IND vs ENG: ಭಾರತ- ಇಂಗ್ಲೆಂಡ್ ಕೊನೆಯ ಟೆಸ್ಟ್ ಯಾವಾಗ ಆರಂಭ? ಉಚಿತವಾಗಿ ವೀಕ್ಷಿಸುವುದು ಹೇಗೆ?
IND vs ENG: ಭಾರತ ಮತ್ತು ಇಂಗ್ಲೆಂಡ್ ನಡುವಿನ ಐದು ಪಂದ್ಯಗಳ ಟೆಸ್ಟ್ ಸರಣಿಯ ಕೊನೆಯ ಪಂದ್ಯ ಗುರುವಾರದಿಂದ ಅಂದರೆ ನಾಳೆಯಿಂದ ಆರಂಭವಾಗಲಿದೆ. ಈ ಸರಣಿಯಲ್ಲಿ ಟೀಂ ಇಂಡಿಯಾ 3-1 ಅಂತರದ ಮುನ್ನಡೆ ಸಾಧಿಸಿದೆ. ಇದೀಗ ಧರ್ಮಶಾಲಾದಲ್ಲಿ ನಡೆಯಲಿರುವ ಪಂದ್ಯದ ಮೇಲೆ ರೋಹಿತ್ ಶರ್ಮಾ ಮತ್ತು ಬಳಗ ಕಣ್ಣಿಟ್ಟಿದೆ.

ಭಾರತ ಮತ್ತು ಇಂಗ್ಲೆಂಡ್ (India vs England) ನಡುವಿನ ಐದು ಪಂದ್ಯಗಳ ಟೆಸ್ಟ್ ಸರಣಿಯ ಕೊನೆಯ ಪಂದ್ಯ ಗುರುವಾರದಿಂದ ಅಂದರೆ ನಾಳೆಯಿಂದ ಆರಂಭವಾಗಲಿದೆ. ಈ ಸರಣಿಯಲ್ಲಿ ಟೀಂ ಇಂಡಿಯಾ 3-1 ಅಂತರದ ಮುನ್ನಡೆ ಸಾಧಿಸಿದೆ. ಇದೀಗ ಧರ್ಮಶಾಲಾದಲ್ಲಿ (Dharamsala) ನಡೆಯಲಿರುವ ಪಂದ್ಯದ ಮೇಲೆ ರೋಹಿತ್ ಶರ್ಮಾ ಮತ್ತು ಬಳಗ ಕಣ್ಣಿಟ್ಟಿದೆ. ಎಂದಿನಂತೆ ಇಂಗ್ಲೆಂಡ್ ಐದನೇ ಟೆಸ್ಟ್‌ಗೆ ಒಂದು ದಿನದ ಮುನ್ನ ತನ್ನ ಆಡುವ ಹನ್ನೊಂದರ ಬಳಗವನ್ನು ಪ್ರಕಟಿಸಿದೆ. ಅದರಂತೆ ವೇಗದ ಬೌಲರ್ ಓಲಿ ರಾಬಿನ್ಸನ್ ಬದಲಿಗೆ ಸ್ಟಾರ್ಮ್ ಬೌಲರ್ ಮಾರ್ಕ್ ವುಡ್ ತಂಡಕ್ಕೆ ಮರಳಿದ್ದಾರೆ. ಅದೇ ಸಮಯದಲ್ಲಿ, ದೇವದತ್ ಪಡಿಕ್ಕಲ್ ಭಾರತ ತಂಡಕ್ಕೆ ಪದಾರ್ಪಣೆ ಮಾಡುವ ಸಾಧ್ಯತೆಗಳು ಹೆಚ್ಚಿವೆ.
ಧರ್ಮಶಾಲಾದಲ್ಲಿ ದಾಖಲೆ ಹೇಗಿದೆ?
ಇದುವರೆಗೆ ಧರ್ಮಶಾಲಾದಲ್ಲಿ ಕೇವಲ ಒಂದು ಟೆಸ್ಟ್ ಪಂದ್ಯ ಮಾತ್ರ ನಡೆದಿದೆ. 2017ರಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ನಡೆದ ಈ ಪಂದ್ಯದಲ್ಲಿ ಟೀಂ ಇಂಡಿಯಾ ಗೆಲುವು ಸಾಧಿಸಿತ್ತು. ಈ ಮೈದಾನದಲ್ಲಿ ಮೊದಲ ಇನಿಂಗ್ಸ್‌ನಲ್ಲಿ ಸರಾಸರಿ ಸ್ಕೋರ್ 300 ಆಗಿದ್ದರೆ, ಎರಡನೇ ಇನ್ನಿಂಗ್ಸ್‌ನಲ್ಲಿ ಸರಾಸರಿ ಸ್ಕೋರ್ 332 ರನ್ ಆಗಿದೆ. ಮೂರನೇ ಇನ್ನಿಂಗ್ಸ್‌ನಲ್ಲಿ ಸರಾಸರಿ ಸ್ಕೋರ್ 137 ಆಗಿದ್ದರೆ, ನಾಲ್ಕನೇ ಇನ್ನಿಂಗ್ಸ್‌ನಲ್ಲಿ ಸರಾಸರಿ ಸ್ಕೋರ್ 106 ಆಗಿದೆ.
IND vs ENG: ಧರ್ಮಶಾಲಾ ಪಿಚ್ ನೋಡಿ ಹರ್ಷ ವ್ಯಕ್ತಪಡಿಸಿದ ಆಂಗ್ಲ ಆಟಗಾರರು
ಉಳಿದಂತೆ ಪಂದ್ಯದ ಬಗ್ಗೆ ಮಾಹಿತಿ ಇಲ್ಲಿದೆ
ಭಾರತ ಮತ್ತು ಇಂಗ್ಲೆಂಡ್ ನಡುವಿನ ಐದನೇ ಟೆಸ್ಟ್ ಪಂದ್ಯ ಯಾವಾಗ ಆರಂಭವಾಗಲಿದೆ?
ಭಾರತ ಮತ್ತು ಇಂಗ್ಲೆಂಡ್ ನಡುವಿನ ಐದು ಟೆಸ್ಟ್‌ಗಳ ಸರಣಿಯ ಕೊನೆಯ ಪಂದ್ಯ ಗುರುವಾರದಿಂದ (ಮಾರ್ಚ್ 7) ನಡೆಯಲಿದೆ.
ಭಾರತ ಮತ್ತು ಇಂಗ್ಲೆಂಡ್ ನಡುವಿನ 5 ನೇ ಟೆಸ್ಟ್ ಪಂದ್ಯ ಎಲ್ಲಿ ನಡೆಯಲಿದೆ?
ಭಾರತ ಮತ್ತು ಇಂಗ್ಲೆಂಡ್ ನಡುವಿನ ಐದನೇ ಟೆಸ್ಟ್ ಪಂದ್ಯ ಧರ್ಮಶಾಲಾದಲ್ಲಿ ನಡೆಯಲಿದೆ.
ಭಾರತ ಮತ್ತು ಇಂಗ್ಲೆಂಡ್ ನಡುವಿನ 5ನೇ ಟೆಸ್ಟ್ ಪಂದ್ಯ ಎಷ್ಟು ಗಂಟೆಗೆ ಆರಂಭವಾಗಲಿದೆ?
ಭಾರತ ಮತ್ತು ಇಂಗ್ಲೆಂಡ್ ನಡುವಿನ ಕೊನೆಯ ಟೆಸ್ಟ್ ಪಂದ್ಯ ಭಾರತೀಯ ಕಾಲಮಾನ ಬೆಳಗ್ಗೆ 9.30ಕ್ಕೆ ಆರಂಭವಾಗಲಿದೆ. ಇದಕ್ಕೂ ಅರ್ಧ ಗಂಟೆ ಮೊದಲು ಅಂದರೆ ಬೆಳಗ್ಗೆ 9:00 ಗಂಟೆಗೆ ಟಾಸ್ ನಡೆಯಲಿದೆ.
ಭಾರತ ಮತ್ತು ಇಂಗ್ಲೆಂಡ್ ಐದನೇ ಟೆಸ್ಟ್ ಪಂದ್ಯವನ್ನು ನೀವು ಯಾವ ಟಿವಿ ಚಾನೆಲ್‌ನಲ್ಲಿ ವೀಕ್ಷಿಸಬಹುದು?
ಭಾರತ ಮತ್ತು ಇಂಗ್ಲೆಂಡ್ ನಡುವಿನ ಐದನೇ ಟೆಸ್ಟ್ ಪಂದ್ಯವನ್ನು ಸ್ಪೋರ್ಟ್ಸ್ 18 ನೆಟ್‌ವರ್ಕ್‌ನಲ್ಲಿ ನೇರ ಪ್ರಸಾರ ಮಾಡಲಾಗುತ್ತದೆ. ಡಿಡಿ ಫ್ರೀ ಡಿಶ್ ಬಳಸುವ ವೀಕ್ಷಕರು ಡಿಡಿ ಸ್ಪೋರ್ಟ್ಸ್‌ನಲ್ಲಿ ಪಂದ್ಯವನ್ನು ಉಚಿತವಾಗಿ ವೀಕ್ಷಿಸಬಹುದು.
ಭಾರತ ಮತ್ತು ಇಂಗ್ಲೆಂಡ್ ನಡುವಿನ 5 ನೇ ಟೆಸ್ಟ್ ಪಂದ್ಯದ ಲೈವ್ ಸ್ಟ್ರೀಮಿಂಗ್ ಎಲ್ಲಿ ಲಭ್ಯವಿರುತ್ತದೆ?
ಜಿಯೋ ಸಿನಿಮಾ ಆ್ಯಪ್ ಮತ್ತು ವೆಬ್‌ಸೈಟ್‌ನಲ್ಲಿ ನೀವು ಭಾರತ ಮತ್ತು ಇಂಗ್ಲೆಂಡ್ ನಡುವಿನ ಐದನೇ ಟೆಸ್ಟ್ ಪಂದ್ಯವನ್ನು ಆನ್‌ಲೈನ್‌ನಲ್ಲಿ ವೀಕ್ಷಿಸಬಹುದು.
ಇಂಗ್ಲೆಂಡ್ ಪ್ಲೇಯಿಂಗ್-11: ಜಾಕ್ ಕ್ರೌಲಿ, ಬೆನ್ ಡಕೆಟ್, ಆಲಿ ಪೋಪ್, ಜೋ ರೂಟ್, ಜಾನಿ ಬೈರ್‌ಸ್ಟೋ, ಬೆನ್ ಸ್ಟೋಕ್ಸ್ (ನಾಯಕ), ಬೆನ್ ಫೋಕ್ಸ್ (ವಿಕೆಟ್ ಕೀಪರ್), ಶೋಯೆಬ್ ಬಶೀರ್, ಟಾಮ್ ಹಾರ್ಟ್ಲಿ, ಮಾರ್ಕ್ ವುಡ್, ಜೇಮ್ಸ್ ಆಂಡರ್ಸನ್.
ಭಾರತದ ಸಂಭಾವ್ಯ ತಂಡ: ಯಶಸ್ವಿ ಜೈಸ್ವಾಲ್, ರೋಹಿತ್ ಶರ್ಮಾ (ನಾಯಕ), ಶುಭ್ಮನ್ ಗಿಲ್, ಸರ್ಫರಾಜ್ ಖಾನ್, ರಜತ್ ಪಾಟಿದಾರ್ / ದೇವದತ್ ಪಡಿಕ್ಕಲ್, ಧ್ರುವ್ ಜುರೆಲ್ (ವಿಕೆಟ್ ಕೀಪರ್), ರವೀಂದ್ರ ಜಡೇಜಾ, ರವಿಚಂದ್ರನ್ ಅಶ್ವಿನ್, ಕುಲ್ದೀಪ್ ಯಾದವ್, ಜಸ್ಪ್ರೀತ್ ಬುಮ್ರಾ, ಆಕಾಶ್ ದೀಪ್.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 6:46 pm, Wed, 6 March 24
