Rohit Sharma: ರೋಹಿತ್ ಶರ್ಮಾ ಅಲಭ್ಯ: ಟೀಮ್ ಇಂಡಿಯಾಗೆ ಹೊಸ ನಾಯಕ

| Updated By: ಝಾಹಿರ್ ಯೂಸುಫ್

Updated on: Jun 29, 2022 | 6:18 PM

IND vs ENG 5th TEST: ಈ ಪಂದ್ಯವು ಕಳೆದ ವರ್ಷದ ನಡೆದ ಭಾರತ-ಇಂಗ್ಲೆಂಡ್ ನಡುವಣ ಟೆಸ್ಟ್ ಸರಣಿಯ ಭಾಗವಾಗಿದೆ. ಕೊರೋನಾ ಕಾರಣದಿಂದ ಮುಂದೂಲ್ಪಟ್ಟಿದ್ದ 5ನೇ ಪಂದ್ಯವನ್ನು ಇದೀಗ ಆಡಲಾಗುತ್ತಿದೆ.

Rohit Sharma: ರೋಹಿತ್ ಶರ್ಮಾ ಅಲಭ್ಯ: ಟೀಮ್ ಇಂಡಿಯಾಗೆ ಹೊಸ ನಾಯಕ
Rohit Sharma
Follow us on

IND vs ENG 5th TEST: ಇಂಗ್ಲೆಂಡ್​ ವಿರುದ್ದದ 5ನೇ ಟೆಸ್ಟ್ ಪಂದ್ಯಕ್ಕೆ ರೋಹಿತ್ ಶರ್ಮಾ (Rohit Sharma) ಅಲಭ್ಯರಾಗಲಿದ್ದಾರೆ ಎಂದು ವರದಿಯಾಗಿದೆ. ಕೊರೋನಾ ಸೋಂಕಿಗೆ ಒಳಗಾಗಿರುವ ಹಿಟ್​ಮ್ಯಾನ್ ಸದ್ಯ ಐಸೋಲೇಷನ್​ನಲ್ಲಿದ್ದಾರೆ. ಹೀಗಾಗಿ ರೋಹಿತ್ ಶರ್ಮಾ ಅವರನ್ನು ಇಂಗ್ಲೆಂಡ್ ವಿರುದ್ದದ ಕೊನೆಯ ಟೆಸ್ಟ್​ ಪಂದ್ಯದಿಂದ ಕೈ ಬಿಡಲು ಟೀಮ್ ಮ್ಯಾನೇಜ್ಮೆಂಟ್ ನಿರ್ಧರಿಸಿದೆ ಎಂದು ಇನ್​​ಸೈಡ್​ ಸ್ಪೋರ್ಟ್ಸ್​ ವರದಿ ಮಾಡಿದೆ. ಈ ವರದಿಯ ಪ್ರಕಾರ ಎಡ್ಜ್​ಬಾಸ್ಟನ್​ನಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಹಿಟ್​​ಮ್ಯಾನ್ ಕಣಕ್ಕಿಳಿಯುವುದಿಲ್ಲ. ಅಲ್ಲದೆ ರೋಹಿತ್ ಶರ್ಮಾ ಅನುಪಸ್ಥಿತಿಯಲ್ಲಿ ಟೀಮ್ ಇಂಡಿಯಾವನ್ನು ಉಪನಾಯಕ ಜಸ್​ಪ್ರೀತ್ ಬುಮ್ರಾ ಮುನ್ನಡೆಸಲಿದ್ದಾರೆ.

ಈ ಬಗ್ಗೆ ಟೀಮ್ ಮ್ಯಾನೇಜ್ಮೆಂಟ್ ಸಭೆ ನಡೆಸಿದ್ದು, ಇದೇ ವೇಳೆ ತಂಡದ ಜವಾಬ್ದಾರಿವಹಿಸಿಕೊಳ್ಳುವಂತೆ ಜಸ್​ಪ್ರೀತ್ ಬುಮ್ರಾ ಅವರಿಗೆ ತಿಳಿಸಲಾಗಿದೆ. ಅಲ್ಲದೆ ತಂಡದ ಇತರ ಸದಸ್ಯರಿಗೆ ಬದಲಾವಣೆ ಬಗ್ಗೆ ಅಧಿಕೃತವಾಗಿ ತಿಳಿಸಲಾಗಿದೆ ಎಂದು ವರದಿಯಲ್ಲಿ ಹೇಳಲಾಗಿದೆ. ಇದಾಗ್ಯೂ ರೋಹಿತ್ ಶರ್ಮಾ ಅವರ ಕೊರೋನಾ ಪರೀಕ್ಷೆಯ ಫಲಿತಾಂಶದ ಮಾಹಿತಿಯನ್ನು ಟೀಮ್ ಮ್ಯಾನೇಜ್ಮೆಂಟ್​ ಬಹಿರಂಗಪಡಿಸಿಲ್ಲ.

ಕೆಲ ಮೂಲಗಳ ಮಾಹಿತಿ ಪ್ರಕಾರ, ಗುರುವಾರ ಮತ್ತೊಮ್ಮೆ ರೋಹಿತ್ ಶರ್ಮಾ ಕೊರೋನಾ ಟೆಸ್ಟ್​ಗೆ ಒಳಗಾಗಲಿದ್ದಾರೆ. ಅವರ RT-PCR ಟೆಸ್ಟ್ ಎರಡು ಬಾರಿ ನೆಗೆಟಿವ್ ಬಂದರೆ ಮಾತ್ರ ತಂಡವನ್ನು ಕೂಡಿಕೊಳ್ಳಲಿದ್ದಾರೆ. ಹೀಗಾಗಿ ಜುಲೈ 1 ರಿಂದ ಶುರುವಾಗಲಿರುವ ಟೆಸ್ಟ್​ಗೆ ಅವರ ಲಭ್ಯತೆಯನ್ನು ನಿರ್ಧರಿಸಲಾಗುವುದಿಲ್ಲ. ಹೀಗಾಗಿ ಟೀಮ್ ಮ್ಯಾನೇಜ್ಮೆಂಟ್ ಸಭೆ ನಡೆಸಿ ಈ ತೀರ್ಮಾನ ಕೈಗೊಂಡಿದೆ ಎಂದು ಹೇಳಲಾಗಿದೆ.

ಇದನ್ನೂ ಓದಿ
Irfan Pathan: ಟಿ20 ವಿಶ್ವಕಪ್​ಗೆ ಇರ್ಫಾನ್ ಪಠಾಣ್​ರ ಟೀಮ್ ಇಂಡಿಯಾ ಪ್ಲೇಯಿಂಗ್ 11
Team India: 8 ತಿಂಗಳಲ್ಲಿ 6 ನಾಯಕರನ್ನು ಕಣಕ್ಕಿಳಿಸಿದ ಟೀಮ್ ಇಂಡಿಯಾ
ಪೆಟ್ರೋಲ್ ಪಂಪ್​ನಲ್ಲಿ ಚಹಾ ನೀಡುತ್ತಿರುವ ಶ್ರೀಲಂಕಾ ಕ್ರಿಕೆಟಿಗ
Rishabh Pant: ನಾಯಕನಾಗಿ ಅತ್ಯಂತ ಕೆಟ್ಟ ದಾಖಲೆ ಬರೆದ ರಿಷಭ್ ಪಂತ್

ಬಿಸಿಸಿಐನ ಆಯ್ಕೆ ಸಮಿತಿಯ ಅಧ್ಯಕ್ಷ ಚೇತನ್ ಶರ್ಮಾ ಅವರು ಈ ಬಗ್ಗೆ ಚರ್ಚಿಸಲೆಂದೇ ಬರ್ಮಿಂಗ್‌ಹ್ಯಾಮ್ ತೆರಳಿದ್ದು, ಆ ಬಳಿಕ ಟೀಮ್ ಮ್ಯಾನೇಜ್ಮೆಂಟ್​​ ಜೊತೆ ಚರ್ಚಿಸಿ ಈ ನಿರ್ಧಾರವನ್ನು ತೆಗೆದುಕೊಂಡಿದ್ದಾರೆ. ಭಾರತ ತಂಡದ ಕೋಚ್ ರಾಹುಲ್ ದ್ರಾವಿಡ್ ಅವರು ಚೇತನ್ ಶರ್ಮಾ ಅವರೊಂದಿಗೆ ಈ ಬಗ್ಗೆ ಚರ್ಚೆ ನಡೆಸಿದ್ದು, ಅಂತಿಮವಾಗಿ ಬುಮ್ರಾ ಅವರಿಗೆ ನಾಯಕತ್ವ ನೀಡಲು ನಿರ್ಧರಿಸಲಾಯಿತು ಎಂದು ಇನ್​ಸೈಡ್ ಸ್ಪೋರ್ಟ್ಸ್ ವರದಿಯಲ್ಲಿ ತಿಳಿಸಲಾಗಿದೆ.

ಅದರಂತೆ ಜುಲೈ 1 ರಿಂದ ಶುರುವಾಗಲಿರುವ ಈ ಏಕೈಕ ಟೆಸ್ಟ್ ಪಂದ್ಯಕ್ಕೆ ರೋಹಿತ್ ಶರ್ಮಾ ಅಲಭ್ಯರಾಗಲಿದ್ದು, ಬದಲಿ ಆಟಗಾರನಾಗಿ ಮಯಾಂಕ್ ಅಗರ್ವಾಲ್ ಸ್ಥಾನ ಪಡೆಯುವ ಸಾಧ್ಯತೆಯಿದೆ. ಈ ಪಂದ್ಯವು ಕಳೆದ ವರ್ಷದ ನಡೆದ ಭಾರತ-ಇಂಗ್ಲೆಂಡ್ ನಡುವಣ ಟೆಸ್ಟ್ ಸರಣಿಯ ಭಾಗವಾಗಿದೆ. ಕೊರೋನಾ ಕಾರಣದಿಂದ ಮುಂದೂಲ್ಪಟ್ಟಿದ್ದ 5ನೇ ಪಂದ್ಯವನ್ನು ಇದೀಗ ಆಡಲಾಗುತ್ತಿದೆ.

ಈ ಸರಣಿಯಲ್ಲಿ ಟೀಮ್ ಇಂಡಿಯಾ 2-1 ಅಂತರದಿಂದ ಮುನ್ನಡೆ ಸಾಧಿಸಿದ್ದು, ಹೀಗಾಗಿ ಅಂತಿಮ ಪಂದ್ಯದಲ್ಲಿ ಗೆದ್ದರೆ ಅಥವಾ ಡ್ರಾ ಮಾಡಿಕೊಂಡರೆ ಸರಣಿ ಭಾರತ ತಂಡದ ವಶವಾಗಲಿದೆ. ಮತ್ತೊಂದೆಡೆ ಈ ಪಂದ್ಯದಲ್ಲಿ ಗೆಲ್ಲುವ ಮೂಲಕ ಸರಣಿಯಲ್ಲಿ ಸಮಬಲ ಸಾಧಿಸುವ ಇರಾದೆಯಲ್ಲಿದೆ ಇಂಗ್ಲೆಂಡ್ ತಂಡ. ಹೀಗಾಗಿ ಈ ಪಂದ್ಯದಲ್ಲಿ ಉಭಯ ತಂಡಗಳಿಂದ ರೋಚಕ ಹೋರಾಟವನ್ನು ನಿರೀಕ್ಷಿಸಬಹುದು.

ಭಾರತ ಟೆಸ್ಟ್​ ತಂಡ: ರೋಹಿತ್‌ ಶರ್ಮ, ಶುಭ್ಮನ್ ಗಿಲ್‌, ವಿರಾಟ್‌ ಕೊಹ್ಲಿ, ಶ್ರೇಯಸ್‌ ಅಯ್ಯರ್‌, ಹನುಮ ವಿಹಾರಿ, ಚೇತೇಶ್ವರ್‌ ಪೂಜಾರ, ರಿಷಭ್‌ ಪಂತ್‌, ಕೆಎಸ್‌. ಭರತ್‌, ರವೀಂದ್ರ ಜಡೇಜಾ, ಆರ್‌. ಅಶ್ವಿ‌ನ್‌, ಶಾರ್ದೂಲ್‌ ಠಾಕೂರ್‌, ಮೊಹಮ್ಮದ್‌ ಶಮಿ, ಜಸ್‌ಪ್ರೀತ್‌ ಬುಮ್ರಾ, ಮೊಹಮ್ಮದ್‌ ಸಿರಾಜ್‌, ಉಮೇಶ್‌ ಯಾದವ್‌, ಪ್ರಸಿದ್ಧ್ ಕೃಷ್ಣ, ಮಯಾಂಕ್​ ಅಗರ್ವಾಲ್.

ಇಂಗ್ಲೆಂಡ್ ಟೆಸ್ಟ್​ ತಂಡ: ಬೆನ್ ಸ್ಟೋಕ್ಸ್ (ನಾಯಕ), ಅಲೆಕ್ಸ್ ಲೀಸ್, ಜ್ಯಾಕ್ ಕ್ರೌಲಿ, ಜೋ ರೂಟ್, ಓಲಿ ಪೋಪ್, ಜಾನಿ ಬೈರ್‌ಸ್ಟೋ, ಬೆನ್ ಫೋಕ್ಸ್, ಸ್ಯಾಮ್ ಬಿಲ್ಲಿಂಗ್ಸ್, ಹ್ಯಾರಿ ಬ್ರೂಕ್, ಜೇಮೀ ಓವರ್‌ಟನ್, ಕ್ರೇಗ್ ಓವರ್‌ಟನ್, ಸ್ಟುವರ್ಟ್ ಬ್ರಾಡ್, ಜೇಮ್ಸ್ ಆಂಡರ್ಸನ್, ಮ್ಯಾಥ್ಯೂ ಪಾಟ್ಸ್ ಮತ್ತು ಜ್ಯಾಕ್ ಲೀಚ್.