 5 ಬೌಂಡರಿ ಹಾಗೂ 10 ಸಿಕ್ಸರ್ ಕೂಡ ಸೇರಿವೆ.

IND vs ENG: ಟಿ20ಯಲ್ಲಿ ವೇಗದ ಶತಕ; ಆಂಗ್ಲರನ್ನು ಅಟ್ಟಾಡಿಸಿ ಹೊಡೆದ ಅಭಿಷೇಕ್ ಶರ್ಮಾ
Abhishek Sharma
ಪೃಥ್ವಿಶಂಕರ
|

Updated on:Feb 02, 2025 | 8:18 PM

Share

ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಇಂಗ್ಲೆಂಡ್‌ ವಿರುದ್ಧದ ಐದು ಪಂದ್ಯಗಳ ಟಿ20 ಸರಣಿಯ ಕೊನೆಯ ಟಿ20 ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡುತ್ತಿರುವ ಟೀಂ ಇಂಡಿಯಾಕ್ಕೆ ಆರಂಭಿಕ ಆಟಗಾರ ಅಭಿಷೇಕ್ ಶರ್ಮಾ ನಿರೀಕ್ಷೆಗೂ ಮೀರಿದ ಆರಂಭ ಒದಗಿಸಿಕೊಟ್ಟಿದ್ದಾರೆ. ಸಂಜು ಅವರೊಂದಿಗೆ ಇನ್ನಿಂಗ್ಸ್ ಆರಂಭಿಸಿದ ಅಭಿಷೇಕ್ ಮೊದಲ ಎಸೆತದಿಂದಲೂ ಹೊಡಿಬಡಿ ಆಟ ಪ್ರದರ್ಶಿಸಿ ಕೇವಲ 37 ಎಸೆತಗಳಲ್ಲಿ ಅಂತರಾಷ್ಟ್ರೀಯ ಟಿ20 ವೃತ್ತಿಜೀವನದ ಎರಡನೇ ಶತಕವನ್ನು ಬಾರಿಸಿದ್ದಾರೆ. ಈ ಮೂಲಕ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್​ನಲ್ಲಿ ಭಾರತೀಯ ಕ್ರಿಕೆಟಿಗನೊಬ್ಬ ಸಿಡಿಸಿದ ಎರಡನೇ ಅತಿ ವೇಗದ ಶತಕ ಎಂಬ ದಾಖಲೆಯನ್ನು ಸೃಷ್ಟಿಸಿದ್ದಾರೆ. ಈ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿರುವ ರೋಹಿತ್ ಶರ್ಮಾ ಕೇವಲ 35 ಎಸೆತಗಳಲ್ಲಿ ಶತಕ ಸಿಡಿಸಿದ್ದರು.

37 ಎಸೆತಗಳಲ್ಲಿ ಶತಕ

ಸರಣಿಯ ಮೊದಲ 4 ಪಂದ್ಯಗಳಲ್ಲಿಯೂ ಇದೇ ರೀತಿಯ ಸ್ಫೋಟಕ ಆರಂಭ ಪಡೆದುಕೊಂಡಿದ್ದ ಅಭಿಗೆ ಅದನ್ನು ಬಿಗ್ ಇನ್ನಿಂಗ್ಸ್ ಆಗಿ ಪರಿವರ್ತಿಸಲು ಸಾಧ್ಯವಾಗಿರಲಿಲ್ಲ. ಆದರೆ ಐದನೇ ಪಂದ್ಯದಲ್ಲಿ ಮೈದಾನದ ತುಂಬ ಬೌಂಡರಿಗಳ ಮಳೆಗರೆದ ಅಭಿ ಕೇವಲ 37 ಎಸೆತಗಳಲ್ಲಿ 5 ಬೌಂಡರಿ ಹಾಗೂ 10 ಭರ್ಜರಿ ಸಿಕ್ಸರ್​ಗಳ ಸಹಿತ ಶತಕ ಪೂರೈಸಿದರು. ಅಂದರೆ ಕೇವಲ 15 ಎಸೆತಗಳಲ್ಲೇ ಅಭಿ ಬೌಂಡರಿ ಹಾಗೂ ಸಿಕ್ಸರ್​ಗಳ ಸಹಾಯದಿಂದ 80 ರನ್​ ಕಲೆಹಾಕಿದರು.

17 ಎಸೆತಗಳಲ್ಲಿ ಅರ್ಧಶತಕ

ಜೋಫ್ರಾ ಆರ್ಚರ್ ಎಸೆದ ಮೂರನೇ ಓವರ್​ನಲ್ಲಿ ಸತತ ಎರಡು ಸಿಕ್ಸರ್ ಬಾರಿಸುವ ಮೂಲಕ ಟೀಂ ಇಂಡಿಯಾಕ್ಕೆ ವೇಗದ ಆರಂಭ ನೀಡಿದ ಅಭಿ, ಇದಾದ ನಂತರ ಜೇಮೀ ಓವರ್ಟನ್‌ ಅವರ ಓವರ್‌ನಲ್ಲಿಯೂ ಸತತ ಎರಡು ಸಿಕ್ಸರ್‌ಗಳನ್ನು ಹೊಡೆದರು. ಇದರ ಆಧಾರದ ಮೇಲೆ ಭಾರತ ಕೇವಲ 4 ಓವರ್‌ಗಳಲ್ಲಿ 50 ರನ್ ಪೂರೈಸಿತು. ಅಭಿಷೇಕ್ ಆರ್ಭಟದಿಂದಾಗಿ ಭಾರತ ಮೊದಲ 6 ಓವರ್​ಗಳಲ್ಲಿ ಅಂದರೆ ಪವರ್ ಪ್ಲೇ ಅಂತ್ಯಕ್ಕೆ ಬರೋಬ್ಬರಿ 95 ರನ್ ಗಳಿಸಿತು. ಇದೇ ವೇಳೆ ಅಭಿಷೇಕ್ ತಮ್ಮ ಅರ್ಧಶತಕವನ್ನು ಕೇವಲ 17 ಎಸೆತಗಳಲ್ಲಿ ಪೂರ್ಣಗೊಳಿಸಿದರು. ಈ ಮೂಲಕ ಭಾರತದ ಪರ ವೇಗದ ಅರ್ಧಶತಕ ಸಿಡಿಸಿದ ಎರಡನೇ ಬ್ಯಾಟ್ಸ್​ಮನ್ ಎಂಬ ದಾಖಲೆಯನ್ನು ಸೃಷ್ಟಿಸಿದರು. ಈ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿರುವ ಅಭಿಷೇಕ್ ಅವರ ಗುರು ಯುವರಾಜ್ ಸಿಂಗ್ ಕೇವಲ 12 ಎಸೆತಗಳಲ್ಲಿ ಇದೇ ಇಂಗ್ಲೆಂಡ್ ವಿರುದ್ಧ ಅರ್ಧಶತಕ ಪೂರೈಸಿದ್ದರು.

ಶತಕದ ಜೊತೆಯಾಟ

ಇಲ್ಲಿಗೇ ನಿಲ್ಲದ ಅಭಿಷೇಕ್, ಅರ್ಧಶತಕ ಪೂರೈಸಿದ ನಂತರ ಇನ್ನಷ್ಟು ಆಕ್ರಮಣಕಾರಿಯಾಗಿ ಬ್ಯಾಟ್ ಬೀಸಿ 11ನೇ ಓವರ್‌ನಲ್ಲಿ ಕೇವಲ 37 ಎಸೆತಗಳಲ್ಲಿ ತಮ್ಮ ಟಿ20 ವೃತ್ತಿಜೀವನದ ಎರಡನೇ ಶತಕವನ್ನು ಪೂರ್ಣಗೊಳಿಸಿದರು. ಇದು ಮಾತ್ರವಲ್ಲದೆ ಅಭಿಷೇಕ್ ಎರಡನೇ ವಿಕೆಟ್​ಗೆ ತಿಲಕ್ ವರ್ಮಾ ಅವರೊಂದಿಗೆ ಶತಕದ ಜೊತೆಯಾಟವನ್ನು ಮಾಡಿದರು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:53 pm, Sun, 2 February 25

ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ